ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಮಹೀಂದ್ರಾ ಹಿಂದಿಕ್ಕಿದ ಕಿಯಾ ಮೋಟಾರ್ಸ್

ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳ ಮಾರಾಟವು ಸಾಕಷ್ಟು ಬೆಳವಣಿಗೆ ಸಾಧಿಸುತ್ತಿದ್ದು, ಈ ವಿಭಾಗದಲ್ಲಿ ಹಲವು ಕಾರು ಕಂಪನಿಗಳು ವಿವಿಧ ಮಾದರಿಯ ಹಲವು ಹೊಸ ಕಾರು ಉತ್ಪನ್ನಗಳಿಗೆ ಪರಿಚಯಿಸಿವೆ. ಆದರೆ ಕೆಲವೇ ಕಾರು ಮಾದರಿಗಳು ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ಮಹೀಂದ್ರಾ ಮತ್ತು ಕಿಯಾ ಮೋಟಾರ್ಸ್ ನಡುವಿನ ಮಾರಾಟ ಪ್ರಮಾಣದಲ್ಲಿ ಭಾರೀ ಪೈಪೋಟಿ ನಡೆಯುತ್ತಿದೆ.

ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಮಹೀಂದ್ರಾ ಹಿಂದಿಕ್ಕಿದ ಕಿಯಾ ಮೋಟಾರ್ಸ್

ಎಸ್‌ಯುವಿ ಕಾರುಗಳ ಮಾರಾಟವು ಕಳೆದ ಎರಡು ವರ್ಷಗಳಿಂದ ಸಾಕಷ್ಟು ಏರಿಕೆಯಾಗಿದ್ದು, ಹ್ಯುಂಡೈ ಕಂಪನಿಯು ಸದ್ಯ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಅಗ್ರಸ್ಥಾನದಲ್ಲಿದೆ. ಕ್ರೆಟಾ ಮತ್ತು ವೆನ್ಯೂ ಮೂಲಕ ಭಾರೀ ಪ್ರಮಾಣದಲ್ಲಿ ಮಾರಾಟ ಸಂಖ್ಯೆಯನ್ನು ದಾಖಲಿಸಿದ್ದು, ಎರಡನೇ ಸ್ಥಾನಕ್ಕಾಗಿ ಮಹೀಂದ್ರಾ ಮತ್ತು ಹೊಸದಾಗಿ ಕಾರು ಮಾರಾಟ ಆರಂಭಿಸಿರುವ ಕಿಯಾ ಮೋಟಾರ್ಸ್ ನಡುವೆ ಪೈಪೋಟಿ ನಡೆಯುತ್ತಿದೆ.

ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಮಹೀಂದ್ರಾ ಹಿಂದಿಕ್ಕಿದ ಕಿಯಾ ಮೋಟಾರ್ಸ್

2020ರ ಅವಧಿಯಲ್ಲಿ 1.80 ಲಕ್ಷ ಎಸ್‌ಯುವಿ ಕಾರುಗಳನ್ನು ಮಾರಾಟ ಮಾಡುವ ಮೂಲಕ ಹ್ಯುಂಡೈ ಕಂಪನಿಯು ಅಗ್ರಸ್ಥಾನದಲ್ಲಿದ್ದರೆ ಎರಡನೇ ಸ್ಥಾನದಲ್ಲಿನ ಪೈಪೋಟಿ ನಡುವೆ ಮಹೀಂದ್ರಾ ಹಿಂದಿಕ್ಕಿರುವ ಕಿಯಾ ಮೋಟಾರ್ಸ್ ಒಟ್ಟು 1.35 ಲಕ್ಷ ಎಸ್‌ಯುವಿ ಮಾರಾಟ ಮಾಡಿದೆ.

ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಮಹೀಂದ್ರಾ ಹಿಂದಿಕ್ಕಿದ ಕಿಯಾ ಮೋಟಾರ್ಸ್

ಮಹೀಂದ್ರಾ ಕಂಪನಿಯು 2020ರ ಅವಧಿಯಲ್ಲಿ ಒಟ್ಟು 1.30 ಲಕ್ಷ ಎಸ್‌ಯುವಿ ಕಾರುಗಳನ್ನು ಮಾರಾಟ ಮಾಡಿದ್ದು, ನ್ಯೂ ಜನರೇಷನ್ ಮಾದರಿಗಳು ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ತಂದುಕೊಡುವ ನೀರಿಕ್ಷೆಯಿದೆ.

ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಮಹೀಂದ್ರಾ ಹಿಂದಿಕ್ಕಿದ ಕಿಯಾ ಮೋಟಾರ್ಸ್

ಎಸ್‌ಯುವಿ ಕಾರು ಮಾರಾಟದಲ್ಲಿ ಹ್ಯುಂಡೈ ಕಂಪನಿಯು ಬಹುದಿನಗಳಿಂದಲೂ ಉತ್ತಮ ಸ್ಥಾನ ಕಾಯ್ದುಕೊಂಡಿದ್ದು, ಎರಡನೇ ಸ್ಥಾನದಲ್ಲಿದ್ದ ಮಹೀಂದ್ರಾ ಕಂಪನಿಗೆ ಕಿಯಾ ಮೋಟಾರ್ಸ್ ಕಂಪನಿಯು ಈ ಭಾರೀ ಸಾಕಷ್ಟು ಪೈಪೋಟಿ ನೀಡುವ ಮೂಲಕ ಎರಡನೇ ಸ್ಥಾನಕ್ಕೆ ಲಗ್ಗೆಯಿಟ್ಟಿದೆ. ಕಿಯಾ ಮೋಟಾರ್ಸ್ ಕಂಪನಿಯು ಕಾರು ಮಾರಾಟ ಆರಂಭಿಸಿದ ಕೇವಲ ಒಂದೂವರೆ ವರ್ಷದಲ್ಲಿ ಕಾರು ಮಾರಾಟವು ಜನಪ್ರಿಯ ಕಾರುಗಳನ್ನು ಹಿಂದಿಕ್ಕಿರುವುದು ಸಾಕಷ್ಟು ಬೆಳವಣಿಗೆ ಕಂಡಿದೆ.

ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಮಹೀಂದ್ರಾ ಹಿಂದಿಕ್ಕಿದ ಕಿಯಾ ಮೋಟಾರ್ಸ್

ಇನ್ನು ಕಿಯಾ ಮೋಟಾರ್ಸ್ ಕಂಪನಿಯು 2020ರ ಡಿಸೆಂಬರ್ ಅವಧಿಯಲ್ಲಿ ದಾಖಲೆ ಪ್ರಮಾಣದ ಕಾರು ಮಾರಾಟವನ್ನು ತನ್ನದಾಗಿಸಿಕೊಂಡಿದ್ದು, 2019ರ ಡಿಸೆಂಬರ್ ಅವಧಿಯ ಕಾರು ಮಾರಾಟಕ್ಕಿಂತಲೂ ಶೇ.154 ರಷ್ಟು ಬೆಳವಣಿಗೆ ಸಾಧಿಸಿದೆ.

ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಮಹೀಂದ್ರಾ ಹಿಂದಿಕ್ಕಿದ ಕಿಯಾ ಮೋಟಾರ್ಸ್

ಕರೋನಾ ವೈರಸ್ ಪರಿಣಾಮ ತೀವ್ರವಾಗಿ ಕುಸಿತ ಕಂಡಿದ್ದ ಭಾರತೀಯ ಆಟೋ ಉದ್ಯಮವು ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಚೇತರಿಸಿಕೊಂಡಿದ್ದು, ಹೊಸದಾಗಿ ಮಾರುಕಟ್ಟೆಗೆ ಪ್ರವೇಶಿಸಿರುವ ವಾಹನಗಳ ಮಾರಾಟದಲ್ಲಿ ಏರಿಕೆ ಕಂಡುಬಂದಿದೆ. ಕಿಯಾ ಹೊಸದಾಗಿ ಬಿಡುಗಡೆ ಮಾಡಿರುವ ಸೊನೆಟ್ ಕಾರು ಭರ್ಜರಿ ಬೇಡಿಕೆ ದಾಖಲಿಸಿದ್ದು, 2020ರ ಡಿಸೆಂಬರ್ ಅವಧಿಯಲ್ಲಿ ಒಟ್ಟು 11,818 ಯುನಿಟ್ ಮಾರಾಟದೊಂದಿಗೆ 2019ರ ಡಿಸೆಂಬರ್ ಅವಧಿಗಿಂತಲೂ ಶೇ. 154 ರಷ್ಟು ಹೆಚ್ಚು ಬೇಡಿಕೆ ಪಡೆದುಕೊಂಡಿದೆ.

ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಮಹೀಂದ್ರಾ ಹಿಂದಿಕ್ಕಿದ ಕಿಯಾ ಮೋಟಾರ್ಸ್

2019ರ ಡಿಸೆಂಬರ್ ಅವಧಿಯಲ್ಲಿ 4,645 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದ ಕಿಯಾ ಮೋಟಾರ್ಸ್ ಕಂಪನಿಯು ಇದೀಗ 2020ರ ಡಿಸೆಂಬರ್ ಅವಧಿಯಲ್ಲಿ 11,818 ಯುನಿಟ್ ಮಾರಾಟ ಮೂಲಕ ಭಾರೀ ಪ್ರಮಾಣದ ಬೆಳವಣಿಗೆ ಸಾಧಿಸಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಮಹೀಂದ್ರಾ ಹಿಂದಿಕ್ಕಿದ ಕಿಯಾ ಮೋಟಾರ್ಸ್

ಭಾರತದಲ್ಲಿ ಕಿಯಾ ಮೋಟಾರ್ಸ್ ನಿರ್ಮಾಣದ ಮೂರನೇ ಕಾರು ಮಾದರಿಯಾಗಿ ಬಿಡುಗಡೆಯಾಗಿರುವ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ವಿನೂತನ ಫೀಚರ್ಸ್‌ನೊಂದಿಗೆ ಭಾರೀ ಪ್ರಮಾಣದಲ್ಲಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಮಹೀಂದ್ರಾ ಹಿಂದಿಕ್ಕಿದ ಕಿಯಾ ಮೋಟಾರ್ಸ್

ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ 1.2-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಂಡಿದ್ದು, ಪ್ರತಿಸ್ಪರ್ಧಿ ಕಾರುಗಳಿಂತಲೂ ಉತ್ತಮ ಫೀಚರ್ಸ್ ಹೊಂದಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಮಹೀಂದ್ರಾ ಹಿಂದಿಕ್ಕಿದ ಕಿಯಾ ಮೋಟಾರ್ಸ್

ಹೊಸ ಸೊನೆಟ್ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಪ್ರಯಾಣಿಕ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸಬ್ ಫೋರ್ ಮೀಟರ್ ಕಾರು ಮಾದರಿಯಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಹೊಸ ಕಾರು ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ವೆನ್ಯೂ, ಫೋರ್ಡ್ ಇಕೋಸ್ಪೋರ್ಟ್, ಟಾಟಾ ನೆಕ್ಸಾನ್ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.

Most Read Articles

Kannada
English summary
Kia Motors India Sold 1.35 Lakh SUVs in 2020. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X