ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಿಗಾಗಿ ಹೊಸ ಲೊಗೊ ಪ್ರೇರಿತ ಕಿಯಾ ಇವಿ6 ಅನಾವರಣ

ಕಿಯಾ ಮೋಟಾರ್ಸ್ ಕಂಪನಿಯು ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗುತ್ತಿದ್ದು, ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಿಗಾಗಿ ಸುಧಾರಿತ ತಂತ್ರಜ್ಞಾನ ಪ್ರೇರಿತ ಇವಿ6 ಕಾರು ಮಾದರಿಯ ಬಿಡುಗಡೆಗೆ ಸಿದ್ದವಾಗುತ್ತಿದೆ.

ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಿಗಾಗಿ ಹೊಸ ಲೊಗೊ ಪ್ರೇರಿತ ಕಿಯಾ ಇವಿ6 ಅನಾವರಣ

ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ವಿವಿಧ ರಾಷ್ಟ್ರಗಳು 2030ರಿಂದಲೇ ಸಂಪೂರ್ಣವಾಗಿ ಇಂಧನ ಚಾಲಿತ ವಾಹನಗಳ ಮಾರಾಟವನ್ನು ಪೂರ್ಣಪ್ರಮಾಣದಲ್ಲಿ ಸ್ಥಗಿತಗೊಳಿಸುವ ನಿರ್ಣಯ ಕೈಗೊಂಡಿದ್ದು, ಇದಕ್ಕೆ ಪೂರಕವಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಹೊಸ ನಿರ್ಣಯಗಳಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವು ಸಾಕಷ್ಟು ಇಳಿಕೆಯಾಗುತ್ತಿದ್ದು, ಹೈಬ್ರಿಡ್ ಮತ್ತು ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ವಾಹನಗಳ ಮಾರಾಟವದಲ್ಲಿ ಸಾಕಷ್ಟು ಬೆಳವಣಿಗೆ ಕಂಡುಬಂದಿದೆ.

ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಿಗಾಗಿ ಹೊಸ ಲೊಗೊ ಪ್ರೇರಿತ ಕಿಯಾ ಇವಿ6 ಅನಾವರಣ

2020ರಲ್ಲೇ ಅಮೆರಿಕ ಮತ್ತು ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಬರೋಬ್ಬರಿ 8 ಲಕ್ಷಕ್ಕೂ ಅಧಿಕ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದ್ದು, ಡೀಸೆಲ್ ಕಾರುಗಳ ಮಾರಾಟದಲ್ಲಿ ಸಾಕಷ್ಟು ಇಳಿಕೆಯಾಗಿದೆ.

ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಿಗಾಗಿ ಹೊಸ ಲೊಗೊ ಪ್ರೇರಿತ ಕಿಯಾ ಇವಿ6 ಅನಾವರಣ

ಡೀಸೆಲ್ ಕಾರುಗಳ ಬಳಕೆಗೆ ಹಲವಾರು ನಿರ್ಬಂಧ ವಿಧಿಸುತ್ತಿರುವುದೇ ಎಲೆಕ್ಟ್ರಿಕ್ ವಾಹನಗಳ ಮಾರಾಟ ಮತ್ತು ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ವಾಹನ ಉತ್ಪಾದನಾ ಕಂಪನಿಗಳು ಸಹ ಹಲವಾರು ಹೊಸ ಇವಿ ಮಾದರಿಗಳನ್ನು ಬಿಡುಗಡೆ ಮಾಡುತ್ತಿವೆ.

ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಿಗಾಗಿ ಹೊಸ ಲೊಗೊ ಪ್ರೇರಿತ ಕಿಯಾ ಇವಿ6 ಅನಾವರಣ

ದಕ್ಷಿಣ ಕೊರಿಯಾದ ಕಿಯಾ ಮೋಟಾರ್ಸ್ ಕಂಪನಿಯು ಇವಿ ವಾಹನ ಮಾರಾಟದಲ್ಲಿ ಹೊಸ ನೀರಿಕ್ಷೆಯೊಂದಿಗೆ ವಿವಿಧ ಇವಿ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಅಮರಿಕಾ ಮಾರುಕಟ್ಟೆಗಾಗಿ ಹೊಸ ತಂತ್ರಜ್ಞಾನ ಪ್ರೇರಿತ ಇವಿ6 ಕ್ರಾಸ್ ಓವರ್ ಎಸ್‌ಯುವಿ ಮಾದರಿಯನ್ನು ಅಭಿವೃದ್ದಿಗೊಳಿಸಿ ಅನಾವರಣಗೊಳಿಸಿದೆ.

ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಿಗಾಗಿ ಹೊಸ ಲೊಗೊ ಪ್ರೇರಿತ ಕಿಯಾ ಇವಿ6 ಅನಾವರಣ

ಅಮೆರಿಕದ ನ್ಯೂಯಾರ್ಕ್ ಟೈಮ್ಸ್ ಸ್ಕ್ವೇರ್‌ನಲ್ಲಿ ಹೊಸ ಇವಿ6 ಕಾರನ್ನು ಅನಾವರಣಗೊಳಿಸಿರುವ ಕಿಯಾ ಮೋಟಾರ್ಸ್ ಕಂಪನಿಯು ಈ ವರ್ಷಾಂತ್ಯಕ್ಕೆ ಇಲ್ಲವೇ 2022ರ ಆರಂಭದಲ್ಲಿ ಕಾರು ವಿತರಣೆ ಆರಂಭಿಸುವ ಸುಳಿವು ನೀಡಿದ್ದು, ಹೊಸ ಕಾರನ್ನು ವಿಶೇಷವಾಗಿ ಅಮೆರಿಕ ಮಾರುಕಟ್ಟೆಗಾಗಿಯೇ ಹಲವು ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ಜೋಡಣೆ ಮಾಡಿದೆ.

ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಿಗಾಗಿ ಹೊಸ ಲೊಗೊ ಪ್ರೇರಿತ ಕಿಯಾ ಇವಿ6 ಅನಾವರಣ

ವಾಹನಗಳ ಗುಣಮಟ್ಟ, ಸುರಕ್ಷತೆಗೆ ಹಲವಾರು ಮಾನದಂಡಗಳನ್ನು ಕಡ್ಡಾಯಗೊಳಿಸಿರುವ ಅಮೆರಿಕದಲ್ಲಿ ಒಂದು ಬೇಸಿಕ್ ಕಾರು ಮಾದರಿಯು ಕೂಡಾ ಹಲವಾರು ಸೇಫ್ಟಿ ಫೀಚರ್ಸ್‌ಗಳನ್ನು ಪಡೆದುಕೊಂಡಿರಲಿದ್ದು, ಮಧ್ಯಮ ಕ್ರಮಾಂಕದ ಐಷಾರಾಮಿ ಕಾರು ಮಾದರಿಯಾಗಿ ಬಿಡುಗಡೆಯಾಗಲಿರುವ ಇವಿ6 ಮಾದರಿಯಲ್ಲಿ ಸಾಕಷ್ಟು ಹೊಸ ಫೀಚರ್ಸ್‌ಗಳನ್ನು ನೀಡಲಾಗಿದೆ.

ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಿಗಾಗಿ ಹೊಸ ಲೊಗೊ ಪ್ರೇರಿತ ಕಿಯಾ ಇವಿ6 ಅನಾವರಣ

ಹೊಸ ಇವಿ6 ಕ್ರಾಸ್ ಓವರ್ ಎಸ್‌ಯುವಿ ಮಾದರಿಯು ಇ-ಜಿಎಂಪಿ ಪ್ಲ್ಯಾಟ್‌ಫಾರ್ಮ್ ಆಧರಿಸಿ ಅಭಿವೃದ್ದಿಗೊಂಡಿದ್ದು, 576-ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯ ಹೊಂದಿರುವ ಹೊಸ ಕಾರು 400ವಿ ಮತ್ತು 800ವಿ ಸೂಪರ್ ಫಾಸ್ಟ್ ಚಾರ್ಜಿಂಗ್ ಸರ್ಪೋಟ್ ಹೊಂದಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಿಗಾಗಿ ಹೊಸ ಲೊಗೊ ಪ್ರೇರಿತ ಕಿಯಾ ಇವಿ6 ಅನಾವರಣ

ಹೊಸ ಕಾರು ಪ್ರತಿ ಚಾರ್ಜ್‌ಗೆ ಗರಿಷ್ಠ 480 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಸೂಪರ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯದೊಂದಿಗೆ ಅತಿ ಕಡಿಮೆ ಅವಧಿಯಲ್ಲಿ ಗರಿಷ್ಠ ಪ್ರಮಾಣ ಚಾರ್ಜ್ ಮಾಡಬಹುದಾಗಿದೆ.

ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಿಗಾಗಿ ಹೊಸ ಲೊಗೊ ಪ್ರೇರಿತ ಕಿಯಾ ಇವಿ6 ಅನಾವರಣ

ಸೂಪರ್ ಫಾಸ್ಟ್ ಚಾರ್ಜರ್ ಮೂಲಕ ಕೇವಲ 5 ನಿಮಿಷ ಚಾರ್ಜ್ ‌ಮಾಡಿದರೆ 112 ಕಿ.ಮೀ ಮೈಲೇಜ್ ಪಡೆದುಕೊಳ್ಳಬಹುದಾಗಿದ್ದು, 18 ನಿಮಿಷ ಚಾರ್ಜ್ ಮಾಡಿದ್ದಲ್ಲಿ 330 ಕಿ.ಮೀ ಮೈಲೇಜ್ ಪಡೆದುಕೊಳ್ಳಬಹುದಾಗಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಿಗಾಗಿ ಹೊಸ ಲೊಗೊ ಪ್ರೇರಿತ ಕಿಯಾ ಇವಿ6 ಅನಾವರಣ

ಪೂರ್ಣ ಪ್ರಮಾಣದಲ್ಲಿ ಚಾರ್ಜ್ ಮಾಡಲು 50 ನಿಮಿಷ ಕಾಲ ಸಮಯಾವಕಾಶ ತೆಗೆದುಕೊಳ್ಳಲಿದ್ದು, ಪೂರ್ಣ ಪ್ರಮಾಣದಲ್ಲಿ ಚಾರ್ಜ್ ಆದಲ್ಲಿ 480 ಕಿ.ಮೀ ಮೈಲೇಜ್ ಹಿಂಪಡೆಯಬಹುದಾಗಿದೆ. ಹೊಸ ಕಾರಿನಲ್ಲಿ ಹಲವಾರು ಹೊಸ ತಂತ್ರಜ್ಞಾನ ಪ್ರೇರಿತ ಫೀಚರ್ಸ್‌ಗಳಿಂದಾಗಿ ತುಸು ದುಬಾರಿಯಾಗಿರಲಿದ್ದು, ಈ ಹೊಸ ಕಾರು ಅಮೆರಿಕ ಮತ್ತು ಯುರೋಪಿನ ಕೆಲವೇ ಕೆಲವು ರಾಷ್ಟ್ರಗಳಿಗಾಗಿ ಮಾತ್ರ ಅಭಿವೃದ್ದಿಪಡಿಸಲಾಗಿದೆ ಎನ್ನಲಾಗಿದೆ.

Most Read Articles

Kannada
English summary
KIA Showcases New EV6 Electric SUV In US Market With New Brand Logo. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X