ಆಕ್ಸಿಜನ್ ಆನ್ ವ್ಹೀಲ್ಸ್ ಅಭಿಯಾನಕ್ಕೆ ಚಾಲನೆ ನೀಡಿದ ಆನಂದ್ ಮಹೀಂದ್ರಾ

ಮಹೀಂದ್ರಾ ಅಂಡ್ ಮಹೀಂದ್ರಾ ದೇಶದಲ್ಲಿರುವ ಜನಪ್ರಿಯ ಕಾರು ತಯಾರಕ ಕಂಪನಿಗಳಲ್ಲಿ ಒಂದಾಗಿದೆ. ದೇಶದಲ್ಲಿ ಕರೋನಾ ವೈರಸ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕಂಪನಿಯು ಸರ್ಕಾರ ಹಾಗೂ ಜನರಿಗೆ ನೆರವಾಗಲು ಹೊಸ ಅಭಿಯಾನವನ್ನು ಆರಂಭಿಸಿದೆ.

ಆಕ್ಸಿಜನ್ ಆನ್ ವ್ಹೀಲ್ಸ್ ಅಭಿಯಾನಕ್ಕೆ ಚಾಲನೆ ನೀಡಿದ ಆನಂದ್ ಮಹೀಂದ್ರಾ

ಈ ಅಭಿಯಾನದಲ್ಲಿ ಕಂಪನಿಯು ತನ್ನ ಬೊಲೆರೊ ಪಿಕಪ್ ಟ್ರಕ್ ಮೂಲಕ ಮಹಾರಾಷ್ಟ್ರದಾದ್ಯಂತ ಆಕ್ಸಿಜನ್ ಸಿಲಿಂಡರ್‌ಗಳನ್ನು ಸರಬರಾಜು ಮಾಡಲಿದೆ. ಈ ಬಗ್ಗೆ ಮಾತನಾಡಿರುವ ಮಹೀಂದ್ರಾ ಅಂಡ್ ಮಹೀಂದ್ರಾ ಕಂಪನಿಯ ಅಧ್ಯಕ್ಷರಾದ ಆನಂದ್ ಮಹೀಂದ್ರಾ, ಕಂಪನಿಯು ತನ್ನ 70 ಬೊಲೆರೊ ಟ್ರಕ್‌ಗಳ ಮೂಲಕ ಆಕ್ಸಿಜನ್ ಸಿಲಿಂಡರ್‌ಗಳನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ತಲುಪಿಸಲಿದೆ.

ಆಕ್ಸಿಜನ್ ಆನ್ ವ್ಹೀಲ್ಸ್ ಅಭಿಯಾನಕ್ಕೆ ಚಾಲನೆ ನೀಡಿದ ಆನಂದ್ ಮಹೀಂದ್ರಾ

ಇದೇ ವೇಳೆ ಮುಂದಿನ 48 ಗಂಟೆಗಳಲ್ಲಿ ಮುಂಬೈ, ಥಾಣೆ, ನಾಸಿಕ್ ಹಾಗೂ ನಾಗ್ಪುರದಲ್ಲಿ ಈ ಅಭಿಯಾನವನ್ನು ಆರಂಭಿಸಲಾಗುವುದು ಎಂದು ಹೇಳಿದರು. ಮಹೀಂದ್ರಾ ಅಂಡ್ ಮಹೀಂದ್ರಾ ಕಂಪನಿಯ ಈ ಅಭಿಯಾನಕ್ಕೆ ಆಕ್ಸಿಜನ್ ಆನ್ ವ್ಹೀಲ್ಸ್ ಎಂಬ ಹೆಸರಿಡಲಾಗಿದೆ.

MOST READ:ವಾಹನ ಖರೀದಿಸುವವರಿಗೆ, ಮಾರಾಟ ಮಾಡುವವರಿಗೆ ನೆರವಾಗುವ ಆರ್‌ಟಿಒ ಫಾರಂಗಳಿವು!

ಆಕ್ಸಿಜನ್ ಆನ್ ವ್ಹೀಲ್ಸ್ ಅಭಿಯಾನಕ್ಕೆ ಚಾಲನೆ ನೀಡಿದ ಆನಂದ್ ಮಹೀಂದ್ರಾ

ಆಕ್ಸಿಜನ್ ಆನ್ ವ್ಹೀಲ್ಸ್ ಕಾರ್ಯ ವಿಧಾನ

ಈ ಅಭಿಯಾನವನ್ನು ಸರಾಗವಾಗಿ ನಡೆಸಲು ಕಂಪನಿಯು ಕಂಟ್ರೋಲ್ ರೂಂಗಳನ್ನು ಸ್ಥಾಪಿಸಿದೆ. ಇದರ ಜೊತೆಗೆ ಕಂಪನಿಯು ಆಕ್ಸಿಜನ್ ಸಿಲಿಂಡರ್‌ಗಳನ್ನು ಇರಿಸಲು ಗೊಡಾನ್ ಅನ್ನು ಸಹ ಸಿದ್ಧಪಡಿಸಿದೆ.

ಆಕ್ಸಿಜನ್ ಆನ್ ವ್ಹೀಲ್ಸ್ ಅಭಿಯಾನಕ್ಕೆ ಚಾಲನೆ ನೀಡಿದ ಆನಂದ್ ಮಹೀಂದ್ರಾ

ಹತ್ತಿರದಲ್ಲಿರುವ ಆಕ್ಸಿಜನ್ ಉತ್ಪಾದನಾ ಘಟಕದಲ್ಲಿ ಖಾಲಿ ಸಿಲಿಂಡರ್‌ಗಳನ್ನು ರೀಫಿಲ್ ಮಾಡಲಾಗುತ್ತದೆ. ಕರೋನಾ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ದೇಶದ ಬಹುತೇಕ ಎಲ್ಲಾ ರಾಜ್ಯಗಳು ಕೆಟ್ಟ ಪರಿಸ್ಥಿತಿಯನ್ನು ಎದುರಿಸುತ್ತಿವೆ.

MOST READ:ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು

ಆಕ್ಸಿಜನ್ ಆನ್ ವ್ಹೀಲ್ಸ್ ಅಭಿಯಾನಕ್ಕೆ ಚಾಲನೆ ನೀಡಿದ ಆನಂದ್ ಮಹೀಂದ್ರಾ

ಎಲ್ಲಾ ರಾಜ್ಯಗಳಿಗಿಂತ ಕೆಟ್ಟ ಪರಿಸ್ಥಿತಿಯನ್ನು ಮಹಾರಾಷ್ಟ್ರ ರಾಜ್ಯವು ಎದುರಿಸುತ್ತಿದೆ. ಮಹಾರಾಷ್ಟ್ರದಲ್ಲಿ ಇದುವರೆಗೂ ಒಟ್ಟು 46 ಲಕ್ಷಕ್ಕೂ ಹೆಚ್ಚು ಕರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ಈ ಪೈಕಿ ಸುಮಾರು 68 ಸಾವಿರ ಜನರು ಚಿಕಿತ್ಸೆಯ ಪಡೆಯುವ ಸಂದಭದಲ್ಲಿ ಮೃತ ಪಟ್ಟಿದ್ದಾರೆ.

ಆಕ್ಸಿಜನ್ ಆನ್ ವ್ಹೀಲ್ಸ್ ಅಭಿಯಾನಕ್ಕೆ ಚಾಲನೆ ನೀಡಿದ ಆನಂದ್ ಮಹೀಂದ್ರಾ

ಇಂತಹ ಸನ್ನಿವೇಶದಲ್ಲಿ ಮಹೀಂದ್ರಾ ಕಂಪನಿಯು ಮಹಾರಾಷ್ಟ್ರದಲ್ಲಿ ಆಕ್ಸಿಜನ್ ಆನ್ ವ್ಹೀಲ್ಸ್ ಅಭಿಯಾನವನ್ನು ಆರಂಭಿಸಿದೆ. ಸದ್ಯಕ್ಕೆ ಈ ಅಭಿಯಾನವನ್ನು ಮಹಾರಾಷ್ಟ್ರದಲ್ಲಿ ಮಾತ್ರ ಆರಂಭಿಸಲಾಗಿದೆ ಎಂದು ಆನಂದ್ ಮಹೀಂದ್ರಾ ಹೇಳಿದ್ದಾರೆ.

MOSTREAD: 10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್

ಆಕ್ಸಿಜನ್ ಆನ್ ವ್ಹೀಲ್ಸ್ ಅಭಿಯಾನಕ್ಕೆ ಚಾಲನೆ ನೀಡಿದ ಆನಂದ್ ಮಹೀಂದ್ರಾ

ಶೀಘ್ರದಲ್ಲೇ ಈ ಅಭಿಯಾನವನ್ನು ದೇಶದ ಇತರ ರಾಜ್ಯಗಳಲ್ಲಿಯೂ ಆರಂಭಿಸಲಾಗುವುದು. ಈ ಅಭಿಯಾನದಲ್ಲಿ ನಾವು ನಮ್ಮ ವಿಶ್ವಾಸಾರ್ಹ ಸ್ಥಳೀಯ ವ್ಯಾಪಾರಿಗಳ ಸಹಾಯವನ್ನೂ ಪಡೆಯುತ್ತೇವೆ ಎಂದು ಅವರು ಹೇಳಿದರು.

ಆಕ್ಸಿಜನ್ ಆನ್ ವ್ಹೀಲ್ಸ್ ಅಭಿಯಾನಕ್ಕೆ ಚಾಲನೆ ನೀಡಿದ ಆನಂದ್ ಮಹೀಂದ್ರಾ

ಈ ಮೂಲಕ ಸ್ಥಳೀಯ ಆಡಳಿತಕ್ಕೆ ಸಾಧ್ಯವಿರುವ ಎಲ್ಲ ನೆರವನ್ನು ನೀಡುತ್ತೇವೆ ಎಂದು ಆನಂದ್ ಮಹೀಂದ್ರಾ ತಿಳಿಸಿದರು. ಸದ್ಯಕ್ಕೆ ಮಹಾರಾಷ್ಟ್ರ ಹಾಗೂ ದೆಹಲಿಯ ಪರಿಸ್ಥಿತಿ ಗಂಭೀರವಾಗಿದೆ.

Most Read Articles

Kannada
English summary
Mahindra and Mahindra company starts oxygen on wheels campaign in Maharashtra. Read in Kannada.
Story first published: Monday, May 3, 2021, 20:26 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X