ಕೋವಿಡ್ ಲಾಕ್‌ಡೌನ್: ಹೊಸ ವಾಹನಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ಮತ್ತೆ ಕುಸಿತ

ದೇಶಾದ್ಯಂತ ಕೋವಿಡ್ 2ನೇ ಅಲೆ ಹೆಚ್ಚಿರುವುದರಿಂದ ವಿವಿಧ ರಾಜ್ಯಗಳಲ್ಲಿ ಹಲವು ಕಠಿಣ ಕ್ರಮಗಳೊಂದಿಗೆ ಲಾಕ್ಡೌನ್, ಕರ್ಫ್ಯೂ ಕ್ರಮ ಕೈಗೊಳ್ಳಲಾಗಿದ್ದು, ಹೊಸ ಸುರಕ್ಷಾ ಕ್ರಮಗಳ ಪರಿಣಾಮ ಆಟೋ ಉದ್ಯಮ ಮತ್ತೆ ನೆಲಕಚ್ಚುವ ಭೀತಿಯಲ್ಲಿದೆ.

ಕೋವಿಡ್ ಲಾಕ್‌ಡೌನ್: ಹೊಸ ವಾಹನಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ಮತ್ತೆ ಕುಸಿತ

ಕಳೆದ ವರ್ಷದ ಲಾಕ್‌ಡೌನ್‌ ಹೊಡೆತಕ್ಕೆ ಸಿಲುಕಿ ಸುಧಾರಣೆಯ ಹಾದಿಯಲ್ಲಿದ್ದ ಆಟೋ ಉದ್ಯಮವು ಇದೀಗ ಮತ್ತೆ ಸಂಕಷ್ಟ ಎದುರಿಸುತ್ತಿದ್ದು, ಮಹಾರಾಷ್ಟ್ರದಲ್ಲಿರುವ ಹಲವು ಆಟೋ ಕಂಪನಿಗಳು ಈಗಾಗಲೇ ಕನಿಷ್ಠ ಪ್ರಮಾಣದ ಉದ್ಯೋಗಿಗಳೊಂದಿಗೆ ಕಾರ್ಯನಿರ್ವಹಿಸುತ್ತಿದ್ದರೆ ಇನ್ನು ಕೆಲವು ವಾಹನ ಕಂಪನಿಗಳು ಉದ್ಯೋಗಿಗಳ ಆರೋಗ್ಯದ ದೃಷ್ಠಿಯಿಂದ ಹೊಸ ವಾಹನಗಳ ಉತ್ಪಾದನೆಯನ್ನೇ ತಾತ್ಕಾಲಿಕವಾಗಿ ಬಂದ್ ಮಾಡಿವೆ.

ಕೋವಿಡ್ ಲಾಕ್‌ಡೌನ್: ಹೊಸ ವಾಹನಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ಮತ್ತೆ ಕುಸಿತ

ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲೇ ವಾಹನ ಉತ್ಪಾದನೆಯು ತಗ್ಗಿರುವುರುವುದು ಭಾರೀ ನಷ್ಟ ಎದುರಿಸುವ ಭೀತಿ ಎದುರಾಗಿದ್ದು, ಹೊಸ ಸುರಕ್ಷಾ ಕ್ರಮಗಳೊಂದಿಗೆ ಕೆಲವೇ ಕೆಲವು ಕಂಪನಿಗಳು ವಾಹನ ಉತ್ಪಾದನೆ ಕೈಗೊಳ್ಳುತ್ತಿವೆ.

ಕೋವಿಡ್ ಲಾಕ್‌ಡೌನ್: ಹೊಸ ವಾಹನಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ಮತ್ತೆ ಕುಸಿತ

ದೇಶದಲ್ಲೇ ಅತಿಹೆಚ್ಚು ಕೋವಿಡ್ ಸೋಂಕಿತರನ್ನು ಹೊಂದಿರುವ ಮಾಹಾರಾಷ್ಟ್ರದಲ್ಲಿ ಇತರೆ ರಾಜ್ಯಗಳಿಂತಲೂ ಹಲವಾರು ಕಠಿಣ ಕ್ರಮ ಪ್ರಕಟಿಸಲಾಗಿದ್ದು, ಪುಣೆ ಸುತ್ತುಮತ್ತ ನೆಲೆಗೊಂಡಿರುವ ದೇಶದ ಪ್ರಮುಖ ಆಟೋ ಕಂಪನಿಗಳು ಶೇ.50ಕ್ಕಿಂತಲೂ ಕಡಿಮೆ ಪ್ರಮಾಣದ ಉದ್ಯೋಗಿಗಳೊಂದಿಗೆ ಕಾರ್ಯನಿರ್ವಹಣೆ ಮಾಡುತ್ತಿವೆ.

ಕೋವಿಡ್ ಲಾಕ್‌ಡೌನ್: ಹೊಸ ವಾಹನಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ಮತ್ತೆ ಕುಸಿತ

ವಾಹನ ಮಾರಾಟದಲ್ಲೂ ಕೂಡಾ ಹೊಸ ತಂತ್ರಗಳನ್ನು ಅಳವಡಿಸಿಕೊಂಡು ವೈರಸ್ ಹರಡುವಿಕೆ ತಡೆಯೊಂದಿಗೆ ಉದ್ಯಮ ವ್ಯವಹಾರ ಕೈಗೊಳ್ಳುತ್ತಿದ್ದು, ವಾಹನ ಮಾರಾಟ ಮಳಿಗೆಗಳಿಗೆ ಗ್ರಾಹಕರ ನೇರ ಭೇಟಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಹೀಗಾಗಿ ಆನ್‌ಲೈನ್ ಮೂಲಕ ಬುಕ್ಕಿಂಗ್ ಪ್ರಕ್ರಿಯೆ ನಡೆಸುವುದು ಮತ್ತು ಗ್ರಾಹಕರ ಮನೆ ಬಾಗಿಲಿಗೆ ಸುರಕ್ಷಾ ಕ್ರಮಗಳೊಂದಿಗೆ ವಾಹನಗಳ ವಿತರಣೆ ಮಾಡಲಾಗುತ್ತಿದೆ.

ಕೋವಿಡ್ ಲಾಕ್‌ಡೌನ್: ಹೊಸ ವಾಹನಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ಮತ್ತೆ ಕುಸಿತ

ಹೊಸ ಸುರಕ್ಷಾ ಕ್ರಮ ಕೈಗೊಂಡರು ಗ್ರಾಹಕರು ನೇ ರ ಭೇಟಿಯಿಲ್ಲದೆ ವಾಹನ ಮಾರಾಟವು ಕೂಡಾ ಕಳೆದ ಒಂದು ವಾರದಿಂದ ಕನಿಷ್ಠ ಮಟ್ಟದಲ್ಲಿ ದಾಖಲಾಗಿದ್ದು, ಏಪ್ರಿಲ್ ಮತ್ತು ಮೇ ಅವಧಿಯಲ್ಲಿ ಹೊಸ ವಾಹನಗಳ ಬಿಡುಗಡೆಗೆ ಸಿದ್ದವಾಗಿದ್ದ ಕಂಪನಿಗಳು ಹೊಸ ಯೋಜನೆ ಮುಂದೂಡಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ವಾಹನಗಳ ಮಾರಾಟವನ್ನು ಸುಧಾರಿಸುವತ್ತ ಗಮನಹರಿಸಿವೆ.

ಕೋವಿಡ್ ಲಾಕ್‌ಡೌನ್: ಹೊಸ ವಾಹನಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ಮತ್ತೆ ಕುಸಿತ

ಕೋವಿಡ್‌ನಿಂದಾಗಿ ಮುಂಜಾಗ್ರತ ಕ್ರಮವಾಗಿ ಲಭ್ಯವಿರುವ ಉದ್ಯೋಗಿಗಳೊಂದಿಗೆ ಡಿಜಿಟಲ್ ವ್ಯವಹಾರಗಳಿಗೆ ಹೆಚ್ಚಿನ ಒತ್ತು ನೀಡುತ್ತಿದ್ದು, ಸಂಕಷ್ಟ ಪರಿಸ್ಥಿತಿಯಲ್ಲಿ ಆಟೋ ಉದ್ಯಮಕ್ಕೆ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ಸಾಕಷ್ಟು ಸಹಕಾರಿಯಾಗುತ್ತಿವೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಕೋವಿಡ್ ಲಾಕ್‌ಡೌನ್: ಹೊಸ ವಾಹನಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ಮತ್ತೆ ಕುಸಿತ

ಹೊಸ ವಾಹನಗಳ ಮಾರಾಟವು ಪರಿಸ್ಥಿತಿಗೆ ಅನುಗುಣವಾಗಿ ಏರಿಳಿಕೆ ಆಗುತ್ತಿದ್ದರೂ ಕರೋನಾ ವೈರಸ್ ಪರಿಣಾಮದಿಂದಾಗಿ ಹೊಸ ವಾಹನ ಮಾರಾಟಕ್ಕೆ ಅಡಚಣೆ ಎದುರಾಗುತ್ತಿದ್ದು, ವಾಹನಗಳ ಮಾರಾಟವನ್ನು ಸರಳ ಮತ್ತು ಸುರಕ್ಷಿತವಾಗಿಸಲು ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ಗಳು ಸಾಕಷ್ಟು ಬಳಕೆಯಾಗುತ್ತಿವೆ.

ಕೋವಿಡ್ ಲಾಕ್‌ಡೌನ್: ಹೊಸ ವಾಹನಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ಮತ್ತೆ ಕುಸಿತ

ಹೊಸ ವಾಹನ ಖರೀದಿಗಾಗಿ ಬಹುತೇಕ ಗ್ರಾಹಕರು ನೇರವಾಗಿ ಮಾರಾಟ ಮಳಿಗೆಗಳಿಗೆ ಭೇಟಿ ನೀಡುವುದು ಸಾಮಾನ್ಯವಾಗಿರುತ್ತದೆ. ಆದರೆ ಕರೋನಾ ವೈರಸ್ ಪರಿಣಾಮ ಗ್ರಾಹಕರನ್ನು ಮಳಿಗೆಗಳಿಗೆ ಭೇಟಿ ನೀಡದೆ ವಾಹನ ಖರೀದಿ ಪ್ರಕ್ರಿಯೆಯತ್ತ ಸೆಳೆಯಲು ಆಟೋ ಕಂಪನಿಗಳು ಕಳೆದ ವರ್ಷ ಮಾಡಿದ ಹೊಸ ಪ್ರಯತ್ನವು ಇದೀಗ ವಾಹನ ಮಾರಾಟಕ್ಕೆ ತುಸು ಪ್ರಯೋಜಕಾರಿಯಾಗುತ್ತಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಕೋವಿಡ್ ಲಾಕ್‌ಡೌನ್: ಹೊಸ ವಾಹನಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ಮತ್ತೆ ಕುಸಿತ

ಕೋವಿಡ್ 19 ಹರಡುವಿಕೆಗೂ ಮೊದಲೇ ಹಲವಾರು ಆಟೋ ಕಂಪನಿಗಳು ಆನ್‌ಲೈನ್ ಪ್ಲ್ಯಾಟ್ ತೆರೆದಿದ್ದರೂ ಬಳಕೆದಾರರ ಸಂಖ್ಯೆಯು ತೀರಾ ವಿರಳವಾಗಿತ್ತು. ಆದರೆ ಕರೋನಾ ವೈರಸ್ ಹೆಚ್ಚಳವಾಗುತ್ತಿದ್ದಂತೆ ಸಾಮಾಜಿಕ ಅಂತರ ಯಾವಾಗ ಅಗತ್ಯವಾಯಿತೋ ಆಗಿನಿಂದ ವಾಹನ ಮಾರಾಟಕ್ಕಾಗಿ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ಗಳ ಬಳಕೆಯು ಹೆಚ್ಚಳವಾಗುತ್ತಿದೆ.

Most Read Articles

Kannada
English summary
Current Lockdown & Curfew Restrictions Likely To Affect Car & Bike Sales Again In 2021. Read in Kannada.
Story first published: Friday, April 23, 2021, 18:52 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X