ಹೊಸ ಲೊಗೊ ಸೇರಿದಂತೆ ಪ್ರಮುಖ ಬದಲಾವಣೆ ಪಡೆದುಕೊಳ್ಳಲಿದೆ 2021ರ ಕಿಯಾ ಸೆಲ್ಟೊಸ್

ದಕ್ಷಿಣ ಕೊರಿಯಾದ ಜನಪ್ರಿಯ ಕಾರು ಉತ್ಪಾದನಾ ಕಂಪನಿಯಾಗಿರುವ ಕಿಯಾ ಮೋಟಾರ್ಸ್ ಭಾರತ ಸೇರಿ ವಿಶ್ವದ ಪ್ರಮುಖ ಮಾರುಕಟ್ಟೆಗಳಲ್ಲಿ ಕಾರು ಮಾರಾಟ ಜಾಲ ಹೊಂದಿದ್ದು, ಕಂಪನಿಯು ಶೀಘ್ರದಲ್ಲೇ ತನ್ನ ಕಾರು ಮಾದರಿಗಳಲ್ಲಿ ಬದಲಾವಣೆ ತರುವ ಉದ್ದೇಶದಿಂದ ಹೊಸ ಲೊಗೊ ಸೇರ್ಪಡೆಗೊಳಿಸಲು ನಿರ್ಧರಿಸಿದೆ.

ಹೊಸ ಲೊಗೊ ಸೇರಿದಂತೆ ಪ್ರಮುಖ ಬದಲಾವಣೆ ಪಡೆದುಕೊಳ್ಳಲಿದೆ 2021ರ ಕಿಯಾ ಸೆಲ್ಟೊಸ್

ಕಾರು ಉತ್ಪನ್ನಗಳಲ್ಲಿ ಲೊಗೊ ಬದಲಾವಣೆ ಕುರಿತು ಕಳೆದ ತಿಂಗಳ ಹಿಂದಷ್ಟೇ ಅಧಿಕೃತ ಮಾಹಿತಿ ಹಂಚಿಕೊಂಡಿದ್ದ ಕಿಯಾ ಮೋಟಾರ್ಸ್ ಕಂಪನಿಯು ಇದೀಗ ಹೊಸ ಲೊಗೊ ಬದಲಾವಣೆಗಾಗಿ ಈಗಾಗಲೇ ಅಂತಿಮ ಹಂತದ ಸಿದ್ದತೆ ನಡೆಸುತ್ತಿದ್ದು, ಶೀಘ್ರದಲ್ಲೇ ಕಿಯಾ ನಿರ್ಮಾಣದ ಎಲ್ಲಾ ಕಾರು ಮಾದರಿಗಳಲ್ಲೂ ಹೊಸ ವಿನ್ಯಾಸದ ಲೊಗೊ ಜೋಡಣೆ ಹೊಂದಿರಲಿವೆ. ಹೊಸ ಲೊಗೊ ವಿನ್ಯಾಸವು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಲೊಗೊ ವಿನ್ಯಾಸಕ್ಕಿಂತಲೂ ಆಕರ್ಷಕವಾಗಿರಲಿದ್ದು, ಹೊಸ ಕಾರು ಮಾದರಿಗಳಿಗೆ ಹೊಸ ಲೊಗೊ ವಿನ್ಯಾಸವು ಮತ್ತಷ್ಟು ಮೆರಗು ನೀಡಲಿದೆ.

ಹೊಸ ಲೊಗೊ ಸೇರಿದಂತೆ ಪ್ರಮುಖ ಬದಲಾವಣೆ ಪಡೆದುಕೊಳ್ಳಲಿದೆ 2021ರ ಕಿಯಾ ಸೆಲ್ಟೊಸ್

ಭಾರತದಲ್ಲಿ ಕಿಯಾ ಮೋಟಾರ್ಸ್ ಕಂಪನಿಯು ಹೊಸ ಲೊಗೊ ಮಾದರಿಯನ್ನು 2021ರ ಸೆಲ್ಟೊಸ್‌ನೊಂದಿಗೆ ಜೋಡಣೆ ಪ್ರಕ್ರಿಯೆಗೆ ಚಾಲನೆ ನೀಡುವ ಸಾಧ್ಯತೆಗಳಿದ್ದು, ಅದಕ್ಕೂ ಮುನ್ನ ಹೊಸ ಲೊಗೊದೊಂದಿಗೆ ಮಾರಾಟ ಕೇಂದ್ರ ಉನ್ನತೀಕರಿಸಲಾಗುತ್ತಿದೆ.

ಹೊಸ ಲೊಗೊ ಸೇರಿದಂತೆ ಪ್ರಮುಖ ಬದಲಾವಣೆ ಪಡೆದುಕೊಳ್ಳಲಿದೆ 2021ರ ಕಿಯಾ ಸೆಲ್ಟೊಸ್

ಕಿಯಾ ಮೋಟಾರ್ಸ್ ಕಾರು ಮಾರಾಟ ಮಳಿಗೆಗಳನ್ನು ಸದ್ಯಕ್ಕೆ ಹೊಸ ಲೊಗೊ ವಿನ್ಯಾಸದೊಂದಿಗೆ ಬ್ರಾಂಡ್ ಬೋರ್ಡ್‌ಗಳನ್ನು ಬದಲಾಯಿಸಲಾಗುತ್ತಿದ್ದು, ಮುಂದಿನ ಕೆಲವೇ ದಿನಗಳ ಅವಧಿಯಲ್ಲಿ ಹೊಸ ಲೊಗೊ ಹೊಂದಿರುವ ಕಾರುಗಳು ಖರೀದಿಗೆ ಲಭ್ಯವಿರಲಿವೆ.

ಹೊಸ ಲೊಗೊ ಸೇರಿದಂತೆ ಪ್ರಮುಖ ಬದಲಾವಣೆ ಪಡೆದುಕೊಳ್ಳಲಿದೆ 2021ರ ಕಿಯಾ ಸೆಲ್ಟೊಸ್

ಇನ್ನು ಭಾರತದಲ್ಲಿ ಕಾರು ಮಾರಾಟ ಆರಂಭಿದ ಕೆಲವೇ ದಿನಗಳಲ್ಲಿ ಮಹತ್ವದ ಮುನ್ನಡೆ ಕಾಯ್ದುಕೊಳ್ಳುತ್ತಿರುವ ಕಿಯಾ ಮೋಟಾರ್ಸ್ ಕಂಪನಿಯು ಸದ್ಯ ಪ್ರಮುಖ ಕಾರು ಮಾರಾಟ ಕಂಪನಿಗಳನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನದಲ್ಲಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಮಾರಾಟ ಮಳಿಗೆಗಳೊಂದಿಗೆ ಗ್ರಾಹಕರ ಬೇಡಿಕೆಯಲ್ಲಿ ಮತ್ತಷ್ಟು ಮುನ್ನಡೆ ಸಾಧಿಸಲಿದೆ. ಕಿಯಾ ಕಂಪನಿಯು 2019ರ ಮಧ್ಯಂತರದಲ್ಲಿ ಸೆಲ್ಟೊಸ್ ಎಸ್‌ಯುವಿ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸುವ ಮೂಲಕ ದೇಶಿಯ ಮಾರುಕಟ್ಟೆಯ ಆಟೋ ಉತ್ಪಾದನಾ ವಲಯಕ್ಕೆ ಅಧಿಕೃತವಾಗಿ ಎಂಟ್ರಿ ನೀಡಿತ್ತು.

ಹೊಸ ಲೊಗೊ ಸೇರಿದಂತೆ ಪ್ರಮುಖ ಬದಲಾವಣೆ ಪಡೆದುಕೊಳ್ಳಲಿದೆ 2021ರ ಕಿಯಾ ಸೆಲ್ಟೊಸ್

ಸೆಲ್ಟೊಸ್ ಎಸ್‌ಯುವಿ ಬಿಡುಗಡೆಯ ನಂತರ ಕಳೆದ ಒಂದೂವರೆ ವರ್ಷದಲ್ಲಿ ಕಿಯಾ ಮೋಟಾರ್ಸ್ ಕಂಪನಿಯು ಹಲವಾರು ದಾಖಲೆಗಳಿಗೆ ಕಾರಣವಾಗಿದ್ದು, ಶೀಘ್ರದಲ್ಲೇ ಹೆಚ್ಚುವರಿ ಫೀಚರ್ಸ್ ಹೊಂದಿರುವ ಫೇಸ್‌ಲಿಫ್ಟ್ ಮಾದರಿಯನ್ನು ಬಿಡುಗಡೆ ಮಾಡಲಿದೆ.

ಹೊಸ ಲೊಗೊ ಸೇರಿದಂತೆ ಪ್ರಮುಖ ಬದಲಾವಣೆ ಪಡೆದುಕೊಳ್ಳಲಿದೆ 2021ರ ಕಿಯಾ ಸೆಲ್ಟೊಸ್

ಫೇಸ್‌ಲಿಫ್ಟ್ ಸೆಲ್ಟೊಸ್ ಮಾದರಿಯಲ್ಲಿ ಕಿಯಾ ಮೋಟಾರ್ಸ್ ಕಂಪನಿಯು ಎಂಜಿನ್ ಆಯ್ಕೆಯನ್ನು ಪ್ರಸ್ತುತ ಮಾದರಿಯಲ್ಲಿರುವಂತೆ ಮುಂದುವರಿಸಲಿದ್ದು, ಆರಂಭಿಕ ಕಾರು ಮಾದರಿಗಳಲ್ಲಿ ಹಲವು ಸುರಕ್ಷಾ ಫೀಚರ್ಸ್‌ಗಳು ಸ್ಟ್ಯಾಂಡರ್ಡ್ ಆಗಿ ಜೋಡಣೆಯಾಗಲಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಹೊಸ ಲೊಗೊ ಸೇರಿದಂತೆ ಪ್ರಮುಖ ಬದಲಾವಣೆ ಪಡೆದುಕೊಳ್ಳಲಿದೆ 2021ರ ಕಿಯಾ ಸೆಲ್ಟೊಸ್

ಸೆಲ್ಟೊಸ್ ಕಾರು ಮಾದರಿಯ ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.9.90 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.17.66 ಲಕ್ಷ ಬೆಲೆ ಹೊಂದಿದ್ದು, ಗ್ರಾಹಕರ ಬೇಡಿಕೆಯೆಂತೆ ಮೂರು ಎಂಜಿನ್ ಆಯ್ಕೆಗಳನ್ನು ಪಡೆದುಕೊಂಡಿದೆ.

ಹೊಸ ಲೊಗೊ ಸೇರಿದಂತೆ ಪ್ರಮುಖ ಬದಲಾವಣೆ ಪಡೆದುಕೊಳ್ಳಲಿದೆ 2021ರ ಕಿಯಾ ಸೆಲ್ಟೊಸ್

ಬಿಎಸ್-6 ನಿಯಮ ಅನುಸಾರ ಜಿಟಿ ಲೈನ್ ಕಾರುಗಳಲ್ಲಿ 1.4-ಲೀಟರ್ ಟಿ-ಜಿಡಿಐ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದರೆ ಸಾಮಾನ್ಯ ಮಾದರಿಯ ಟೆಕ್-ಲೈನ್ ಕಾರುಗಳು ಬಿಎಸ್-6 ಪ್ರೇರಿತ ನ್ಯಾಚುರಲಿ ಆಸ್ಪೆರೆಟೆಡ್ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ಪಡೆದುಕೊಂಡಿವೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಹೊಸ ಲೊಗೊ ಸೇರಿದಂತೆ ಪ್ರಮುಖ ಬದಲಾವಣೆ ಪಡೆದುಕೊಳ್ಳಲಿದೆ 2021ರ ಕಿಯಾ ಸೆಲ್ಟೊಸ್

ವಿವಿಧ ಎಂಜಿನ್ ಆಯ್ಕೆಗಳೊಂದಿಗೆ ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಫೇಸ್‌ಲಿಫ್ಟ್ ಮಾದರಿಯು ಹೊಸ ಲೊಗೊ, ಆರಂಭಿಕ ಮಾದರಿಗಳಲ್ಲೂ ಪನೋರಮಿಕ್ ಸನ್‌ರೂಫ್, ಮರು ವಿನ್ಯಾಸಗೊಳಿಸಲಾದ ಗ್ರಿಲ್, ಬ್ಯಾನೆಟ್ ಸೇರಿದಂತೆ ಹಲವಾರು ಬದಲಾವಣೆಗಳನ್ನು ಪಡೆದುಕೊಳ್ಳಲಿದೆ.

More from DriveSpark

Article Published On: Wednesday, March 24, 2021, 20:19 [IST]
English summary
Kia Could Introduce New Logo In India With Updated Seltos.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+