ಹೊಸ ಲೊಗೊ ಪ್ರೇರಿತ ಸೆಲ್ಟೊಸ್ ಫೇಸ್‌ಲಿಫ್ಟ್ ಟೀಸರ್ ಬಿಡುಗಡೆ ಮಾಡಿದ ಕಿಯಾ ಮೋಟಾರ್ಸ್
ಕಿಯಾ ಮೋಟಾರ್ಸ್ ಕಂಪನಿಯು ಭಾರತ ಸೇರಿದಂತೆ ವಿಶ್ವದ ಪ್ರಮುಖ ಮಾರುಕಟ್ಟೆಗಳಲ್ಲಿ ಕಾರು ಮಾರಾಟ ಜಾಲವನ್ನ ಹೊಂದಿದ್ದು, ಕಂಪನಿಯು ಶೀಘ್ರದಲ್ಲೇ ತನ್ನ ಹೊಸ ಕಾರು ಮಾದರಿಗಳಲ್ಲಿ ಹಲವಾರು ಬದಲಾವಣೆ ಪರಿಚಯಿಸುವ ಯೋಜನೆಯಲ್ಲಿದೆ.

ಹೊಸ ಕಾರು ಉತ್ಪನ್ನಗಳಲ್ಲಿ ಲೊಗೊ ಬದಲಾವಣೆ ಕುರಿತು ಕಳೆದ ತಿಂಗಳ ಹಿಂದಷ್ಟೇ ಅಧಿಕೃತ ಮಾಹಿತಿ ಹಂಚಿಕೊಂಡಿದ್ದ ಕಿಯಾ ಮೋಟಾರ್ಸ್ ಕಂಪನಿಯು ಇದೀಗ ಹೊಸ ಲೊಗೊ ಬದಲಾವಣೆಗಾಗಿ ಈಗಾಗಲೇ ಅಂತಿಮ ಹಂತದ ಸಿದ್ದತೆ ನಡೆಸುತ್ತಿದ್ದು, ಶೀಘ್ರದಲ್ಲೇ ಕಿಯಾ ನಿರ್ಮಾಣದ ಎಲ್ಲಾ ಕಾರು ಮಾದರಿಗಳಲ್ಲೂ ಹೊಸ ವಿನ್ಯಾಸದ ಲೊಗೊ ಜೋಡಣೆ ಹೊಂದಿರಲಿವೆ. ಹೊಸ ಲೊಗೊ ವಿನ್ಯಾಸವು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಲೊಗೊ ವಿನ್ಯಾಸಕ್ಕಿಂತಲೂ ಆಕರ್ಷಕವಾಗಿರಲಿದ್ದು, ಹೊಸ ಕಾರು ಮಾದರಿಗಳಿಗೆ ಹೊಸ ಲೊಗೊ ವಿನ್ಯಾಸವು ಮತ್ತಷ್ಟು ಮೆರಗು ನೀಡಲಿದೆ.

ಭಾರತದಲ್ಲಿ ಕಿಯಾ ಮೋಟಾರ್ಸ್ ಕಂಪನಿಯು ಹೊಸ ಲೊಗೊ ಮಾದರಿಯನ್ನು ಮೊದಲ ಹಂತವಾಗಿ 2021ರ ಸೆಲ್ಟೊಸ್‌ನಲ್ಲಿ ಜೋಡಣೆ ಮಾಡಲು ನಿರ್ಧರಿಸಿದ್ದು, ಹೊಸ ಲೊಗೊ ಪ್ರೇರಿತ ಸೆಲ್ಟೊಸ್ ವಿಡಿಯೋ ಕೂಡಾ ಬಿಡುಗಡೆ ಮಾಡಲಾಗಿದೆ.
ಕಿಯಾ ಮೋಟಾರ್ಸ್ ಕಾರು ಮಾರಾಟ ಮಳಿಗೆಗಳನ್ನು ಸದ್ಯಕ್ಕೆ ಹೊಸ ಲೊಗೊ ವಿನ್ಯಾಸದೊಂದಿಗೆ ಬ್ರಾಂಡ್ ಬೋರ್ಡ್‌ಗಳನ್ನು ಬದಲಾಯಿಸಲಾಗುತ್ತಿದ್ದು, ಹೊಸ ಲೊಗೊ ಪ್ರೇರಿತ ಸೆಲ್ಟೊಸ್ ಫೇಸ್‌ಲಿಫ್ಟ್ ಮಾದರಿಯು ಇದೇ ತಿಂಳಾಂತ್ಯಕ್ಕೆ ಬಿಡುಗಡೆಯಾಗುವ ಸಾಧ್ಯತೆಗಳಿವೆ.

ಇನ್ನು ಭಾರತದಲ್ಲಿ ಕಾರು ಮಾರಾಟ ಆರಂಭಿದ ಕೆಲವೇ ದಿನಗಳಲ್ಲಿ ಮಹತ್ವದ ಮುನ್ನಡೆ ಕಾಯ್ದುಕೊಳ್ಳುತ್ತಿರುವ ಕಿಯಾ ಮೋಟಾರ್ಸ್ ಕಂಪನಿಯು ಸದ್ಯ ಪ್ರಮುಖ ಕಾರು ಮಾರಾಟ ಕಂಪನಿಗಳನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನದಲ್ಲಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಮಾರಾಟ ಮಳಿಗೆಗಳೊಂದಿಗೆ ಗ್ರಾಹಕರ ಬೇಡಿಕೆಯಲ್ಲಿ ಮತ್ತಷ್ಟು ಮುನ್ನಡೆ ಸಾಧಿಸಲಿದೆ. ಕಿಯಾ ಕಂಪನಿಯು 2019ರ ಮಧ್ಯಂತರದಲ್ಲಿ ಸೆಲ್ಟೊಸ್ ಎಸ್‌ಯುವಿ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸುವ ಮೂಲಕ ದೇಶಿಯ ಮಾರುಕಟ್ಟೆಯ ಆಟೋ ಉತ್ಪಾದನಾ ವಲಯಕ್ಕೆ ಅಧಿಕೃತವಾಗಿ ಎಂಟ್ರಿ ನೀಡಿತ್ತು.

ಸೆಲ್ಟೊಸ್ ಎಸ್‌ಯುವಿ ಬಿಡುಗಡೆಯ ನಂತರ ಕಳೆದ ಒಂದೂವರೆ ವರ್ಷದಲ್ಲಿ ಕಿಯಾ ಮೋಟಾರ್ಸ್ ಕಂಪನಿಯು ಹಲವಾರು ದಾಖಲೆಗಳಿಗೆ ಕಾರಣವಾಗಿದ್ದು, ಇದೀಗ ಫೇಸ್‌ಲಿಫ್ಟ್ ಮಾದರಿಯೊಂದಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಫೇಸ್‌ಲಿಫ್ಟ್ ಸೆಲ್ಟೊಸ್ ಮಾದರಿಯಲ್ಲಿ ಕಿಯಾ ಮೋಟಾರ್ಸ್ ಕಂಪನಿಯು ಎಂಜಿನ್ ಆಯ್ಕೆಯನ್ನು ಪ್ರಸ್ತುತ ಮಾದರಿಯಲ್ಲಿರುವಂತೆ ಮುಂದುವರಿಸಲಿದ್ದು, ಆರಂಭಿಕ ಕಾರು ಮಾದರಿಗಳಲ್ಲಿ ಹಲವು ಸುರಕ್ಷಾ ಫೀಚರ್ಸ್‌ಗಳು ಸ್ಟ್ಯಾಂಡರ್ಡ್ ಆಗಿ ಜೋಡಣೆಯಾಗಲಿದೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಸೆಲ್ಟೊಸ್ ಕಾರು ಮಾದರಿಯ ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.9.90 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.17.66 ಲಕ್ಷ ಬೆಲೆ ಹೊಂದಿದ್ದು, ಗ್ರಾಹಕರ ಬೇಡಿಕೆಯೆಂತೆ ಮೂರು ಎಂಜಿನ್ ಆಯ್ಕೆಗಳನ್ನು ಪಡೆದುಕೊಂಡಿದೆ.

ಬಿಎಸ್-6 ನಿಯಮ ಅನುಸಾರ ಜಿಟಿ ಲೈನ್ ಕಾರುಗಳಲ್ಲಿ 1.4-ಲೀಟರ್ ಟಿ-ಜಿಡಿಐ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದರೆ ಸಾಮಾನ್ಯ ಮಾದರಿಯ ಟೆಕ್-ಲೈನ್ ಕಾರುಗಳು ಬಿಎಸ್-6 ಪ್ರೇರಿತ ನ್ಯಾಚುರಲಿ ಆಸ್ಪೆರೆಟೆಡ್ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ಪಡೆದುಕೊಂಡಿವೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ವಿವಿಧ ಎಂಜಿನ್ ಆಯ್ಕೆಗಳೊಂದಿಗೆ ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಫೇಸ್‌ಲಿಫ್ಟ್ ಮಾದರಿಯು ಹೊಸ ಲೊಗೊ, ಆರಂಭಿಕ ಮಾದರಿಗಳಲ್ಲೂ ಪನೋರಮಿಕ್ ಸನ್‌ರೂಫ್, ಮರು ವಿನ್ಯಾಸಗೊಳಿಸಲಾದ ಗ್ರಿಲ್, ಬ್ಯಾನೆಟ್ ಸೇರಿದಂತೆ ಹಲವಾರು ಬದಲಾವಣೆಗಳನ್ನು ಪಡೆದುಕೊಳ್ಳಲಿದೆ.


Click it and Unblock the Notifications








