Just In
- 1 hr ago
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- 2 hrs ago
ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
- 3 hrs ago
ಸಿಎನ್ಜಿ ವರ್ಷನ್ನಲ್ಲೂ ಬಿಡುಗಡೆಯಾಗಲಿದೆ ಸ್ಕೋಡಾ ರ್ಯಾಪಿಡ್ ಸೆಡಾನ್
- 3 hrs ago
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
Don't Miss!
- News
ಪೆಟ್ರೋಲ್, ಡೀಸೆಲ್ ದರ ಏರಿಕೆ: ಕೇಂದ್ರಕ್ಕೆ ಬಿಸಿ ಮುಟ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ
- Movies
ಬಿಗ್ಬಾಸ್: ಪ್ರಶಾಂತ್ ಸಂಬರ್ಗಿ ಮೇಲೆ ಉರಿದು ಬಿದ್ದ ಮನೆ ಸದಸ್ಯರು
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಒಂದೂವರೆ ವರ್ಷದಲ್ಲಿ ದಾಖಲೆ ಸಂಖ್ಯೆಯ ಕಾರುಗಳನ್ನು ಮಾರಾಟ ಮಾಡಿದ ಕಿಯಾ ಮೋಟಾರ್ಸ್
ಕಿಯಾ ಮೋಟಾರ್ಸ್ ಕಂಪನಿಯು ಭಾರತದಲ್ಲಿ 1.5 ವರ್ಷಗಳಲ್ಲಿ 2 ಲಕ್ಷ ಯೂನಿಟ್ ಕಾರುಗಳನ್ನು ಮಾರಾಟ ಮಾಡಿರುವುದಾಗಿ ತಿಳಿಸಿದೆ. ಕಿಯಾ ಮೋಟಾರ್ಸ್ 2019ರ ಆಗಸ್ಟ್ ತಿಂಗಳಿನಿಂದ ಭಾರತದಲ್ಲಿ ಕಾರುಗಳನ್ನು ಮಾರಾಟ ಮಾಡುತ್ತಿದೆ.

ಕೇವಲ 17 ತಿಂಗಳಲ್ಲಿ ಕಿಯಾ ಮೋಟಾರ್ಸ್ ಭಾರತದ ಜನಪ್ರಿಯ ಕಾರು ಕಂಪನಿಯಾಗಿ ಹೊರಹೊಮ್ಮಿದೆ. ಈ ಮಾರಾಟದ ಅಂಕಿ ಅಂಶವನ್ನು ಕೇವಲ 3 ಕಾರುಗಳಿಂದ ಪಡೆಯಲಾಗಿದೆ ಎಂದು ಕಂಪನಿ ಹೇಳಿದೆ. ಕಿಯಾ ಮೋಟಾರ್ಸ್ ಕಂಪನಿಯು ಭಾರತದಲ್ಲಿ ಸದ್ಯಕ್ಕೆ ಸೆಲ್ಟೋಸ್, ಕಾರ್ನಿವಲ್ ಹಾಗೂ ಸೊನೆಟ್ ಎಂಬ ಮೂರು ಕಾರುಗಳನ್ನು ಮಾರಾಟ ಮಾಡುತ್ತಿದೆ.

ಭಾರತದಲ್ಲಿ ಸೆಲ್ಟೋಸ್ ಎಸ್‌ಯುವಿಯ ಮಾರಾಟವು ಹ್ಯುಂಡೈ ಕ್ರೆಟಾ ಹಾಗೂ ಮಾರುತಿ ಸುಜುಕಿ ಬ್ರೆಝಾಗಳ ಮಾರಾಟದ ಮೇಲೆ ಪರಿಣಾಮ ಬೀರಿದೆ. ಕಳೆದ ವರ್ಷ ಸೆಲ್ಟೋಸ್ ಎಸ್‌ಯುವಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟ ಮಾಡಲಾಗಿತ್ತು.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಕಂಪನಿಯು ಕಾಂಪ್ಯಾಕ್ಟ್ ಎಸ್‌ಯುವಿ ಸೆಗ್'ಮೆಂಟಿನಲ್ಲಿ ಇತರ ದೊಡ್ಡ ಕಂಪನಿಯ ಎಸ್‌ಯುವಿಗಳಿಗೆ ಬೆಲೆ, ಫೀಚರ್'ಗಳ ವಿಷಯದಲ್ಲಿ ಕಠಿಣ ಸ್ಪರ್ಧೆಯನ್ನು ನೀಡುತ್ತಿದೆ. ಕಳೆದ ವರ್ಷ ಹಬ್ಬದ ವೇಳೆಯಲ್ಲಿ ಸೊನೆಟ್ ಕಾರ್ ಅನ್ನು ಬಿಡುಗಡೆಗೊಳಿಸಲಾಯಿತು.

ಈ ಕಾರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಕಂಪನಿಯು ಈ ಕಾರನ್ನು ಹಲವಾರು ಹೊಸ ಫೀಚರ್'ಗಳೊಂದಿಗೆ ಬಿಡುಗಡೆಗೊಳಿಸಿರುವುದು ಅದರ ಜನಪ್ರಿಯತೆಗೆ ಕಾರಣವಾಗಿದೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಈಗ ಕಂಪನಿಯು ತನ್ನ ಕಾರುಗಳಲ್ಲಿ ಹೊಸ ಲೋಗೊವನ್ನು ಪರಿಚಯಿಸಲಿದೆ. ಈ ಲೋಗೋ ಕಂಪನಿಗೆ ಹೊಸತನವನ್ನು ನೀಡಲಿದ್ದು, ಕಂಪನಿಯು ಭವಿಷ್ಯದ ಗುರಿಯತ್ತ ಸಾಗಲಿದೆ ಎಂದು ಕಂಪನಿಯು ಆಶಿಸುತ್ತಿದೆ.

ಕಿಯಾ ತನ್ನ ಮುಂದಿನ ಯೋಜನೆಯನ್ನು ಬಹಿರಂಗಪಡಿಸಿದೆ. ಈ ಯೋಜನೆಯಡಿಯಲ್ಲಿ ಕಂಪನಿಯು 2027ರ ವೇಳೆಗೆ 7 ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಿದೆ. ಇದರ ಜೊತೆಗೆ ಕಿಯಾ ಮೋಟಾರ್ಸ್ ಮಾರುಕಟ್ಟೆಯಲ್ಲಿರುವ ತನ್ನ ಕಾರುಗಳಿಗೆ ಹೊಸತನವನ್ನು ನೀಡುವ ಕೆಲಸವನ್ನು ಮಾಡುತ್ತಿದೆ.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಭಾರತದಲ್ಲಿ ಸೆಲ್ಟೋಸ್ ಕಾರಿನ ಫೇಸ್‌ಲಿಫ್ಟ್ ಆವೃತ್ತಿಯು ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಮಾಹಿತಿಗಳ ಪ್ರಕಾರ ಕೆಲವು ಹೊಸ ಫೀಚರ್'ಗಳೊಂದಿಗೆ ಸೆಲ್ಟೋಸ್ ಫೇಸ್‌ಲಿಫ್ಟ್ ಆವೃತ್ತಿಯನ್ನು ಈ ವರ್ಷದ ಮಧ್ಯದಲ್ಲಿ ಬಿಡುಗಡೆಗೊಳಿಸಲಾಗುವುದು.

ಸೆಲ್ಟೋಸ್ ಫೇಸ್‌ಲಿಫ್ಟ್ ಆವೃತ್ತಿಯ ವಿನ್ಯಾಸದಲ್ಲಿ ಕೆಲವು ಹೊಸ ಫೀಚರ್'ಗಳನ್ನು ಸೇರಿಸುವುದರೊಂದಿಗೆ ಸಣ್ಣ ಬದಲಾವಣೆಗಳನ್ನು ಮಾಡುವ ಸಾಧ್ಯತೆಗಳಿವೆ. ಫೇಸ್‌ಲಿಫ್ಟ್ ಆವೃತ್ತಿಯಲ್ಲಿಯೂ ಟೈಗರ್ ನೋಸ್ ಗ್ರಿಲ್, ಹೆಡ್‌ಲೈಟ್, ಟೇಲ್ ಲೈಟ್, ಫ್ರಂಟ್ ಹಾಗೂ ಬ್ಯಾಕ್ ಬಂಪರ್ ನೀಡುವ ಸಾಧ್ಯತೆಗಳಿವೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಇದರ ಜೊತೆಗೆ ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಪನೋರಾಮಿಕ್ ಸನ್‌ರೂಫ್‌ನಂತಹ ಫೀಚರ್'ಗಳನ್ನು ಸಹ ಹೊಸ ಸೆಲ್ಟೋಸ್‌ನಲ್ಲಿ ನೀಡುವ ನಿರೀಕ್ಷೆಗಳಿವೆ. ಕಿಯಾ ಮೋಟಾರ್ಸ್ ಕಂಪನಿಯು ಹೊಸ ಫೀಚರ್'ಗಳನ್ನು ಹೊಂದಲಿರುವ ಸೆಲ್ಟೋಸ್ ಫೇಸ್‌ಲಿಫ್ಟ್ ಆವೃತ್ತಿಯ ಬೆಲೆಯನ್ನು ಹೆಚ್ಚಿಸುವ ಸಾಧ್ಯತೆಗಳಿವೆ.