Just In
Don't Miss!
- Movies
ಸುದೀಪ್ 'ಫ್ಯಾಂಟಮ್' ಸಿನಿಮಾದಲ್ಲಿ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್?
- News
ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ಜೆ.ಸಿ. ಮಾಧುಸ್ವಾಮಿ ರಾಜೀನಾಮೆ?
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Sports
ತವರಿಗೆ ಮರಳಿದ ಟೀಮ್ ಇಂಡಿಯಾ: ಮುಂಬೈನಲ್ಲಿ ರಹಾನೆಗೆ ಅದ್ದೂರಿ ಸ್ವಾಗತ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಉರುಸ್ ಕಾರಿನ ವಿತರಣಾ ಅವಧಿಯನ್ನು ಹೆಚ್ಚಿಸಿದ ಲ್ಯಾಂಬೊರ್ಗಿನಿ
ಲ್ಯಾಂಬೊರ್ಗಿನಿ ಉರುಸ್, ಕಂಪನಿಯ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ. ಲ್ಯಾಂಬೊರ್ಗಿನಿ ಉರುಸ್ ಭಾರತದಲ್ಲಿಯೂ ಗಮನಾರ್ಹ ಸಂಖ್ಯೆಯಲ್ಲಿ ಮಾರಾಟವಾಗುತ್ತದೆ. ಕರೋನಾ ಸಾಂಕ್ರಾಮಿಕದ ನಡುವೆಯೂ ಕಂಪನಿಯು ಈ ಕಾರಿನ 52 ಯೂನಿಟ್ ಗಳನ್ನು ಮಾರಾಟ ಮಾಡಿದೆ.

ಆದರೆ ಹೊಸ ವರ್ಷದಿಂದ ಉರುಸ್ ಕಾರನ್ನು ಬುಕ್ಕಿಂಗ್ ಮಾಡುವವರು ಈ ಕಾರನ್ನು ಪಡೆಯಲು 8-9 ತಿಂಗಳು ಕಾಯಬೇಕಾಗುತ್ತದೆ. ಉರುಸ್ ಭಾರತದಲ್ಲಿ ಹೆಚ್ಚಿನ ಬೇಡಿಕೆಯನ್ನು ಹೊಂದಿದೆ ಎಂದು ಲ್ಯಾಂಬೊರ್ಗಿನಿ ಇಂಡಿಯಾದ ಮುಖ್ಯಸ್ಥ ಶಂಬರ್ ಅಗರ್ ವಾಲ್ ಹೇಳಿದ್ದಾರೆ. ಕಂಪನಿಯು 2020ರಲ್ಲಿ ಭಾರತದಲ್ಲಿ ಉರುಸ್‌ನ ಹೊಸ ಮಾದರಿಯನ್ನು ಬಿಡುಗಡೆಗೊಳಿಸಿತ್ತು. ಈ ಕಾರಣಕ್ಕೂ ಬೇಡಿಕೆ ಹೆಚ್ಚಿದೆ. ಕಳೆದ ವರ್ಷದ ಕೊನೆಯಲ್ಲಿ ಬುಕ್ಕಿಂಗ್ ಮಾಡಲಾದ ಕಾರುಗಳನ್ನು ಈ ವರ್ಷ ವಿತರಿಸಲಾಗುವುದು.

ಕರೋನಾ ಸಾಂಕ್ರಾಮಿಕ ಅವಧಿಯಲ್ಲಿ ಕಾರು ಉತ್ಪಾದನೆಗೆ ಹಾಗೂ ಬಿಡಿಭಾಗಗಳ ಪೂರೈಕೆಗೆ ಅಡ್ಡಿಯಾಗಿದೆ. ಆದರೆ ಗ್ರಾಹಕರು ಹೆಚ್ಚು ಸಮಯ ಕಾಯಬೇಕಾಗಿಲ್ಲವೆಂದು ತಿಳಿಸಿರುವ ಕಂಪನಿಯು ತನ್ನ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುವ ಕೆಲಸವನ್ನು ಮಾಡುತ್ತಿದೆ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಕಂಪನಿಯು ಭಾರತಕ್ಕೆ ಹೊರಗಿನಿಂದ ಕಾರುಗಳನ್ನು ಆಮದು ಮಾಡಿಕೊಳ್ಳಲಿದೆ. ಈ ಕಾರುಗಳನ್ನು ನಾಕ್ ಡೌನ್ ಯೂನಿಟ್ ಆಗಿ ಆಮದು ಮಾಡಿಕೊಳ್ಳಲಾಗುವುದು. ಭಾರತದಲ್ಲಿ ಕಂಪನಿಯು ಅಸೆಂಬ್ಲಿ ಘಟಕವನ್ನು ತೆರೆದಿದೆ. ಈ ಘಟಕದಲ್ಲಿ ಕಾರುಗಳನ್ನು ಜೋಡಿಸಲಾಗುತ್ತದೆ.

ಲ್ಯಾಂಬೊರ್ಗಿನಿ ಕಂಪನಿಯು ಶೀಘ್ರದಲ್ಲೇ ಭಾರತದಲ್ಲಿ ಹುರಾಕನ್ ಇವೊ ಆರ್ ಡಬ್ಲ್ಯೂಡಿ ಕಾರನ್ನು ಸಹ ಬಿಡುಗಡೆಗೊಳಿಸಬಹುದು. ಲ್ಯಾಂಬೊರ್ಗಿನಿ ಕಂಪನಿಯು ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಉರುಸ್ ಕಾರಿನ 10,000ನೇ ಯುನಿಟ್ ಉತ್ಪಾದನೆಯನ್ನು ಪೂರ್ಣಗೊಳಿಸಿತು.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಕಂಪನಿಯು 2018ರಲ್ಲಿ ಉರುಸ್ ಎಸ್‌ಯುವಿ ಉತ್ಪಾದನೆಯನ್ನು ಮೊದಲ ಬಾರಿಗೆ ಆರಂಭಿಸಿತು. ಅಂದಿನಿಂದ ಈ ಕಾರು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗಿದೆ. ಉರುಸ್ ಕಾರಿನಲ್ಲಿ 4.0 ಲೀಟರಿನ 8-ಸಿಲಿಂಡರ್ ಟ್ವಿನ್-ಟರ್ಬೊ ವಿ 8 ಎಂಜಿನ್ ಅಳವಡಿಸಲಾಗಿದೆ.

ಈ ಎಂಜಿನ್ 641 ಬಿಹೆಚ್‌ಪಿ ಪವರ್ ಹಾಗೂ 850 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಉರುಸ್ ಲ್ಯಾಂಬೊರ್ಗಿನಿ ಕಂಪನಿಯ ಅತ್ಯಂತ ಶಕ್ತಿಶಾಲಿ ಕಾರುಗಳಲ್ಲಿ ಒಂದು. ಈ ಕಾರು ಕೇವಲ 3.6 ಸೆಕೆಂಡುಗಳಲ್ಲಿ 0-100 ಕಿ.ಮೀ ವೇಗವನ್ನು ಆಕ್ಸಲರೇಟ್ ಮಾಡುತ್ತದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಈ ಕಾರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 305 ಕಿ.ಮೀಗಳಾಗಿದೆ. ಭಾರತದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್, ಉದ್ಯಮಿ ಮುಖೇಶ್ ಅಂಬಾನಿ ಸೇರಿದಂತೆ ಹಲವಾರು ಗಣ್ಯರು ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಹೊಂದಿದ್ದಾರೆ.

ಲ್ಯಾಂಬೊರ್ಗಿನಿ ಉರುಸ್ ಫೋಕ್ಸ್‌ವ್ಯಾಗನ್ ಗ್ರೂಪ್‌ನ ಎಂಎಲ್‌ಬಿ ಇವೊ ಪ್ಲಾಟ್‌ಫಾರಂ ಅನ್ನು ಆಧರಿಸಿದೆ. ಲ್ಯಾಂಬೊರ್ಗಿನಿ ಉರುಸ್ ಕಾರು ಸ್ಲಿಮ್ ಆಗಿರುವ ಎಲ್‌ಇಡಿ ಹೆಡ್‌ಲೈಟ್ ಹಾಗೂ ಟೇಲ್ ಲೈಟ್‌ಗಳನ್ನು ಹೊಂದಿದೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಈ ಕಾರಿನ ವಿನ್ಯಾಸವು ಲ್ಯಾಂಬೊರ್ಗಿನಿ ಹುರಾಕನ್ ಸೂಪರ್ ಕಾರ್ ನಿಂದ ಸ್ಫೂರ್ತಿ ಪಡೆದಿದೆ. ಲ್ಯಾಂಬೊರ್ಗಿನಿ ಉರುಸ್ ಕಾರಿನಲ್ಲಿ 21 ಇಂಚಿನ ಅಲಾಯ್ ವ್ಹೀಲ್ ಗಳನ್ನು ಅಳವಡಿಸಲಾಗಿದೆ.