ಬಿಡುಗಡೆಯಾಗಲಿದೆ ಜನಪ್ರಿಯ ಕಿಯಾ ಸೆಲ್ಟೋಸ್ ಎಸ್‍ಯುವಿಯ ಹೊಸ ವೆರಿಯೆಂಟ್

ಭಾರತೀಯ ಮಾರುಕಟ್ಟೆಯಲ್ಲಿ ದಕ್ಷಿಣ ಕೊರಿಯಾದ ಕಾರು ಉತ್ಪಾದನಾ ಕಂಪನಿಯಾದ ಕಿಯಾ ಸಂಸ್ಥೆಯು ಬಿಡುಗಡೆಗೊಳಿಸಿದ ಮೊದಲ ಎಸ್‍‍ಯುವಿಯಾದ ಸೆಲ್ಟೋಸ್ ಮಾರಾಟದಲ್ಲಿ ಹೊಸ ಸಂಚಲನವನ್ನು ಮೂಡಿಸಿತ್ತು. ದೇಶಿಯ ಮಾರುಕಟ್ಟೆಯ ಗ್ರಾಹಕರ ಗಮನ ಸೆಳೆಯುವಲ್ಲಿ ಸೆಲ್ಟೋಸ್ ಎಸ್‍ಯುವಿಯು ಯಶ್ವಸಿಯಾಗಿತ್ತು.

ಬಿಡುಗಡೆಯಾಗಲಿದೆ ಜನಪ್ರಿಯ ಕಿಯಾ ಸೆಲ್ಟೋಸ್ ಎಸ್‍ಯುವಿಯ ಹೊಸ ವೆರಿಯೆಂಟ್

ಭಾರತದ ಗ್ರಾಹಕರು ಈ ಎಸ್‍‍ಯುವಿಯ ಆಕರ್ಷಕ ಲುಕ್ ಮತ್ತು ಅತ್ಯಾಧುನಿಕ ಫೀಚರ್ಸ್‌ಗಳಿಗೆ ಫುಲ್ ಫಿದಾ ಆಗಿದ್ದಾರೆ. ಬಿಡುಗಡೆಯಾದಾಗಿನಿಂದ ಸೆಲ್ಟೋಸ್ ಎಸ್‍‍ಯುವಿ ಜನಪ್ರಿಯವಾಗುವುದರ ಜೊತೆಗೆ ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗಿದೆ. ಮಾರಾಟದಲ್ಲಿ ಕಿಯಾ ಸೆಲ್ಟೋಸ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಅಲೆಯನ್ನು ಸೃಷ್ಟಿಸಿತ್ತು. ಇದೀಗ ದಕ್ಷಿಣ ಕೊರಿಯಾದ ಆಟೋ ಮೇಜರ್ ಕಿಯಾ ತನ್ನ ಸೆಲ್ಟೋಸ್ ಎಸ್‍ಯುವಿಯ ಹೊಸ ಎಕ್ಸ್-ಲೈನ್ ವೆರಿಯೆಂಟ್ ಟೀಸರ್ ಚಿತ್ರವನ್ನು ಬಿಡುಗಡೆಗೊಳಿಸಿದೆ.

ಬಿಡುಗಡೆಯಾಗಲಿದೆ ಜನಪ್ರಿಯ ಕಿಯಾ ಸೆಲ್ಟೋಸ್ ಎಸ್‍ಯುವಿಯ ಹೊಸ ವೆರಿಯೆಂಟ್

ಈ ಪ್ರೋಜೆಕ್ಟ್ ಎಕ್ಸ್ ಶೀರ್ಷಿಕೆಯೊಂದಿಗೆ 'ಶೀಘ್ರದಲ್ಲೇ ಹೊಸ ಬ್ಯಾಡಸ್ ಅನ್ಲೀಶಿಂಗ್' ಎಂದು ಟೀಸರ್ ನಲ್ಲಿ ಹೇಳಿದೆ. ಆದರೆ ಇದು ಸೆಲ್ಟೋಸ್ ಎಸ್‍ಯುವಿಯ ಎಕ್ಸ್-ಲೈನ್ ವೆರಿಯೆಂಟ್ ಆಗುವ ಸಾಧ್ಯತಯಿದೆ. 2020ರ ಆಟೋ ಎಕ್ಸ್‌ಪೋದಲ್ಲಿ ಕಿಯಾ ಎಕ್ಸ್‌ಲೈನ್ ಕಾನ್ಸೆಪ್ಟ್ ಅನ್ನು 2019 ರ ಲಾಸ್ ಏಂಜಲೀಸ್ ಆಟೋ ಶೋನಲ್ಲಿ ತನ್ನ ಜಾಗತಿಕ ಪ್ರೀಮಿಯರ್ ನಂತರ ಅನಾವರಣಗೊಳಿಸಿತು.

ಬಿಡುಗಡೆಯಾಗಲಿದೆ ಜನಪ್ರಿಯ ಕಿಯಾ ಸೆಲ್ಟೋಸ್ ಎಸ್‍ಯುವಿಯ ಹೊಸ ವೆರಿಯೆಂಟ್

ಕೊಸ ಕಿಯಾ ಸೆಲ್ಟೋಸ್ ಎಕ್ಸ್-ಲೈನ್ ವೆರಿಯೆಂಟ್ ಮುಂಭಾಗದ ಗ್ರಿಲ್, ಬಂಪರ್ ಟ್ರಿಮ್, ಆಫ್ ಫಾಗ್ ಲ್ಯಾಂಪ್ ಹೌಸಿಂಗ್‌ಗಳು, ಸೈಡ್‌ಬೋರ್ಡ್‌ಗಳ ಉದ್ದಕ್ಕೂ ಕ್ರೋಮ್ ಆಪ್ಲಿಕ್, ಜಿಟಿ-ಲೈನ್ ಟ್ರಿಮ್‌ನಂತೆಯೇ ಅಲಾಯ್ ವ್ಹೀಲ್ ಅನ್ನು ಹೊಂದಿದೆ.

ಬಿಡುಗಡೆಯಾಗಲಿದೆ ಜನಪ್ರಿಯ ಕಿಯಾ ಸೆಲ್ಟೋಸ್ ಎಸ್‍ಯುವಿಯ ಹೊಸ ವೆರಿಯೆಂಟ್

ಹಿಂಭಾಗದಲ್ಲಿ ಡಾರ್ಕ್ ಕ್ರೋಮ್ ಬಾರ್ ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಕನೆಕ್ಟ್ ಮಾಡುತ್ತದೆ. ಪ್ರಮುಖ ಫಾಕ್ಸ್ ಸ್ಕಫ್ ಪ್ಲೇಟ್, ಬ್ರೌನ್ಸ್ ಅಸ್ಸೆಂಟ್ ಗಳು, ಟೈಲ್‌ಗೇಟ್ ಅಡ್ಡಲಾಗಿ ಸೆಲ್ಟೋಸ್ ಬ್ಯಾಡ್ಜಿಂಗ್, ಮುಂಭಾಗದ ಗ್ರಿಲ್ ಮತ್ತು ಡೋರುಗಳ ಮೇಲೆ ಎಕ್ಸ್-ಲೈನ್ ಲೋಗೊವನ್ನು ಹೊಂದಿದೆ,

ಬಿಡುಗಡೆಯಾಗಲಿದೆ ಜನಪ್ರಿಯ ಕಿಯಾ ಸೆಲ್ಟೋಸ್ ಎಸ್‍ಯುವಿಯ ಹೊಸ ವೆರಿಯೆಂಟ್

ಸೆಲ್ಟೋಸ್ ಎಕ್ಸ್-ಲೈನ್ ಉತ್ಪಾದನೆಯ ಒಳಭಾಗವು ಕಾಂಟ್ರಾಸ್ಟ್ ಹೈಲೈಟ್‌ಗಳೊಂದಿಗೆ ಇದೇ ರೀತಿಯ ಡಾರ್ಕ್ ಟ್ರೀಟ್ಮೆಂಟ್ ಪಡೆಯಬಹುದು. ಈ ಸೆಲ್ಟೋಸ್ ಎಕ್ಸ್-ಲೈನ್ ವೆರಿಯೆಂಟ್ ಕಿಯಾಸ್ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಹೊಂದಾಣಿಕೆಯೊಂದಿಗೆ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ.

ಬಿಡುಗಡೆಯಾಗಲಿದೆ ಜನಪ್ರಿಯ ಕಿಯಾ ಸೆಲ್ಟೋಸ್ ಎಸ್‍ಯುವಿಯ ಹೊಸ ವೆರಿಯೆಂಟ್

2021ರ ಕಿಯಾ ಸೆಲ್ಟೋಸ್ ಎಕ್ಸ್-ಲೈನ್ ವೆರಿಯೆಂಟ್ 1.5-ಲೀಟರ್ ನಾಲ್ಕು-ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 115 ಬಿಹೆಚ್‍ಪಿ ಪವರ್ ಮತ್ತು 144 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು 1.5-ಲೀಟರ್ ನಾಲ್ಕು-ಪಾಟ್ ಎಂಜಿನ್ ಅನ್ನು ಹೊಂದಿರಲಿದೆ.

ಬಿಡುಗಡೆಯಾಗಲಿದೆ ಜನಪ್ರಿಯ ಕಿಯಾ ಸೆಲ್ಟೋಸ್ ಎಸ್‍ಯುವಿಯ ಹೊಸ ವೆರಿಯೆಂಟ್

ಈ ಎಂಜಿನ್ 115 ಬಿಹೆಚ್‍ಪಿ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ, ಇನ್ನು 1.4-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ ಅನ್ನು ಹೊಂದಿರಲಿದೆ. ಈ ಎಂಜಿನ್ 140 ಬಿಹೆಚ್‍ಪಿ ಪವರ್ ಮತ್ತು 242 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ.

ಬಿಡುಗಡೆಯಾಗಲಿದೆ ಜನಪ್ರಿಯ ಕಿಯಾ ಸೆಲ್ಟೋಸ್ ಎಸ್‍ಯುವಿಯ ಹೊಸ ವೆರಿಯೆಂಟ್

ಇನ್ನು ಕಿಯಾ ಇಂಡಿಯಾ ಭಾರತೀಯ ಮಾರುಕಟ್ಟೆಯಲ್ಲಿ 3 ಲಕ್ಷ ಕಾರುಗಳ ಮಾರಾಟದ ಮೈಲಿಗಲ್ಲನ್ನು ಸಾಧಿಸಿದೆ. ಕಿಯಾ ಇಂಡಿಯಾ 3 ಲಕ್ಷ ಯೂನಿಟ್‌ಗಳ ಮಾರಾಟದ ಮೈಲಿಗಲ್ಲನ್ನು ತಲುಪಿದ ಭಾರತದ ಅತಿ ವೇಗದ ಕಾರು ತಯಾರಕವಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಬ್ಲಾಕ್‌ಬಸ್ಟರ್‌ ಆಗಿರುವ ಕಿಯಾ ಸೆಲ್ಟೋಸ್ ಮತ್ತು ಸೊನೆಟ್ ಎಸ್‍ಯುವಿ ಮಾದರಿಗಳಿಗೆ ಬೇಡಿಕೆ ಹೆಚ್ಚುತ್ತಿದೆ . ಕಿಯಾ ಸೆಲ್ಟೋಸ್ ಕಾಂಪ್ಯಾಕ್ಟ್ ಎಸ್‌ಯುವಿಯು ಅದರ ಒಟ್ಟಾರೆ ಮಾರಾಟದ ಶೇಕಡಾ 66 ರಷ್ಟಿದೆ.

ಬಿಡುಗಡೆಯಾಗಲಿದೆ ಜನಪ್ರಿಯ ಕಿಯಾ ಸೆಲ್ಟೋಸ್ ಎಸ್‍ಯುವಿಯ ಹೊಸ ವೆರಿಯೆಂಟ್

ಕಿಯಾ ಇಂಡಿಯಾ 2021ರ ಜುಲೈ ತಿಂಗಳ ಕಾರು ಮಾರಾಟ ವರದಿಯನ್ನು ಪ್ರಕಟಿಸಿದೆ. ಈ ವರದಿಗಳ ಪ್ರಕಾರ, ಕಿಯಾ ಇಂಡಿಯಾ ಕಂಪನಿಯು ಕಳೆದ ತಿಂಗಳಿನಲ್ಲಿ ಒಟ್ಟು 15,016 ಯುನಿಟ್‌ಗಳನ್ನು ಮಾರಾಟ ಮಾಡಿದೆ. 2020ರ ಜುಲೈ ತಿಂಗಳಿನಲ್ಲಿ ಕಿಯಾ ಕಂಪನಿಯು 8502 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.76 ರಷ್ಟು ಬೆಳವಣಿಗೆಯನ್ನು ಕಂಡಿದೆ.

ಬಿಡುಗಡೆಯಾಗಲಿದೆ ಜನಪ್ರಿಯ ಕಿಯಾ ಸೆಲ್ಟೋಸ್ ಎಸ್‍ಯುವಿಯ ಹೊಸ ವೆರಿಯೆಂಟ್

ಇನ್ನು ಈ ವರ್ಷದ ಜೂನ್ ತಿಂಗಳಿನಲ್ಲಿ ಕಿಯಾ ಕಂಪನಿಯು 15,015 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಕೇವಲ ಒಂದು ಯುನಿಟ್ ಮಾತ್ರ ಹೆಚ್ಚು ಮಾರಾಟವಾಗಿದೆ. ಕಳೆದ ತಿಂಗಳು ಕಿಯಾ ಸೊನೆಟ್ ಮತ್ತೊಮ್ಮೆ 7,675 ಯುನಿಟ್‌ಗಳಲ್ಲಿ ಕಂಪನಿಯ ಅತ್ಯುತ್ತಮ ಮಾರಾಟವಾದ ಮಾದರಿಯಾಗಿದೆ. ನಂತರ ಕಿಯಾ ಸೆಲ್ಟೋಸ್ ಎಸ್‍ಯುವಿಯ 6,983 ಯುನಿಟ್‌ಗಳು ಮಾರಾಟವಾಗಿವೆ.

ಬಿಡುಗಡೆಯಾಗಲಿದೆ ಜನಪ್ರಿಯ ಕಿಯಾ ಸೆಲ್ಟೋಸ್ ಎಸ್‍ಯುವಿಯ ಹೊಸ ವೆರಿಯೆಂಟ್

ಈ ವರ್ಷದ ಜುಲೈ ತಿಂಗಳಿನಲ್ಲಿ ಕಿಯಾ ಇಂಡಿಯಾ ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಷನ್ಸ್ ಫೆಡರೇಶನ್ ಅಥವಾ FADA ಇಂಡಿಯಾ, ಪ್ರೀಮನ್ ಏಷಿಯಾ ಸಹಯೋಗದೊಂದಿಗೆ ನಡೆಸಿದ ಡೀಲರ್ ತೃಪ್ತಿ ಅಧ್ಯಯನ 2021 ರಲ್ಲಿ ಅಗ್ರಸ್ಥಾನ ಪಡೆದಿದೆ. ಕಿಯಾ ಕಂಪನಿಯು 1000 ಕ್ಕೆ 879 ಅಂಕಗಳನ್ನು ಗಳಿಸಿದರು.

ಬಿಡುಗಡೆಯಾಗಲಿದೆ ಜನಪ್ರಿಯ ಕಿಯಾ ಸೆಲ್ಟೋಸ್ ಎಸ್‍ಯುವಿಯ ಹೊಸ ವೆರಿಯೆಂಟ್

ಇನ್ನು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಬ್ಲ್ಯಾಕ್ ಥೀಮ್ ವಾಹನಗಳು ಹೆಚ್ಚು ಗ್ರಾಹಕರನ್ನು ಸೆಳೆಯುತ್ತಿದೆ. ಇದರಿಂದ ಕಿಯಾ ಕೂಡ ತನ್ನ ಜನಪ್ರಿಯ ಸೆಲ್ಟೋಸ್ ಎಸ್‍ಯುವಿಯನ್ನು ಬ್ಲ್ಯಾಕ್ ಥೀಮ್ ಎಕ್ಸ್-ಲೈನ್ ವೆರಿಯೆಂಟ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಕಿಯಾ ಸೆಲ್ಟೋಸ್ ಎಕ್ಸ್-ಲೈನ್ ವೆರಿಯೆಂಟ್ ಕೂಡ ಹೆಚ್ಚಿನ ಗ್ರಾಹಕರನ್ನು ಸೆಳೆಯಬಹುದು.

Most Read Articles

Kannada
English summary
Kia seltos x line variant new teaser design launch soon details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X