ಭಾರತದಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಕಿಯಾ ಮೋಟಾರ್ಸ್ ಹೊಸ ಎಂಪಿವಿ

ಕಿಯಾ ಮೋಟಾರ್ಸ್ ಕಂಪನಿಯು ಭಾರತದಲ್ಲಿ ಸದ್ಯ ಸೊನೆಟ್, ಸೆಲ್ಟೊಸ್ ಮತ್ತು ಕಾರ್ನಿವಾಲ್ ಕಾರು ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಕಂಪನಿಯು ಮುಂಬರುವ ಕೆಲ ತಿಂಗಳಿನಲ್ಲಿ ಮಧ್ಯಮ ಗಾತ್ರದ ಎಂಪಿವಿ ಮಾದರಿ ಸೇರಿದಂತೆ ಹಲವು ಹೊಸ ಕಾರುಗಳ ಬಿಡುಗಡೆಗೆ ಸಿದ್ದವಾಗಿದೆ.

ಭಾರತದಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಕಿಯಾ ಮೋಟಾರ್ಸ್ ಹೊಸ ಎಂಪಿವಿ

ಕೋವಿಡ್ ನಂತರ ದೇಶದ ಆಟೋ ಉದ್ಯಮವು ತೀವ್ರವಾಗಿ ಬೆಳವಣಿಗೆ ಸಾಧಿಸುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಹಲವಾರು ಹೊಸ ಕಾರು ಮಾದರಿಗಳು ಇದೀಗ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿವೆ. ಹ್ಯಾಚ್‌ಬ್ಯಾಕ್ ಮತ್ತು ಕಂಪ್ಯಾಕ್ಟ್ ಎಸ್‌ಯುವಿ ವಿಭಾಗವು ಉಳಿದ ಕಾರು ಮಾದರಿಗಳಿಂತಲೂ ಹೆಚ್ಚು ಬೇಡಿಕೆಯಲ್ಲಿದ್ದು, ತದನಂತರ ಎಸ್‌ಯುವಿ ಮತ್ತು ಎಂಪಿವಿ ಕಾರುಗಳು ಹೆಚ್ಚಿನ ಮಟ್ಟದ ಬೇಡಿಕೆಯಲ್ಲಿರುವ ಕಾರು ಮಾದರಿಗಳಾಗಿವೆ.

ಭಾರತದಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಕಿಯಾ ಮೋಟಾರ್ಸ್ ಹೊಸ ಎಂಪಿವಿ

ಎಂಪಿವಿ(ಮಲ್ಟಿ ಪರ್ಪಸ್ ವೆಹಿಕಲ್) ಮಾದರಿಗಳಲ್ಲಿನ ಪ್ರತಿಸ್ಪರ್ಧಿ ಕಡಿಮೆ ಇರುವುದರಿಂದ ಮಾರುಕಟ್ಟೆಯಲ್ಲಿರುವ ಕೆಲವೇ ಕೆಲವು ಎಂಪಿವಿ ಕಾರು ಮಾದರಿಗಳು ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಮಧ್ಯಮ ಗಾತ್ರದ ಎಂಪಿವಿ ವಿಭಾಗಕ್ಕೆ ಪ್ರವೇಶಿಸಲು ಸಿದ್ದವಾಗಿರುವ ಕಿಯಾ ಕಂಪನಿಯು ಹೊಸ ಎಂಪಿವಿ ಕಾರಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳಿಗೆ ಚಾಲನೆ ನೀಡಿದೆ.

ಭಾರತದಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಕಿಯಾ ಮೋಟಾರ್ಸ್ ಹೊಸ ಎಂಪಿವಿ

ಮಧ್ಯಮ ಗಾತ್ರದ ಎಂಪಿವಿ ಕಾರು ಮಾದರಿಯ ಮಾರಾಟದಲ್ಲಿ ಸದ್ಯ ಮಾರುತಿ ಸುಜುಕಿ ಎರ್ಟಿಗಾ ಕಾರು ಅಧಿಕ ಬೇಡಿಕೆಯೊಂದಿಗೆ ಮೊದಲ ಸ್ಥಾನದಲ್ಲಿದ್ದು, ದುಬಾರಿ ಬೆಲೆ ನಡುವೆಯೂ ಟೊಯೊಟಾ ಇನೋವಾ ಕ್ರಿಸ್ಟಾ ಕಾರು ಎರ್ಟಿಗಾ ಮಾದರಿಯಷ್ಟೇ ಬೇಡಿಕೆಯೊಂದಿಗೆ ಎರಡನೇ ಸ್ಥಾನದಲ್ಲಿದೆ.

ಭಾರತದಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಕಿಯಾ ಮೋಟಾರ್ಸ್ ಹೊಸ ಎಂಪಿವಿ

ಆದರೆ ಎರ್ಟಿಗಾ ಕಾರಿಗಿಂತಲೂ ದುಪ್ಪಟ್ಟು ಬೆಲೆ ಹೊಂದಿರುವ ಇನೋವಾ ಕ್ರಿಸ್ಟಾ ಕಾರು ಐಷಾರಾಮಿ ಕಾರು ಮಾದರಿಯಾಗಿ ಗುರುತಿಸಿಕೊಂಡಿದ್ದು, ಎರ್ಟಿಗಾ ಮತ್ತು ಇನೋವಾ ಕ್ರಿಸ್ಟಾ ನಡುವೆ ಬೆಲೆ ಅಂತರ ಸಾಕಷ್ಟಿದೆ. ಈ ಎರಡು ಕಾರುಗಳ ನಡುವಿನ ಸ್ಥಾನದಲ್ಲಿರುವ ಮಹೀಂದ್ರಾ ಮರಾಜೋ ಕಾರು ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುವಲ್ಲಿ ವಿಫಲವಾಗುತ್ತಿದ್ದು, ಇನೋವಾ ಮತ್ತು ಎರ್ಟಿಗಾ ನಡುವಿನ ಸ್ಥಾನವನ್ನು ತುಂಬಲು ಕಿಯಾ ಮೋಟಾರ್ಸ್ ಹೊಸ ಎಂಪಿವಿ ಕಾರು ಉತ್ಪನ್ನವನ್ನು ಸಿದ್ದಪಡಿಸುತ್ತಿದೆ.

ಭಾರತದಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಕಿಯಾ ಮೋಟಾರ್ಸ್ ಹೊಸ ಎಂಪಿವಿ

ಸದ್ಯ ಮಾರುಕಟ್ಟೆಯಲ್ಲಿರುವ ಕಿಯಾ ಕಾರ್ನಿವಾಲ್ ಎಂಪಿವಿ ಕಾರು ಮಾದರಿಯು ಇನೋವಾ ಕ್ರಿಸ್ಟಾ ಕಾರಿಗಿಂತಲೂ ಹೆಚ್ಚಿನ ಮಟ್ಟದ ಬೆಲೆಯೊಂದಿಗೆ ಮಾರಾಟಗೊಳ್ಳುತ್ತಿದ್ದು, ಐಷಾರಾಮಿ ಕಾರು ಮಾದರಿಯಾಗಿ ಗುರುತಿಸಿಕೊಂಡಿದೆ.

ಭಾರತದಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಕಿಯಾ ಮೋಟಾರ್ಸ್ ಹೊಸ ಎಂಪಿವಿ

ಕಾರ್ನಿವಾಲ್ ಕಾರು ಮಾದರಿಯು ಸದ್ಯ 2.2-ಲೀಟರ್ ವಿಜಿಟಿ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 24.95 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 33.95 ಲಕ್ಷ ಬೆಲೆ ಹೊಂದಿದ್ದು, ಹೊಸದಾಗಿ ಬಿಡುಗಡೆಯಾಗಲಿರುವ ಮಧ್ಯಮ ಕ್ರಮಾಂಕದ ಎಂಪಿವಿ ಕಾರು ಮಾದರಿಯು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಎಕ್ಸ್‌ಶೋರೂಂ ಪ್ರಕಾರ ರೂ. 12 ಲಕ್ಷದಿಂದ ರೂ. 15 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ.

ಭಾರತದಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಕಿಯಾ ಮೋಟಾರ್ಸ್ ಹೊಸ ಎಂಪಿವಿ

ಇನೋವಾ ಕ್ರಿಸ್ಟಾ ಎಂಪಿವಿ ಕಾರು ಮಾದರಿಯು 2.4-ಲೀಟರ್ ಡೀಸೆಲ್ ಮತ್ತು 2.7-ಲೀಟರ್ ಪೆಟ್ರೋಲ್ ಎಂಜಿನ್‌ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 16.27 ಲಕ್ಷದಿಂದ ಟಾಪ್ ಎಂಡ್ ಮಾದರಿಯು 24.34 ಲಕ್ಷ ಬೆಲೆ ಹೊಂದಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಭಾರತದಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಕಿಯಾ ಮೋಟಾರ್ಸ್ ಹೊಸ ಎಂಪಿವಿ

ಈ ಬೆಲೆ ನಡುವಿನ ಅಂತರವನ್ನು ಸರಿದೂಗಿಸುವ ಮೂಲಕ ಗ್ರಾಹಕರನ್ನು ಸೆಳೆಯಲು ಮುಂದಾಗಿರುವ ಕಿಯಾ ಮೋಟಾರ್ಸ್ ಕಂಪನಿಯು ಮಾರುತಿ ಸುಜುಕಿ ಎರ್ಟಿಗಾ ಮತ್ತು ಟೊಯೊಟಾ ಇನೋವಾ ಕ್ರಿಸ್ಟಾ ನಡುವಿನ ಸ್ಥಾನದಲ್ಲಿ ಉತ್ತಮ ಬೇಡಿಕೆ ಗಿಟ್ಟಿಸಿಕೊಳ್ಳುವ ನೀರಿಕ್ಷೆಯಲ್ಲಿದೆ.

ಭಾರತದಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಕಿಯಾ ಮೋಟಾರ್ಸ್ ಹೊಸ ಎಂಪಿವಿ

ಪ್ರತಿ ವರ್ಷ ಎರಡು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿರುವ ಕಿಯಾ ಮೋಟಾರ್ಸ್ ಕಂಪನಿಯು ಕಾರು ಮಾರಾಟ ಆರಂಭಿದ ಒಂದೂವರೆ ವರ್ಷದಲ್ಲಿ ಮೂರು ಕಾರುಗಳನ್ನು ಬಿಡುಗಡೆ ಮಾಡಿದ್ದು, ಇದೀಗ ನಾಲ್ಕನೇ ಕಾರು ಮಾದರಿಯಾಗಿ ಮಧ್ಯಮ ಕ್ರಮಾಂಕದ ಎಂಪಿವಿ ಕಾರನ್ನು ರಸ್ತೆಗಿಳಿಸುವ ಸಿದ್ದತೆಯಲ್ಲಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಭಾರತದಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಕಿಯಾ ಮೋಟಾರ್ಸ್ ಹೊಸ ಎಂಪಿವಿ

ಕಿಯಾ ಮೋಟಾರ್ಸ್ ಹೊಸ ಎಂಪಿವಿ ಕಾರು ಮಾದರಿಯು 6 ಸೀಟರ್ ಮತ್ತು 7 ಸೀಟರ್ ಆಸನ ಸೌಲಭ್ಯಗಳೊಂದಿಗೆ ಅಭಿವೃದ್ದಿಗೊಳ್ಳಲಿದ್ದು, ಹೊಸ ಕಾರನ್ನು ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯ ಪ್ಲ್ಯಾಟ್‌ಫಾರ್ಮ್ ಆಧರಿಸಿ ನಿರ್ಮಾಣ ಮಾಡುವ ಸಾಧ್ಯತೆಗಳಿವೆ.

ಭಾರತದಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಕಿಯಾ ಮೋಟಾರ್ಸ್ ಹೊಸ ಎಂಪಿವಿ

ಈ ಮೂಲಕ ಕಿಯಾ ಕಂಪನಿಯು ಹೊಸ ಎಂಪಿವಿ ಕಾರು ಮಾರಾಟದೊಂದಿಗೆ ಭರ್ಜರಿ ಬೇಡಿಕೆ ಗಿಟ್ಟಿಸಿಕೊಳ್ಳವ ನೀರಿಕ್ಷೆಯಲ್ಲಿದ್ದು, ಬೆಲೆಯಲ್ಲಿ ಎರ್ಟಿಗಾ ಕಾರಿಗಿಂತಲೂ ತುಸು ದುಬಾರಿ ಮತ್ತು ಮತ್ತು ಇನೋವಾ ಕ್ರಿಸ್ಟಾ ಕಾರಿಗಿಂತಲೂ ಕಡಿಮೆ ಬೆಲೆಯೊಂದಿಗೆ ಮಾರಾಟಗೊಳ್ಳಲಿದೆ.

Most Read Articles

Kannada
English summary
All-New KIA MPV Started Testing In India. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X