Just In
Don't Miss!
- Lifestyle
ಭಾನುವಾರದ ದಿನ ಭವಿಷ್ಯ: ಈ ದಿನ ನಿಮ್ಮ ರಾಶಿಫಲ ಹೇಗಿದೆ ನೋಡಿ
- Sports
ಐಪಿಎಲ್ನಲ್ಲಿ ಕೆಟ್ಟ ದಾಖಲೆ ಬರೆದ ಕೂಲ್ ಕ್ಯಾಪ್ಟನ್ ಎಂಎಸ್ ಧೋನಿ
- Finance
ಶಾಲೆಯನ್ನ ಅರ್ಧಕ್ಕೆ ತೊರೆದು, 8,000 ರೂ. ವೇತನ ಪಡೆಯುತ್ತಿದ್ದ ನಿಖಿಲ್ ಕಾಮತ್ ಶತಕೋಟ್ಯಧಿಪತಿ ಆಗಿದ್ದೇಗೆ?
- News
ನೈಟ್ ಕರ್ಫ್ಯೂ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪೊಲೀಸರ ಬಿಗಿ ರೂಲ್ಸ್
- Education
Bank Of Baroda Recruitment 2021: 512 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಅಜಯ್ ದೇವಗನ್-ಅಮಿತಾಭ್ ಸಿನಿಮಾದ ಚಿತ್ರೀಕರಣಕ್ಕೆ ಕೊರೊನಾ ಅಡ್ಡಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸೆಲ್ಟೊಸ್ ಫೇಸ್‌ಲಿಫ್ಟ್ ಮಾದರಿಯೊಂದಿಗೆ ಗ್ರಾವಿಟಿ ಎಡಿಷನ್ ಬಿಡುಗಡೆ ಮಾಡಲಿದೆ ಕಿಯಾ ಮೋಟಾರ್ಸ್
ಕಿಯಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೇ ತನ್ನ ಜನಪ್ರಿಯ ಕಾರು ಮಾದರಿಯಾದ ಸೆಲ್ಟೊಸ್ ಆವೃತ್ತಿಯ ಫೇಸ್‌ಲಿಫ್ಟ್ ಮಾದರಿಯನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಹೊಸ ಆವೃತ್ತಿಯಲ್ಲಿ ಕಿಯಾ ಕಂಪನಿಯು ಹಲವಾರು ಹೊಸ ಬದಲಾವಣೆ ತರುವ ಯೋಜನೆಯಲ್ಲಿದೆ.

ಭಾರತದಲ್ಲಿ ಕಾರು ಮಾರಾಟ ಆರಂಭಿದ ಕೆಲವೇ ದಿನಗಳಲ್ಲಿ ಮಹತ್ವದ ಮುನ್ನಡೆ ಕಾಯ್ದುಕೊಳ್ಳುತ್ತಿರುವ ಕಿಯಾ ಮೋಟಾರ್ಸ್ ಕಂಪನಿಯು ಸದ್ಯ ಪ್ರಮುಖ ಕಾರು ಮಾರಾಟ ಕಂಪನಿಗಳನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನದಲ್ಲಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಮಾರಾಟ ಮಳಿಗೆಗಳೊಂದಿಗೆ ಗ್ರಾಹಕರ ಬೇಡಿಕೆಯಲ್ಲಿ ಮತ್ತಷ್ಟು ಮುನ್ನಡೆ ಸಾಧಿಸಲಿದೆ.

ಕಿಯಾ ಕಂಪನಿಯು 2019ರ ಮಧ್ಯಂತರದಲ್ಲಿ ಸೆಲ್ಟೊಸ್ ಎಸ್‌ಯುವಿ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸುವ ಮೂಲಕ ದೇಶಿಯ ಮಾರುಕಟ್ಟೆಯ ಆಟೋ ಉತ್ಪಾದನಾ ವಲಯಕ್ಕೆ ಅಧಿಕೃತವಾಗಿ ಎಂಟ್ರಿ ನೀಡಿತ್ತು. ತದನಂತರ ಹೊಸ ಕಾರಿನಲ್ಲಿ ಹಲವಾರು ಬದಲಾವಣೆಗಳನ್ನು ಪರಿಚಯಿಸಿರುವ ಕಿಯಾ ಕಂಪನಿಯು ಇದೀಗ ಫೇಸ್‌ಲಿಫ್ಟ್ ಮೂಲಕ ಕೆಲವು ಪ್ರಮುಖ ಬದಲಾವಣೆಗಳನ್ನು ಪರಿಚಯಿಸುವ ಸುಳಿವು ನೀಡಿದ್ದು, ಫೇಸ್‌ಲಿಫ್ಟ್ ಮಾದರಿಯಲ್ಲಿ ಹೊಸ ವಿನ್ಯಾಸದ ಲೊಗೊ ಸೇರಿದಂತೆ ಹಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಳ್ಳಲಿದೆ.

ಹೊಸ ಕಾರು ಉತ್ಪನ್ನಗಳಲ್ಲಿ ಲೊಗೊ ಬದಲಾವಣೆ ಕುರಿತು ಕಳೆದ ತಿಂಗಳ ಹಿಂದಷ್ಟೇ ಅಧಿಕೃತ ಮಾಹಿತಿ ಹಂಚಿಕೊಂಡಿದ್ದ ಕಿಯಾ ಮೋಟಾರ್ಸ್ ಕಂಪನಿಯು ಇದೀಗ ಹೊಸ ಲೊಗೊ ಬದಲಾವಣೆಗಾಗಿ ಈಗಾಗಲೇ ಅಂತಿಮ ಹಂತದ ಸಿದ್ದತೆ ನಡೆಸುತ್ತಿದ್ದು, ಶೀಘ್ರದಲ್ಲೇ ಕಿಯಾ ನಿರ್ಮಾಣದ ಎಲ್ಲಾ ಕಾರು ಮಾದರಿಗಳಲ್ಲೂ ಹೊಸ ವಿನ್ಯಾಸದ ಲೊಗೊ ಜೋಡಣೆ ಹೊಂದಿರಲಿವೆ.

ಹೊಸ ಲೊಗೊ ವಿನ್ಯಾಸವು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಲೊಗೊ ವಿನ್ಯಾಸಕ್ಕಿಂತಲೂ ಆಕರ್ಷಕವಾಗಿರಲಿದ್ದು, ಹೊಸ ಕಾರು ಮಾದರಿಗಳಿಗೆ ಹೊಸ ಲೊಗೊ ವಿನ್ಯಾಸವು ಮತ್ತಷ್ಟು ಮೆರಗು ನೀಡಲಿದೆ. ಭಾರತದಲ್ಲಿ ಕಿಯಾ ಮೋಟಾರ್ಸ್ ಕಂಪನಿಯು ಹೊಸ ಲೊಗೊ ಮಾದರಿಯನ್ನು 2021ರ ಸೆಲ್ಟೊಸ್‌ನೊಂದಿಗೆ ಜೋಡಣೆ ಮಾಡಿ ಮಾರಾಟ ಪ್ರಕ್ರಿಯೆಗೆ ಚಾಲನೆ ನೀಡಲು ಯೋಜಿಸಿದೆ.

ಸೆಲ್ಟೊಸ್ ಎಸ್‌ಯುವಿ ಬಿಡುಗಡೆಯ ನಂತರ ಕಳೆದ ಒಂದೂವರೆ ವರ್ಷದಲ್ಲಿ ಕಿಯಾ ಮೋಟಾರ್ಸ್ ಕಂಪನಿಯು ಹಲವಾರು ದಾಖಲೆಗಳಿಗೆ ಕಾರಣವಾಗಿದ್ದು, ಶೀಘ್ರದಲ್ಲೇ ಹೆಚ್ಚುವರಿ ಫೀಚರ್ಸ್ ಹೊಂದಿರುವ ಫೇಸ್‌ಲಿಫ್ಟ್ ಮಾದರಿಯನ್ನು ಬಿಡುಗಡೆ ಮಾಡಲಿದೆ.

ಫೇಸ್‌ಲಿಫ್ಟ್ ಸೆಲ್ಟೊಸ್ ಮಾದರಿಯಲ್ಲಿ ಕಿಯಾ ಮೋಟಾರ್ಸ್ ಕಂಪನಿಯು ಎಂಜಿನ್ ಆಯ್ಕೆಯನ್ನು ಪ್ರಸ್ತುತ ಮಾದರಿಯಲ್ಲಿರುವಂತೆ ಮುಂದುವರಿಸಲಿದ್ದು, ಆರಂಭಿಕ ಕಾರು ಮಾದರಿಗಳಲ್ಲಿ ಹಲವು ಸುರಕ್ಷಾ ಫೀಚರ್ಸ್‌ಗಳು ಸ್ಟ್ಯಾಂಡರ್ಡ್ ಆಗಿ ಜೋಡಣೆಯಾಗಲಿದೆ.

ಇದರೊಂದಿಗೆ ಪ್ರೀಮಿಯಂ ಫೀಚರ್ಸ್‌ನೊಂದಿಗೆ ಆಕರ್ಷಕ ವಿನ್ಯಾಸ ಹೊಂದಿರುವ ಸೆಲ್ಟೊಸ್ ಗ್ರಾವಿಟಿ ಎಡಿಷನ್ ಕೂಡಾ ಫೇಸ್‌ಲಿಫ್ಟ್ ಮಾದರಿಯೊಂದಿಗೆ ಬಿಡುಗಡೆಯಾಗಲಿದೆ ಎನ್ನುವ ಮಾಹಿತಿಗಳು ಲಭ್ಯವಾಗಿದ್ದು, ಸ್ಟ್ಯಾಂಡರ್ಡ್ ಮಾದರಿಗಿಂತಲೂ ಆಕರ್ಷಕವಾಗಿರುವ ಹೊಸ ಆವೃತ್ತಿಯು ಮಧ್ಯಮ ಕ್ರಮಾಂಕದ ಎಸ್‌ಯುವಿಯಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ.
MOST READ: ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು!

ಸೆಲ್ಟೊಸ್ ಕಾರು ಮಾದರಿಯ ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9.90 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.66 ಲಕ್ಷ ಬೆಲೆ ಹೊಂದಿದ್ದು, ಗ್ರಾಹಕರ ಬೇಡಿಕೆಯೆಂತೆ ಮೂರು ಎಂಜಿನ್ ಆಯ್ಕೆಗಳನ್ನು ಪಡೆದುಕೊಂಡಿದೆ.

ಬಿಎಸ್-6 ನಿಯಮ ಅನುಸಾರ ಜಿಟಿ ಲೈನ್ ಕಾರುಗಳಲ್ಲಿ 1.4-ಲೀಟರ್ ಟಿ-ಜಿಡಿಐ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದರೆ ಸಾಮಾನ್ಯ ಮಾದರಿಯ ಟೆಕ್-ಲೈನ್ ಕಾರುಗಳು ಬಿಎಸ್-6 ಪ್ರೇರಿತ ನ್ಯಾಚುರಲಿ ಆಸ್ಪೆರೆಟೆಡ್ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ಪಡೆದುಕೊಂಡಿವೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ವಿವಿಧ ಎಂಜಿನ್ ಆಯ್ಕೆಗಳೊಂದಿಗೆ ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಫೇಸ್‌ಲಿಫ್ಟ್ ಮಾದರಿಯು ಹೊಸ ಲೊಗೊ, ಆರಂಭಿಕ ಮಾದರಿಗಳಲ್ಲೂ ಪನೋರಮಿಕ್ ಸನ್‌ರೂಫ್, ಮರು ವಿನ್ಯಾಸಗೊಳಿಸಲಾದ ಗ್ರಿಲ್, ಬ್ಯಾನೆಟ್ ಸೇರಿದಂತೆ ಹಲವಾರು ಬದಲಾವಣೆಗಳನ್ನು ಪಡೆದುಕೊಳ್ಳಲಿದೆ.