ಡೀಲರ್ಸ್ ಯಾರ್ಡ್ ತಲುಪಿದ ಹೊಸ ಫೀಚರ್ಸ್‌ ಹೊಂದಿರುವ 2021ರ ಕಿಯಾ ಸೆಲ್ಟೊಸ್

ಕಿಯಾ ಇಂಡಿಯಾ ಕಂಪನಿಯು ತನ್ನ ಪ್ರಮುಖ ಕಾರುಗಳಲ್ಲಿ ಹೊಸ ವಿನ್ಯಾಸದ ಲೊಗೊ ಪರಿಚಯಿಸಿದ್ದು, ಶೀಘ್ರದಲ್ಲೇ ಹೊಸ ಲೊಗೊ ಹೊಂದಿರುವ ಸೆಲ್ಟೊಸ್ ಮತ್ತು ಸೊನೆಟ್ ಕಾರುಗಳ ಬಿಡುಗಡೆಗೆ ಸಜ್ಜುಗೊಳ್ಳುತ್ತಿದೆ.

ಡೀಲರ್ಸ್ ಯಾರ್ಡ್ ತಲುಪಿದ ಹೊಸ ಫೀಚರ್ಸ್‌ ಹೊಂದಿರುವ 2021ರ ಕಿಯಾ ಸೆಲ್ಟೊಸ್

ದಕ್ಷಿಣ ಕೊರಿಯಾದ ಜನಪ್ರಿಯ ಕಾರು ಉತ್ಪಾದನಾ ಕಂಪನಿಯಾಗಿರುವ ಕಿಯಾ ಭಾರತ ಸೇರಿ ವಿಶ್ವದ ಪ್ರಮುಖ ಮಾರುಕಟ್ಟೆಗಳಲ್ಲಿ ಕಾರು ಮಾರಾಟ ಜಾಲ ಹೊಂದಿದ್ದು, ಕಂಪನಿಯು ತನ್ನ ಹೊಸ ಕಾರು ಮಾದರಿಗಳಲ್ಲಿ ಬದಲಾವಣೆ ತರುವ ಉದ್ದೇಶದಿಂದ ವಿನೂತನ ಲೊಗೊ ಸೇರ್ಪಡೆಗೊಳಿಸಿದೆ. ಹೊಸ ಕಾರು ಉತ್ಪನ್ನಗಳಲ್ಲಿ ಲೊಗೊ ಬದಲಾವಣೆ ಕುರಿತು ಕಳೆದ ತಿಂಗಳ ಹಿಂದಷ್ಟೇ ಅಧಿಕೃತ ಮಾಹಿತಿ ಹಂಚಿಕೊಂಡಿದ್ದ ಕಿಯಾ ಕಂಪನಿಯು ಇದೀಗ ಹೊಸ ಲೊಗೊ ಹೊಂದಿರುವ ಸೆಲ್ಟೊಸ್ ಮತ್ತು ಸೊನೆಟ್ ಮಾದರಿಗಳನ್ನು ಭಾರತದಲ್ಲಿ ಅನಾವರಣಗೊಳಿಸಿ ಬಿಡುಗಡೆ ಮಾಡುತ್ತಿದೆ.

ಡೀಲರ್ಸ್ ಯಾರ್ಡ್ ತಲುಪಿದ ಹೊಸ ಫೀಚರ್ಸ್‌ ಹೊಂದಿರುವ 2021ರ ಕಿಯಾ ಸೆಲ್ಟೊಸ್

ದೇಶಿಯ ಮಾರುಕಟ್ಟೆಯಲ್ಲಿ ಸದ್ಯ ಮೂರು ಕಾರು ಮಾದರಿಗಳ ಮಾರಾಟ ಹೊಂದಿರುವ ಕಿಯಾ ಕಂಪನಿಯು ಶೀಘ್ರದಲ್ಲೇ ಕಾರ್ನಿವಾಲ್ ಕಾರು ಮಾದರಿಯಲ್ಲೂ ಹೊಸ ಲೊಗೊ ನೀಡುವ ಸುಳಿವು ನೀಡಿದ್ದು, ಹೊಸ ಲೊಗೊ ಪಡೆದುಕೊಂಡಿರುವ ಸೆಲ್ಟೊಸ್ ಮತ್ತು ಸೊನೆಟ್ ಕಾರುಗಳು ಇದೀಗ ಬಿಡುಗಡೆಯ ಸಿದ್ದತೆಯಲ್ಲಿವೆ.

ಡೀಲರ್ಸ್ ಯಾರ್ಡ್ ತಲುಪಿದ ಹೊಸ ಫೀಚರ್ಸ್‌ ಹೊಂದಿರುವ 2021ರ ಕಿಯಾ ಸೆಲ್ಟೊಸ್

ಕಿಯಾ ಹೊಸ ಲೊಗೊ ವಿನ್ಯಾಸವು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಲೊಗೊ ವಿನ್ಯಾಸಕ್ಕಿಂತಲೂ ಆಕರ್ಷಕವಾಗಿರಲಿದ್ದು, ಹಸ್ತಾಕ್ಷರ ಮಾದರಿಯಲ್ಲಿರುವ ಹೊಸ ಲೊಗೊ ವಿನ್ಯಾಸವು ಕಿಯಾ ಕಾರುಗಳಿಗೆ ಮತ್ತಷ್ಟು ಮೆರಗು ನೀಡಲಿದೆ.

ಡೀಲರ್ಸ್ ಯಾರ್ಡ್ ತಲುಪಿದ ಹೊಸ ಫೀಚರ್ಸ್‌ ಹೊಂದಿರುವ 2021ರ ಕಿಯಾ ಸೆಲ್ಟೊಸ್

ಹೊಸ ಕಾರುಗಳ ಬ್ಯಾನೆಟ್, ಟೈಲ್‌ಗೆಟ್, ಅಲಾಯ್ ವೀಲ್ಹ್ ಮತ್ತು ಸ್ಟೀರಿಂಗ್ ವೀಲ್ಹ್ ಮೇಲೆ ಹೊಸ ಲೊಗೊ ವಿನ್ಯಾಸವು ಗಮನಸೆಳೆಯುತ್ತಿದ್ದು, ಹೊಸ ಲೊಗೊದೊಂದಿಗೆ ಸೆಲ್ಟೊಸ್ ಮಾದರಿಯ ಫೇಸ್‌ಲಿಫ್ಟ್ ಆವೃತ್ತಿಯ ಬಿಡುಗಡೆಯ ಯೋಜನೆಯಲ್ಲಿದ್ದ ಕಿಯಾ ಕಂಪನಿಗೆ ಕೋವಿಡ್ ಹಿನ್ನಡೆ ಉಂಟು ಮಾಡಿದೆ. ಪರಿಸ್ಥಿತಿಗೆ ಅನುಗುಣವಾಗಿ ಕಂಪನಿಯು ಸದ್ಯ ಕೆಲವೇ ಕೆಲವು ತಾಂತ್ರಿಕ ಬದಲಾವಣೆಯೊಂದಿಗೆ 2021ರ ಮಾದರಿಯನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಡಿಸೈನ್ ಹೊಂದಿರುವ ಸೆಲ್ಟೊಸ್ ಫೇಸ್‌ಲಿಫ್ಟ್ ಮಾದರಿಯ ಬಿಡುಗಡೆಯನ್ನು 2022ಕ್ಕೆ ಮುಂದೂಡಿದೆ.

ಡೀಲರ್ಸ್ ಯಾರ್ಡ್ ತಲುಪಿದ ಹೊಸ ಫೀಚರ್ಸ್‌ ಹೊಂದಿರುವ 2021ರ ಕಿಯಾ ಸೆಲ್ಟೊಸ್

ಹೊಸ ಲೊಗೊ ಪ್ರೇರಿತ ಸೆಲ್ಟೊಸ್ ಮತ್ತು ಸೊನೆಟ್ ಮಾದರಿಗಳು ಸದ್ಯ ಮಾರುಕಟ್ಟೆಯಲ್ಲಿರುವ ಆವೃತ್ತಿಗಳಂತೆಯೇ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದ್ದು, ಹೊಸ ಲೊಗೊ ಜೊತೆಗೆ ಕೆಲವು ಸಣ್ಣಪುಟ್ಟ ಬದಲಾವಣೆಗಳೊಂದಿಗೆ ಬಿಡುಗಡೆಗಾಗಿ ಡೀಲರ್ಸ್ ಯಾರ್ಡ್ ತಲುಪಿದೆ.

ಡೀಲರ್ಸ್ ಯಾರ್ಡ್ ತಲುಪಿದ ಹೊಸ ಫೀಚರ್ಸ್‌ ಹೊಂದಿರುವ 2021ರ ಕಿಯಾ ಸೆಲ್ಟೊಸ್

ಮಾಹಿತಿಗಳ ಪ್ರಕಾರ ಕಳೆದ ವರ್ಷದ ಕೊನೆಯಲ್ಲಿ ಬಿಡುಗಡೆಯಾಗಿದ್ದ ಸೊನೆಟ್ ಮಾದರಿಯಲ್ಲಿ ಹೊಸ ಲೊಗೊ ಹೊರತುಪಡಿಸಿ ಯಾವುದೇ ಹೊಸ ಬದಲಾವಣೆ ಪರಿಚಯಿಸಿಲ್ಲ ಎನ್ನಲಾಗಿದ್ದು, ಸೆಲ್ಟೊಸ್ ಕಾರಿನಲ್ಲಿ ಕೆಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ಉನ್ನತೀಕರಿಸಲಾಗಿದೆ.

ಡೀಲರ್ಸ್ ಯಾರ್ಡ್ ತಲುಪಿದ ಹೊಸ ಫೀಚರ್ಸ್‌ ಹೊಂದಿರುವ 2021ರ ಕಿಯಾ ಸೆಲ್ಟೊಸ್

ಸೆಲ್ಟೊಸ್ ಹೊಸ ಕಾರಿನಲ್ಲಿ ಕಂಪನಿಯು ಸ್ಯಾಂಡ್, ಮಡ್, ಸ್ನೋ ಎನ್ನುವ ಮೂರು ಟ್ರಾಕ್ಷನ್ ಸೌಲಭ್ಯದೊಂದಿಗೆ ನಾರ್ಮಲ್, ಇಕೋ ಮತ್ತು ಸ್ಪೋರ್ಟ್ ಡ್ರೈವಿಂಗ್ ಮೋಡ್‌ಗಳನ್ನು ಜೋಡಣೆ ಮಾಡಿದ್ದು, ಹೆಚ್‌ಟಿಕೆ ಪ್ಲಸ್ ಮಾದರಿಯಲ್ಲಿ ಫ್ರ್ಯಾಬಿಕ್ ಆಸನ, ಎಲೆಕ್ಟ್ರಿಕ್ ಸನ್‌ರೂಫ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್ ಸೌಲಭ್ಯಗಳನ್ನು ಪಡೆದುಕೊಂಡಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಡೀಲರ್ಸ್ ಯಾರ್ಡ್ ತಲುಪಿದ ಹೊಸ ಫೀಚರ್ಸ್‌ ಹೊಂದಿರುವ 2021ರ ಕಿಯಾ ಸೆಲ್ಟೊಸ್

ಇನ್ನುಳಿದ ಹೆಚ್‌ಟಿಎಕ್ಸ್, ಹೆಚ್‌ಟಿಎಕ್ಸ್ ಎಇ, ಹೆಚ್‌ಟಿಎಕ್ಸ್ ಪ್ಲಸ್, ಜಿಟಿಎಕ್ಸ್ ಆಪ್ಷನ್ ಮತ್ತು ಜಿಟಿಎಕ್ಸ್ ಪ್ಲಸ್ ಮಾದರಿಗಳಲ್ಲಿ ಹೆಚ್ಚುವರಿಯಾಗಿ ಎಲೆಕ್ಟ್ರಾನಿಕ್ ಅಸಿಸ್ಟ್ ಕಂಟ್ರೋಲ್, ಹಿಲ್ ಸ್ಟಾರ್ಟ್ ಅಸಿಸ್ಟ್ ಕಂಟ್ರೋಲ್, ವೆಹಿಕಲ್ ಸ್ಟ್ಯಾಬಿಲಿಟಿ ಮ್ಯಾನೆಜ್‌ಮೆಂಟ್, ಬ್ರೇಕ್ ಅಸಿಸ್ಟ್, ಆಟೋಮ್ಯಾಟಿಕ್ ಮಾದರಿಗಳಿಗಾಗಿ ಪ್ಯಾಡಲ್ ಶಿಫ್ಟರ್ ಫೀಚರ್ಸ್‌ಗಳನ್ನು ನೀಡಲಾಗುತ್ತಿದೆ.

ಡೀಲರ್ಸ್ ಯಾರ್ಡ್ ತಲುಪಿದ ಹೊಸ ಫೀಚರ್ಸ್‌ ಹೊಂದಿರುವ 2021ರ ಕಿಯಾ ಸೆಲ್ಟೊಸ್

ಇನ್ನು ಹೊಸ ಸೆಲ್ಟೊಸ್ ಕಾರು ಮಾದರಿಯಲ್ಲಿ ಈ ಹಿಂದಿನಂತಯೇ ಎಂಜಿನ್ ಆಯ್ಕೆ ಮುಂದುವರಿಸಲಾಗಿದ್ದು, ಬಿಎಸ್-6 ನಿಯಮ ಅನುಸಾರ ಜಿಟಿ ಲೈನ್ ಕಾರುಗಳಲ್ಲಿ 1.4-ಲೀಟರ್ ಟಿ-ಜಿಡಿಐ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದರೆ ಸಾಮಾನ್ಯ ಮಾದರಿಯ ಟೆಕ್-ಲೈನ್ ಕಾರುಗಳು ಬಿಎಸ್-6 ಪ್ರೇರಿತ ನ್ಯಾಚುರಲಿ ಆಸ್ಪೆರೆಟೆಡ್ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ಪಡೆದುಕೊಂಡಿವೆ.

MOST READ: ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!

ಡೀಲರ್ಸ್ ಯಾರ್ಡ್ ತಲುಪಿದ ಹೊಸ ಫೀಚರ್ಸ್‌ ಹೊಂದಿರುವ 2021ರ ಕಿಯಾ ಸೆಲ್ಟೊಸ್

ಸೆಲ್ಟೊಸ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.9.90 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.17.66 ಲಕ್ಷ ಬೆಲೆ ಹೊಂದಿದ್ದು, 2021ರ ಮಾದರಿಯೊಂದಿಗೆ ಹೊಸ ಕಾರಿನ ಬೆಲೆಯು ತುಸು ದುಬಾರಿಯಾಗಲಿದೆ ಎನ್ನಲಾಗಿದೆ.

Image Courtesy: Tech promises

Most Read Articles

Kannada
English summary
2021 Kia Seltos To be Launched In May With New Logo & More Feature.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X