Just In
- 7 hrs ago
ಕೊನೆಯ ಆಸೆಯೆಂತೆ ರಾಜಕುಮಾರ ಪ್ರಿನ್ಸ್ ಫಿಲಿಪ್ ಅಂತಿಮ ಯಾತ್ರೆಗೆ ಸಿದ್ದವಾಗಿದೆ ಮಾಡಿಫೈ ಲ್ಯಾಂಡ್ ರೋವರ್
- 9 hrs ago
ಜಪಾನ್ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ 2021ರ ಸುಜುಕಿ ಜಿಕ್ಸರ್ 250 ಬೈಕ್
- 10 hrs ago
ಆಕರ್ಷಕ ಬೆಲೆಯಲ್ಲಿ ದೇಶದ ಮೊದಲ ಹೈಬ್ರಿಡ್ ಟ್ರ್ಯಾಕ್ಟರ್ ಬಿಡುಗಡೆ
- 10 hrs ago
ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್
Don't Miss!
- Lifestyle
ಗುರುವಾರದ ದಿನ ಭವಿಷ್ಯ: ಈ ದಿನ ಹೇಗಿದೆ ನಿಮ್ಮ ರಾಶಿಫಲ
- News
ಬೆಂಗಳೂರಿನಲ್ಲಿ ಭೀತಿ: ಕೊರೊನಾ ಹೆಚ್ಚು ರೆಮ್ಡೆಸಿವಿರ್ ಔಷಧಿ ಕಡಿಮೆ!
- Sports
ಐಪಿಎಲ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ಆರ್ಸಿಬಿ!
- Finance
ಚಿನ್ನ, ಬೆಳ್ಳಿ ಸ್ವಲ್ಪ ಕುಸಿತ: ಏಪ್ರಿಲ್ 14ರಂದು ಎಲ್ಲೆಡೆ ಬೆಲೆ ಎಷ್ಟಿದೆ?
- Movies
40, 50, 60ರ ಸೀಕ್ರೆಟ್ ಬಿಚ್ಚಿಟ್ಟ ಕ್ರೇಜಿಸ್ಟಾರ್ ರವಿಚಂದ್ರನ್
- Education
SSLC Exams 2021: ಸಿಬಿಎಸ್ಇ ಪರೀಕ್ಷೆ ರದ್ದು ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಊಹಾಪೋಹ: ಸುರೇಶ್ ಕುಮಾರ್ ಸ್ಪಷ್ಟನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಫೆಬ್ರವರಿ ಅವಧಿಯಲ್ಲಿ ಭಾರೀ ಪ್ರಮಾಣದ ಕಾರು ಮಾರಾಟ ಮಾಡಿದ ಮಹೀಂದ್ರಾ
ಮಹೀಂದ್ರಾ ಕಂಪನಿಯು 2021ರ ಫೆಬ್ರವರಿ ಅವಧಿಯಲ್ಲಿನ ಕಾರು ಮಾರಾಟ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಹೀಂದ್ರಾ ಕಂಪನಿಯು ಕಳೆದ ವರ್ಷದ ಫೆಬ್ರವರಿ ಅವಧಿಯಲ್ಲಿನ ಕಾರು ಮಾರಾಟಕ್ಕಿಂತಲೂ ಭಾರೀ ಮುನ್ನಡೆ ಕಾಯ್ದುಕೊಂಡಿದೆ.

2020ರ ಫೆಬ್ರವರಿ ಅವಧಿಯಲ್ಲಿ 10,756 ಯನಿಟ್ ಕಾರುಗಳನ್ನು ಮಾರಾಟ ಮಾಡಿದ್ದ ಮಹೀಂದ್ರಾ ಕಂಪನಿಯು 2021ರ ಫೆಬ್ರವರಿಯಲ್ಲಿ 15,380 ಯುನಿಟ್ ಕಾರುಗಳನ್ನು ಮಾರಾಟ ಮಾಡುವ ಮೂಲಕ ಶೇ.43 ರಷ್ಟು ಹೆಚ್ಚು ಬೇಡಿಕೆ ಪಡೆದುಕೊಂಡಿದೆ. ಆದರೆ ತಿಂಗಳ ವಾಹನ ಮಾರಾಟದಲ್ಲಿ ಕಳೆದ ಜನವರಿ ತಿಂಗಳಿಗಿಂತಲೂ ಶೇ. 25ರಷ್ಟು ಹಿನ್ನಡೆ ಅನುಭವಿಸಿದ್ದು, ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳು ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಿದೆ.

ಸದ್ಯ ಟಾಟಾ ಮೋಟಾರ್ಸ್ ಮತ್ತು ಕಿಯಾ ಮೋಟಾರ್ಸ್‌ನೊಂದಿಗೆ ಉತ್ತಮ ಪೈಪೋಟಿ ಹೊಂದಿರುವ ಮಹೀಂದ್ರಾ ಕಂಪನಿಯು ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳ ಮೂಲಕ ಪ್ರತಿ ತಿಂಗಳು 30 ಸಾವಿರ ಯುನಿಟ್ ಮಾರಾಟ ಗುರಿಹೊಂದಿದೆ.

ಮಹೀಂದ್ರಾ ಕಾರುಗಳ ಮಾರಾಟ ಪಟ್ಟಿಯಲ್ಲಿ ಸದ್ಯ ಬೊಲೆರೊ ಕಾರು ಮಾದರಿಯು ಅಗ್ರಸ್ಥಾನದಲ್ಲಿದ್ದು, ತದನಂತರದ ಸ್ಥಾನದಲ್ಲಿ ಎಕ್ಸ್‌ಯುವಿ300, ಕೆಯುವಿ100 ನೆಕ್ಸ್ಟ್, ಸ್ಕಾರ್ಪಿಯೋ, ಎಕ್ಸ್‌ಯುವಿ 500, ಮರಾಜೋ, ಥಾರ್, ಅಲ್ಟುರಾಸ್ ಜಿ4 ಕಾರುಗಳು ಸ್ಥಾನಪಡೆದುಕೊಂಡಿವೆ.

ಮಾಹಿತಿಗಳ ಪ್ರಕಾರ, ಮಹೀಂದ್ರಾ ಹೊಸ ಕಾರುಗಳಿಗೆ ಬೇಡಿಕೆ ಹೆಚ್ಚಿದ್ದರೂ ಕೂಡಾ ಬಿಡಿಭಾಗಗಳ ಕೊರತೆ ಹಿನ್ನಲೆಯಲ್ಲಿ ವಾಹನ ಮಾರಾಟದಲ್ಲಿ ಹಿನ್ನಡೆ ಅನುಭವಿಸುತ್ತಿದೆ ಎನ್ನಲಾಗಿದ್ದು, ಜಾಗತಿಕ ಮಾರುಕಟ್ಟೆಯಲ್ಲಿನ ಎಲೆಕ್ಟ್ರಾನಿಕ್ ಚಿಪ್ ಕೊರತೆಯು ಮಹೀಂದ್ರಾ ಕಾರುಗಳ ಮೇಲೆಯೇ ಹೆಚ್ಚಿನ ಪರಿಣಾಣ ಉಂಟುಮಾಡಿದೆ. ಎಲೆಕ್ಟ್ರಾನಿಕ್ ಚಿಪ್ ಕೊರತೆಯು ಆಟೋ ಉತ್ಪಾದನಾ ಕಂಪನಿಗಳಿಗೆ ಸಂಕಷ್ಟಕ್ಕಿಡು ಮಾಡಿದ್ದು, ವಿದೇಶಿ ಮಾರುಕಟ್ಟೆಯಲ್ಲಿ ಬಿಡಿಭಾಗಗಳನ್ನು ನೆಚ್ಚಿಕೊಂಡಿರುವ ಮಹೀಂದ್ರಾ ಕಂಪನಿಗೆ ಹೆಚ್ಚಿನ ಪರಿಣಾಮ ಬೀರಿದೆ.

ಮಹೀಂದ್ರಾ ನಿರ್ಮಾಣದ ಬಹುತೇಕ ಕಾರುಗಳಿಗೆ ವಿದೇಶಿ ಮಾರುಕಟ್ಟೆಗಳಿಂದ ಹೆಚ್ಚಿನ ಪ್ರಮಾಣದ ಬಿಡಿಭಾಗಗಳು ಆಮದು ಮಾಡಲಾಗುತ್ತಿದ್ದು, ಎಲೆಕ್ಟ್ರಾನಿಕ್ ಚಿಪ್ ಕೊರತೆಯಿಂದಾಗಿ ಹೊಸ ಉತ್ಪಾದನೆಯಲ್ಲಿ ಸಾಕಷ್ಟು ಹಿನ್ನಡೆ ಅನುಭವಿಸಿವೆ.

ಕೋವಿಡ್ ಅವಧಿಯಲ್ಲಿ ಉಂಟಾದ ಆರ್ಥಿಕ ಬಿಕ್ಕಟ್ಟಿನಿಂದಾಗಿ ವಾಹನ ಬಿಡಿಭಾಗಗಳ ಪೂರೈಕೆ ಸರಪಳಿಯಲ್ಲಿ ಆದ ಅಸ್ತವ್ಯಸ್ತವು ಇದೀಗ ಹೊಸ ವಾಹಗಳ ಉತ್ಪಾದನೆ ಕುಂಠಿತಗೊಳ್ಳಲು ಪ್ರಮುಖ ಕಾರಣವಾಗಿದ್ದು. ಎಲೆಕ್ಟ್ರಾನಿಕ್ ಚಿಪ್ ಕೊರತೆಯು ಆಟೋ ಉತ್ಪಾದನಾ ಕಂಪನಿಗಳಿಗೆ ಸಂಕಷ್ಟಕ್ಕಿಡು ಮಾಡಿದೆ.

ಕಳೆದ ಕೆಲ ತಿಂಗಳಿಂದ ಆಟೋಮೊಬೈಲ್ ಜೊತೆಗೆ ಪ್ರಮುಖ ಎಲೆಕ್ಟ್ರಾನಿಕ್ ಸಾಧನಗಳಾದ ಲ್ಯಾಪ್‌ಟಾಪ್, ಮೊಬೈಲ್‌ಗಳು ಹಾಗೂ ಇತರ ಎಲೆಕ್ಟ್ರಾನಿಕ್ ಸಾಧನಗಳಿಗೆ ಭಾರೀ ಬೇಡಿಕೆ ಹರಿದುಬರುತ್ತಿದ್ದು, ಆಟೋಮೊಬೈಲ್ ವಲಯಕ್ಕೆ ಹೆಚ್ಚಿನ ಮಟ್ಟದಲ್ಲಿ ಎಲೆಕ್ಟ್ರಾನಿಕ್ ಚಿಪ್ ಪೂರೈಕೆ ಮಾಡುತ್ತಿದ್ದ ಕಂಪನಿಗಳು ಎಲೆಕ್ಟ್ರಾನಿಕ್ ಸಾಧನೆಗಳಿಗೆ ಹೆಚ್ಚಿನ ಮಟ್ಟದ ಚಿಪ್ ಪೂರೈಕೆ ಮಾಡುತ್ತಿರುವುದು ಆಟೋ ಮೊಬೈಲ್ ಕ್ಷೇತ್ರದ ಮೇಲೆ ಪರಿಣಾಮ ಉಂಟು ಮಾಡುತ್ತಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಎಲೆಕ್ಟ್ರಾನಿಕ್ ಚಿಪ್ ಕೊರತೆಯಿಂದಾಗಿ ಯುರೋಪ್, ಅಮೆರಿಕಾ ಹಾಗೂ ಏಷ್ಯಾದ ಪ್ರಮುಖ ದೇಶಗಳಲ್ಲಿನ ವಾಹನ ಉತ್ಪಾದನೆಯು ಮೇಲೂ ಪರಿಣಾಮ ಉಂಟುಮಾಡುತ್ತಿದ್ದು, ಹೊಸ ಕಾರುಗಳ ಗ್ರಾಹಕರ ಕಾಯುವ ಅವಧಿಯು ಕೂಡಾ 5ರಿಂದ 6 ತಿಂಗಳಿಗೆ ಹೆಚ್ಚಳವಾಗುತ್ತಿದೆ.

ಕಾರಿನ ಪ್ರಮುಖ ಎಲೆಕ್ಟ್ರಾನಿಕ್ ಸಾಧನಗಳ ಸಂಪರ್ಕದಲ್ಲಿ ಪ್ರಮುಖ ಪಾತ್ರವಹಿಸುವ ಸೆಮಿ ಕಂಡಕ್ಟರ್ ಚಿಪ್‌ಗಳನ್ನು ಕಾರಿನ ಡಿಸ್ ಪ್ಲೇ, ಸ್ಪೀಕರ್, ಸ್ಟೆಬಿಲಿಟಿ ಕಂಟ್ರೋಲ್, ಲೈಟಿಂಗ್ ಮುಂತಾದ ಫೀಚರ್ಸ್ ಜೋಡಣೆಯಲ್ಲಿ ಬಳಸಲಾಗುತ್ತದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಆದರೆ ಕರೋನಾ ನಂತರ ಮೊದಲ ಬಾರಿಗೆ ಹೊಸ ವಾಹನಗಳಿಗೆ ಹೆಚ್ಚಿನ ಬೇಡಿಕೆ ಉಂಟಾಗಿರುವ ಸಂದರ್ಭದಲ್ಲೇ ಹೊಸ ಚಿಪ್‌ಗಳ ಕೊರೆತೆಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ವಾಹನಗಳ ಜೊತೆಗೆ ಹೊಸ ವಾಹನಗಳ ಬಿಡುಗಡೆಯ ಮೇಲೂ ಪರಿಣಾಮ ಉಂಟಾಗಿದ್ದು, ಮಹೀಂದ್ರಾ ಕಂಪನಿಯು ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆಗೊಳಿಸಬೇಕಿದ್ದ ನ್ಯೂ ಜನರೇಷನ್ ಎಕ್ಸ್‌ಯುವಿ500 ಮತ್ತು ಸ್ಕಾರ್ಪಿಯೋ ಕಾರುಗಳ ಬಿಡುಗಡೆಯನ್ನು ಸಹ ತಾತ್ಕಾಲಿಕವಾಗಿ ಮುಂದೂಡಲಾಗಿದೆ.