ಮಧ್ಯಮ ಗಾತ್ರದ ಎಂಪಿವಿ ಕಾರು ಮಾದರಿಯ ಬಿಡುಗಡೆಯನ್ನು ಖಚಿತಪಡಿಸಿದ ಕಿಯಾ ಮೋಟಾರ್ಸ್

ಹೊಸ ಕಾರುಗಳ ಮಾರಾಟದಲ್ಲಿ ಮಹತ್ವದ ಮುನ್ನಡೆ ಸಾಧಿಸುತ್ತಿರುವ ಕಿಯಾ ಮೋಟಾರ್ಸ್ ಕಂಪನಿಯು ಪ್ರಮುಖ ಕಾರು ಉತ್ಪಾದನಾ ಕಂಪನಿಗಳನ್ನು ಹಿಂದಿಕ್ಕಿ ಸದ್ಯ ನಾಲ್ಕನೇ ಅತಿ ದೊಡ್ಡ ಕಾರು ಕಂಪನಿಯಾಗಿ ಹೊರಹೊಮ್ಮಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರುಗಳೊಂದಿಗೆ ಮಾರಾಟ ಪ್ರಮಾಣವನ್ನು ಹೆಚ್ಚಿಸುವ ತವಕದಲ್ಲಿದೆ.

ಮಧ್ಯಮ ಗಾತ್ರದ ಎಂಪಿವಿ ಕಾರು ಮಾದರಿಯ ಬಿಡುಗಡೆಯನ್ನು ಖಚಿತಪಡಿಸಿದ ಕಿಯಾ ಮೋಟಾರ್ಸ್

ಸೆಲ್ಟೊಸ್, ಕಾರ್ನಿವಾಲ್ ಮತ್ತು ಸೊನೆಟ್ ನಂತರ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿರುವ ಕಿಯಾ ಮೋಟಾರ್ಸ್ ಕಂಪನಿಯು ನಾಲ್ಕನೇ ಕಾರು ಮಾದರಿಯಾಗಿ ಮಧ್ಯಮ ಗಾತ್ರದ ಎಂಪಿವಿ ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ಕಾರನ್ನು ಈಗಾಗಲೇ ಕೆವೈ ಎನ್ನುವ ಕೋಡ್ ಸಂಕೇತದೊಂದಿಗೆ ಅಭಿವೃದ್ದಿಗೊಳಿಸಲಾಗುತ್ತಿರುವುದನ್ನು ಖಚಿತಪಡಿಸಿದೆ.

ಮಧ್ಯಮ ಗಾತ್ರದ ಎಂಪಿವಿ ಕಾರು ಮಾದರಿಯ ಬಿಡುಗಡೆಯನ್ನು ಖಚಿತಪಡಿಸಿದ ಕಿಯಾ ಮೋಟಾರ್ಸ್

ಎಂಪಿವಿ(ಮಲ್ಟಿ ಪರ್ಪಸ್ ವೆಹಿಕಲ್) ಮಾದರಿಗಳಲ್ಲಿನ ಪ್ರತಿಸ್ಪರ್ಧಿ ಕಡಿಮೆ ಇರುವುದರಿಂದ ಮಾರುಕಟ್ಟೆಯಲ್ಲಿರುವ ಕೆಲವೇ ಕೆಲವು ಎಂಪಿವಿ ಕಾರು ಮಾದರಿಗಳು ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಿದ್ದು, ಕಿಯಾ ಕೂಡಾ ಶೀಘ್ರದಲ್ಲೇ ಹೊಸ ಎಂಪಿವಿ ಕಾರು ಮಾದರಿಯ ಬಿಡುಗಡೆಯ ಮೂಲಕ ಹೊಸ ಸಂಚಲನ ಸೃಷ್ಠಿಸಲಿದೆ.

ಮಧ್ಯಮ ಗಾತ್ರದ ಎಂಪಿವಿ ಕಾರು ಮಾದರಿಯ ಬಿಡುಗಡೆಯನ್ನು ಖಚಿತಪಡಿಸಿದ ಕಿಯಾ ಮೋಟಾರ್ಸ್

ಎಂಪಿವಿ ಕಾರು ಮಾದರಿಯ ಮಾರಾಟದಲ್ಲಿ ಸದ್ಯ ಮಾರುತಿ ಸುಜುಕಿ ಎರ್ಟಿಗಾ ಕಾರು ಅಧಿಕ ಬೇಡಿಕೆಯೊಂದಿಗೆ ಮೊದಲ ಸ್ಥಾನದಲ್ಲಿದ್ದು, ತದನಂತರ ಸ್ಥಾನದಲ್ಲಿರುವ ದುಬಾರಿ ಬೆಲೆ ನಡುವೆಯೂ ಟೊಯೊಟಾ ಇನೋವಾ ಕ್ರಿಸ್ಟಾ ಕಾರು ಕೂಡಾ ಭಾರೀ ಬೇಡಿಕೆ ಪಡೆದುಕೊಂಡಿರುವುದೇ ಕಿಯಾ ಎಂಪಿವಿ ಕಾರು ಬಿಡುಗಡೆಯ ಯೋಜನೆಗೆ ಪ್ರಮುಖ ಕಾರಣವಾಗಿದೆ.

ಮಧ್ಯಮ ಗಾತ್ರದ ಎಂಪಿವಿ ಕಾರು ಮಾದರಿಯ ಬಿಡುಗಡೆಯನ್ನು ಖಚಿತಪಡಿಸಿದ ಕಿಯಾ ಮೋಟಾರ್ಸ್

ಎರ್ಟಿಗಾ ಕಾರಿಗಿಂತಲೂ ದುಪ್ಪಟ್ಟು ಬೆಲೆ ಹೊಂದಿರುವ ಇನೋವಾ ಕ್ರಿಸ್ಟಾ ಕಾರು ಐಷಾರಾಮಿ ಕಾರು ಮಾದರಿಯಾಗಿ ಗುರುತಿಸಿಕೊಂಡಿದ್ದು, ಎರ್ಟಿಗಾ ಮತ್ತು ಇನೋವಾ ಕ್ರಿಸ್ಟಾ ನಡುವೆ ಬೆಲೆ ಅಂತರ ಸಾಕಷ್ಟಿದೆ. ಈ ಎರಡು ಕಾರುಗಳ ನಡುವಿನ ಸ್ಥಾನದಲ್ಲಿರುವ ಮಹೀಂದ್ರಾ ಮರಾಜೋ ಕಾರು ಗ್ರಾಹಕರ ಆಯ್ಕೆ ಮುಂಚೂಣಿ ಸಾಧಿಸುವಲ್ಲಿ ವಿಫಲವಾಗುತ್ತಿದ್ದು, ಇನೋವಾ ಮತ್ತು ಎರ್ಟಿಗಾ ನಡುವಿನ ಸ್ಥಾನವನ್ನು ತುಂಬಲು ಕಿಯಾ ಮೋಟಾರ್ಸ್ ಹೊಸ ಎಂಪಿವಿ ಕಾರು ಉತ್ಪನ್ನವನ್ನು ಸಿದ್ದಪಡಿಸುತ್ತಿದೆ.

ಮಧ್ಯಮ ಗಾತ್ರದ ಎಂಪಿವಿ ಕಾರು ಮಾದರಿಯ ಬಿಡುಗಡೆಯನ್ನು ಖಚಿತಪಡಿಸಿದ ಕಿಯಾ ಮೋಟಾರ್ಸ್

ಸದ್ಯ ಮಾರುಕಟ್ಟೆಯಲ್ಲಿರುವ ಕಿಯಾ ಕಾರ್ನಿವಾಲ್ ಎಂಪಿವಿ ಕಾರು ಮಾದರಿಯು ಇನೋವಾ ಕ್ರಿಸ್ಟಾ ಕಾರಿಗಿಂತಲೂ ಹೆಚ್ಚಿನ ಮಟ್ಟದ ಬೆಲೆಯೊಂದಿಗೆ ಮಾರಾಟಗೊಳ್ಳುತ್ತಿದ್ದು, ಐಷಾರಾಮಿ ಕಾರು ಮಾದರಿಯಾಗಿ ಗುರುತಿಸಿಕೊಂಡಿದೆ.

ಮಧ್ಯಮ ಗಾತ್ರದ ಎಂಪಿವಿ ಕಾರು ಮಾದರಿಯ ಬಿಡುಗಡೆಯನ್ನು ಖಚಿತಪಡಿಸಿದ ಕಿಯಾ ಮೋಟಾರ್ಸ್

ಕಾರ್ನಿವಾಲ್ ಕಾರು ಮಾದರಿಯು ಸದ್ಯ 2.2-ಲೀಟರ್ ವಿಜಿಟಿ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 24.95 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 33.95 ಲಕ್ಷ ಬೆಲೆ ಹೊಂದಿದ್ದು, ಹೊಸದಾಗಿ ಬಿಡುಗಡೆಯಾಗಲಿರುವ ಮಧ್ಯಮ ಕ್ರಮಾಂಕದ ಎಂಪಿವಿ ಕಾರು ಮಾದರಿಯು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಎಕ್ಸ್‌ಶೋರೂಂ ಪ್ರಕಾರ ರೂ. 12 ಲಕ್ಷದಿಂದ ರೂ. 15 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ.

ಮಧ್ಯಮ ಗಾತ್ರದ ಎಂಪಿವಿ ಕಾರು ಮಾದರಿಯ ಬಿಡುಗಡೆಯನ್ನು ಖಚಿತಪಡಿಸಿದ ಕಿಯಾ ಮೋಟಾರ್ಸ್

ಇನೋವಾ ಕ್ರಿಸ್ಟಾ ಎಂಪಿವಿ ಕಾರು ಮಾದರಿಯು 2.4-ಲೀಟರ್ ಡೀಸೆಲ್ ಮತ್ತು 2.7-ಲೀಟರ್ ಪೆಟ್ರೋಲ್ ಎಂಜಿನ್‌ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 16.27 ಲಕ್ಷದಿಂದ ಟಾಪ್ ಎಂಡ್ ಮಾದರಿಯು 24.34 ಲಕ್ಷ ಬೆಲೆ ಹೊಂದಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಮಧ್ಯಮ ಗಾತ್ರದ ಎಂಪಿವಿ ಕಾರು ಮಾದರಿಯ ಬಿಡುಗಡೆಯನ್ನು ಖಚಿತಪಡಿಸಿದ ಕಿಯಾ ಮೋಟಾರ್ಸ್

ಹೀಗಾಗಿ ಬೆಲೆ ನಡುವಿನ ಅಂತರವನ್ನು ಸರಿದೂಗಿಸುವ ಮೂಲಕ ಗ್ರಾಹಕರನ್ನು ಸೆಳೆಯಲು ಮುಂದಾಗಿರುವ ಕಿಯಾ ಮೋಟಾರ್ಸ್ ಕಂಪನಿಯು ಮಾರುತಿ ಸುಜುಕಿ ಎರ್ಟಿಗಾ ಮತ್ತು ಟೊಯೊಟಾ ಇನೋವಾ ಕ್ರಿಸ್ಟಾ ನಡುವಿನ ಸ್ಥಾನದಲ್ಲಿ ಉತ್ತಮ ಬೇಡಿಕೆ ಗಿಟ್ಟಿಸಿಕೊಳ್ಳುವ ನೀರಿಕ್ಷೆಯಲ್ಲಿದೆ.

ಮಧ್ಯಮ ಗಾತ್ರದ ಎಂಪಿವಿ ಕಾರು ಮಾದರಿಯ ಬಿಡುಗಡೆಯನ್ನು ಖಚಿತಪಡಿಸಿದ ಕಿಯಾ ಮೋಟಾರ್ಸ್

ಕಿಯಾ ಮೋಟಾರ್ಸ್ ಅಭಿವೃದ್ದಿಗೊಳಿಸುತ್ತಿರುವ ಹೊಸ ಎಂಪಿವಿ ಕಾರು ಮಾದರಿಯು ಮುಂದಿನ 2022ರ ಜನವರಿಯಲ್ಲಿ ಬಿಡುಗಡೆ ಮಾಡುವ ಸುಳಿವು ನೀಡಿದ್ದು, ಸದ್ಯಕ್ಕೆ ಮಾರುಕಟ್ಟೆ ವಿಸ್ತರಣೆ ಮತ್ತು ಪ್ರಸ್ತುತ ಮಾದರಿಗಳ ಉನ್ನತೀಕರಣದ ಮೇಲೆ ಗಮನಹರಿಸಲು ನಿರ್ಧರಿಸಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಮಧ್ಯಮ ಗಾತ್ರದ ಎಂಪಿವಿ ಕಾರು ಮಾದರಿಯ ಬಿಡುಗಡೆಯನ್ನು ಖಚಿತಪಡಿಸಿದ ಕಿಯಾ ಮೋಟಾರ್ಸ್

ಹೊಸ ಎಂಪಿವಿ ಕಾರು ಸೆಲ್ಟೊಸ್ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಅಭಿವೃದ್ದಿಗೊಳ್ಳಲಿದ್ದು, ಎರ್ಟಿಗಾ ಕಾರಿಗಿಂತಲೂ ಹೆಚ್ಚಿನ ವೀಲ್ಹ್ ಬೆಸ್‌ನೊಂದಿಗೆ ಮೂರನೇ ಸಾಲಿನಲ್ಲಿ ಕೂರುವ ಪ್ರಯಾಣಿಕರಿಗೆ ಅರಾಮದಾಯಕ ಸ್ಥಳಾವಕಾಶ ಹೊಂದಿದೆ. ಇದೇ ಕಾರಣಕ್ಕೆ ಎಂಪಿವಿ ಕಾರು ಮಾರಾಟದಲ್ಲಿ ಕಿಯಾ ಹೊಸ ಎಂಪಿವಿ ಕಾರು ಭರ್ಜರಿ ಬೇಡಿಕೆ ಗಿಟ್ಟಿಸಿಕೊಳ್ಳವ ನೀರಿಕ್ಷೆಯಲ್ಲಿದ್ದು, ಬೆಲೆಯಲ್ಲಿ ಎರ್ಟಿಗಾ ಕಾರಿಗಿಂತಲೂ ತುಸು ದುಬಾರಿ ಮತ್ತು ಮತ್ತು ಇನೋವಾ ಕ್ರಿಸ್ಟಾ ಕಾರಿಗಿಂತಲೂ ಅತಿ ಕಡಿಮೆ ಬೆಲೆಯೊಂದಿಗೆ ರಸ್ತೆಗಿಳಿಯಲಿದೆ.

Source: Electric Vehicle Web

Most Read Articles

Kannada
English summary
Kia new MPV code name KY launch schedule details. Read in kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X