ಹೊಸ ಕಾರುಗಳ ಮಾರಾಟದಲ್ಲಿ ಶೇ. 7ರಷ್ಟು ಬೆಳವಣಿಗೆ ಸಾಧಿಸಿದ ಕಿಯಾ ಮೋಟಾರ್ಸ್
ಕಿಯಾ ಮೋಟಾರ್ಸ್ ಕಂಪನಿಯು ಸೆಲ್ಟೊಸ್ ಮತ್ತು ಸೊನೆಟ್ ಆವೃತ್ತಿಗಳ ಮೂಲಕ ಕಾರು ಮಾರಾಟದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಕಳೆದ ವರ್ಷದ ಫೆಬ್ರವರಿ ಅವಧಿಯಲ್ಲಿನ ಕಾರು ಮಾರಾಟಕ್ಕಿಂತ ಈ ವರ್ಷದ ಫೆಬ್ರವರಿ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಶೇ.7 ರಷ್ಟು ಬೆಳವಣಿಗೆ ಸಾಧಿಸಿದೆ.

2021ರ ಫೆಬ್ರವರಿ ಅವಧಿಯಲ್ಲಿ ಕಿಯಾ ಮೋಟಾರ್ಸ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಒಟ್ಟು 16,702 ಯುನಿಟ್ ಕಾರು ಮಾರಾಟಗೊಳಿಸಿದ್ದು, 2020ರ ಫೆಬ್ರವರಿ ತಿಂಗಳಿನಲ್ಲಿ ಒಟ್ಟು 15,644 ಯುನಿಟ್ ಕಾರು ಮಾರಾಟಗೊಳಿಸಿತ್ತು. ಈ ವರ್ಷದ ಆರಂಂಭದಲ್ಲಿ ಕಿಯಾ ಮೋಟಾರ್ಸ್ ಕಂಪನಿಯ ಸೊನೆಟ್ ಕಾರು ಮಾದರಿಯೊಂದಿಗೆ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ಕಳೆದ ವರ್ಷದ ಫೆಬ್ರವರಿ ಅವಧಿಯಲ್ಲಿನ ಕಾರು ಮಾರಾಟಕ್ಕಿಂತ ಈ ವರ್ಷದ ಫೆಬ್ರವರಿ ಅವಧಿಯಲ್ಲಿ ಶೇ.7 ರಷ್ಟು ಬೆಳವಣಿಗೆ ಸಾಧಿಸಿದೆ.

ಕಿಯಾ ಮೋಟಾರ್ಸ್ ಕಂಪನಿಯು ವಿವಿಧ ಹೊಸ ಕಾರು ಮಾದರಿಗಳೊಂದಿಗೆ ಪ್ರಯಾಣಿಕ ಕಾರು ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಕಿಯಾ ಮೋಟಾರ್ಸ್ ಕಂಪನಿಯು ಕಳೆದ ಜನವರಿಯಲ್ಲೂ ಕೂಡಾ ವಾರ್ಷಿಕ ಕಾರು ಮಾರಾಟದಲ್ಲೂ ಉತ್ತಮ ಬೆಳವಣಿಗೆಯನ್ನು ಸಾಧಿಸಿತ್ತು.

ಆದರೆ ತಿಂಗಳ ಕಾರು ಮಾರಾಟದಲ್ಲಿ ಕಿಯಾ ಮೋಟಾರ್ಸ್ ಕಂಪನಿಗೆ ಶೇ.12ರಷ್ಟು ಹಿನ್ನಡೆ ಉಂಟಾಗಿದ್ದು, ಕಳೆದ ಜನವರಿಯಲ್ಲಿ 19,056 ಯನಿಟ್ ಕಾರು ಮಾರಾಟ ಮಾಡಿದ್ದ ಕಿಯಾ ಕಂಪನಿಯು ಫೆಬ್ರವರಿಯಲ್ಲಿ 16,702 ಯುನಿಟ್ ಕಾರು ಮಾರಾಟದೊಂದಿಗೆ ತಿಂಗಳ ಕಾರು ಮಾರಾಟದಲ್ಲಿ ನಷ್ಟ ಅನುಭವಿಸಿದೆ.

ದಸರಾ ಮತ್ತು ದೀಪಾವಳಿ ನಂತರ ಹೊಸ ವಾಹನಗಳ ಮಾರಾಟವು ಸಾಮಾನ್ಯವಾಗಿ ತಗ್ಗಿದ್ದರೂ ಕೂಡಾ ಹೊಸ ವರ್ಷದ ಆರಂಭದಲ್ಲೇ ಕಿಯಾ ಮೋಟಾರ್ಸ್ ಕಾರು ಮಾರಾಟದಲ್ಲಿ ಏರಿಳಿತ ಕಂಡುಬಂದಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಹರಿದುಬರುವ ನೀರಿಕ್ಷೆಯಿದೆ. ಕರೋನಾ ವೈರಸ್ ಪರಿಣಾಮ ತೀವ್ರವಾಗಿ ಕುಸಿತ ಕಂಡಿದ್ದ ಭಾರತೀಯ ಆಟೋ ಉದ್ಯಮವು ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಚೇತರಿಸಿಕೊಂಡಿದ್ದು, ಹೊಸದಾಗಿ ಮಾರುಕಟ್ಟೆಗೆ ಪ್ರವೇಶಿಸಿರುವ ವಾಹನಗಳ ಮಾರಾಟದಲ್ಲಿ ಸಾಕಷ್ಟು ಏರಿಕೆ ಕಂಡುಬಂದಿದೆ.

ಕಿಯಾ ಹೊಸದಾಗಿ ಬಿಡುಗಡೆ ಮಾಡಿರುವ ಸೊನೆಟ್ ಕಾರು ಭರ್ಜರಿ ಬೇಡಿಕೆ ದಾಖಲಿಸಿದ್ದು, ಹೊಸ ಕಾರು ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ವಿನೂತನ ಫೀಚರ್ಸ್‌ಗಳೊಂದಿಗೆ ಗ್ರಾಹಕರನ್ನು ಸೆಳೆಯುತ್ತದೆ.

ಇನ್ನು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹಲವಾರು ಹೊಸ ದಾಖಲೆಗಳಿಗೆ ಕಾರಣವಾಗಿರುವ ಕಿಯಾ ಸೆಲ್ಟೊಸ್ ಮಾದರಿಯು ಮುಂಬರುವ ಕೆಲವೇ ದಿನಗಳಲ್ಲಿ ಫೇಸ್‌ಲಿಫ್ಟ್ ಮಾದರಿಯನ್ನು ಪಡೆದುಕೊಳ್ಳುತ್ತಿದ್ದು, ಹೊಸ ಕಾರು ಹಲವಾರು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.
MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಕಿಯಾ ಮೋಟಾರ್ಸ್ ಕಂಪನಿಯು 2019ರ ಮಧ್ಯಂತರದಲ್ಲಿ ಸೆಲ್ಟೊಸ್ ಎಸ್‌ಯುವಿ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸುವ ಮೂಲಕ ದೇಶಿಯ ಮಾರುಕಟ್ಟೆಯ ಆಟೋ ಉತ್ಪಾದನಾ ವಲಯಕ್ಕೆ ಅಧಿಕೃತವಾಗಿ ಎಂಟ್ರಿ ನೀಡಿತ್ತು. ಸೆಲ್ಟೊಸ್ ಎಸ್‌ಯುವಿ ಬಿಡುಗಡೆಯ ನಂತರ ಕಳೆದ ಒಂದೂವರೆ ವರ್ಷದಲ್ಲಿ ಕಿಯಾ ಮೋಟಾರ್ಸ್ ಕಂಪನಿಯು ಹಲವಾರು ದಾಖಲೆಗಳಿಗೆ ಕಾರಣವಾಗಿದ್ದು, ಶೀಘ್ರದಲ್ಲೇ ಹೆಚ್ಚುವರಿ ಫೀಚರ್ಸ್ ಹೊಂದಿರುವ ಫೇಸ್‌ಲಿಫ್ಟ್ ಮಾದರಿಯನ್ನು ಬಿಡುಗಡೆ ಮಾಡಲಿದೆ.

ಫೇಸ್‌ಲಿಫ್ಟ್ ಮಾದರಿಯು ಮುಂಬರುವ ಏಪ್ರಿಲ್ ಹೊತ್ತಿಗೆ ಮಾರುಕಟ್ಟೆ ಪ್ರವೇಶಿಸುವ ಸಾಧ್ಯತೆಗಳಿದ್ದು, ಹೊಸ ಕಾರಿನಲ್ಲಿ ಕಂಪನಿಯು ಉನ್ನತ ಮಟ್ಟದ ತಾಂತ್ರಿಕ ಅಂಶಗಳೊಂದಿಗೆ ಸುರಕ್ಷಾ ಫೀಚರ್ಸ್‌ಗಳ ಅಳವಡಿಕೆಯಲ್ಲಿ ಗ್ರಾಹಕರನ್ನು ಸೆಳೆಯಲಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಫೇಸ್‌ಲಿಫ್ಟ್ ಸೆಲ್ಟೊಸ್ ಮಾದರಿಯಲ್ಲಿ ಕಿಯಾ ಮೋಟಾರ್ಸ್ ಕಂಪನಿಯು ಎಂಜಿನ್ ಆಯ್ಕೆಯನ್ನು ಪ್ರಸ್ತುತ ಮಾದರಿಯಲ್ಲಿರುವಂತೆ ಮುಂದುವರಿಸಲಿದ್ದು, ಆರಂಭಿಕ ಕಾರು ಮಾದರಿಗಳಲ್ಲಿ ಹಲವು ಸುರಕ್ಷಾ ಫೀಚರ್ಸ್‌ಗಳು ಸ್ಟ್ಯಾಂಡರ್ಡ್ ಆಗಿ ಜೋಡಣೆಯಾಗಲಿದೆ.


Click it and Unblock the Notifications