Just In
- 8 hrs ago
ಕೊನೆಯ ಆಸೆಯೆಂತೆ ರಾಜಕುಮಾರ ಪ್ರಿನ್ಸ್ ಫಿಲಿಪ್ ಅಂತಿಮ ಯಾತ್ರೆಗೆ ಸಿದ್ದವಾಗಿದೆ ಮಾಡಿಫೈ ಲ್ಯಾಂಡ್ ರೋವರ್
- 10 hrs ago
ಜಪಾನ್ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ 2021ರ ಸುಜುಕಿ ಜಿಕ್ಸರ್ 250 ಬೈಕ್
- 11 hrs ago
ಆಕರ್ಷಕ ಬೆಲೆಯಲ್ಲಿ ದೇಶದ ಮೊದಲ ಹೈಬ್ರಿಡ್ ಟ್ರ್ಯಾಕ್ಟರ್ ಬಿಡುಗಡೆ
- 11 hrs ago
ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್
Don't Miss!
- News
ಬ್ರೆಜಿಲ್: ಒಂದೇ ದಿನ ಕೊರೊನಾವೈರಸ್ ಸೋಂಕಿಗೆ 3462 ಮಂದಿ ಸಾವು!
- Lifestyle
ಗುರುವಾರದ ದಿನ ಭವಿಷ್ಯ: ಈ ದಿನ ಹೇಗಿದೆ ನಿಮ್ಮ ರಾಶಿಫಲ
- Sports
ಐಪಿಎಲ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ಆರ್ಸಿಬಿ!
- Finance
ಚಿನ್ನ, ಬೆಳ್ಳಿ ಸ್ವಲ್ಪ ಕುಸಿತ: ಏಪ್ರಿಲ್ 14ರಂದು ಎಲ್ಲೆಡೆ ಬೆಲೆ ಎಷ್ಟಿದೆ?
- Movies
40, 50, 60ರ ಸೀಕ್ರೆಟ್ ಬಿಚ್ಚಿಟ್ಟ ಕ್ರೇಜಿಸ್ಟಾರ್ ರವಿಚಂದ್ರನ್
- Education
SSLC Exams 2021: ಸಿಬಿಎಸ್ಇ ಪರೀಕ್ಷೆ ರದ್ದು ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಊಹಾಪೋಹ: ಸುರೇಶ್ ಕುಮಾರ್ ಸ್ಪಷ್ಟನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಲೋಗೋದೊಂದಿಗೆ ಬಿಡುಗಡೆಯಾಗಲಿವೆ ಕಿಯಾ ಮೋಟಾರ್ಸ್ ಕಾರುಗಳು
ಕಿಯಾ ಮೋಟಾರ್ಸ್ ಕಂಪನಿಯು ಇತ್ತೀಚೆಗೆ ತನ್ನ ಮುಂದಿನ ಯೋಜನೆ ಹಾಗೂ ಹೊಸ ಕಾರ್ಯ ತಂತ್ರದ ವಿವರಗಳನ್ನು ಬಹಿರಂಗಪಡಿಸಿದೆ. ಈ ಬದಲಾವಣೆಯನ್ನು ತೋರಿಸುವ ಸಲುವಾಗಿ ಕಂಪನಿಯು ಹೊಸ ಲೋಗೋವನ್ನು ಪರಿಚಯಿಸಿದೆ.

ಜೊತೆಗೆ ಕಂಪನಿಯ ಸ್ಲೋಗನ್ ಅನ್ನು ಸಹ ಬದಲಿಸಲಾಗಿದೆ. ಕಂಪನಿಯು ತನ್ನ ಹೆಸರನ್ನು ಕಿಯಾ ಮೋಟಾರ್ಸ್ ಕಾರ್ಪೊರೇಶನ್ನಿಂದ ಕಿಯಾ ಎಂದು ಬದಲಿಸಿಕೊಂಡಿದೆ. ಕಿಯಾ ಕಂಪನಿಯ ಈ ಹೊಸ ಲೋಗೋ ಟ್ರೆಂಡಿ ಹಾಗೂ ಫ್ಯೂಚರಿಸ್ಟಿಕ್ ಆಗಿದ್ದು ಆಕರ್ಷಕವಾಗಿ ಕಾಣುತ್ತದೆ.

ಕಂಪನಿಯು ಮೂರು ಅಕ್ಷರಗಳ ಈ ಹೊಸ ಲೋಗೊ ಮೂಲಕ ಜಾಗತಿಕ ಕಾರು ಮಾರುಕಟ್ಟೆಯಲ್ಲಿ ತನ್ನ ಪ್ರಾಬಲ್ಯವನ್ನು ತೋರಿಸಲು ಬಯಸಿದೆ. ಈ ಹೊಸ ಲೋಗೋ ಕಂಪನಿಯ ಹೊಸ ತಲೆಮಾರಿನ ಎಲೆಕ್ಟ್ರಿಕ್ ವಾಹನಗಳಿಗೂ ಸೂಕ್ತವಾಗಿದೆ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಕಂಪನಿಯು 2027ರ ವೇಳೆಗೆ ಏಳು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ. ಈ ಹೊಸ ಲೋಗೋವನ್ನು ಭಾರತದಲ್ಲಿ ಮಾರಾಟವಾಗುತ್ತಿರುವ ಸೊನೆಟ್ ಹಾಗೂ ಸೆಲ್ಟೋಸ್ ಕಾರುಗಳಲ್ಲಿಯೂ ಅಳವಡಿಸಲಾಗುವುದು.

2021ರ ಮಧ್ಯದಲ್ಲಿ ಹೊಸ ಲೋಗೋವನ್ನು ಹೊಂದಿರುವ ಕಾರುಗಳನ್ನು ಭಾರತದಲ್ಲಿ ಬಿಡುಗಡೆಗೊಳಿಸಲಾಗುವುದು ಎಂದು ಕಿಯಾ ಕಂಪನಿಯ ಸಿಇಒ ಹೋ ಸಾಂಗ್ ಸಾಂಗ್ ಹೇಳಿದ್ದಾರೆ. ಇದು ಕಂಪನಿಯ ಹೊಸ ಕಾರ್ಯತಂತ್ರದ ಭಾಗವಾಗಿದೆ.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಹೊಸ ಲೋಗೋವನ್ನು ಡೀಲರ್'ಗಳು ಸಹ ಅಳವಡಿಸಿಕೊಳ್ಳಲಿದ್ದಾರೆ. ಕಂಪನಿಯು ಡೀಲರ್'ಗಳ ಅನುಭವವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ಬಯಸಿದೆ. ಕಿಯಾ ಕಂಪನಿಯು 2027ರ ವೇಳೆಗೆ ಎಲೆಕ್ಟ್ರಿಕ್ ಎಸ್ಯುವಿ, ಎಂಪಿವಿ ಹಾಗೂ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಿದೆ.

ಕಂಪನಿಯ ಮೊದಲ ಎಲೆಕ್ಟ್ರಿಕ್ ವಾಹನವನ್ನು ಮುಂದಿನ ತಿಂಗಳು ಪರಿಚಯಿಸುವ ಸಾಧ್ಯತೆಗಳಿವೆ. ಈ ಎಲೆಕ್ಟ್ರಿಕ್ ವಾಹನವು ಪೂರ್ತಿಯಾಗಿ ಚಾರ್ಜ್ ಆದ ನಂತರ 500 ಕಿ.ಮೀಗಳವರೆಗೆ ಚಲಿಸಲಿದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ವೇಗದ ಚಾರ್ಜರ್ ಮೂಲಕ ಈ ಕಾರಿನಲ್ಲಿರುವ ಬ್ಯಾಟರಿಯನ್ನು ಕೇವಲ 20 ನಿಮಿಷಗಳಲ್ಲಿ ಚಾರ್ಜ್ ಮಾಡಬಹುದು. ಕಂಪನಿಯು 2025ರ ವೇಳೆಗೆ ಜಾಗತಿಕ ಎಲೆಕ್ಟ್ರಿಕ್ ವಾಹನದ 6.6% ಮಾರುಕಟ್ಟೆ ಪಾಲನ್ನು ಹೊಂದುವ ಗುರಿಯನ್ನು ಹೊಂದಿದೆ.

ಇದರ ಜೊತೆಗೆ ಕಂಪನಿಯು 2026ರ ವೇಳೆಗೆ 5 ಲಕ್ಷ ಯುನಿಟ್ ಎಲೆಕ್ಟ್ರಿಕ್ ವಾಹನಗಳನ್ನು ಮಾರಾಟ ಮಾಡುವ ಗುರಿಯನ್ನು ಹೊಂದಿದೆ. ಮತ್ತೊಂದು ಯೋಜನೆಯ ಭಾಗವಾಗಿ ಕಂಪನಿಯು ಪರ್ಪಸ್ ಬಿಲ್ಟ್ ವಾಹನಗಳನ್ನು ಸಹ ಅಭಿವೃದ್ಧಿಪಡಿಸುತ್ತಿದೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಕಿಯಾ ಕಂಪನಿಯು ಎಲೆಕ್ಟ್ರಿಕ್ ವಾಹನ ಹಾಗೂ ಅಟಾನಾಮಸ್ ಡ್ರೈವಿಂಗ್ ಟೆಕ್ನಾಲಜಿಯನ್ನು ಹೊಂದಿರುವ ಪರಿಸರ ಸ್ನೇಹಿ ವಾಹನಗಳನ್ನು ಅಭಿವೃದ್ಧಿಪಡಿಸಲು ಬಯಸಿದೆ. ಈ ವಾಹನಗಳು ವಿಶ್ವದ ಹಲವು ನಗರಗಳಲ್ಲಿ ಮಾರಾಟವಾಗಲಿವೆ.

ಕಿಯಾ ಮೋಟಾರ್ಸ್ ಅಲ್ಪಾವಧಿಯಲ್ಲಿಯೇ ದೇಶಿಯ ಮಾರುಕಟ್ಟೆಯಲ್ಲಿ ಛಾಪು ಮೂಡಿಸಿದೆ. ಕಂಪನಿಯು ಎಸ್ಯುವಿ ಸೆಗ್'ಮೆಂಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರುಗಳನ್ನು ಮಾರಾಟ ಮಾಡುತ್ತಿದೆ. ಕಂಪನಿಗೆ ದೇಶಿಯ ಮಾರುಕಟ್ಟೆಯು ಪ್ರಮುಖ ಮಾರುಕಟ್ಟೆಯಾಗಿರುವ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳನ್ನು ಭಾರತದಲ್ಲಿಯೂ ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ.