ಉರುಸ್ ಕಾರಿನ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಲ್ಯಾಂಬೊರ್ಗಿನಿ

ಲ್ಯಾಂಬೊರ್ಗಿನಿ ಇಂಡಿಯಾ ತನ್ನ ಉರುಸ್ ಸೂಪರ್ ಎಸ್‌ಯುವಿಯನ್ನು ದೇಶಿಯ ಮಾರುಕಟ್ಟೆಯಲ್ಲಿ 2018ರಲ್ಲಿ ಬಿಡುಗಡೆಗೊಳಿಸಿತು. ಈ ಎಸ್‌ಯುವಿ ಬಿಡುಗಡೆಯಾದ ನಂತರ ಹೆಚ್ಚು ಜನಪ್ರಿಯವಾಗಿದೆ. ಕಂಪನಿಯು ಇದುವರೆಗೂ ಈ ಕಾರಿನ ಒಟ್ಟು 100 ಯುನಿಟ್‌ಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದೆ.

ಉರುಸ್ ಕಾರಿನ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಲ್ಯಾಂಬೊರ್ಗಿನಿ

ಈ ಮೂಲಕ ಮಾರಾಟದಲ್ಲಿ ಹೊಸ ಮೈಲಿಗಲ್ಲನ್ನು ಸಾಧಿಸಿದೆ. ಉರುಸ್ ಎಸ್‌ಯುವಿಯ ಬೆಲೆ ಭಾರತದ ಎಕ್ಸ್ ಶೋರೂಂ ದರದಂತೆ ರೂ.3.1 ಕೋಟಿಗಳಾಗಿದೆ. ಈ ಎಸ್‌ಯುವಿಯಲ್ಲಿ ಐದು ಜನರು ಆರಾಮವಾಗಿ ಕುಳಿತುಕೊಳ್ಳಬಹುದು. ಲಗೇಜ್ ಇಟ್ಟು ಕೊಳ್ಳಲು ಈ ಎಸ್‌ಯುವಿಯಲ್ಲಿ ಸಾಕಷ್ಟು ಸ್ಥಳ ನೀಡಲಾಗಿದೆ. ಈ ಎಸ್‌ಯುವಿಯು ತನ್ನ ಪರ್ಫಾಮೆನ್ಸ್'ಗೂ ಹೆಸರುವಾಸಿಯಾಗಿದೆ.

ಉರುಸ್ ಕಾರಿನ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಲ್ಯಾಂಬೊರ್ಗಿನಿ

ಈ ಕಾರು ಒಳಗೆ ಹಾಗೂ ಹೊರಗೆ ವಿಶಿಷ್ಟ ವಿನ್ಯಾಸವನ್ನು ಹೊಂದಿದೆ. ಈ ಕಾರಿನ 10,000 ಯುನಿಟ್‌ಗಳನ್ನು ಉತ್ಪಾದಿಸಲಾಗಿದೆ ಎಂದು ಕಂಪನಿಯು ಕೆಲವು ತಿಂಗಳ ಹಿಂದಷ್ಟೇ ತಿಳಿಸಿತ್ತು. 2020ರ ಜೂನ್ ತಿಂಗಳಿನಲ್ಲಿ ಕಂಪನಿಯು ಉರುಸ್‌ ಎಸ್‌ಯುವಿಗಾಗಿ ಹೊಸ ಪರ್ಲ್ ಕ್ಯಾಪ್ಸುಲ್ ಹಾಗೂ ಕಾರ್ಬನ್ ಫೈಬರ್ ಬಣ್ಣವನ್ನು ಪರಿಚಯಿಸಿತು.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಉರುಸ್ ಕಾರಿನ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಲ್ಯಾಂಬೊರ್ಗಿನಿ

ಉರುಸ್, ಲ್ಯಾಂಬೊರ್ಗಿನಿ ಕಂಪನಿಯ ಹೆಚ್ಚು ಮಾರಾಟವಾದ ಕಾರುಗಳಲ್ಲಿ ಒಂದಾಗಿದೆ. ಈ ಕಾರು ಅನೇಕ ಫೀಚರ್'ಗಳನ್ನು ಹೊಂದಿದೆ. ಉರುಸ್ ಎಸ್‌ಯುವಿಯಲ್ಲಿ 4.0 ಲೀಟರ್, 8-ಸಿಲಿಂಡರ್ ಟ್ವಿನ್-ಟರ್ಬೊ ವಿ 8 ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 641 ಬಿಹೆಚ್‌ಪಿ ಪವರ್ ಹಾಗೂ 850 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ.

ಉರುಸ್ ಕಾರಿನ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಲ್ಯಾಂಬೊರ್ಗಿನಿ

ಈ ಎಂಜಿನ್ ಲ್ಯಾಂಬೊರ್ಗಿನಿ ಕಂಪನಿಯ ಅತ್ಯಂತ ಶಕ್ತಿಶಾಲಿಯಾದ ಎಂಜಿನ್ ಆಗಿದೆ. ಈ ಕಾರು ಕೇವಲ 3.6 ಸೆಕೆಂಡುಗಳಲ್ಲಿ 0-100 ಕಿ.ಮೀ ವೇಗವನ್ನು ಆಕ್ಸಲರೇಟ್ ಮಾಡುತ್ತದೆ. ಈ ಕಾರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 305 ಕಿ.ಮೀಗಳಾಗಿದೆ. ಭಾರತದಲ್ಲಿ ಹಲವು ಚಿತ್ರ ನಟರು ಹಾಗೂ ಉದ್ಯಮಿಗಳು ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಹೊಂದಿದ್ದಾರೆ.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಉರುಸ್ ಕಾರಿನ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಲ್ಯಾಂಬೊರ್ಗಿನಿ

ಈ ಎಸ್‌ಯುವಿಯು ಆಫ್-ರೋಡ್'ಗಾಗಿ ವಿಭಿನ್ನ ಚಾಲನಾ ವಿಧಾನಗಳನ್ನು ಹೊಂದಿದೆ. ಲ್ಯಾಂಬೊರ್ಗಿನಿ ಉರುಸ್ ಫೋಕ್ಸ್‌ವ್ಯಾಗನ್ ಗ್ರೂಪ್‌ನ ಎಂಎಲ್‌ಬಿ ಇವೊ ಪ್ಲಾಟ್‌ಫಾರಂನ ಮೇಲೆ ನಿರ್ಮಾಣವಾಗಿದೆ. ಈ ಪ್ಲಾಟ್‌ಫಾರಂನಲ್ಲಿಯೇ ಆಡಿ ಕ್ಯೂ 7 ಹಾಗೂ ಪೋರ್ಷೆ ಕೇನ್ ಕಾರುಗಳನ್ನು ನಿರ್ಮಿಸಲಾಗಿದೆ.

ಉರುಸ್ ಕಾರಿನ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಲ್ಯಾಂಬೊರ್ಗಿನಿ

ಲ್ಯಾಂಬೊರ್ಗಿನಿ ಉರುಸ್ ಎಸ್‌ಯುವಿಯು ಸ್ಲಿಮ್ ಆದ ಎಲ್‌ಇಡಿ ಹೆಡ್‌ಲೈಟ್ ಹಾಗೂ ಟೇಲ್ ಲೈಟ್‌ಗಳನ್ನು ಹೊಂದಿದೆ. ಈ ಎಸ್‌ಯುವಿಯ ವಿನ್ಯಾಸವು ಲ್ಯಾಂಬೊರ್ಗಿನಿ ಹುರಾಕನ್ ಸೂಪರ್ ಕಾರಿನಿಂದ ಸ್ಫೂರ್ತಿ ಪಡೆದಿದೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಉರುಸ್ ಕಾರಿನ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಲ್ಯಾಂಬೊರ್ಗಿನಿ

ಲ್ಯಾಂಬೊರ್ಗಿನಿ ಉರುಸ್ 21 ಇಂಚಿನ ಅಲಾಯ್ ವ್ಹೀಲ್'ಗಳನ್ನು ಹೊಂದಿದೆ. ಈ ಎಸ್‌ಯುವಿಯಲ್ಲಿ 22 ಹಾಗೂ 23 ಇಂಚಿನ ಅಲಾಯ್ ವ್ಹೀಲ್'ಗಳನ್ನು ಅಳವಡಿಸಬಹುದು. ಉರುಸ್, ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾದ ಲ್ಯಾಂಬೊರ್ಗಿನಿ ಕಂಪನಿಯ ಕಾರ್ ಆಗಿದೆ.

ಉರುಸ್ ಕಾರಿನ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಲ್ಯಾಂಬೊರ್ಗಿನಿ

ಕರೋನಾ ಸಾಂಕ್ರಾಮಿಕದ ನಂತರವೂ ಕಂಪನಿಯು ಉರುಸ್ ಎಸ್‌ಯುವಿಯ 52 ಯುನಿಟ್'ಗಳನ್ನು ಮಾರಾಟ ಮಾಡಿದೆ. ಈ ಎಸ್‌ಯುವಿಯನ್ನು ಬುಕ್ಕಿಂಗ್ ಮಾಡಿದ ನಂತರ ವಿತರಣೆಯನ್ನು ಪಡೆಯಲು 8-9 ತಿಂಗಳ ಕಾಲ ಕಾಯಬೇಕಾಗುತ್ತದೆ.

Most Read Articles

Kannada
English summary
Lamborghini creates new milestone in Urus super SUV sales. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X