ಭಾರತದಲ್ಲಿ ಸೊಲ್ ಹ್ಯಾಚ್‌ಬ್ಯಾಕ್ ಬಿಡುಗಡೆಗಾಗಿ ಟ್ರೇಡ್‌‌ಮಾರ್ಕ್ ದಾಖಲಿಸಿದ ಕಿಯಾ

ದಕ್ಷಿಣ ಕೊರಿಯಾದ ಕಿಯಾ ಕಂಪನಿಯು ಭಾರತದಲ್ಲಿ ಕಾರು ಮಾರಾಟ ಆರಂಭಿಸಿದ ಕೇವಲ 2 ವರ್ಷದಲ್ಲಿ ಅಗ್ರ ಸ್ಥಾನಕ್ಕೇರುವ ಮೂಲಕ ಬಹುಬೇಡಿಕೆಯ ಕಾರ್ ಬ್ರಾಂಡ್ ಆಗಿ ಹೊರಹೊಮ್ಮಿದ್ದು, ಸೆಲ್ಟೊಸ್, ಕಾರ್ನಿವಾಲ್ ಮತ್ತು ಸೊನೆಟ್ ನಂತರ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಸೊಲ್ ಹ್ಯಾಚ್‌ಬ್ಯಾಕ್ ಬಿಡುಗಡೆಗಾಗಿ ಟ್ರೇಡ್‌ ಮಾರ್ಕ್ ದಾಖಲಿಸಿದ ಕಿಯಾ

ಕಿಯಾ ಕಂಪನಿಯು ಸದ್ಯ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಾದ ಸೊನೆಟ್ ಕಾರು ಮಾದರಿಯ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಸೊನೆಟ್ ಬಿಡುಗಡೆಯ ನಂತರ ಸೊಲ್ ಇವಿ ಹ್ಯಾಚ್‌ಬ್ಯಾಕ್ ಮಾದರಿಯನ್ನು ಬಿಡುಗಡೆ ಮಾಡುವ ಯೋಜನೆ ರೂಪಿಸಿದೆ. ಹೊಸ ಕಾರು ಮಾದರಿಗಾಗಿ ಈಗಾಗಲೇ ಕೇಂದ್ರ ಸಾರಿಗೆ ಇಲಾಖೆಯಲ್ಲಿ ಟ್ರೇಡ್‌ಮಾರ್ಕ್ ದಾಖಲಿಸಿದೆ.

ಸೊಲ್ ಹ್ಯಾಚ್‌ಬ್ಯಾಕ್ ಬಿಡುಗಡೆಗಾಗಿ ಟ್ರೇಡ್‌ ಮಾರ್ಕ್ ದಾಖಲಿಸಿದ ಕಿಯಾ

ಸದ್ಯ ಮಾರುಕಟ್ಟೆಯಲ್ಲಿ ಹ್ಯಾಚ್‌ಬ್ಯಾಕ್ ಮತ್ತು ಕಂಪ್ಯಾಕ್ಟ್ ಎಸ್‌ಯುವಿ ವಿಭಾಗವು ಉಳಿದ ಕಾರು ಮಾದರಿಗಳಿಂತಲೂ ಹೆಚ್ಚು ಬೇಡಿಕೆಯಲ್ಲಿದ್ದು, ತದನಂತರ ಎಸ್‌ಯುವಿ ಮತ್ತು ಎಂಪಿವಿ ಕಾರುಗಳು ಹೆಚ್ಚಿನ ಮಟ್ಟದ ಬೇಡಿಕೆಯಲ್ಲಿರುವ ಕಾರು ಮಾದರಿಗಳಾಗಿವೆ.

ಸೊಲ್ ಹ್ಯಾಚ್‌ಬ್ಯಾಕ್ ಬಿಡುಗಡೆಗಾಗಿ ಟ್ರೇಡ್‌ ಮಾರ್ಕ್ ದಾಖಲಿಸಿದ ಕಿಯಾ

ಇದೇ ಕಾರಣಕ್ಕೆ ಮಧ್ಯಮ ಗಾತ್ರದ ಎಂಪಿವಿ ಜೊತೆಗೆ ಹ್ಯಾಚ್‌ಬ್ಯಾಕ್ ವಿಭಾಗಕ್ಕೆ ಪ್ರವೇಶಿಸಲು ಸಿದ್ದವಾಗಿರುವ ಕಿಯಾ ಕಂಪನಿಯು ಹೊಸ ಮಾದರಿಯ ಸೊಲ್ ಮಾದರಿಯೊಂದನ್ನು ಬಿಡುಗಡೆ ಮಡುತ್ತಿದ್ದು, ಹೊಸ ಕಾರನ್ನು ಈ ವರ್ಷದ ಅಂತ್ಯಕ್ಕೆ ಇಲ್ಲವೇ 2022ರ ಆರಂಭದಲ್ಲಿ ಬಿಡುಗಡೆಯಾಗಲಿದೆ.

ಸೊಲ್ ಹ್ಯಾಚ್‌ಬ್ಯಾಕ್ ಬಿಡುಗಡೆಗಾಗಿ ಟ್ರೇಡ್‌ ಮಾರ್ಕ್ ದಾಖಲಿಸಿದ ಕಿಯಾ

ಸೊಲ್ ಕಾರು ಮಾದರಿಯು ಈಗಾಗಲೇ ಅಂತರ್‌ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಎಲೆಕ್ಟ್ರಿಕ್ ಮಾದರಿಗಳಲ್ಲಿ ಮಾರಾಟಗೊಳ್ಳುತ್ತಿದ್ದು, ಭಾರತದಲ್ಲೂ ಸೊಲ್ ಕಾರು ಎಲೆಕ್ಟ್ರಿಕ್ ಮಾದರಿಯಲ್ಲಿ ಬಿಡುಗಡೆಯಾಗುವ ಬಹುತೇಕ ಖಚಿತವಾಗಿದೆ. ಆದರೆ ಮಾಹಿತಿಗಳ ಪ್ರಕಾರ ಹೊಸ ಪೆಟ್ರೋಲ್ ಮಾದರಿಯಲ್ಲೂ ಬಿಡುಗಡೆಯಾಗಬಹುದು ಎನ್ನಲಾಗಿದ್ದು, ಕಿಯಾ ಹೊಸ ಎಂಪಿವಿ ಬಿಡುಗಡೆಯ ನಂತರವಷ್ಟೇ ಸೊಲ್ ಬಿಡುಗಡೆಯಾಗಲಿದೆ.

ಸೊಲ್ ಹ್ಯಾಚ್‌ಬ್ಯಾಕ್ ಬಿಡುಗಡೆಗಾಗಿ ಟ್ರೇಡ್‌ ಮಾರ್ಕ್ ದಾಖಲಿಸಿದ ಕಿಯಾ

ಸೊಲ್ ಇವಿ ಕಾರಿನಲ್ಲಿ ಹಲವಾರು ಐಷಾರಾಮಿ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಸೊಲ್ ಇವಿ ಕಾರಿಗಿಂತ ಸುಧಾರಿತ ಬ್ಯಾಟರಿ ಪ್ಯಾಕ್ ಹೊಂದಿರುವ ನಿರೋ ಇವಿ ಕಾರು ತುಸು ದುಬಾರಿಯಾಗಿರಲಿದೆ.

ಸೊಲ್ ಹ್ಯಾಚ್‌ಬ್ಯಾಕ್ ಬಿಡುಗಡೆಗಾಗಿ ಟ್ರೇಡ್‌ ಮಾರ್ಕ್ ದಾಖಲಿಸಿದ ಕಿಯಾ

ಹೀಗಾಗಿ ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಸೊಲ್ ಇವಿ ಪ್ರಮುಖ ಆಕರ್ಷಣೆಯಾಗುವ ನೀರಿಕ್ಷೆಯಲ್ಲಿದ್ದು, ಹೊಸ ಕಾರಿನ ಮೂಲಕ ಹ್ಯಾಚ್‌ಬ್ಯಾಕ್ ಕಾರುಗಳ ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

MOST READ: ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ಸೊಲ್ ಹ್ಯಾಚ್‌ಬ್ಯಾಕ್ ಬಿಡುಗಡೆಗಾಗಿ ಟ್ರೇಡ್‌ ಮಾರ್ಕ್ ದಾಖಲಿಸಿದ ಕಿಯಾ

ಇನ್ನು ಕೆಲವು ಮಾಹಿತಿಗಳ ಪ್ರಕಾರ ಸೊಲ್ ಕಾರು ಮಾದರಿಯು ಭಾರತದಲ್ಲಿ ಕೇವಲ ಎಲೆಕ್ಟ್ರಿಕ್ ಮಾದರಿಯಲ್ಲಿ ಮಾತ್ರ ಮಾರಾಟಗೊಳ್ಳಲಿದ್ದು, ಭವಿಷ್ಯ ಯೋಜನೆಗಾಗಿ ಇವಿ ವಾಹನಗಳ ಮೇಲೆ ಗಮನಹರಿಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ.

ಸೊಲ್ ಹ್ಯಾಚ್‌ಬ್ಯಾಕ್ ಬಿಡುಗಡೆಗಾಗಿ ಟ್ರೇಡ್‌ ಮಾರ್ಕ್ ದಾಖಲಿಸಿದ ಕಿಯಾ

ಒಟ್ಟಿನಲ್ಲಿ ಸೊಲ್ ಕಾರು ಮಾದರಿಯು ಭಾರತದಲ್ಲಿ ಬಿಡುಗಡೆಯಾಗುವ ಬಹುತೇಕ ಖಚಿತವಾಗಿದ್ದು, ಸೊಲ್ ಇವಿ ಈ ಕಾರು ಪ್ರತಿ ಚಾರ್ಜ್‌ಗೆ 400ಕಿ.ಮೀ ನಿಂದ 450 ಕಿ.ಮೀ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್ ಹೊಂದಿದೆ.

MOST READ: ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಸೊಲ್ ಹ್ಯಾಚ್‌ಬ್ಯಾಕ್ ಬಿಡುಗಡೆಗಾಗಿ ಟ್ರೇಡ್‌ ಮಾರ್ಕ್ ದಾಖಲಿಸಿದ ಕಿಯಾ

ಹೊಸ ಕಾರು ಬ್ಯಾಟರಿ ಸಾಮರ್ಥ್ಯಕ್ಕೆ ಅನುಗುಣವಾಗಿ ಈ ಕಾರು ರೂ.14 ಲಕ್ಷದಿಂದ ರೂ.18 ಲಕ್ಷ ಬೆಲೆಯನ್ನು ಹೊಂದಿರುವ ನಿರೀಕ್ಷೆಗಳಿದ್ದು, ಇದು ಟಾಟಾ ನೆಕ್ಸಾನ್ ಸೇರಿದಂತೆ ಪ್ರಮುಖ ಕಾರು ಮಾದರಿಗಳಿಗೆ ಪೈಪೋಟಿ ನೀಡಲಿದೆ.

Most Read Articles

Kannada
English summary
KIA Trademarks Soul Hatchback Nameplate In India. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X