Just In
- 10 hrs ago
ಹೊಸ ಫೀಚರ್ಸ್ಗಳನ್ನು ಪಡೆಯಲಿದೆ ನ್ಯೂ ಜನರೇಷನ್ ಫೋಕ್ಸ್ವ್ಯಾಗನ್ ಪೊಲೊ
- 12 hrs ago
ಫೋರ್ಡ್ ಮುಸ್ಟಾಂಗ್ ಕಾರಿನಂತೆ ಮಾಡಿಫೈಗೊಂಡ ಬಲೆನೊ ಸೆಡಾನ್ ಕಾರು
- 14 hrs ago
ವಾರದ ಸುದ್ದಿ: ಸಿಟ್ರನ್ ಕಾರು ಬಿಡುಗಡೆ, ಹೊಸ ವಾಹನ ಬೆಲೆ ಹೆಚ್ಚಳ, ಅಲ್ಕಾಜರ್ ಅನಾವರಣ, ಯುಗಾದಿ ಆಫರ್ ಘೋಷಣೆ!
- 24 hrs ago
ಎಕ್ಸ್ಯುವಿ700 ಎಸ್ಯುವಿ ಕಾರಿನ ಮತ್ತಷ್ಟು ಹೊಸ ಮಾಹಿತಿ ಹಂಚಿಕೊಂಡ ಮಹೀಂದ್ರಾ
Don't Miss!
- Sports
ದಿನೇಶ್ ಕಾರ್ತಿಕ್ ನನಗೆ ಸಂಪೂರ್ಣ ಬೆಂಬಲವನ್ನು ನೀಡುತ್ತಿದ್ದಾರೆ: ಇಯಾನ್ ಮಾರ್ಗನ್
- News
ನಾರ್ವೆ ಪ್ರಧಾನಿಗೆ ವಿಧಿಸಿದ 1.71 ಲಕ್ಷ ರೂ. ದಂಡದ ಹಿಂದಿನ ಕುತೂಹಲಕಾರಿ ಕಾರಣ?
- Movies
ಸೋನು ಸೂದ್ಗೆ ವಿಶೇಷ ಗೌರವ ನೀಡಿದ ಪಂಜಾಬ್ ಸರ್ಕಾರ
- Finance
ಟಾಪ್ 10ರಲ್ಲಿ 4 ಕಂಪನಿಗಳ ಮೌಲ್ಯ 1.14 ಲಕ್ಷ ಕೋಟಿ ರುಗೇರಿಕೆ
- Lifestyle
ವಾರ ಭವಿಷ್ಯ:ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
Bank Of Baroda Recruitment 2021: 512 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸೊನೆಟ್ 7 ಸೀಟರ್ ಎಸ್ಯುವಿ ಅನಾವರಣಗೊಳಿಸಿಸಿದ ಕಿಯಾ ಮೋಟಾರ್ಸ್
ಕಿಯಾ ಮೋಟಾರ್ಸ್ ಕಂಪನಿಯು ಭಾರತ ಸೇರಿದಂತೆ ವಿಶ್ವದ ಪ್ರಮುಖ 80ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕಾರು ಮಾರಾಟ ಸೌಲಭ್ಯವನ್ನು ಹೊಂದಿದ್ದು, ಕಂಪನಿಯು ಶೀಘ್ರದಲ್ಲೇ ಅಂತರ್ರಾಷ್ಟ್ರೀಯ ಮಾರುಕಟ್ಟೆಗಳಿಗಾಗಿ ಹಲವಾರು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುತ್ತಿದೆ.

ಹೊಸ ಕಾರುಗಳ ಪಟ್ಟಿಯಲ್ಲಿ ಕಿಯಾ ಸೊನೆಟ್ 7 ಸೀಟರ್ ಮಾದರಿ ಕೂಡಾ ಒಂದಾಗಿದ್ದು, ಹೊಸ ಕಾರು ಮಾದರಿಯನ್ನು ಕಂಪನಿಯು ಇಂದು ಇಂಡೋನೇಷ್ಯಾ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಉದ್ದೇಶದೊಂದಿಗೆ ಇಂಡೋನೇಷ್ಯಾ ಹೊಸ ಕಾರು ಮಾದರಿಯ ಚಿತ್ರಗಳನ್ನು ಬಹಿರಂಗಪಡಿಸಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಇಂಡೋನೇಷ್ಯಾದಲ್ಲಿ ಹೊಸ ಕಾರು ಮಾರಾಟಗೊಳ್ಳಲಿದೆ.

ಇಂಡೋನೇಷ್ಯಾದಲ್ಲಿ ಬಿಡುಗಡೆಯ ನಂತರ ವಿವಿಧ ಮಾರುಕಟ್ಟೆಗಳಲ್ಲಿ ಹೊಸ ಕಾರು ಮಾರಾಟ ವಿಸ್ತರಣೆ ಮಾಡಲಿರುವ ಕಂಪನಿಯು ಭಾರತದಲ್ಲೂ ಹೊಸ ಕಾರು ಬಿಡುಗಡೆಯ ಸಿದ್ದತೆಯಲ್ಲಿದ್ದು, ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ.

ಭಾರತದಲ್ಲಿ ಸದ್ಯ 5 ಸೀಟರ್ ಸೌಲಭ್ಯದೊಂದಿಗೆ ಕಂಪ್ಯಾಕ್ಟ್ ಎಸ್ಯುವಿ ಮಾರಾಟದಲ್ಲಿ ಉತ್ತಮ ಬೇಡಿಕೆ ಹೊಂದಿರುವ ಸೊನೆಟ್ ಕಾರು ಮಾದರಿಯು ಮೂರನೇ ಸಾಲಿನ ಆಸನದೊಂದಿಗೆ 7 ಸೀಟರ್ ಸೌಲಭ್ಯ ಪಡೆದುಕೊಳ್ಳಲಿದೆ.

ಮಧ್ಯಮ ಕ್ರಮಾಂಕದ ಕಾರುಗಳಲ್ಲಿ ಸದ್ಯ 7 ಸೀಟರ್ ಆವೃತ್ತಿಗಳನ್ನು ಪರಿಚಯಿಸುತ್ತಿರುವುದು ಗ್ರಾಹಕರ ಆಕರ್ಷಣೆಗೆ ಕಾರಣವಾಗಿದ್ದು, ಕಿಯಾ ಮೋಟಾರ್ಸ್ ಕಂಪನಿಯು ಸಹ ಸೊನೆಟ್ ಕಾರಿನಲ್ಲಿ 7 ಸೀಟಟರ್ ಮಾದರಿಯ ಬಿಡುಗಡೆಗೆ ಸಿದ್ದವಾಗಿದೆ. ಸದ್ಯ ಇಂಡೋನೇಷ್ಯಾದಲ್ಲಿ ಮಾರಾಟಕ್ಕೆ ಸಿದ್ದವಾಗಿರುವ ಸೊನೆಟ್ ಕಾರು ಮಾದರಿಯು ಭಾರತದಿಂದಲೇ ಪೂರ್ಣ ಪ್ರಮಾಣದಲ್ಲಿ ರಫ್ತುಗೊಳ್ಳಲಿದ್ದು, ಆಂಧ್ರಪ್ರದೇಶದ ಅನಂತಪುರದಲ್ಲಿರುವ ಕಿಯಾ ಕಾರು ಘಟಕದಲ್ಲಿ ಸಿದ್ದಗೊಳ್ಳುತ್ತಿದೆ.

ಹೊಸ ಕಾರು ಇಂಡೋನೇಷ್ಯಾದಲ್ಲಿ 1.5-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದ್ದು, ಭಾರತದಲ್ಲಿ ಸದ್ಯ ಸೊನೆಟ್ ಸಾಮಾನ್ಯ ಕಾರು ಮಾದರಿಯು 1.0-ಲೀಟರ್ ಟರ್ಬೊ, 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದೆ.

ಆದರೆ ಭಾರತದಲ್ಲಿರುವ ಕಾರು ಮಾದರಿಯ ಎಂಜಿನ್ ಆಯ್ಕೆಯ ಕುರಿತಾಗಿ ಯಾವುದೇ ಸ್ಪಷ್ಟ ಮಾಹಿತಿಯಿಲ್ಲವಾದರೂ ಹೊಸ ಕಾರು ಸೆಲ್ಟೊಸ್ ಮಾದರಿಯಲ್ಲಿನ 1.5-ಲೀಟರ್ ಪೆಟ್ರೋಲ್ ಅಥವಾ 1.5-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಳ್ಳಬಹುದಾಗಿದೆ.

ಇದರ ಜೊತೆಗೆ ಭಾರತದಲ್ಲಿ ಕಿಯಾ ಕಂಪನಿಯು ಸೊನೆಟ್ ಮಾದರಿಯಲ್ಲೇ 7 ಸೀಟರ್ ಮಾದರಿಯನ್ನು ಅಭಿವೃದ್ದಿಗೊಳಿಸಿದೆ ಅಥವಾ ಸಂಪೂರ್ಣವಾಗಿ ಹೊಸ ಕಾರು ಮಾದರಿಯನ್ನೇ ನಿರ್ಮಾಣ ಮಾಡುತ್ತಿದೆ ಎನ್ನುವ ಕುರಿತು ಕೆಲವು ಗೊಂದಲಗಳಿದ್ದು, ಶೀಘ್ರದಲ್ಲೇ ಕಾರು ಖರೀದಿದಾರರ ಗೊಂದಲಕ್ಕೆ ತೆರೆ ಎಳೆಯಲು ಸಿದ್ದವಾಗಿದೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಭಾರತದಲ್ಲಿ ಕಿಯಾ ಮೋಟಾರ್ಸ್ ಕಂಪನಿಯು 7 ಸೀಟರ್ ಎಸ್ಯುವಿ ಬದಲಾಗಿ ಮಾರುತಿ ಎರ್ಟಿಗಾ ಮತ್ತು ಟೊಯೊಟಾ ಇನೋವಾ ಕ್ರಿಸ್ಟಾ ನಡುವಿನ ದರ ಅಂತರವನ್ನು ಸರಿದೂಗಿಸುವಂತಹ ಹೊಸ ಎಂಪಿವಿ ಮಾದರಿಯನ್ನು ಬಿಡುಗಡೆ ಮಾಡಲಿದೆ ಎನ್ನುವ ಕೆಲವು ಮಾಹಿತಿಗಳಿದ್ದು, ಒಟ್ಟಿನಲ್ಲಿ ಮುಂದಿನ ಕೆಲ ದಿನಗಳಲ್ಲಿ ಕಿಯಾ ಹೊಸ ಕಾರು ಮಾದರಿಯೊಂದು ಭಾರತದಲ್ಲಿ ಬಿಡುಗಡೆಯಾಗಲಿದೆ.

ಕಿಯಾ ಮೋಟಾರ್ಸ್ ಕಂಪನಿಯು ಭಾರತದಲ್ಲಿ ಸದ್ಯ ಸೊನೆಟ್, ಸೆಲ್ಟೊಸ್ ಮತ್ತು ಕಾರ್ನಿವಾಲ್ ಕಾರು ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಇನೋವಾ ಮತ್ತು ಎರ್ಟಿಗಾ ನಡುವಿನ ಸ್ಥಾನವನ್ನು ತುಂಬಲು ಕಿಯಾ ಮೋಟಾರ್ಸ್ ಹೊಸ ಎಂಪಿವಿ ಕಾರು ಉತ್ಪನ್ನವನ್ನು ಸಿದ್ದಪಡಿಸುತ್ತಿದೆ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!

ಸದ್ಯ ಮಾರುಕಟ್ಟೆಯಲ್ಲಿರುವ ಕಿಯಾ ಕಾರ್ನಿವಾಲ್ ಎಂಪಿವಿ ಕಾರು ಮಾದರಿಯು ಇನೋವಾ ಕ್ರಿಸ್ಟಾ ಕಾರಿಗಿಂತಲೂ ಹೆಚ್ಚಿನ ಮಟ್ಟದ ಬೆಲೆಯೊಂದಿಗೆ ಮಾರಾಟಗೊಳ್ಳುತ್ತಿದ್ದು, ಐಷಾರಾಮಿ ಕಾರು ಮಾದರಿಯಾಗಿ ಗುರುತಿಸಿಕೊಂಡಿದೆ.

ಕಾರ್ನಿವಾಲ್ ಕಾರು ಮಾದರಿಯು ಸದ್ಯ 2.2-ಲೀಟರ್ ವಿಜಿಟಿ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ. 24.95 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 33.95 ಲಕ್ಷ ಬೆಲೆ ಹೊಂದಿದ್ದು, ಹೊಸದಾಗಿ ಬಿಡುಗಡೆಯಾಗಲಿರುವ ಮಧ್ಯಮ ಕ್ರಮಾಂಕದ ಎಂಪಿವಿ ಕಾರು ಮಾದರಿಯು 1.5-ಲೀಟರ್ ಡೀಸೆಲ್ ಅಥವಾ ಪೆಟ್ರೋಲ್ ಎಂಜಿನ್ ಆಯ್ಕೆಯೊಂದಿಗೆ ಎಕ್ಸ್ಶೋರೂಂ ಪ್ರಕಾರ ರೂ. 11 ಲಕ್ಷದಿಂದ ರೂ. 15 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ.

ಪ್ರತಿ ವರ್ಷ ಎರಡು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿರುವ ಕಿಯಾ ಮೋಟಾರ್ಸ್ ಕಂಪನಿಯು ಕಾರು ಮಾರಾಟ ಆರಂಭಿದ ಒಂದೂವರೆ ವರ್ಷದಲ್ಲಿ ಮೂರು ಕಾರುಗಳನ್ನು ಬಿಡುಗಡೆ ಮಾಡಿದ್ದು, ಇದೀಗ ನಾಲ್ಕನೇ ಕಾರು ಮಾದರಿಯಾಗಿ ಮಧ್ಯಮ ಕ್ರಮಾಂಕದ ಎಂಪಿವಿ ಕಾರನ್ನು ರಸ್ತೆಗಿಳಿಸುವ ಸಿದ್ದತೆಯಲ್ಲಿದೆ.

ಕಿಯಾ ಮೋಟಾರ್ಸ್ ಹೊಸ ಎಂಪಿವಿ ಕಾರು ಮಾದರಿಯು 6 ಸೀಟರ್ ಮತ್ತು 7 ಸೀಟರ್ ಆಸನ ಸೌಲಭ್ಯಗಳೊಂದಿಗೆ ಅಭಿವೃದ್ದಿಗೊಳ್ಳಲಿದ್ದು, ಹೊಸ ಕಾರನ್ನು ಸೊನೆಟ್ ಕಂಪ್ಯಾಕ್ಟ್ ಎಸ್ಯುವಿ ಮಾದರಿಯ ಪ್ಲ್ಯಾಟ್ಫಾರ್ಮ್ ಆಧರಿಸಿ ನಿರ್ಮಾಣ ಮಾಡುವ ಸಾಧ್ಯತೆಗಳಿವೆ.