ರೈಲು ನಿಲ್ದಾಣಗಳಲ್ಲಿ ಸಾರ್ವಜನಿಕ ಬಳಕೆಯ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆದ ಮೆಜೆಂಟಾ
ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣದಲ್ಲಿ ಮುಂಚೂಣಿ ಹೊಂದಿರುವ ಮೆಜೆಂಟಾ ಕಂಪನಿಯು ಸೆಂಟ್ರಲ್ ರೈಲ್ವೆ ಇಲಾಖೆಯ ಸಹಭಾಗೀತ್ವದೊಂದಿಗೆ ಬೃಹತ್ ಯೋಜನೆಯೊಂದನ್ನು ಚಾಲನೆ ನೀಡಿದ್ದು, ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿ ಹೆಚ್ಚಿನ ಸಂಖ್ಯೆಯ ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಆರಂಭಿಸಿದೆ.

ಮುಂಬೈ ಮೂಲದ ಮೆಜೆಂಟಾ ಕಂಪನಿಯು ಸದ್ಯ ದೇಶಾದ್ಯಂತ ನೂರಕ್ಕೂ ಹೆಚ್ಚು ನಗರಗಳಲ್ಲಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಸ್ಥಾಪನೆ ಮಾಡಿದ್ದು, ಗ್ರಾಹಕರ ಬೇಡಿಕೆ ಅನುಸಾರವಾಗಿ ಎಸಿ ಮತ್ತು ಡಿಸಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಆರಂಭಿಸಿದೆ. ಇದೀಗ ಮೆಜೆಂಟಾ ಕಂಪನಿಯು ಸೆಂಟ್ರಲ್ ರೈಲ್ವೆ ಇಲಾಖೆಯ ಸಹಯೋಗದೊಂದಿಗೆ ರೈಲು ನಿಲ್ದಾಣಗಳ ಪಾರ್ಕಿಂಗ್ ಸ್ಥಳಗಳಲ್ಲಿ ಇವಿ ವಾಹನಗಳಿಗೆ ಅನುಕೂಲಕರವಾಗುವ ಉದ್ದೇಶದಿಂದ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣ ಮಾಡುತ್ತಿದೆ.

ಹೊಸ ಯೋಜನೆಯ ಭಾಗವಾಗಿ ಮೆಜೆಂಟಾ ಕಂಪನಿಯು ಸದ್ಯ ದಾದರ್ ಮತ್ತು ಬೈಕುಲ್ಲಾ ರೈಲು ನಿಲ್ದಾಣಗಳಲ್ಲಿ ಆರಂಭಿಕವಾಗಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಆರಂಭಿಸಿದ್ದು, ಮುಂದಿನ ಒಂದು ವರ್ಷಗಳೊಂದಿಗೆ ಸೆಂಟ್ರಲ್ ರೈಲ್ವೆ ವಿಭಾಗದ ಪ್ರಮುಖ ನಿಲ್ದಾಣಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳನ್ನು ಸ್ಥಾಪನೆ ಮಾಡಲಿದೆ.

ಎಸಿ ಮತ್ತು ಡಿಸಿ ಚಾರ್ಜರ್‌ಗಳ ಸಂಯೋಜನೆಯು ದ್ವಿಚಕ್ರ ವಾಹನ, ತ್ರಿ ಚಕ್ರ ವಾಹನಗಳು ಮತ್ತು ಕಾರುಗಳಿಗೆ ಚಾರ್ಜಿಂಗ್ ಗ್ರಿಡ್ ಬೆಂಬಲಿಸಲಿದ್ದು, ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್‌ಗಳು 24x7 ಕಾರ್ಯನಿರ್ವಹಣೆ ಮಾಡಲಿವೆ.

ಮೆಜೆಂಟಾ ಕಂಪನಿಯ ಸ್ಟ್ರೀಟ್‌ಲ್ಯಾಂಪ್ ಇಂಟಿಗ್ರೇಟೆಡ್ ಇವಿ ಚಾರ್ಜಿಂಗ್ ಸ್ಟೇಷನ್‌ಗಳು ಸಂಪೂರ್ಣವಾಗಿ ಆನ್‌ಲೈನ್ ರಿಮೋಟ್ ಮಾನಿಟರಿಂಗ್ ಸಿಸ್ಟಂ ಹೊಂದಿರಲಿದ್ದು, ಆನ್‌ಲೈನ್ ರಿಮೋಟ್ ಮಾನಿಟರಿಂಗ್ ಮೂಲಕವೇ ಮುಖ್ಯ ಕಚೇರಿಯಿಂದ ನಿರ್ವಹಿಸಬಹುದಾಗಿದೆ.

ಆನ್‌ಲೈನ್ ರಿಮೋಟ್ ಮಾನಿಟರಿಂಗ್ ಸಿಸ್ಟಂ ಮೂಲಕವೇ ಸ್ವಯಂಚಾಲಿತ ಪಾವತಿ ಗೇಟ್‌ವೇ ಹೊಂದಿದ್ದು, ಆನ್‌ಲೈನ್ ರಿಮೋಟ್ ಸಂಪರ್ಕ ಹೊಂದಿರುವುದರಿಂದ ಸ್ಥಳದಲ್ಲಿ ಚಾರ್ಜರ್‌ಗಳ ಮೇಲ್ವಿಚಾರಣೆ ಮಾಡಲು ಮತ್ತು ನಿರ್ವಹಿಸಲು ಸ್ಟೇಷನ್ ಮಾರ್ಷಲ್‌ಗಳ ಹೊಂದುವ ಅಗತ್ಯವನ್ನು ನಿವಾರಿಸುತ್ತದೆ.

ಕೇಂದ್ರ ಸರ್ಕಾರದ ಫೇಮ್ 2 ಯೋಜನೆ ಅಡಿ ಮೆಜೆಂಟಾ ಕಂಪನಿಯು ತನ್ನ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುತ್ತಿದ್ದು, ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಸ್ಥಾಪನೆಗೆ ಕೇಂದ್ರ ಸರ್ಕಾರವು ಹೆಚ್ಚಿನ ಮಟ್ಟದ ಸಬ್ಸಡಿ ಒದಗಿಸುತ್ತದೆ.

ಮೆಜೆಂಟಾ ಕಂಪನಿಯ ಅಧೀನದಲ್ಲಿ ಸದ್ಯ ಕಾರ್ಯನಿರ್ವಹಣೆಯಲ್ಲಿರುವ 4,500 ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳಲ್ಲಿ 2950 ಚಾರ್ಜಿಂಗ್ ನಿಲ್ದಾಣಗಳನ್ನು ಫೇಮ್ 2 ಯೋಜನೆ ಅಡಿ ನಿರ್ಮಾಣ ಮಾಡಿದ್ದು, ಇನ್ನುಳಿದ 1200 ಚಾರ್ಜಿಂಗ್ ನಿಲ್ದಾಣಗಳನ್ನು ಹಿಂದೂಸ್ತಾನ್ ಪೆಟ್ರೋಲಿಯಂ ಬಂಕ್‌ಗಳಲ್ಲಿ, ಫ್ರೆನ್ ಹೋಟೆಲ್‌ಗಳ ಆವರಣದಲ್ಲಿ ಮತ್ತು ಬೆಂಗಳೂರು ಅಪಾರ್ಟ್‌ಮೆಂಟ್ ಫೆಡರೇಶನ್ ಜೊತೆಗೆ ಪ್ರಮುಖ ವಸತಿ ಕಟ್ಟಡಗಳಲ್ಲ ಫಾಸ್ಟ್ ಚಾರ್ಜರ್‌ಗಳನ್ನು ಸ್ಥಾಪನೆ ಮಾಡಿದೆ.

2026ರ ವೇಳೆಗೆ ಸಂಭಾವ್ಯವಾಗಿ ಸಂಚರಿಸಬಹುದಾದ ಎರಡು ಮಿಲಿಯನ್ ಎಲೆಕ್ಟ್ರಿಕ್ ವಾಹನಗಳ(ಇವಿ) ಚಾರ್ಜಿಂಗ್ ಅಗತ್ಯವನ್ನು ಪೂರೈಸಲು 4 ಲಕ್ಷ ಫಾಸ್ಟ್ ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸುವ ಸರ್ಕಾರದ ಉಪಕ್ರಮವನ್ನು ಪ್ರಮುಖ ಚಾರ್ಜಿಂಗ್ ನಿಲ್ದಾಣ ನಿರ್ಮಾಣಗಳು ಬೆಂಬಲಿಸುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳು ಸಾರ್ವಜನಿಕ ಬಳಕೆಗೆ ಲಭ್ಯವಾಗಲಿವೆ.

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಆದ್ಯತೆ ನೀಡಲಾಗುತ್ತಿದ್ದು, ಕೇಂದ್ರ ಸರ್ಕಾರದ ಜೊತೆಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿರುವ ಇವಿ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹವು ಹೊಸ ಬದಲಾವಣೆಗೆ ಕಾರಣವಾಗಿದೆ.

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಫೇಮ್ 2 ಸಬ್ಸಡಿ ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳಿಗೆ ಮತ್ತು ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಫೇಮ್ 2 ಯೋಜನೆಯ ಸಬ್ಸಡಿ ಜೊತೆಗೆ ವಿವಿಧ ರಾಜ್ಯದ ಸರ್ಕಾರಗಳು ಸಹ ಕೆಲವು ವಿನಾಯ್ತಿಗಳನ್ನು ನೀಡುತ್ತಿವೆ.

ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಹಾಗೆಯೇ ಇವಿ ವಾಹನಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣವು ಇದೀಗ ಹೊಸ ಸವಾಲಾಗಿದ್ದು, ಇವಿ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣಕ್ಕೂ ಯೋಜನೆ ಜಾರಿಗೆ ತರಲಾಗಿದೆ.

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಖರೀದಿ ಮಾಡುವ ಗ್ರಾಹಕರಿಗೆ ಮಾತ್ರವಲ್ಲ ಉತ್ಪಾದಕ ಕಂಪನಿಗಳಿಗೂ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗೀತ್ವದಲ್ಲಿ ಚಾರ್ಜಿಂಗ್ ನಿಲ್ದಾಣಗಳು ಒಂದೊಂದಾಗಿ ಕಾರ್ಯನಿರ್ವಹಣೆ ಆರಂಭಿಸುತ್ತಿವೆ.


Click it and Unblock the Notifications