Just In
Don't Miss!
- Sports
ಐಪಿಎಲ್ನಲ್ಲಿ ಕೆಟ್ಟ ದಾಖಲೆ ಬರೆದ ಕೂಲ್ ಕ್ಯಾಪ್ಟನ್ ಎಂಎಸ್ ಧೋನಿ
- Finance
ಶಾಲೆಯನ್ನ ಅರ್ಧಕ್ಕೆ ತೊರೆದು, 8,000 ರೂ. ವೇತನ ಪಡೆಯುತ್ತಿದ್ದ ನಿಖಿಲ್ ಕಾಮತ್ ಶತಕೋಟ್ಯಧಿಪತಿ ಆಗಿದ್ದೇಗೆ?
- News
ನೈಟ್ ಕರ್ಫ್ಯೂ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪೊಲೀಸರ ಬಿಗಿ ರೂಲ್ಸ್
- Education
Bank Of Baroda Recruitment 2021: 512 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಯುಗಾದಿ ಆರ್ಥಿಕ ಭವಿಷ್ಯ 2021: ನಿಮ್ಮ ನಕ್ಷತ್ರ ಪ್ರಕಾರ ಈ ವರ್ಷ ಆದಾಯ ಸ್ಥಿತಿ ಹೇಗಿರಲಿದೆ
- Movies
ಅಜಯ್ ದೇವಗನ್-ಅಮಿತಾಭ್ ಸಿನಿಮಾದ ಚಿತ್ರೀಕರಣಕ್ಕೆ ಕೊರೊನಾ ಅಡ್ಡಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಎಲೆಕ್ಟ್ರಿಕ್ ಬಸ್ಸುಗಳ ಬಳಕೆಯಲ್ಲಿ ಲಂಡನ್ ನಗರವನ್ನು ಹಿಂದಿಕ್ಕಿದ ಕೋಲ್ಕತ್ತಾ
ವಿಶ್ವಾದಾದ್ಯಂತ ವಾಯು ಮಾಲಿನ್ಯ ದಿನೇ ದಿನೇ ಹೆಚ್ಚಾಗುತ್ತಿರುವ ಕಾರಣಕ್ಕೆ ಬಹುತೇಕ ಎಲ್ಲಾ ದೇಶಗಳು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಆರಂಭಿಸಿವೆ. ಜನರನ್ನು ಎಲೆಕ್ಟ್ರಿಕ್ ವಾಹನಗಳತ್ತ ಆಕರ್ಷಿಸಲು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಸಬ್ಸಿಡಿ ಹಾಗೂ ರಸ್ತೆ ತೆರಿಗೆ ವಿನಾಯಿತಿಯಂತಹ ವಿಶೇಷ ಕೊಡುಗೆಗಳನ್ನು ನೀಡಲಾಗುತ್ತಿದೆ.

ಭಾರತದಲ್ಲಿಯೂ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕೇಂದ್ರ ಸರ್ಕಾರ ಮಾತ್ರವಲ್ಲದೇ, ಹಲವು ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳನ್ನು ನೀಡುತ್ತಿವೆ. ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರೂ ಸಹ ಎಲೆಕ್ಟ್ರಿಕ್ ವಾಹನಗಳಿಗೆ ಆದ್ಯತೆ ನೀಡುತ್ತಿದ್ದಾರೆ.

ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡುವಲ್ಲಿ ಪಶ್ಚಿಮ ಬಂಗಾಳ ಸರ್ಕಾರವು ಇತರ ರಾಜ್ಯಗಳಿಗಿಂತ ಸ್ವಲ್ಪ ಮುಂದಿದೆ. ಕೋಲ್ಕತ್ತಾ ನಗರದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಾಗುತ್ತಿದೆ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಅಲ್ಲಿನ ರಾಜ್ಯ ಸರ್ಕಾರದ ಪ್ರಯತ್ನದಿಂದಾಗಿ ಎಲೆಕ್ಟ್ರಿಕ್ ಬಸ್ಸುಗಳ ಬಳಕೆಯಲ್ಲಿ ಲಂಡನ್ ನಗರವನ್ನು ಹಿಂದಿಕ್ಕಿದೆ. ಹೊಸ ಅಧ್ಯಯನದ ಪ್ರಕಾರ, ಲಂಡನ್ ನಗರಕ್ಕಿಂತ ಪಶ್ಚಿಮ ಬಂಗಾಳದ ಕೋಲ್ಕತ್ತಾ ನಗರದಲ್ಲಿ ಹೆಚ್ಚಿನ ಎಲೆಕ್ಟ್ರಿಕ್ ಬಸ್ಸುಗಳನ್ನು ಬಳಸಲಾಗುತ್ತಿದೆ.

ಮಾಹಿತಿಗಳ ಪ್ರಕಾರ, ಎಲೆಕ್ಟ್ರಿಕ್ ವಾಹನಗಳನ್ನು ವೇಗವಾಗಿ ಅಳವಡಿಸಿಕೊಳ್ಳುತ್ತಿರುವ ಆರು ಜಾಗತಿಕ ಮೆಗಾ ನಗರಗಳಲ್ಲಿ ಕೋಲ್ಕತಾ ಮೂರನೇ ಸ್ಥಾನದಲ್ಲಿದೆ. ಲಂಡನ್ ನಗರಕ್ಕಿಂತ ಕೋಲ್ಕತ್ತಾದಲ್ಲಿ ಹೆಚ್ಚಿನ ಎಲೆಕ್ಟ್ರಿಕ್ ಬಸ್‌ಗಳು ಚಲಿಸುತ್ತಿವೆ ಎಂಬುದು ಗಮನಾರ್ಹ.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುತ್ತಿರುವ ಆರು ಜಾಗತಿಕ ಮೆಗಾ ನಗರಗಳಾಗಿ ಚೀನಾದ ಶೆನ್ಜೆನ್, ಚಿಲಿಯ ಸ್ಯಾಂಟಿಯಾಗೊ, ಟರ್ಕಿಯ ಇಜ್ಮಿರ್, ಇಂಗ್ಲೆಂಡಿನ ಲಂಡನ್, ಕೆನಾಡಾದ ವ್ಯಾಂಕೋವರ್ ಹಾಗೂ ಕೋಲ್ಕತಾ ನಗರಗಳನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು.

ಅಧ್ಯಯನದ ಪ್ರಕಾರ, ಚೀನಾದ ಶೆನ್ಜೆನ್ ನಗರವು ಮೊದಲ ಸ್ಥಾನದಲ್ಲಿದೆ. ಈ ನಗರದಲ್ಲಿ 99%ನಷ್ಟು ಎಲೆಕ್ಟ್ರಿಕ್ ಬಸ್ಸುಗಳು ಕಾರ್ಯನಿರ್ವಹಿಸುತ್ತಿವೆ. ಮೂರನೇ ಸ್ಥಾನದಲ್ಲಿರುವ ಕೋಲ್ಕತ್ತಾದಲ್ಲಿ 100ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್ಸುಗಳು ಕಾರ್ಯನಿರ್ವಹಿಸುತ್ತಿವೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

5,000ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್ಸುಗಳನ್ನು ಶೀಘ್ರದಲ್ಲಿಯೇ ರಸ್ತೆಗಿಳಿಸುವುದಾಗಿ ಪಶ್ಚಿಮ ಬಂಗಾಳ ಸರ್ಕಾರವು ತಿಳಿಸಿದೆ. ಈ ಎಲೆಕ್ಟ್ರಿಕ್ ಬಸ್ಸುಗಳ ಹೊರತಾಗಿ ಏಷ್ಯಾದ ಅತ್ಯಂತ ಹಳೆಯ ಟ್ರಾಮ್‌ಗಳು ಇಂದಿಗೂ ಕೋಲ್ಕತ್ತಾದಲ್ಲಿ ಕಾರ್ಯನಿರ್ವಹಿಸುತ್ತಿವೆ.

ಇವು ಕೂಡ ಲಂಡನ್ ನಗರವನ್ನು ಹಿಂದಿಕ್ಕಲು ನೆರವಾಗಿವೆ ಎಂಬುದು ಗಮನಾರ್ಹ. ಸದ್ಯಕ್ಕೆ ಬಳಕೆಯಲ್ಲಿರುವ ಎಲ್ಲಾ ಎಲೆಕ್ಟ್ರಿಕ್ ಬಸ್ಸುಗಳನ್ನು ಸ್ಥಳೀಯವಾಗಿ ಉತ್ಪಾದಿಸಲಾಗಿದೆ. ಇವುಗಳು ಪಶ್ಚಿಮ ಬಂಗಾಳದ ಎಲೆಕ್ಟ್ರಿಕ್ ವಾಹನ ಸಾರಿಗೆಗೆ ಪ್ರಮುಖ ಕೊಡುಗೆ ನೀಡುತ್ತಿವೆ.
ಗಮನಿಸಿ: ಈ ಲೇಖನದಲ್ಲಿ ಸಾಂದರ್ಭಿಕ ಚಿತ್ರಗಳನ್ನು ಬಳಸಲಾಗಿದೆ.