ಕೋಲ್ಕತ್ತಾ ಪೊಲೀಸ್ ಪಡೆಗೆ ಸೇರ್ಪಡೆಯಾಗಲಿವೆ Tata Nexon ಎಲೆಕ್ಟ್ರಿಕ್ ಕಾರುಗಳು

ಕೇರಳ ಪೊಲೀಸ್ ಮತ್ತು ಎಂವಿಡಿ ಇಲಾಖೆಯು ಟಾಟಾ ನೆಕ್ಸಾನ್(Tata Nexon) ಎಲೆಕ್ಟ್ರಿಕ್ ಕಾರುಗಳನ್ನು ಈಗಾಗಲೇ ಬಳಸುತ್ತಿದೆ. ಇದೀಗ ಪಶ್ಚಿಮ ಬಂಗಾಳದ ಕೊಲ್ಕತ್ತಾ ಪೊಲೀಸರು ಎಲೆಕ್ಟ್ರಿಕ್ ವಾಹನಗಳಿಗೆ ಬದಲಾಯಿಸಲು ನಿರ್ಧರಿಸಿದ್ದಾರೆ. ಇದರಿಂದ ಕೋಲ್ಕತಾ ಪೊಲೀಸರು 15 ವರ್ಷಕ್ಕಿಂತ ಹಳೆಯದಾದ ತನ್ನ ಹಳೆಯ ವಾಹನಗಳನ್ನು ಬದಲಿಸಲು ಮುಂದಾಗಿದ್ದಾರೆ.

ಕೋಲ್ಕತ್ತಾ ಪೊಲೀಸ್ ಪಡೆಗೆ ಸೇರ್ಪಡೆಯಾಗಲಿವೆ Tata Nexon ಎಲೆಕ್ಟ್ರಿಕ್ ಕಾರುಗಳು

ಕೋಲ್ಕತ್ತಾ ಪೊಲೀಸ್ ಪಡೆಯು ಟಾಟಾ ನೆಕ್ಸನ್ ಇವಿಯ 226 ಯುನಿಟ್‌ಗಳ ಖರೀದಿಗಾಗಿ ಆರ್ಡರ್ ಅನ್ನು ನೀಡಿದ್ದಾರೆ. ಈ ವಾಹನಗಳನ್ನು ಕೋಲ್ಕತಾ ಪೊಲೀಸ್ ಪಡೆಯ ವಿವಿಧ ವಿಭಾಗಗಳಲ್ಲಿ ವಿತರಿಸಲಾಗುವುದು. ಟ್ರಾಫಿಕ್ ಪೊಲೀಸ್ ಇಲಾಖೆ ಮತ್ತು ಫೋರ್ಸ್'ನ ವೈರ್ ಲೆಸ್ ವಿಭಾಗ ಕೂಡ ಹೊಸ ನೆಕ್ಸಾನ್ ಇವಿಗಳನ್ನು ಪಡೆಯುತ್ತದೆ. ಇನ್ನು ಕೋಲ್ಕತ್ತಾ ಪೋಲಿಸ್ ಪಡೆಯು ಖರೀದಿಸುವ ಮೊದಲ ಎಲೆಕ್ಟ್ರಿಕ್ ವಾಹನ ಇದಲ್ಲ. ಕೆಲವು ವರ್ಷಗಳ ಹಿಂದೆ, ಅವರು ಮಹೀಂದ್ರ ಇ2ಒ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್‌ಗಳನ್ನು ಬಳಸುತ್ತಿದ್ದರು.

ಕೋಲ್ಕತ್ತಾ ಪೊಲೀಸ್ ಪಡೆಗೆ ಸೇರ್ಪಡೆಯಾಗಲಿವೆ Tata Nexon ಎಲೆಕ್ಟ್ರಿಕ್ ಕಾರುಗಳು

ಕೆಲವು ಯುನಿಟ್ ಗಳ ಸೀಮಿತ ಬಳಕೆಗಾಗಿ ರವೀಂದ್ರ ಸರೋಬಾರ್ ಮತ್ತು ಸುಭಾಸ್ ಸರೋಬಾರ್ ಪ್ರದೇಶಗಳಲ್ಲಿ ಖರೀದಿಸಿದರು. ಬೆಳಿಗ್ಗೆ ವಾಕಿಂಗ್ ಮತ್ತು ಜಾಗಿಂಗ್‌ಗಾಗಿ ಬರುವಂತಹ ಪ್ರದೇಶಗಳಲ್ಲಿ ಮಾಲಿನ್ಯದ ಮಟ್ಟವನ್ನು ಕಡಿಮೆ ಮಾಡಲು ಪೊಲೀಸರು ಪ್ರಯತ್ನಿಸುತ್ತಾರೆ.

ಕೋಲ್ಕತ್ತಾ ಪೊಲೀಸ್ ಪಡೆಗೆ ಸೇರ್ಪಡೆಯಾಗಲಿವೆ Tata Nexon ಎಲೆಕ್ಟ್ರಿಕ್ ಕಾರುಗಳು

ಕೋಲ್ಕತಾ ಪೊಲೀಸ್ ಪಡೆಯಲ್ಲಿ ದ್ವಿಚಕ್ರ ವಾಹನಗಳು ಸೇರಿದಂತೆ 4,000 ಕ್ಕೂ ಹೆಚ್ಚು ವಾಹನಗಳಿವೆ. ಕೋಲ್ಕತ್ತಾ ಪೊಲೀಸ್ ಪಡೆಯು ವಾಯುಮಾಲಿನ್ಯ ಕಡಿಮೆ ಮಾಡಲು ಪೊಲೀಸರು 15 ವರ್ಷಕ್ಕಿಂತ ಹಳೆಯದಾದ ವಾಹನಗಳನ್ನು ಬದಲಾಯಿಸುತ್ತಿದೆ.

ಕೋಲ್ಕತ್ತಾ ಪೊಲೀಸ್ ಪಡೆಗೆ ಸೇರ್ಪಡೆಯಾಗಲಿವೆ Tata Nexon ಎಲೆಕ್ಟ್ರಿಕ್ ಕಾರುಗಳು

ಆರಂಭದಲ್ಲಿ, ಎಲೆಕ್ಟ್ರಿಕ್ ವಾಹನಗಳನ್ನು ಟ್ರಾಫಿಕ್ ಗಾರ್ಡ್‌ಗಳು ಮತ್ತು ಇತರ ಘಟಕಗಳಿಗೆ ನೀಡಲಾಗುವುದು, ಅದು ಸಾಮಾನ್ಯವಾಗಿ ದಿನಕ್ಕೆ 100 ಕಿಮೀಗಿಂತ ಹೆಚ್ಚು ವಾಹನವನ್ನು ಚಲಾಯಿಸುವುದಿಲ್ಲ. ಅವರು ನಿಯತಕಾಲಿಕವಾಗಿ ರೀಚಾರ್ಜ್ ಮಾಡಬೇಕಾಗಿರುವುದರಿಂದ, ಯಾವ ಯೂನಿಟ್‌ಗಳು ಸೇವೆ ಮಾಡಲು ಸೂಕ್ತವೆಂದು ಪರಿಶೀಲಿಸಿ ನೀಡುತ್ತಾರೆ

ಕೋಲ್ಕತ್ತಾ ಪೊಲೀಸ್ ಪಡೆಗೆ ಸೇರ್ಪಡೆಯಾಗಲಿವೆ Tata Nexon ಎಲೆಕ್ಟ್ರಿಕ್ ಕಾರುಗಳು

ಎಲೆಕ್ಟ್ರಿಕ್ ವಾಹನದಿಂದ ಎಲೆಕ್ಟ್ರಿಕ್ ಚಾರ್ಜ್ ಸರಾಸರಿ ವೆಚ್ಚವು ಪ್ರತಿ ಕಿಲೋಮೀಟರಿಗೆ ರೂ 0.90 ರಿಂದ ರೂ.1 ರ ನಡುವೆ ಇರಬೇಕು ಎಂದು ನಾವು ಲೆಕ್ಕ ಹಾಕಿದ್ದೇವೆ. ಮತ್ತೊಂದೆಡೆ, ಡೀಸೆಲ್ ಅಥವಾ ಪೆಟ್ರೋಲ್ ಚಾಲಿತ ವಾಹನದ ಸರಾಸರಿ ಇಂಧನ ಬೆಲೆ ಪ್ರತಿ ಕಿಲೋಮೀಟರಿಗೆ ಸುಮಾರು ರೂ.8.5 ಆಗಿದೆ.

ಕೋಲ್ಕತ್ತಾ ಪೊಲೀಸ್ ಪಡೆಗೆ ಸೇರ್ಪಡೆಯಾಗಲಿವೆ Tata Nexon ಎಲೆಕ್ಟ್ರಿಕ್ ಕಾರುಗಳು

ಇನ್ನು ಕೋಲ್ಕತ್ತಾ ಪೊಲೀಸ್ ಪಡೆಗೆ ಸೇರ್ಪಡೆಯಾಗಲಿವೆ ಟಾಟಾ ನೆಕ್ಸನ್ ಎಲೆಕ್ಟ್ರಿಕ್ ಕಾರುಗಳ ಬಗ್ಗೆ ಹೇಳುವುದಾದರೆ, ಈ ನೆಕ್ಸಾನ್ ಎಲೆಕ್ಟ್ರಿಕ್ ಭಾರತದಲ್ಲಿ ಹೆಚ್ಚು ಮಾರಾಟವಾದ ಪ್ರಯಾಣಿಕರ ಎಲೆಕ್ಟ್ರಿಕ್ ಕಾರು ಆಗಿದೆ. ಅಲ್ಲದೇ ಇದು ಜಿಪ್ಟ್ರಾನ್ ತಂತ್ರಜ್ಞಾನವನ್ನು ಆಧರಿಸಿದ ಮೊದಲ ವಾಹನವಾಗಿದ್ದು, ಮುಂಬರುವ ಟಾಟಾ ಇವಿಗಳಿಗೆ ಕಾರಣವಾಗಿದೆ. ಭಾರತದಲ್ಲಿ ಈ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ನೆಕ್ಸಾನ್ ಇವಿ ಶೇ.6.8 ಕ್ಕಿಂತ ಹೆಚ್ಚು ಮಾರುಕಟ್ಟೆ ಪಾಲನ್ನು ಗಳಿಸಿದೆ.

ಕೋಲ್ಕತ್ತಾ ಪೊಲೀಸ್ ಪಡೆಗೆ ಸೇರ್ಪಡೆಯಾಗಲಿವೆ Tata Nexon ಎಲೆಕ್ಟ್ರಿಕ್ ಕಾರುಗಳು

ಈ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನಲ್ಲಿ ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್, ಸನ್‌ರೂಫ್, ರೈನ್ ಸೆನ್ಸಾಸಿಂಗ್, ಇಂಟಿಗ್ರೇಟೆಡ್ ಟರ್ನ್ ಇಂಡೀಕೇಟರ್, ಎಲ್ಲಾ ಪವರ್ ವಿಂಡೋಸ್, ಕೀಲೆಸ್ ಎಂಟ್ರಿ ಅಂಡ್ ಗೋ, ಕೂಲ್ಡ್ ಗ್ಲೋವ್ ಬಾಕ್ಸ್, ಹ್ಯಾಂಡ್ಸ್-ಫ್ರೀ ಟೈಲ್‌ಗೇಟ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು ಮತ್ತು ಎಲ್ಇಡಿ ಟೈಲ್‌ಲ್ಯಾಂಪ್‌ಗಳನ್ನು ಒಳಗೊಂಡಿವೆ.

ಕೋಲ್ಕತ್ತಾ ಪೊಲೀಸ್ ಪಡೆಗೆ ಸೇರ್ಪಡೆಯಾಗಲಿವೆ Tata Nexon ಎಲೆಕ್ಟ್ರಿಕ್ ಕಾರುಗಳು

ಈ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನಲ್ಲಿ ಸುರಕ್ಷತೆಗಾಗಿ ಹೆಚ್ಚಿನ ಪ್ರಮುಖ್ಯತೆಯನ್ನು ನೀಡಿದ್ದು, ಇದಕ್ಕಾಗಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ವಿಥ್ ಇಬಿಡಿ, ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್ ಸಿಸ್ಟಮ್, ರಿಯರ್ ಪಾರ್ಕಿಂಗ್ ಕ್ಯಾಮೆರಾ ಮತ್ತು ಐಎಸ್‌ಒಫಿಕ್ಸ್ ಚೈಲ್ಡ್ ಸೀಟ್ ಅನ್ನು ನೀಡಿದ್ದಾರೆ.

ಕೋಲ್ಕತ್ತಾ ಪೊಲೀಸ್ ಪಡೆಗೆ ಸೇರ್ಪಡೆಯಾಗಲಿವೆ Tata Nexon ಎಲೆಕ್ಟ್ರಿಕ್ ಕಾರುಗಳು

ಈ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನಲ್ಲಿ ಸಿಂಕ್ರೊನಸ್ ಮೋಟರ್ ಅನ್ನು ಹೊಂದಿದೆ. ಇದರಲ್ಲಿ 30.2 ಕಿಲೋವ್ಯಾಟ್ ಲಿಥಿಯಂ-ಐಯಾನ್ ಬ್ಯಾಟರಿಯನ್ನು ಹೊಂದಿದೆ. ಈ ಇವಿ ಮಾದರಿಯು ಒಟ್ಟು 127 ಬಿಹೆಚ್‌ಪಿ ಮತ್ತು 245 ಎನ್‌ಎಂ ಗರಿಷ್ಠ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಲೆಕ್ಟ್ರಿಕ್ ಕಾರು ಕೇವಲ 9.9 ಸೆಕೆಂಡುಗಳಲ್ಲಿ 100 ಕಿ.ಮೀ ವೇಗವನ್ನು ಕ್ರಮಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಎಆರ್ಎಐ ಪ್ರಕಾರ ಈ ನೆಕ್ಸಾನ್ ಇವಿ ಮಾದರಿಯು 312 ಕಿ.ಮೀ ರೇಂಜ್ ಅನ್ನು ನೀಡುತ್ತದೆ.

ಕೋಲ್ಕತ್ತಾ ಪೊಲೀಸ್ ಪಡೆಗೆ ಸೇರ್ಪಡೆಯಾಗಲಿವೆ Tata Nexon ಎಲೆಕ್ಟ್ರಿಕ್ ಕಾರುಗಳು

ಇನ್ನು ಇತ್ತೀಚೆಗೆ ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪಾಲುದಾರ ಸಿಪ್ರಾಡಿ ಟ್ರೇಡಿಂಗ್ ಪ್ರೈವೇಟ್ ಲಿಮಿಟೆಡ್ ಸಹಯೋಗದೊಂದಿಗೆ ನೇಪಾಳದಲ್ಲಿ ನೆಕ್ಸನ್ ಎಲೆಕ್ಟ್ರಿಕ್ ಮಾದರಿಯನ್ನು ಬಿಡುಗಡೆಗೊಳಿಸಿತ್ತು. ಈ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಎಕ್ಸ್‌ಎಂ, ಎಕ್ಸ್‌ಝಡ್ ಪ್ಲಸ್ ಮತ್ತು ಎಕ್ಸ್‌ಝಡ್‍ ಪ್ಲಸ್ ಲಕ್ಸ್ ಎನ್ನುವ ಮೂರು ಪ್ರಮುಖ ವೆರಿಯೆಂಟ್‌ಗಳಲ್ಲಿ ಲಭ್ಯವಿದೆ.

ಕೋಲ್ಕತ್ತಾ ಪೊಲೀಸ್ ಪಡೆಗೆ ಸೇರ್ಪಡೆಯಾಗಲಿವೆ Tata Nexon ಎಲೆಕ್ಟ್ರಿಕ್ ಕಾರುಗಳು

ನೇಪಾಳದಲ್ಲಿ ಬಿಡುಗಡೆಗೊಂಡ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಆರಂಭಿಕ ಬೆಲೆಯು ಎನ್‌ಪಿಆರ್ 35.99 ಲಕ್ಷವಾಗಿದೆ. ನೆಕ್ಸಾನ್ ಎಲೆಕ್ಟ್ರಿಕ್ ಕಾರು ಸಾಮಾನ್ಯ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‌ಯುವಿಯಿಂದ ಸ್ಟೈಲಿಂಗ್ ಅನ್ನು ಪಡೆದುಕೊಂಡಿದೆ. ಆದರೆ ಎಲೆಕ್ಟ್ರಿಕ್ ವಾಹನವಾಗಿರುವುದರಿಂದ ಅದಕ್ಕೆ ಅನುಗುಣವಾಗಿ ಕೆಲವು ಕಾಸ್ಮೆಟಿಕ್ ನವೀಕರಣಗಳನ್ನು ಕೂಡ ನಡೆಸಿದ್ದಾರೆ. 2020ರ ಜನವರಿಯಲ್ಲಿ ಮೊದಲ ಬಾರಿಗೆ ಭಾರತದಲ್ಲಿ ನೆಕ್ಸಾನ್ ಎಲೆಕ್ಟ್ರಿಕ್ ಕಾರನ್ನು ಭಾರತದಲ್ಲಿ ಪರಿಚಯಿಸಿದರು.

ಕೋಲ್ಕತ್ತಾ ಪೊಲೀಸ್ ಪಡೆಗೆ ಸೇರ್ಪಡೆಯಾಗಲಿವೆ Tata Nexon ಎಲೆಕ್ಟ್ರಿಕ್ ಕಾರುಗಳು

ಭಾರತೀಯ ಮಾರುಕಟ್ಟೆಯಲ್ಲಿ ಈ ನೆಕ್ಸಾನ್ ಎಲೆಕ್ಟ್ರಿಕ್ ಕಾಂಪ್ಯಾಕ್ಟ್ ಎಸ್‍ಯುವಿಯು ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಮತ್ತು ಎಂಜಿ ಝಡ್ ಎಲೆಕ್ಟ್ರಿಕ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ. ಮುಂದಿನ ದಿನಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತದೆ. ಕೈಗೆಟುಕುವ ದರ, ಹೆಚ್ಚಿನ ರೇಂಜ್ ಮತ್ತು ಆಕರ್ಷಕ ವಿನ್ಯಾಸದಿಂದ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಹೆಚ್ಚು ಜನಪ್ರಿಯತೆಯನ್ನು ಗಳಿಸಿದೆ.

Most Read Articles

Kannada
English summary
Kolkata police ordered 226 tata nexon electric suvs find here all details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X