Just In
Don't Miss!
- News
ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂಕೋರ್ಟ್ ನಿಂದ ಜಾಮೀನು
- Sports
ಅಡಿಲೇಡ್ ಸೋಲಿನ ನಂತರ ಗೆಲುವಿನ ಹಾದಿ ಹಿಡಿದ ರೋಚಕ ಸಂಗತಿ ವಿವರಿಸಿದ ಹನುಮ ವಿಹಾರಿ
- Movies
Breaking: ನಟಿ ರಾಗಿಣಿಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್
- Finance
ಕಾನ್ ಸ್ಟೇಬಲ್ ಡೆಬಿಟ್ ಕಾರ್ಡ್ ನಿಂದ 40 ಸಾವಿರ ರು. ಎಗರಿಸಿದ ದುಷ್ಕರ್ಮಿ
- Lifestyle
ನೀವು ರಾತ್ರಿ ಭಾರೀ ಭೋಜನ ಮಾಡೋರಾದ್ರೆ ಈ ಸ್ಟೋರಿ ಓದಲೇಬೇಕು...!
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸೊನೆಟ್ ಮಾದರಿಯೊಂದಿಗೆ ಕಿಯಾ ಕಾರುಗಳ ಮಾರಾಟದಲ್ಲಿ ಭಾರೀ ಹೆಚ್ಚಳ
ಕಿಯಾ ಮೋಟಾರ್ಸ್ ಕಂಪನಿಯು 2020ರ ಡಿಸೆಂಬರ್ ಅವಧಿಯಲ್ಲಿ ದಾಖಲೆ ಪ್ರಮಾಣದ ಕಾರು ಮಾರಾಟವನ್ನು ತನ್ನದಾಗಿಸಿಕೊಂಡಿದ್ದು, ಕಳೆದ ವರ್ಷದ ಡಿಸೆಂಬರ್ ಅವಧಿಯ ಕಾರು ಮಾರಾಟಕ್ಕಿಂತಲೂ ಶೇ.154 ರಷ್ಟು ಬೆಳವಣಿಗೆ ಸಾಧಿಸಿದೆ.

ಕರೋನಾ ವೈರಸ್ ಪರಿಣಾಮ ತೀವ್ರವಾಗಿ ಕುಸಿತ ಕಂಡಿದ್ದ ಭಾರತೀಯ ಆಟೋ ಉದ್ಯಮವು ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಚೇತರಿಸಿಕೊಂಡಿದ್ದು, ಹೊಸದಾಗಿ ಮಾರುಕಟ್ಟೆಗೆ ಪ್ರವೇಶಿಸಿರುವ ವಾಹನಗಳ ಮಾರಾಟದಲ್ಲಿ ಏರಿಕೆ ಕಂಡುಬಂದಿದೆ. ಕಿಯಾ ಹೊಸದಾಗಿ ಬಿಡುಗಡೆ ಮಾಡಿರುವ ಸೊನೆಟ್ ಕಾರು ಭರ್ಜರಿ ಬೇಡಿಕೆ ದಾಖಲಿಸಿದ್ದು, 2020ರ ಡಿಸೆಂಬರ್ ಅವಧಿಯಲ್ಲಿ ಒಟ್ಟು 11,818 ಯುನಿಟ್ ಮಾರಾಟದೊಂದಿಗೆ 2019ರ ಡಿಸೆಂಬರ್ ಅವಧಿಗಿಂತಲೂ ಶೇ. 154 ರಷ್ಟು ಹೆಚ್ಚು ಬೇಡಿಕೆ ಪಡೆದುಕೊಂಡಿದೆ.

2019ರ ಡಿಸೆಂಬರ್ ಅವಧಿಯಲ್ಲಿ 4,645 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದ ಕಿಯಾ ಮೋಟಾರ್ಸ್ ಕಂಪನಿಯು ಇದೀಗ 2020ರ ಡಿಸೆಂಬರ್ ಅವಧಿಯಲ್ಲಿ 11,818 ಯುನಿಟ್ ಮಾರಾಟ ಮೂಲಕ ಭಾರೀ ಪ್ರಮಾಣದ ಬೆಳವಣಿಗೆ ಸಾಧಿಸಿದೆ.

ಆದರೆ ತಿಂಗಳ ಕಾರು ಮಾರಾಟದಲ್ಲಿ ಕುಸಿತ ಅನುಭವಿಸಿರುವ ಕಿಯಾ ಮೋಟಾರ್ಸ್ ಕಂಪನಿಯು ದೀಪಾವಳಿ ಅವಧಿಯಲ್ಲಿ ಕಾರು ಮಾರಾಟಕ್ಕಿಂತಲೂ ಡಿಸೆಂಬರ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಶೇ. 43.78 ರಷ್ಟು ಕುಸಿತ ಕಂಡಿದೆ.

2020ರ ನವೆಂಬರ್ ಅವಧಿಯಲ್ಲಿನ ದೀಪಾವಳಿ ಸಂಭ್ರಮದಲ್ಲಿ ಒಟ್ಟು 21,022 ಯನಿಟ್ ಕಾರುಗಳನ್ನು ಮಾರಾಟ ಮಾಡಿದ್ದ ಕಿಯಾ ಮೋಟಾರ್ಸ್ ಕಂಪನಿಯು ಡಿಸೆಂಬರ್ ಅವಧಿಯಲ್ಲಿ ಶೇ. 43.78 ರಷ್ಟು ಹಿನ್ನಡೆ ಅನುಭವಿಸಿದ್ದು, ದಸರಾ ಮತ್ತು ದೀಪಾವಳಿಯ ನಂತರ ಕಾರು ಮಾರಾಟದಲ್ಲಿ ತುಸು ಇಳಿಕೆಯಾಗುವುದು ಸಾಮಾನ್ಯವಾಗಿದೆ. ಹೀಗಾಗಿ ಮುಂಬರುವ ದಿನಗಳಲ್ಲಿ ಕಾರು ಮಾರಾಟವು ಮತ್ತೆ ಹೆಚ್ಚಳವಾಗುವ ನೀರಿಕ್ಷೆಗಳಿದ್ದು, ಸೊನೆಟ್ ಕಾರು ಮಾದರಿಯು ಹೆಚ್ಚಿನ ಮಟ್ಟದ ಬೇಡಿಕೆಗೆ ಕಾರಣವಾಗಿದೆ.

ಭಾರತದಲ್ಲಿ ಕಿಯಾ ಮೋಟಾರ್ಸ್ ನಿರ್ಮಾಣದ ಮೂರನೇ ಕಾರು ಮಾದರಿಯಾಗಿ ಬಿಡುಗಡೆಯಾಗಿರುವ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ವಿನೂತನ ಫೀಚರ್ಸ್ ಹೊಂದಿದೆ.

ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ 1.2-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಂಡಿದ್ದು, ಪ್ರತಿಸ್ಪರ್ಧಿ ಕಾರುಗಳಿಂತಲೂ ಉತ್ತಮ ಫೀಚರ್ಸ್ ಹೊಂದಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಸೊನೆಟ್ ಕಾರು ಆರಂಭಿಕವಾಗಿ ರೂ. 6.71 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.89 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರನ್ನು ಜಿಟಿ-ಲೈನ್ ಮತ್ತು ಟೆಕ್-ಲೈನ್ ವೆರಿಯೆಂಟ್‌ಗಳಲ್ಲಿ ಖರೀದಿ ಮಾಡಬಹುದಾಗಿದೆ.

ಜಿಟಿ-ಲೈನ್ ಮಾದರಿಯಲ್ಲಿ ಹೆಚ್‌ಟಿಇ, ಹೆಚ್‌ಟಿಕೆ, ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್ ಮತ್ತು ಹೆಚ್‌ಟಿಎಕ್ಸ್ ಪ್ಲಸ್ ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದಲ್ಲಿ ಜಿಟಿ ಲೈನ್‌ನಲ್ಲಿ ಜಿಟಿಎಕ್ಸ್ ಪ್ಲಸ್ ವೆರಿಯೆಂಟ್ ಖರೀದಿಗೆ ಲಭ್ಯವಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹೊಸ ಸೊನೆಟ್ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಪ್ರಯಾಣಿಕ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸಬ್ ಫೋರ್ ಮೀಟರ್ ಕಾರು ಮಾದರಿಯಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಹೊಸ ಕಾರು ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ವೆನ್ಯೂ, ಫೋರ್ಡ್ ಇಕೋಸ್ಪೋರ್ಟ್, ಟಾಟಾ ನೆಕ್ಸಾನ್ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.