ಹೊಸ ವರ್ಷದ ಆರಂಭದಲ್ಲೇ ಭಾರೀ ಪ್ರಮಾಣದ ಹೊಸ ಕಾರುಗಳನ್ನು ಮಾರಾಟ ಮಾಡಿದ ಕಿಯಾ ಮೋಟಾರ್ಸ್

ಕಿಯಾ ಮೋಟಾರ್ಸ್ ಕಂಪನಿಯು ಸೆಲ್ಟೊಸ್ ಮತ್ತು ಸೊನೆಟ್ ಆವೃತ್ತಿಗಳ ಮೂಲಕ ಕಾರು ಮಾರಾಟದಲ್ಲಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದು, ಕಳೆದ ವರ್ಷದ ಜನವರಿಯಲ್ಲಿನ ಕಾರು ಮಾರಾಟಕ್ಕಿಂತ ಈ ವರ್ಷದ ಜನವರಿ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಶೇ.23.34 ರಷ್ಟು ಬೆಳವಣಿಗೆ ಸಾಧಿಸಿದೆ.

ಹೊಸ ವರ್ಷದ ಆರಂಭದಲ್ಲೇ ಭಾರೀ ಪ್ರಮಾಣದ ಹೊಸ ಕಾರುಗಳನ್ನು ಮಾರಾಟ

2021ರ ಜನವರಿ ಅವಧಿಯಲ್ಲಿ ಕಿಯಾ ಮೋಟಾರ್ಸ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಒಟ್ಟು 19,056 ಯುನಿಟ್‌ಗಳನ್ನು ಮಾರಾಟಗೊಳಿಸಿದ್ದು, 2020ರ ಜನವರಿ ತಿಂಗಳಿನಲ್ಲಿ ಒಟ್ಟು 15,450 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಈ ವರ್ಷದ ಆರಂಂಭದಲ್ಲಿ ಕಿಯಾ ಮೋಟಾರ್ಸ್ ಕಂಪನಿಯ ಸೊನೆಟ್ ಕಾರು ಮಾದರಿಯೊಂದಿಗೆ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ಕಳೆದ ವರ್ಷದ ಜನವರಿ ಅವಧಿಯಲ್ಲಿನ ಕಾರು ಮಾರಾಟಕ್ಕಿಂತ ಈ ವರ್ಷದ ಜನವರಿ ಅವಧಿಯಲ್ಲಿ ಶೇ.23.34 ರಷ್ಟು ಬೆಳವಣಿಗೆ ಸಾಧಿಸಿದೆ.

ಹೊಸ ವರ್ಷದ ಆರಂಭದಲ್ಲೇ ಭಾರೀ ಪ್ರಮಾಣದ ಹೊಸ ಕಾರುಗಳನ್ನು ಮಾರಾಟ

ಕಿಯಾ ಮೋಟಾರ್ಸ್ ಕಂಪನಿಯು ವಿವಿಧ ಹೊಸ ಕಾರು ಮಾದರಿಗಳೊಂದಿಗೆ ಪ್ರಯಾಣಿಕ ಕಾರು ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಕಿಯಾ ಮೋಟಾರ್ಸ್ ಕಂಪನಿಯು ಕಳೆದ ಡಿಸೆಂಬರ್‌ನಲ್ಲೂ ಕೂಡಾ ವಾರ್ಷಿಕ ಕಾರು ಮಾರಾಟದಲ್ಲೂ ಉತ್ತಮ ಬೆಳವಣಿಗೆಯನ್ನು ಸಾಧಿಸಿತ್ತು.

ಹೊಸ ವರ್ಷದ ಆರಂಭದಲ್ಲೇ ಭಾರೀ ಪ್ರಮಾಣದ ಹೊಸ ಕಾರುಗಳನ್ನು ಮಾರಾಟ

ದಸರಾ ಮತ್ತು ದೀಪಾವಳಿ ನಂತರ ಹೊಸ ವಾಹನಗಳ ಮಾರಾಟವು ಸಾಮಾನ್ಯವಾಗಿ ತಗ್ಗಿದ್ದರೂ ಕೂಡಾ ಹೊಸ ವರ್ಷದ ಆರಂಭದಲ್ಲೇ ಕಿಯಾ ಮೋಟಾರ್ಸ್ ಕಾರು ಮಾರಾಟದಲ್ಲಿ ಸಾಕಷ್ಟು ಹೆಚ್ಚಳ ಕಂಡುಬಂದಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಹರಿದುಬರುವ ನೀರಿಕ್ಷೆಯಿದೆ.

ಹೊಸ ವರ್ಷದ ಆರಂಭದಲ್ಲೇ ಭಾರೀ ಪ್ರಮಾಣದ ಹೊಸ ಕಾರುಗಳನ್ನು ಮಾರಾಟ

ಕರೋನಾ ವೈರಸ್ ಪರಿಣಾಮ ತೀವ್ರವಾಗಿ ಕುಸಿತ ಕಂಡಿದ್ದ ಭಾರತೀಯ ಆಟೋ ಉದ್ಯಮವು ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಚೇತರಿಸಿಕೊಂಡಿದ್ದು, ಹೊಸದಾಗಿ ಮಾರುಕಟ್ಟೆಗೆ ಪ್ರವೇಶಿಸಿರುವ ವಾಹನಗಳ ಮಾರಾಟದಲ್ಲಿ ಸಾಕಷ್ಟು ಏರಿಕೆ ಕಂಡುಬಂದಿದೆ. ಕಿಯಾ ಹೊಸದಾಗಿ ಬಿಡುಗಡೆ ಮಾಡಿರುವ ಸೊನೆಟ್ ಕಾರು ಭರ್ಜರಿ ಬೇಡಿಕೆ ದಾಖಲಿಸಿದ್ದು, ಹೊಸ ಕಾರು ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ವಿನೂತನ ಫೀಚರ್ಸ್‌ಗಳೊಂದಿಗೆ ಗ್ರಾಹಕರನ್ನು ಸೆಳೆಯುತ್ತದೆ.

ಹೊಸ ವರ್ಷದ ಆರಂಭದಲ್ಲೇ ಭಾರೀ ಪ್ರಮಾಣದ ಹೊಸ ಕಾರುಗಳನ್ನು ಮಾರಾಟ

ಇನ್ನು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹಲವಾರು ಹೊಸ ದಾಖಲೆಗಳಿಗೆ ಕಾರಣವಾಗಿರುವ ಕಿಯಾ ಸೆಲ್ಟೊಸ್ ಮಾದರಿಯು ಮುಂಬರುವ ಕೆಲವೇ ದಿನಗಳಲ್ಲಿ ಫೇಸ್‌ಲಿಫ್ಟ್ ಮಾದರಿಯನ್ನು ಪಡೆದುಕೊಳ್ಳುತ್ತಿದ್ದು, ಹೊಸ ಕಾರು ಹಲವಾರು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಹೊಸ ವರ್ಷದ ಆರಂಭದಲ್ಲೇ ಭಾರೀ ಪ್ರಮಾಣದ ಹೊಸ ಕಾರುಗಳನ್ನು ಮಾರಾಟ

ಕಿಯಾ ಮೋಟಾರ್ಸ್ ಕಂಪನಿಯು 2019ರ ಮಧ್ಯಂತರದಲ್ಲಿ ಸೆಲ್ಟೊಸ್ ಎಸ್‌ಯುವಿ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸುವ ಮೂಲಕ ದೇಶಿಯ ಮಾರುಕಟ್ಟೆಯ ಆಟೋ ಉತ್ಪಾದನಾ ವಲಯಕ್ಕೆ ಅಧಿಕೃತವಾಗಿ ಎಂಟ್ರಿ ನೀಡಿತ್ತು. ಸೆಲ್ಟೊಸ್ ಎಸ್‌ಯುವಿ ಬಿಡುಗಡೆಯ ನಂತರ ಕಳೆದ ಒಂದೂವರೆ ವರ್ಷದಲ್ಲಿ ಕಿಯಾ ಮೋಟಾರ್ಸ್ ಕಂಪನಿಯು ಹಲವಾರು ದಾಖಲೆಗಳಿಗೆ ಕಾರಣವಾಗಿದ್ದು, ಶೀಘ್ರದಲ್ಲೇ ಹೆಚ್ಚುವರಿ ಫೀಚರ್ಸ್ ಹೊಂದಿರುವ ಫೇಸ್‌ಲಿಫ್ಟ್ ಮಾದರಿಯನ್ನು ಬಿಡುಗಡೆ ಮಾಡಲಿದೆ.

MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಹೊಸ ವರ್ಷದ ಆರಂಭದಲ್ಲೇ ಭಾರೀ ಪ್ರಮಾಣದ ಹೊಸ ಕಾರುಗಳನ್ನು ಮಾರಾಟ

ಫೇಸ್‌ಲಿಫ್ಟ್ ಮಾದರಿಯು ಮುಂಬರುವ ಮಾರ್ಚ್ ಹೊತ್ತಿಗೆ ಮಾರುಕಟ್ಟೆ ಪ್ರವೇಶಿಸುವ ಸಾಧ್ಯತೆಗಳಿದ್ದು, ಹೊಸ ಕಾರಿನಲ್ಲಿ ಕಂಪನಿಯು ಉನ್ನತ ಮಟ್ಟದ ತಾಂತ್ರಿಕ ಅಂಶಗಳೊಂದಿಗೆ ಸುರಕ್ಷಾ ಫೀಚರ್ಸ್‌ಗಳ ಅಳವಡಿಕೆಯಲ್ಲಿ ಗ್ರಾಹಕರನ್ನು ಸೆಳೆಯಲಿದೆ.

ಹೊಸ ವರ್ಷದ ಆರಂಭದಲ್ಲೇ ಭಾರೀ ಪ್ರಮಾಣದ ಹೊಸ ಕಾರುಗಳನ್ನು ಮಾರಾಟ

ಫೇಸ್‌ಲಿಫ್ಟ್ ಸೆಲ್ಟೊಸ್ ಮಾದರಿಯಲ್ಲಿ ಕಿಯಾ ಮೋಟಾರ್ಸ್ ಕಂಪನಿಯು ಎಂಜಿನ್ ಆಯ್ಕೆಯನ್ನು ಪ್ರಸ್ತುತ ಮಾದರಿಯಲ್ಲಿರುವಂತೆ ಮುಂದುವರಿಸಲಿದ್ದು, ಆರಂಭಿಕ ಕಾರು ಮಾದರಿಗಳಲ್ಲಿ ಹಲವು ಸುರಕ್ಷಾ ಫೀಚರ್ಸ್‌ಗಳು ಸ್ಟ್ಯಾಂಡರ್ಡ್ ಆಗಿ ಜೋಡಣೆಯಾಗಲಿದೆ.

MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಹೊಸ ವರ್ಷದ ಆರಂಭದಲ್ಲೇ ಭಾರೀ ಪ್ರಮಾಣದ ಹೊಸ ಕಾರುಗಳನ್ನು ಮಾರಾಟ

ಇನ್ನು ಕಿಯಾ ಮೋಟಾರ್ಸ್ ಕಂಪನಿಯು ಭಾರತದಲ್ಲಿ ಕಾರು ಮಾರಾಟ ಆರಂಭಿಸಿ ಮುಂಬರುವ ಅಗಸ್ಟ್ ಅವಧಿಗೆ 2 ವರ್ಷ ಪೂರೈಸಿದ್ದು, ಸೆಲ್ಟೊಸ್, ಸೊನೆಟ್ ಮತ್ತು ಕಾರ್ನಿವಾಲ್ ಕಾರುಗಳ ಮಾರಾಟದೊಂದಿಗೆ ಇದುವರೆಗೆ ಭಾರತದಲ್ಲಿ 2 ಲಕ್ಷ ಯುನಿಟ್ ಕಾರು ಮಾರಾಟ ದಾಖಲಿಸಿದೆ. ಹೊಸ ತಂತ್ರಜ್ಞಾನ ಪ್ರೇರಿತ ಫೀಚರ್ಸ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿರುವ ಸೆಲ್ಟೊಸ್, ಸೊನೆಟ್ ಮತ್ತು ಕಾರ್ನಿವಾಲ್ ಕಾರುಗಳು ಖರೀದಿದಾರರ ಪ್ರಮುಖ ಆಕರ್ಷಣೆಯಾಗಿವೆ.

More from DriveSpark

Article Published On: Wednesday, February 3, 2021, 22:07 [IST]
English summary
Kia Motors January Sales 19,056 Units. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+