Just In
- 3 hrs ago
ವೆಂಟೊ ಟ್ರೆಂಡ್ಲೈನ್ ವೆರಿಯೆಂಟ್ ಬುಕ್ಕಿಂಗ್ ಪ್ರಕ್ರಿಯೆಗೆ ಸ್ಥಗಿತಗೊಳಿಸಿದ ಫೋಕ್ಸ್ವ್ಯಾಗನ್
- 5 hrs ago
ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಎಕ್ಸ್ಯುವಿ 300 ಮತ್ತು ಇಕೋಸ್ಪೋರ್ಟ್ ಹಿಂದಿಕ್ಕಿದ ರೆನಾಲ್ಟ್ ಕಿಗರ್
- 5 hrs ago
ಡೀಲರ್ ಬಳಿ ತಲುಪಿದ ಹೊಸ ಕವಾಸಕಿ ನಿಂಜಾ 300 ಬೈಕ್
- 6 hrs ago
ಫಸ್ಟ್ ಡ್ರೈವ್ ರಿವ್ಯೂ: ರಸ್ತೆಗಿಳಿದ ಐಷಾರಾಮಿ ಬಿಎಂಡಬ್ಲ್ಯು ಎಂ340ಐ ಎಕ್ಸ್ಡ್ರೈವ್ ಕಾರು
Don't Miss!
- News
ನಾಲ್ಕನೇ ಮಹಡಿಯಿಂದ ಬಿದ್ದು ಮುತ್ತೂಟ್ ಸಮೂಹದ ಅಧ್ಯಕ್ಷ ಸಾವು
- Movies
ಬಿಗ್ ಬಾಸ್: ಚಂದ್ರಕಲಾ ಮಾಡಿದ ತಪ್ಪಿಗೆ ಮನೆ ಮಂದಿಗೆಲ್ಲಾ ಶಿಕ್ಷೆ
- Sports
ಭಾರತ vs ಇಂಗ್ಲೆಂಡ್: ಪ್ರಶಸ್ತಿ ವಿಜೇತರ ಪಟ್ಟಿ, ಅಂಕಿ-ಅಂಶಗಳು!
- Finance
ಮೊಟೊರೊಲಾ ಹೊಸ ಸ್ಮಾರ್ಟ್ಫೋನ್: ಮೊಟೊ ಜಿ 30 ಮತ್ತು ಮೊಟೊ ಜಿ 10 ಪವರ್
- Lifestyle
ಮಹಾಶಿವರಾತ್ರಿ: ಶಿವನಿಗೆ ಪೂಜೆ ಸಲ್ಲಿಸುವಾಗ ಇವುಗಳನ್ನು ದೂರವಿಡಿ
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ ಉತ್ಪಾದನೆಯಾಗುವ ನಿಸ್ಸಾನ್ ಮ್ಯಾಗ್ನೈಟ್ ಕಾರಿನ ಸೇಫ್ಟಿ ರೇಟಿಂಗ್ಸ್ ಎಷ್ಟು ಗೊತ್ತಾ?
ನಿಸ್ಸಾನ್ ಇಂಡಿಯಾ ಕಂಪನಿಯು ಮ್ಯಾಗ್ನೈಟ್ ಕಾರು ಮಾದರಿಯೊಂದಿಗೆ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಕಾರು ಬಿಡುಗಡೆಯಾದ ಎರಡೂವರೆ ತಿಂಗಳಿನಲ್ಲಿ ಸುಮಾರು 45 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡಿದೆ.

ಮ್ಯಾಗ್ನೈಟ್ ಕಾರು ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಗಳಲ್ಲೇ ವಿಭಿನ್ನವಾದ ವಿನ್ಯಾಸದೊಂದಿಗೆ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ರೇಟಿಂಗ್ಸ್ ಪಡೆದುಕೊಳ್ಳುವ ಮೂಲಕ ವಿನ್ಯಾಸದಲ್ಲಿ ಆಕರ್ಷಕವಾಗಿರುವುದಲ್ಲದೆ ಸುರಕ್ಷಾ ದೃಷ್ಠಿಯಿಂದಲೂ ಹೊಸ ಮ್ಯಾಗ್ನೈಟ್ ಕಾರು ಅತ್ಯುತ್ತಮ ರೇಟಿಂಗ್ಸ್‌ನೊಂದಿಗೆ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ನಿಸ್ಸಾನ್ ಕಂಪನಿಯು ಹೊಸ ಮ್ಯಾಗ್ನೈಟ್ ಕಾರು ಮಾದರಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಿದ ನಂತರ ಇಂಡೋನೇಷ್ಯಾದಲ್ಲೂ ಕೂಡಾ ಬಿಡುಗಡೆ ಮಾಡಿದ್ದು, ಇತ್ತೀಚೆಗೆ ಇಂಡೋನೇಷ್ಯಾದಲ್ಲಿ ಮಾರಾಟವಾಗುತ್ತಿರುವ ಮ್ಯಾಗ್ನೈಟ್ ಕಾರು ಮಾದರಿಯು ಏಷಿಯೆನ್ ಎನ್ಎಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ 5 ಸೇಫ್ಟಿ ಸ್ಟಾರ್ ರೇಟಿಂಗ್ಸ್‌ನಲ್ಲಿ 4 ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡಿದೆ.

ಅತಿ ಕಡಿಮೆ ಬೆಲೆಯೊಂದಿಗೆ ಏಷಿಯನ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಉತ್ತಮ ರೇಟಿಂಗ್ಸ್ ಪಡೆದುಕೊಂಡಿದ್ದರೂ ನಿಸ್ಸಾನ್ ಮ್ಯಾಗ್ನೈಟ್ ಕಾರಿನ ಬಗೆಗೆ ಕೆಲವು ಅನಮಾನಗಳು ವ್ಯಕ್ತವಾಗಿದ್ದವು. ಇಂಡೋನೇಷ್ಯಾ ಆವೃತ್ತಿ ಮಾತ್ರ ಉತ್ತಮವಾಗಿದ್ದು, ಭಾರತದಲ್ಲಿ ಮಾರಾಟವಾಗುವ ಮ್ಯಾಗ್ನೈಟ್ ಕಾರಿನ ಸೇಫ್ಟಿ ರೇಟಿಂಗ್ಸ್ ಉತ್ತಮವಾಗಿಲ್ಲ ಎನ್ನಲಾಗಿತ್ತು.

ಕೇವಲ ಇಂಡೋನೇಷ್ಯಾ ಮಾದರಿಯನ್ನು ಮಾತ್ರ ಟೆಸ್ಟಿಂಗ್ ನಡೆಸಿದ ಹಿನ್ನಲೆ ಈ ಅನುಮಾನ ವ್ಯಕ್ತಪಡಿಸಲಾಗುತ್ತಿದ್ದು, ಗ್ರಾಹಕರು ಈ ವಿಚಾರವಾಗಿ ಇನ್ನು ಗೊಂದಲದಲ್ಲಿದ್ದಾರೆ. ಇದಕ್ಕೆ ಸ್ಪಷ್ಟನೆ ನೀಡಿರುವ ನಿಸ್ಸಾನ್ ಕಂಪನಿಯು ಭಾರತದಲ್ಲಿ ಮಾರಾಟಗೊಳ್ಳುತ್ತಿರುವ ಮಾದರಿಗಳನ್ನೇ ತುಸು ಬದಲಾವಣೆಯೊಂದಿಗೆ ಇಂಡೋನೇಷ್ಯಾದಲ್ಲಿ ಮಾರಾಟ ಮಾಡಲಾಗುತ್ತಿದ್ದು, ಇನ್ನುಳಿದಂತೆ ಗುಣಮಟ್ಟದ ಸೇಫ್ಟಿ ಫೀಚರ್ಸ್‌ಗಳೊಂದಿಗೆ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ಒದಗಿಸುವ ಧ್ಯೇಯ ವ್ಯಕ್ತಪಡಿಸಿದೆ.

4 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡ ಇಂಡೋನೇಷ್ಯಾ ಮ್ಯಾಗ್ನೈಟ್ ಕಾರು ದೇಶಿಯ ಮಾರುಕಟ್ಟೆಯಲ್ಲೂ ಉತ್ತಮ ಗುಣಮಟ್ಟದ ಸೇಫ್ಟಿ ಫೀಚರ್ಸ್ ಹೊಂದಿದ್ದು, ಭಾರತದಲ್ಲಿರುವ ಮ್ಯಾಗ್ನೈಟ್ ಕಾರು ಕೂಡಾ 4 ಸ್ಟಾರ್ ಸೇಫ್ಟಿ ರೇಟಿಂಗ್ಸ್‌ನೊಂದಿಗೆ ಅಪಘಾತಗಳ ಸಂದರ್ಭದಲ್ಲಿ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವಲ್ಲಿ ಪ್ರಮುಖ ಪಾತ್ರವಹಿಸಲಿವೆ.

ಏಷಿಯನ್ ಎನ್‌ಸಿಎಪಿ ಸಂಸ್ಥೆಯ ಕ್ರ್ಯಾಶ್ ಟೆಸ್ಟಿಂಗ್ ಫಲಿತಾಂಶದಲ್ಲಿ ಹೊಸ ಮ್ಯಾಗ್ನೈಟ್ ಕಾರು ಮಾದರಿಯು ವಯಸ್ಕ ಪ್ರಯಾಣಿಕರ ಸುರಕ್ಷತೆಯಲ್ಲಿ 39.02 ಅಂಕ, ಮಕ್ಕಳ ಸುರಕ್ಷತೆಗಾಗಿ 16.32 ಮತ್ತು ಸೇಫ್ಟಿ ಅಸಿಸ್ಟ್ ಫೀಚರ್ಸ್‌ಗಳಿಗಾಗಿ 15.28 ಅಂಕಗಳನ್ನು ಪಡೆದುಕೊಂಡಿದೆ. ಒಟ್ಟಾರೆ ಸುರಕ್ಷಾ ಗುಣಮಟ್ಟ ಮತ್ತು ಅಪಘಾತದ ಸಂದರ್ಭದಲ್ಲಿ ಕಾರಿನಲ್ಲಿರುವ ಪ್ರಯಾಣಿಕರಿಗೆ ಒದಗಿಸಲಾಗುವ ಸುರಕ್ಷಾ ಮಾರ್ಗಸೂಚಿಗಳ ಆಧಾರದ ಮೇಲೆ ಒಟ್ಟು 70.60 ಅಂಕಗಳನ್ನು ನೀಡಲಾಗಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗುಣಮಟ್ಟದ ಕಾರು ಮಾದರಿಯಾಗಿ ಗುರುತಿಸಿಕೊಳ್ಳಲು ಹೊಸ ಕಾರುಗಳು ಕನಿಷ್ಠ 3 ಅಂಕಗಳನ್ನು ಪಡೆದುಕೊಳ್ಳುವ ಅವಶ್ಯಕತೆಯಿದ್ದು, 3 ಅಂಕಗಳಿಂತಲೂ ಕಡಿಮೆ ರೇಟಿಂಗ್ಸ್ ಪಡೆದುಕೊಂಡಲ್ಲಿ ಅಂತಹ ಕಾರುಗಳನ್ನು ಕಳಪೆ ಕಾರು ಮಾದರಿಯೆಂದು ಪರಿಗಣಿಸಲಾಗುತ್ತದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಇದೀಗ ಮ್ಯಾಗ್ನೈಟ್ ಕಾರು ಒಟ್ಟು 5 ಸ್ಟಾರ್ ರೇಟಿಂಗ್ಸ್‌ನಲ್ಲಿ 4 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಮೂಲಕ ಎಂಟ್ರಿ ಲೆವಲ್ ಕಾರು ಮಾರಾಟದಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ಸುರಕ್ಷತೆಗಾಗಿ ಹೊಸ ಕಾರಿನಲ್ಲಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ.

ಜೊತೆಗೆ ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್‌ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್‌ನ ಕನೆಕ್ಟ್ ಫೀಚರ್ಸ್ ನೀಡಲಾಗಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಪ್ರತಿಸ್ಪರ್ಧಿ ಕಾರುಗಳಿಂತಲೂ ಅತಿಕಡಿಮೆ ಬೆಲೆಯೊಂದಿಗೆ ಖರೀದಿಗೆ ಲಭ್ಯವಿರುವ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.9.35 ಲಕ್ಷ ಬೆಲೆ ಹೊಂದಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹೊಸ ಕಾರಿನಲ್ಲಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗಿದೆ.