2021ರಲ್ಲಿ 25 ಸಾವಿರಕ್ಕೂ ಹೆಚ್ಚು ಸೊನೆಟ್ ಎಸ್‍ಯುವಿಗಳನ್ನು ಮಾರಾಟ ಮಾಡಿದ ಕಿಯಾ ಮೋಟಾರ್ಸ್
ಕಿಯಾ ಮೋಟಾರ್ಸ್ ಕಂಪನಿಯು ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ಸೊನೆಟ್ ಕಾಂಪ್ಯಾಕ್ಟ್ ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಯಿತು. ಸೆಲ್ಟೋಸ್ ಬಳಿಕ ಕಿಯಾ ಮೋಟಾರ್ಸ್ ಮೂರನೇ ಮಾದರಿಯಾಗಿ ಸೊನೆಟ್ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿತ್ತು.

ಕಡಿಮೆ ಅವಧಿಯಲ್ಲಿ ಕಿಯಾ ಸೆಲ್ಟೋಸ್ ಹೆಚ್ಚು ಮಾರಾಟವಾದ ವಾಹನಗಳಲ್ಲಿ ಒಂದಾಗಿದೆ. ಕಿಯಾ ಮೋಟಾರ್ಸ್ ಕಳೆದ ವರ್ಷದ ಸೊನೆಟ್ ಕಾಂಪ್ಯಾಕ್ಟ್ ಎಸ್‌ಯುವಿಯ 38,363 ಯುನಿಟ್‌ಗಳನ್ನು ಮಾರಾಟ ಮಾಡುವಲ್ಲಿ ಯಶಸ್ವಿಯಾಗಿದೆ, ಇನ್ನು ಈ ವರ್ಷದ 3 ತಿಂಗಳಲ್ಲಿ (ಜನವರಿ-ಮಾರ್ಚ್) ಅವಧಿಯಲ್ಲಿ ಸೊನೆಟ್ ಸಬ್ ಕಾಂಪ್ಯಾಕ್ಟ್ ಎಸ್‌ಯುವಿಯ 25,000ಕ್ಕೂ ಹೆಚ್ಚು ಯುನಿಟ್ ಗಳನ್ನು ಮಾರಾಟಗೊಳಿಸಿವೆ.

ಸೊನೆಟ್ ತನ್ನ ಪ್ರತಿಸ್ಪರ್ಧಿಗಳಾದ ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ 300, ಫೋರ್ಡ್ ಇಕೋಸ್ಪೋರ್ಟ್, ಟೊಯೋಟಾ ಅರ್ಬನ್ ಕ್ರೂಸರ್, ಮತ್ತು ಹೋಂಡಾ ಡಬ್ಲ್ಯುಆರ್-ವಿ ಸಬ್ ಕಾಂಪ್ಯಾಕ್ಟ್ ಎಸ್‌ಯುವಿಗಳಿಗೆ ಉತ್ತಮ ಪೈಪೋಟಿ ನೀಡುತ್ತಿದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಈ ಸೊನೆಟ್ ಕಾಂಪ್ಯಾಕ್ಟ್ ಎಸ್‍ಯುವಿಯ ಪೆಟ್ರೋಲ್ ಮತ್ತು ಎರಡು ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿದೆ. ಇದರಲ್ಲಿ 1.2-ಲೀಟರ್ ಯುನಿಟ್ ಮತ್ತು 1.0-ಲೀಟರ್ ಟರ್ಬೊ-ಚಾರ್ಜ್ಡ್ ಪೆಟ್ರೋಲ್ ಅನ್ನು ಹೊಂದಿದೆ.

ಕಿಯಾ ಸೊನೆಟ್ ಕಾಂಪ್ಯಾಕ್ಟ್ ಎಸ್‍ಯುವಿಯ 1.2-ಲೀಟರ್ ಎಂಜಿನ್ 84 ಬಿಹೆಚ್‌ಪಿ ಪವರ್ ಮತ್ತು 115 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಇನ್ನು ಟಾಪ್ ಸ್ಪೆಕ್ ಮಾದರಿಯಲ್ಲಿರುವ 1.0-ಲೀಟರ್ ಎಂಜಿನ್ 119 ಬಿಹೆಚ್‌ಪಿ ಪವರ್ ಮತ್ತು 172 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 7 ಅಥವಾ 6-ಸ್ಪೀಡ್ ಐಎಂಟಿ ಅನ್ನು ಜೋಡಿಸಲಾಗಿದೆ.

ಇನ್ನು ಈ ಕಾಂಪ್ಯಾಕ್ಟ್ ಎಸ್‍ಯುವಿಯ ಡೀಸೆಲ್ ಎಂಜಿನ್ ಬಗ್ಗೆ ಹೇಳುವುದಾದರೆ, 1.5-ಲೀಟರ್ ಡೀಸೆಲ್ ಡಬ್ಲ್ಯುಜಿಟಿ ಎಂಜಿನ್ 99 ಬಿಹೆಚ್‌ಪಿ ಪವರ್ ಮತ್ತು 240 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ವಿಜಿಟಿ ಎಂಜಿನ್ 114 ಬಿಹೆಚ್‌ಪಿ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸೊನೆಟ್ ಬಿಡುಗಡೆಯಾದ ಆರಂಭದಲ್ಲೇ ಅತಿ ಹೆಚ್ಚು ಪೈಪೋಟಿ ಹೊಂದಿರುವ ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗದಲ್ಲಿ ಹೊಸ ಸಂಚಲನ ಮೂಡಿಸಿದೆ. ಕಿಯಾ ಸೊನೆಟ್ ದೇಶಿಯ ಮಾರುಕಟ್ಟೆಯಲ್ಲಿ ತನ್ನ ಪ್ರತಿಸ್ಪರ್ಧಿಗಳಿಗೆ ಪ್ರಬಲ ಪೈಪೋಟಿಯನ್ನು ನೀಡುತ್ತಿದೆ.

ಗ್ರಾಹಕರು ಕಿಯಾ ಕಾರುಗಳ ಆಕರ್ಷಕ ಲುಕ್ ಮತ್ತು ಅತ್ಯಾಧುನಿಕ ಫೀಚರ್ಸ್‌ಗಳಿಗೆ ಫಿಧಾ ಆಗಿದ್ದಾರೆ. ಕಿಯಾ ಮೋಟಾರ್ಸ್ ಹಲವು ಮಾರುಕಟ್ಟೆಯಲ್ಲಿ ಕಡಿಮೆ ಅವಧಿಯಲ್ಲಿ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಸಿಯಾಗಿದೆ. ಅದು ಕಿಯಾ ಕಾರುಗಳ ಸ್ಪೆಷಾಲಿಟಿ ಎಂದೇ ಹೇಳಬಹುದು.


Click it and Unblock the Notifications








