ಐಎಂಟಿ ಗೇರ್‌ಬಾಕ್ಸ್ ಆಯ್ಕೆ ಸೇರಿದಂತೆ ಹಲವಾರು ಹೊಸ ಸೌಲಭ್ಯ ಪಡೆದುಕೊಳ್ಳಲಿದೆ 2021ರ ಕಿಯಾ ಸೆಲ್ಟೊಸ್

ವಿಶ್ವಾದ್ಯಂತ ಪ್ರಮುಖ ಮಾರುಕಟ್ಟೆಗಳಲ್ಲಿ ಕಾರು ಮಾರಾಟ ಜಾಲವನ್ನು ಹೊಂದಿರುವ ಕಿಯಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೇ ತನ್ನ ಹೊಸ ಕಾರು ಮಾದರಿಗಳಲ್ಲಿ ಹಲವಾರು ಬದಲಾವಣೆ ಪರಿಚಯಿಸುವ ಯೋಜನೆಯಲ್ಲಿದ್ದು, 2021ರ ಸೆಲ್ಟೊಸ್ ಕಾರು ಮಾದರಿಯು ಸಹ ಹೊಸ ಬದಲಾವಣೆಳೊಂದಿಗೆ ಬಿಡುಗಡೆಗೆ ಸಿದ್ದವಾಗಿದೆ.

ಐಎಂಟಿ ಗೇರ್‌ಬಾಕ್ಸ್ ಆಯ್ಕೆ ಸೇರಿದಂತೆ ಹಲವಾರು ಹೊಸ ಸೌಲಭ್ಯ ಪಡೆದುಕೊಳ್ಳಲಿದೆ 2021ರ ಕಿಯಾ ಸೆಲ್ಟೊಸ್

ಹೊಸ ಕಾರು ಉತ್ಪನ್ನಗಳಲ್ಲಿ ಲೊಗೊ ಬದಲಾವಣೆ ಕುರಿತು ಕಳೆದ ತಿಂಗಳ ಹಿಂದಷ್ಟೇ ಅಧಿಕೃತ ಮಾಹಿತಿ ಹಂಚಿಕೊಂಡಿದ್ದ ಕಿಯಾ ಮೋಟಾರ್ಸ್ ಕಂಪನಿಯು ಇದೀಗ ಹೊಸ ಲೊಗೊ ಬದಲಾವಣೆಗಾಗಿ ಈಗಾಗಲೇ ಅಂತಿಮ ಹಂತದ ಸಿದ್ದತೆ ನಡೆಸುತ್ತಿದ್ದು, ಶೀಘ್ರದಲ್ಲೇ ಕಿಯಾ ನಿರ್ಮಾಣದ ಎಲ್ಲಾ ಕಾರು ಮಾದರಿಗಳಲ್ಲೂ ಹೊಸ ವಿನ್ಯಾಸದ ಲೊಗೊ ಜೋಡಣೆ ಹೊಂದಿರಲಿವೆ. ಹೊಸ ಲೊಗೊ ವಿನ್ಯಾಸವು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಲೊಗೊ ವಿನ್ಯಾಸಕ್ಕಿಂತಲೂ ಆಕರ್ಷಕವಾಗಿರಲಿದ್ದು, ಹೊಸ ಕಾರು ಮಾದರಿಗಳಿಗೆ ಹೊಸ ಲೊಗೊ ವಿನ್ಯಾಸವು ಮತ್ತಷ್ಟು ಮೆರಗು ನೀಡಲಿದೆ.

ಐಎಂಟಿ ಗೇರ್‌ಬಾಕ್ಸ್ ಆಯ್ಕೆ ಸೇರಿದಂತೆ ಹಲವಾರು ಹೊಸ ಸೌಲಭ್ಯ ಪಡೆದುಕೊಳ್ಳಲಿದೆ 2021ರ ಕಿಯಾ ಸೆಲ್ಟೊಸ್

ಭಾರತದಲ್ಲಿ ಕಿಯಾ ಮೋಟಾರ್ಸ್ ಕಂಪನಿಯು ಹೊಸ ಲೊಗೊ ಮಾದರಿಯನ್ನು ಮೊದಲ ಹಂತವಾಗಿ 2021ರ ಸೆಲ್ಟೊಸ್‌ನಲ್ಲಿ ಜೋಡಣೆ ಮಾಡಲು ನಿರ್ಧರಿಸಿದ್ದು, ಹೊಸ ಲೊಗೊ ಜೊತೆಗೆ ಮತ್ತಷ್ಟು ಹೊಸ ತಾಂತ್ರಿಕ ಅಂಶಗಳ ಜೋಡಣೆ ಪಡೆದುಕೊಳ್ಳಲಿದೆ.

ಐಎಂಟಿ ಗೇರ್‌ಬಾಕ್ಸ್ ಆಯ್ಕೆ ಸೇರಿದಂತೆ ಹಲವಾರು ಹೊಸ ಸೌಲಭ್ಯ ಪಡೆದುಕೊಳ್ಳಲಿದೆ 2021ರ ಕಿಯಾ ಸೆಲ್ಟೊಸ್

ಕಿಯಾ ಮೋಟಾರ್ಸ್ ಕಾರು ಮಾರಾಟ ಮಳಿಗೆಗಳನ್ನು ಸದ್ಯಕ್ಕೆ ಹೊಸ ಲೊಗೊ ವಿನ್ಯಾಸದೊಂದಿಗೆ ಬ್ರಾಂಡ್ ಬೋರ್ಡ್‌ಗಳನ್ನು ಬದಲಾಯಿಸಲಾಗುತ್ತಿದ್ದು, ಹೊಸ ಲೊಗೊ ಪ್ರೇರಿತ ಸೆಲ್ಟೊಸ್ ಫೇಸ್‌ಲಿಫ್ಟ್ ಮಾದರಿಯು ಇದೇ ತಿಂಳಾಂತ್ಯಕ್ಕೆ ಬಿಡುಗಡೆಯಾಗುವ ಸಾಧ್ಯತೆಗಳಿವೆ.

ಐಎಂಟಿ ಗೇರ್‌ಬಾಕ್ಸ್ ಆಯ್ಕೆ ಸೇರಿದಂತೆ ಹಲವಾರು ಹೊಸ ಸೌಲಭ್ಯ ಪಡೆದುಕೊಳ್ಳಲಿದೆ 2021ರ ಕಿಯಾ ಸೆಲ್ಟೊಸ್

ಇನ್ನು ಭಾರತದಲ್ಲಿ ಕಾರು ಮಾರಾಟ ಆರಂಭಿದ ಕೆಲವೇ ದಿನಗಳಲ್ಲಿ ಮಹತ್ವದ ಮುನ್ನಡೆ ಕಾಯ್ದುಕೊಳ್ಳುತ್ತಿರುವ ಕಿಯಾ ಮೋಟಾರ್ಸ್ ಕಂಪನಿಯು ಸದ್ಯ ಪ್ರಮುಖ ಕಾರು ಮಾರಾಟ ಕಂಪನಿಗಳನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನದಲ್ಲಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಮಾರಾಟ ಮಳಿಗೆಗಳೊಂದಿಗೆ ಗ್ರಾಹಕರ ಬೇಡಿಕೆಯಲ್ಲಿ ಮತ್ತಷ್ಟು ಮುನ್ನಡೆ ಸಾಧಿಸಲಿದೆ. ಕಿಯಾ ಕಂಪನಿಯು 2019ರ ಮಧ್ಯಂತರದಲ್ಲಿ ಸೆಲ್ಟೊಸ್ ಎಸ್‌ಯುವಿ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸುವ ಮೂಲಕ ದೇಶಿಯ ಮಾರುಕಟ್ಟೆಯ ಆಟೋ ಉತ್ಪಾದನಾ ವಲಯಕ್ಕೆ ಅಧಿಕೃತವಾಗಿ ಎಂಟ್ರಿ ನೀಡಿತ್ತು.

ಐಎಂಟಿ ಗೇರ್‌ಬಾಕ್ಸ್ ಆಯ್ಕೆ ಸೇರಿದಂತೆ ಹಲವಾರು ಹೊಸ ಸೌಲಭ್ಯ ಪಡೆದುಕೊಳ್ಳಲಿದೆ 2021ರ ಕಿಯಾ ಸೆಲ್ಟೊಸ್

ಸೆಲ್ಟೊಸ್ ಎಸ್‌ಯುವಿ ಬಿಡುಗಡೆಯ ನಂತರ ಕಳೆದ ಒಂದೂವರೆ ವರ್ಷದಲ್ಲಿ ಕಿಯಾ ಮೋಟಾರ್ಸ್ ಕಂಪನಿಯು ಹಲವಾರು ದಾಖಲೆಗಳಿಗೆ ಕಾರಣವಾಗಿದ್ದು, ಇದೀಗ ಫೇಸ್‌ಲಿಫ್ಟ್ ಮಾದರಿಯೊಂದಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಐಎಂಟಿ ಗೇರ್‌ಬಾಕ್ಸ್ ಆಯ್ಕೆ ಸೇರಿದಂತೆ ಹಲವಾರು ಹೊಸ ಸೌಲಭ್ಯ ಪಡೆದುಕೊಳ್ಳಲಿದೆ 2021ರ ಕಿಯಾ ಸೆಲ್ಟೊಸ್

ಫೇಸ್‌ಲಿಫ್ಟ್ ಸೆಲ್ಟೊಸ್ ಮಾದರಿಯಲ್ಲಿ ಕಿಯಾ ಮೋಟಾರ್ಸ್ ಕಂಪನಿಯು ಎಂಜಿನ್ ಆಯ್ಕೆಯನ್ನು ಪ್ರಸ್ತುತ ಮಾದರಿಯಲ್ಲಿರುವಂತೆ ಮುಂದುವರಿಸಲಿದ್ದು, ಆರಂಭಿಕ ಕಾರು ಮಾದರಿಗಳಲ್ಲಿ ಹಲವು ಸುರಕ್ಷಾ ಫೀಚರ್ಸ್‌ಗಳು ಸ್ಟ್ಯಾಂಡರ್ಡ್ ಆಗಿ ಜೋಡಣೆಯಾಗಲಿದೆ.

ಐಎಂಟಿ ಗೇರ್‌ಬಾಕ್ಸ್ ಆಯ್ಕೆ ಸೇರಿದಂತೆ ಹಲವಾರು ಹೊಸ ಸೌಲಭ್ಯ ಪಡೆದುಕೊಳ್ಳಲಿದೆ 2021ರ ಕಿಯಾ ಸೆಲ್ಟೊಸ್

ಸೆಲ್ಟೊಸ್ ಕಾರು ಮಾದರಿಯ ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.9.90 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.17.66 ಲಕ್ಷ ಬೆಲೆ ಹೊಂದಿದ್ದು, ಗ್ರಾಹಕರ ಬೇಡಿಕೆಯೆಂತೆ ಮೂರು ಎಂಜಿನ್ ಆಯ್ಕೆಗಳನ್ನು ಪಡೆದುಕೊಂಡಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಐಎಂಟಿ ಗೇರ್‌ಬಾಕ್ಸ್ ಆಯ್ಕೆ ಸೇರಿದಂತೆ ಹಲವಾರು ಹೊಸ ಸೌಲಭ್ಯ ಪಡೆದುಕೊಳ್ಳಲಿದೆ 2021ರ ಕಿಯಾ ಸೆಲ್ಟೊಸ್

ಬಿಎಸ್-6 ನಿಯಮ ಅನುಸಾರ ಜಿಟಿ ಲೈನ್ ಕಾರುಗಳಲ್ಲಿ 1.4-ಲೀಟರ್ ಟಿ-ಜಿಡಿಐ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದರೆ ಸಾಮಾನ್ಯ ಮಾದರಿಯ ಟೆಕ್-ಲೈನ್ ಕಾರುಗಳು ಬಿಎಸ್-6 ಪ್ರೇರಿತ ನ್ಯಾಚುರಲಿ ಆಸ್ಪೆರೆಟೆಡ್ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ಪಡೆದುಕೊಂಡಿವೆ.

ಐಎಂಟಿ ಗೇರ್‌ಬಾಕ್ಸ್ ಆಯ್ಕೆ ಸೇರಿದಂತೆ ಹಲವಾರು ಹೊಸ ಸೌಲಭ್ಯ ಪಡೆದುಕೊಳ್ಳಲಿದೆ 2021ರ ಕಿಯಾ ಸೆಲ್ಟೊಸ್

ಸೆಲ್ಟೊಸ್ ಮಾದರಿಯಲ್ಲಿ ಎಂಜಿನ್ ಮಾದರಿಗಳಿಗೆ ಅನುಗುಣವಾಗಿ ಆಟೋಮ್ಯಾಟಿಕ್ ಮತ್ತು ಮ್ಯಾನುವಲ್ ಆವೃತ್ತಿಗಳು ಖರೀದಿಗೆ ಲಭ್ಯವಿದ್ದು, ಕಂಪನಿಯು ಹೊಸದಾಗಿ ಐಎಂಟಿ(ಇಂಟೆಲಿಜೆನ್ಸ್ ಮ್ಯಾನುವಲ್ ಟ್ರಾನ್‌ಮಿಷನ್)ಆಯ್ಕೆ ನೀಡುವ ಸುಳಿವು ನೀಡಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಐಎಂಟಿ ಗೇರ್‌ಬಾಕ್ಸ್ ಆಯ್ಕೆ ಸೇರಿದಂತೆ ಹಲವಾರು ಹೊಸ ಸೌಲಭ್ಯ ಪಡೆದುಕೊಳ್ಳಲಿದೆ 2021ರ ಕಿಯಾ ಸೆಲ್ಟೊಸ್

ಇದರೊಂದಿಗೆ ವಿವಿಧ ಎಂಜಿನ್ ಆಯ್ಕೆಗಳೊಂದಿಗೆ ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಫೇಸ್‌ಲಿಫ್ಟ್ ಮಾದರಿಯು ಹೊಸ ಲೊಗೊ, ಆರಂಭಿಕ ಮಾದರಿಗಳಲ್ಲೂ ಪನೋರಮಿಕ್ ಸನ್‌ರೂಫ್, ಮರು ವಿನ್ಯಾಸಗೊಳಿಸಲಾದ ಗ್ರಿಲ್, ಬ್ಯಾನೆಟ್ ಸೇರಿದಂತೆ ಹಲವಾರು ಬದಲಾವಣೆಗಳನ್ನು ಪಡೆದುಕೊಳ್ಳಲಿದೆ.

Most Read Articles

Kannada
English summary
Kia Motors Planning To Introduce iMT Gearbox Option In Seltos, Find Here All Details.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X