2021ರ ಜೀಪ್ ರ‍್ಯಾಂಗ್ಲರ್ ಎಸ್‍ಯುವಿ ಮಾಹಿತಿ ಬಹಿರಂಗ
ಅಮೆರಿಕಾ ಮೂಲದ ವಾಹನ ತಯಾರಕ ಕಂಪನಿಯು ಜೀಪ್ ತನ್ನ ರ‍್ಯಾಂಗ್ಲರ್ ಎಸ್‍ಯುವಿಯನ್ನು ಭಾರತದಲ್ಲಿ ಸ್ಥಳೀಯವಾಗಿ ಜೋಡಿಸಲಾಗುತ್ತಿದೆ. ಮೇಡ್ ಇನ್ ಇಂಡಿಯಾ ಜೀಪ್ ರ‍್ಯಾಂಗ್ಲರ್ ಎಸ್‍ಯುವಿಯು ಮುಂದಿನ ತಿಂಗಳು ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾಗಿದೆ.

ಜೀಪ್ ತನ್ನ ಮೇಡ್ ಇನ್ ಇಂಡಿಯಾ ರ‍್ಯಾಂಗ್ಲರ್ ಎಸ್‍ಯುವಿಯ ಬಿಡುಗಡೆ ದಿನಾಂಕವನ್ನು ಕೂಡ ಬಹಿರಂಗಪಡಿಸಿದೆ. ಈ ಹೊಸ ಜೀಪ್ ರ‍್ಯಾಂಗ್ಲರ್ ಎಸ್‍ಯುವಿಯು ಮಾರ್ಚ್ 15 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ. ಇದನ್ನು ಸಂಪೂರ್ಣವಾಗಿ ನಿರ್ಮಿಸಿದ ಯುನಿಟ್ (ಸಿಬಿಯು) ಬದಲಿಗೆ ಸಂಪೂರ್ಣವಾಗಿ ನಾಕ್ ಡೌನ್ (ಸಿಕೆಡಿ) ಯುನಿಟ್ ಆಗಿ ಭಾರತದಲ್ಲಿ ಮಾರಾಟ ಮಾಡಲಾಗುವುದು

ಹೊಸ ಜೀಪ್ ರ‍್ಯಾಂಗ್ಲರ್ ಎಸ್‍ಯುವಿಯನ್ನು ಸ್ಥಳೀಯವಾಗಿ ಉತ್ಪಾದನೆ ಮಾಡಿರುವುದರಿಂದ ಇದರ ಬೆಲೆ ಇಳಿಯುವ ನಿರೀಕ್ಷೆಯಿದೆ. ಅಲ್ಲದೇ ಜೀಪ್ ಇಂಡಿಯಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ರೂ.180 ಕೋಟಿ ಹೂಡಿಕೆ ಮಾಡುವುದಾಗಿ ಘೋಷಿಸಿದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಹಿಂದಿನ ಜೀಪ್ ರ‍್ಯಾಂಗ್ಲರ್ ಎಸ್‍ಯುವಿಯನ್ನು ಎಕ್ಸ್ ಶೋರೂಂ ಪ್ರಕಾರ ರೂ.63.94 ಲಕ್ಷಗಳಿಗೆ ಬಿಡುಗಡೆಗೊಳಿಸಲಾಗಿತ್ತು. ಇದರ ಮೊದಲ ಬ್ಯಾಚ್ ಕಳೆದ ವರ್ಷವೇ ಮಾರಾಟವಾಯಿತು. ಇದೀಗ ಹೊಸ ಜೀಪ್ ರ‍್ಯಾಂಗ್ಲರ್ ಇಂಟಿರಿಯರ್ ಸ್ಪೈ ಚಿತ್ರಗಳು ಬಹಿರಂಗವಾಗಿದೆ.

ಇದರಿಂದಾಗಿ ಹೊಸ ರ‍್ಯಾಂಗ್ಲರ್ ಎಸ್‍ಯುವಿಯ ಇಂಟಿರಿಯರ್ ಮಾಹಿತಿಯು ಬಹಿರಂಗವಾಗಿದೆ. ಇದರ ಇಂಟಿರಿಯರ್ ನಲ್ಲಿ ಆಪಲ್ ಕಾರ್ಪ್ಲೇ, ಆಂಡ್ರಾಯ್ಡ್ ಆಟೋ ಮತ್ತು ನ್ಯಾವಿಗೇಷನ್ ಒಳಗೊಂಡಿರುವ ಹೊಸದಾಗಿ ವಿನ್ಯಾಸಗೊಳಿಸಲಾದ ಡ್ಯಾಶ್‌ಬೋರ್ಡ್ ಮತ್ತು ಯುಕನೆಕ್ಟ್ 4 ಸಿ ಎನ್‌ಎವಿ 8.4-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ.
MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಇನ್ನು ಇದರೊಂದಿಗೆ ವೈಟ್ ಸ್ಟಿಚಿಂಗ್, ಡ್ಯುಯಲ್-ಜೋನ್ ಆಟೋಮ್ಯಾಟಿಕ್ ಕ್ಲೈಮೇಟ್ ಕಂಟ್ರೋಲ್, ಪುಶ್-ಬಟನ್ ಸ್ಟಾರ್ಟ್, ಕೀಲೆಸ್ ಎಂಟ್ರಿ, ಮತ್ತು ಇನ್ನೂ ಅನೇಕ ಅತ್ಯಾಧುನಿಕ ಫೀಚರ್ ಗಳನ್ನು ಒಳಗೊಂಡಿದೆ.

2021ರ ಜೀಪ್ ರ‍್ಯಾಂಗ್ಲರ್ ಎಸ್‍ಯುವಿ ಫ್ಹೋರ್ ವ್ಹೀಲ್ ಡ್ರೈವ್ ಹೈ ಮತ್ತು ಲೋ ಮೋಡ್ ಅನ್ನು ಹೊಂದಿದೆ. ಈ ಹೊಸ ಫ್ಹೋರ್ ವ್ಹೀಲ್ ಡ್ರೈವ್ ಆಟೋ ಮೋಡ್ ಜೊತೆಗೆ ಟ್ರ್ಯಾಕ್ಷನ್ ಸ್ಲಿಪ್ ಸೆನ್ಸರ್ ಗಳನ್ನು ಒಳಗೊಂಡಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಇನ್ನು ಈ ಆಫ್-ರೋಡ್ ಸಾಮರ್ಥ್ಯದ ಎಸ್‍ಯುವಿಯಲ್ಲಿ 2.0-ಲೀಟರ್ ಹೈ ಪವರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಆಳವಡಿಸಲಾಗುತ್ತದೆ. ಈ ಎಂಜಿನ್ 268 ಬಿಹೆಚ್‍ಪಿ ಪವರ್ ಮತ್ತು 400 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಈ ಎಂಜಿನ್ ಅನ್ನು 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗುತ್ತದೆ. 2021ರ ಜೀಪ್ ರ‍್ಯಾಂಗ್ಲರ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗಲಿರುವ ಬಹುನಿರೀಕ್ಷಿತ ಎಸ್‍ಯುವಿಗಳಲ್ಲಿ ಒಂದಾಗಿದೆ. ಆಫ್-ರೋಡ್ ವಾಹನ ಪ್ರೇಮಿಗಳು ಬಹಳ ಕಾತುರದಿಂದ ಕಾಯುತ್ತಿದ್ದಾರೆ.
Source: Rushlane Spulane/Facebook


Click it and Unblock the Notifications








