ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕೆ ಸಹಕಾರಿಯಾಗಲಿದೆ ಹೊಸ ಮಾದರಿಯ ಚಾರ್ಜಿಂಗ್ ನಿಲ್ದಾಣ

ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಕೇಂದ್ರ ಸರ್ಕಾರವು ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗಾಗಿ ದೇಶಾದ್ಯಂತ ಸಾವಿರಾರು ಹೊಸ ಚಾರ್ಜಿಂಗ್ ನಿಲ್ದಾಣಗಳಿಗೆ ಚಾಲನೆ ನೀಡಿದೆ.

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕೆ ಮಹತ್ವದ ಯೋಜನೆ ಜಾರಿಗೆ ತರಲಿದೆ ಕೇಂದ್ರ ಸರ್ಕಾರ

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ. ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಫೇಮ್ 2 ಸಬ್ಸಡಿ ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳಿಗೆ ಮತ್ತು ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದೆ.

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕೆ ಮಹತ್ವದ ಯೋಜನೆ ಜಾರಿಗೆ ತರಲಿದೆ ಕೇಂದ್ರ ಸರ್ಕಾರ

ಹಾಗೆಯೇ ಫೇಮ್ 2 ಯೋಜನೆಯೊಂದಿಗೆ ವಿವಿಧ ರಾಜ್ಯ ಸರ್ಕಾರಗಳು ಸಹ ತಮ್ಮದೇ ಆದ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿದ್ದು, ಫೇಮ್ 2 ಯೋಜನೆಯ ಸಬ್ಸಡಿ ಜೊತೆಗೆ ವಿವಿಧ ರಾಜ್ಯದ ಸರ್ಕಾರಗಳು ಸಹ ಕೆಲವು ವಿನಾಯ್ತಿಗಳನ್ನು ನೀಡುತ್ತಿವೆ.

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕೆ ಮಹತ್ವದ ಯೋಜನೆ ಜಾರಿಗೆ ತರಲಿದೆ ಕೇಂದ್ರ ಸರ್ಕಾರ

ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕೆ ಮಹತ್ವದ ಯೋಜನೆ ಜಾರಿಗೆ ತರಲಿದೆ ಕೇಂದ್ರ ಸರ್ಕಾರ

ಜೊತೆಗೆ ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣಕ್ಕೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸರ್ಕಾರಿ ಹಾಗೂ ಖಾಸಗಿ ಕಂಪನಿಗಳ ಸಹಭಾಗಿತ್ವದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರದ ಹೊಸ ಯೋಜನೆ ಅಡಿ ಇದುವರೆಗೆ ದೇಶಾದ್ಯಂತ ಸಾವಿರಾರು ಚಾರ್ಜಿಂಗ್ ನಿಲ್ದಾಣಗಳು ಆರಂಭವಾಗಿದ್ದು, ಕರ್ನಾಟಕದಲ್ಲೂ 209 ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳು ಕಾರ್ಯನಿರ್ವಹಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಹೆಚ್ಚಿದಂತೆ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತಿದೆ.

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕೆ ಮಹತ್ವದ ಯೋಜನೆ ಜಾರಿಗೆ ತರಲಿದೆ ಕೇಂದ್ರ ಸರ್ಕಾರ

ಎಲೆಕ್ಟ್ರಿಕ್ ವಾಹನಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳನ್ನು ಒದಗಿಸಿದ್ದಲ್ಲಿ ಮಾತ್ರವೇ ಇವಿ ಬಳಕೆಯನ್ನು ಹೆಚ್ಚಿಸಬಹುದಾದ ಕುರಿತು ಕೇಂದ್ರದ ಮುಖ್ಯ ವೈಜ್ಞಾನಿಕ ಸಲಹಾ ಸಮಿತಿಯು ಸರ್ಕಾರಕ್ಕೆ ಪ್ರಮುಖ ಸೂಚನೆಗಳನ್ನು ನೀಡಿದ್ದು, ಇದರಲ್ಲಿ ಕಡಿಮೆ ನಿರ್ವಹಣಾ ವೆಚ್ಚದ ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳು ಸಹ ಸೇರಿವೆ.

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕೆ ಮಹತ್ವದ ಯೋಜನೆ ಜಾರಿಗೆ ತರಲಿದೆ ಕೇಂದ್ರ ಸರ್ಕಾರ

ಅತಿ ಕಡಿಮೆ ಬೆಲೆಯಲ್ಲಿ ಎಸಿ ಚಾರ್ಜಿಂಗ್ ನಿಲ್ದಾಣಗಳನ್ನು ಸ್ಥಾಪನೆಗೊಳಿಸುವ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡಿರುವ ವೈಜ್ಞಾನಿಕ ಸಲಹಾ ಸಮಿತಿಯು ರೂ.3,500 ಕ್ಕಿಂತಲೂ ಕಡಿಮೆ ಬೆಲೆಯಲ್ಲಿ ಎಸಿ ಚಾರ್ಜರ್ ಅಳವಡಿಸಿಕೊಳ್ಳಬಹುದಾದ ಸಾಧ್ಯತೆಗಳ ಕುರಿತು ಮಾಹಿತಿ ಹಂಚಿಕೊಂಡಿದೆ.

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕೆ ಮಹತ್ವದ ಯೋಜನೆ ಜಾರಿಗೆ ತರಲಿದೆ ಕೇಂದ್ರ ಸರ್ಕಾರ

ಅತಿ ಕಡಿಮೆ ಅವಧಿಯಲ್ಲಿ ಚಾರ್ಜ್ ಮಾಡಿಕೊಳ್ಳಬಹುದಾದ ಎಸಿ ಚಾರ್ಜರ್‌ಗಳನ್ನು ಹೋಟೆಲ್, ಮಾಲ್, ಮೆಟ್ರೋ ನಿಲ್ದಾಣ, ರೈಲ್ವೆ ನಿಲ್ದಾಣ, ಆಸ್ಪತ್ರೆಗಳು, ಆಫೀಸ್ ಕಾಂಪ್ಲೆಕ್ಸ್, ಅಪಾರ್ಟ್ಮೆಂಟ್ ಪಾರ್ಕಿಂಗ್‌ಗಳಲ್ಲಿ ಹೆಚ್ಚಿನ ಮಟ್ಟದಲ್ಲಿ ಹೊಸ ಮಾದರಿಯ ಚಾರ್ಜಿಂಗ್ ಸೌಲಭ್ಯವನ್ನು ಅಳವಡಿಸಿಕೊಳ್ಳಬಹುದಾಗಿದೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕೆ ಮಹತ್ವದ ಯೋಜನೆ ಜಾರಿಗೆ ತರಲಿದೆ ಕೇಂದ್ರ ಸರ್ಕಾರ

ಇದಕ್ಕಾಗಿ ಪ್ರತ್ಯೇಕ ಆ್ಯಪ್ ಅಭಿವೃದ್ದಿಪಡಿಸಲಾಗುತ್ತಿದ್ದು, ಆ್ಯಪ್ ಮೂಲಕವೇ ನಿಮ್ಮ ಇವಿ ವಾಹನದ ವಿವರಣೆಯೊಂದಿಗೆ ಚಾರ್ಜಿಂಗ್ ಬಳಕೆ ಮತ್ತು ಹಣ ಪಾವತಿ ಮಾಹಿತಿ ಪಡೆದುಕೊಳ್ಳಬಹುದಾಗಿದ್ದು, ಒಂದು ಬಾರಿ ಗರಿಷ್ಠ 3 ಕಿ.ಲೋ ವ್ಯಾಟ್ ತನಕ ಚಾರ್ಜ್ ಮಾಡಬಹುದು.

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕೆ ಮಹತ್ವದ ಯೋಜನೆ ಜಾರಿಗೆ ತರಲಿದೆ ಕೇಂದ್ರ ಸರ್ಕಾರ

ಹೊಸ ಚಾರ್ಜಿಂಗ್ ಸೌಲಭ್ಯವು ದ್ವಿಚಕ್ರ ವಾಹನ ಮತ್ತು ಆಟೋ ರಿಕ್ಷಾ ಮಾದರಿಗಳಿಗೆ ಪ್ರತ್ಯೇಕವಾಗಿ ಅಭಿವೃದ್ದಿಗೊಳಿಸಲಾಗಿದ್ದು, ಅತಿ ಕಡಿಮೆ ಬೆಲೆಯ ಚಾರ್ಜಿಂಗ್ ನಿಲ್ದಾಣಗಳನ್ನು ಸ್ಥಳಾವಕಾಶದ ಆಧಾರದ ಮೇಲೆ ಪ್ರತಿಯೊಬ್ಬರು ಅಳವಡಿಸಿಕೊಳ್ಳಬಹುದು.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕೆ ಮಹತ್ವದ ಯೋಜನೆ ಜಾರಿಗೆ ತರಲಿದೆ ಕೇಂದ್ರ ಸರ್ಕಾರ

ಹೊಸ ಚಾರ್ಜಿಂಗ್ ನಿಲ್ದಾಣಗಳು ಹೊಸ ಉದ್ಯಮ ವ್ಯವಹಾರವಾಗಿ ಮಾರ್ಪಾಡುವ ಎಲ್ಲಾ ಅವಕಾಶಗಳನ್ನು ಹೊಂದಿದ್ದು, ಮುಂಬರುವ 2 ತಿಂಗಳಲ್ಲಿ ಹೊಸ ಚಾರ್ಜಿಂಗ್ ನಿಲ್ದಾಣದ ಬಗೆಗೆ ಮತ್ತಷ್ಟು ಸ್ಟ್ಯಾಂಡರ್ಡ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ.

Article Published On: Wednesday, May 12, 2021, 23:07 [IST]
English summary
Low-Cost Electric Vehicles Chargepoint Unveiled. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+