ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮೇಲೆ ಒಟ್ಟು ರೂ.12 ಸಾವಿರ ಕೋಟಿ ಹೂಡಿಕೆ ಮಾಡಿದ ಮಹೀಂದ್ರಾ

ವಿಶ್ವಾದ್ಯಂತ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯು ವೇಗವಾಗಿ ಬೆಳವಣಿಗೆ ಸಾಧಿಸುತ್ತಿದ್ದು, ಎಲೆಕ್ಟ್ರಿಕ್ ವಾಹನ ವಿಭಾಗದಲ್ಲಿ ಮುಂಚೂಣಿ ಸಾಧಿಸಿರುವ ಮಹೀಂದ್ರಾ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ಯೋಜನೆಗಳನ್ನು ಜಾರಿಗೆ ತರುವ ಸಿದ್ದತೆಯಲ್ಲಿದೆ.

ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮೇಲೆ ಒಟ್ಟು ರೂ.12 ಸಾವಿರ ಕೋಟಿ ಹೂಡಿಕೆ ಮಾಡಿದ ಮಹೀಂದ್ರಾ

ಪ್ರಸ್ತುತ ಮಾರುಕಟ್ಟೆಯಲ್ಲಿನ ಎಲೆಕ್ಟ್ರಿಕ್ ವಾಹನ ಮಾರಾಟದಲ್ಲಿ ಈಗಾಗಲೇ ಸಾಕಷ್ಟು ಮುಂಚೂಣಿ ಸಾಧಿಸಿರುವ ಮಹೀಂದ್ರಾ ಆ್ಯಂಡ್ ಮಹೀಂದ್ರಾ ಕಂಪನಿಯ ಮಹೀಂದ್ರಾ ಎಲೆಕ್ಟ್ರಿಕ್ ವಿಭಾಗವು ಹೊಸ ಇವಿ ವಾಹನ ಉತ್ಪನ್ನ ಬಿಡುಗಡೆ ಸಿದ್ದವಾಗುತ್ತಿದ್ದು, ಇವಿ ಉದ್ಯಮದಲ್ಲಿ ಈಗಾಗಲೇ ರೂ. 9 ಸಾವಿರ ಕೋಟಿ ಹೂಡಿಕೆ ಮಾಡಿದೆ. ಇದೀಗ ಹೊಸ ಯೋಜನೆಗಳಿಗಾಗಿ ಮತ್ತು ತಂತ್ರಜ್ಞಾನಗಳ ಉನ್ನತೀಕರಣಕ್ಕಾಗಿ ಹೆಚ್ಚುವರಿಯಾಗಿ ರೂ. 3 ಸಾವಿರ ಕೋಟಿ ಹೂಡಿಕೆಗೆ ಒಪ್ಪಿಗೆ ಸೂಚಿಸಿದೆ.

ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮೇಲೆ ಒಟ್ಟು ರೂ.12 ಸಾವಿರ ಕೋಟಿ ಹೂಡಿಕೆ ಮಾಡಿದ ಮಹೀಂದ್ರಾ

2010ರಲ್ಲಿ ರೆವಾ ಎಲೆಕ್ಟ್ರಿಕ್ ಕಂಪನಿಯೊಂದಿಗಿನ ಹೂಡಿಕೆಯಿಂದ ಇದುವರೆಗೆ ಸುಮಾರು ರೂ. 9 ಸಾವಿರ ಕೋಟಿ ಬಂಡವಾಳ ಹೂಡಿಕೆಯೊಂದಿಗೆ ಹಲವಾರು ಎಲೆಕ್ಟ್ರಿಕ್ ವಾಹನಗಳನ್ನು ಪರಿಚಯಿಸಿರುವ ಮಹೀಂದ್ರಾ ಕಂಪನಿಯು ಇದೀಗ ಸುಧಾರಿತ ತಂತ್ರಜ್ಞಾನ ಪ್ರೇರಿತ ವಾಹನಗಳ ಅಭಿವೃದ್ದಿಯತ್ತ ಹೆಚ್ಚಿನ ಗಮನಹರಿಸುತ್ತಿದೆ.

ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮೇಲೆ ಒಟ್ಟು ರೂ.12 ಸಾವಿರ ಕೋಟಿ ಹೂಡಿಕೆ ಮಾಡಿದ ಮಹೀಂದ್ರಾ

ಪ್ರಯಾಣಿಕ ವಾಹನಗಳಲ್ಲಿ ಮಾತ್ರವಲ್ಲ ವಾಣಿಜ್ಯ ವಾಹನಗಳ ವಿಭಾಗದಲ್ಲೂ ಎಲೆಕ್ಟ್ರಿಕ್ ಮಾದರಿಗಳನ್ನು ಪರಿಚಯಿಸಿರುವ ಮಹೀಂದ್ರಾ ಕಂಪನಿಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಪ್ರಮುಖ ಬದಲಾವಣೆಗಳೊಂದಿಗೆ ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡುತ್ತಿದೆ.

ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮೇಲೆ ಒಟ್ಟು ರೂ.12 ಸಾವಿರ ಕೋಟಿ ಹೂಡಿಕೆ ಮಾಡಿದ ಮಹೀಂದ್ರಾ

ಮಹೀಂದ್ರಾ ಕಂಪನಿಯು ಕೇವಲ ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮಾತ್ರವಲ್ಲದೆ ಸಂಶೋಧನೆ, ವಿಶ್ವಾದ್ಯಂತ ನೂರಾರು ಇವಿ ಸ್ಟಾರ್ಟ ಅಪ್ ಕಂಪನಿಗಳಲ್ಲೂ ಹಣ ಹೂಡಿಕೆ ಮಾಡಿದ್ದು, ಭವಿಷ್ಯದ ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮತ್ತು ಮಾರಾಟದಲ್ಲಿ ಮಹತ್ವದ ಪಾತ್ರವಹಿಸಲಿದೆ. ಇದೀಗ ಹೊಸ ಬಂಡವಾಳದೊಂದಿಗೆ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗಾಗಿ ಹೊಸ ಪ್ಲ್ಯಾಟ್‌ಫಾರ್ಮ್ ಸಿದ್ದಪಡಿಸುತ್ತಿದ್ದು, ಒಂದೇ ಪ್ಲ್ಯಾಟ್‌ಫಾರ್ಮ್ ಅಡಿ ಹಲವು ವಾಹನ ಮಾದರಿಗಳನ್ನು ನಿರ್ಮಾಣ ಮಾಡುವ ಗುರಿಹೊಂದಿದೆ.

ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮೇಲೆ ಒಟ್ಟು ರೂ.12 ಸಾವಿರ ಕೋಟಿ ಹೂಡಿಕೆ ಮಾಡಿದ ಮಹೀಂದ್ರಾ

ಭಾರತದಲ್ಲಿ ವಿವಿಧ ಮಾದರಿಯ ಹಲವು ಎಲೆಕ್ಟ್ರಿಕ್ ವಾಹನಗಳ ಮಾರಾಟವನ್ನು ಹೊಂದಿರುವ ಮಹೀಂದ್ರಾ ಎಲೆಕ್ಟ್ರಿಕ್ ಕಂಪನಿಯು ಶೀಘ್ರದಲ್ಲೇ ತನ್ನ ಬಹುನೀರಿಕ್ಷಿತ ಕೆಯುವಿ100 ಇವಿ ಮತ್ತು ಎಕ್ಸ್‌ಯುವಿ300 ಇವಿ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮೇಲೆ ಒಟ್ಟು ರೂ.12 ಸಾವಿರ ಕೋಟಿ ಹೂಡಿಕೆ ಮಾಡಿದ ಮಹೀಂದ್ರಾ

ಕಳೆದ 2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಕೆಯುವಿ100 ಎಲೆಕ್ಟ್ರಿಕ್, ಎಕ್ಸ್‌ಯುವಿ300 ಎಲೆಕ್ಟ್ರಿಕ್ ಮತ್ತು ಅಟಾಮ್ ಕ್ವಾರ್ಡ್ರಿಸೈಕಲ್ ಮಾದರಿಗಳನ್ನು ಪ್ರದರ್ಶನ ಮಾಡಿದ್ದ ಮಹೀಂದ್ರಾ ಎಲೆಕ್ಟ್ರಿಕ್ ಕಂಪನಿಯು ಪ್ರದರ್ಶನದ ವೇಳೆ ಕೆಯುವಿ100 ಎಲೆಕ್ಟ್ರಿಕ್ ಕಾರು ಮಾದರಿಯ ಬೆಲೆ ಮಾಹಿತಿ ಮಾತ್ರವೇ ಹಂಚಿಕೊಳ್ಳುವ ಮೂಲಕ ಮುಂದಿನ ಕೆಲವೇ ದಿನಗಳಲ್ಲಿ ವಿತರಣೆ ಮಾಡುವುದಾಗಿ ಹೇಳಿಕೊಂಡಿತ್ತು.

ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮೇಲೆ ಒಟ್ಟು ರೂ.12 ಸಾವಿರ ಕೋಟಿ ಹೂಡಿಕೆ ಮಾಡಿದ ಮಹೀಂದ್ರಾ

ಆದರೆ ಮಾರ್ಚ್ ಹೊತ್ತಿಗೆ ಕರೋನಾ ವೈರಸ್ ಹೆಚ್ಚಾದ ಹಿನ್ನಲೆ ಲಾಕ್‌ಡೌನ್ ಮಾಡಿದ ಪರಿಣಾಮ ಹೊಸ ಎಲೆಕ್ಟ್ರಿಕ್ ವಾಹನಗಳ ಬಿಡುಗಡೆಯನ್ನು ಮುಂದೂಡಿಕೆ ಮಾಡುತ್ತ ಬಂದಿರುವ ಮಹೀಂದ್ರಾ ಕಂಪನಿಯು ಇದೀಗ ಹೊಸ ವಾಹನಗಳ ಬಿಡುಗಡೆಯ ಸಿದ್ದತೆಯಲ್ಲಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮೇಲೆ ಒಟ್ಟು ರೂ.12 ಸಾವಿರ ಕೋಟಿ ಹೂಡಿಕೆ ಮಾಡಿದ ಮಹೀಂದ್ರಾ

ಮಹೀಂದ್ರಾ ಕಂಪನಿಯು ಸದ್ಯ ಕೆಯುವಿ100 ಎಲೆಕ್ಟ್ರಿಕ್, ಇಎಕ್ಸ್‌ಯುವಿ300 ಎಲೆಕ್ಟ್ರಿಕ್ ಮತ್ತು ಅಟಾಮ್ ಕ್ವಾರ್ಡ್ರಿಸೈಕಲ್ ಮಾದರಿಗಳ ಬಿಡುಗಡೆಯ ಸಿದ್ದತೆಯಲ್ಲಿದ್ದು, ಮುಂಬರುವ ದಿನಗಳಲ್ಲಿ ಹಂತ-ಹಂತವಾಗಿ ಹೊಸ ಕಾರುಗಳು ರಸ್ತೆಗಿಳಿಯಲಿವೆ.

ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮೇಲೆ ಒಟ್ಟು ರೂ.12 ಸಾವಿರ ಕೋಟಿ ಹೂಡಿಕೆ ಮಾಡಿದ ಮಹೀಂದ್ರಾ

ಇಕೆಯುವಿ100 ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ.8.25 ಲಕ್ಷ ಬೆಲೆ ಹೊಂದಿದ್ದು, 15.9kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್‌ನೊಂದಿಗೆ ಪ್ರತಿ ಚಾರ್ಜ್‌ಗೆ 120ರಿಂದ 150 ಕಿ.ಮೀ ಮೈಲೇಜ್ ಸಾಮರ್ಥ್ಯ ಹೊಂದಿದ್ದು, ಹೊಸ ಕಾರು ವಿತರಣೆ ಆರಂಭಕ್ಕೂ ಮತ್ತಷ್ಟು ಹೊಸ ಮಾದರಿಯ ರೋಡ್ ಟೆಸ್ಟಿಂಗ್ ನಡೆಸಲಾಗುತ್ತಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮೇಲೆ ಒಟ್ಟು ರೂ.12 ಸಾವಿರ ಕೋಟಿ ಹೂಡಿಕೆ ಮಾಡಿದ ಮಹೀಂದ್ರಾ

ಇಕೆಯುವಿ100 ನಂತರ ಕಂಪನಿಯು ಇಎಕ್ಸ್‌ಯುವಿ300 ಕಂಪ್ಯಾಕ್ಟ್ ಎಸ್‌ಯುವಿ ಮತ್ತು ಅಟಾಮ್ ಕ್ವಾರ್ಡ್ರಿಸೈಕಲ್ ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಮಧ್ಯಮ ಗಾತ್ರದ ಎಲೆಕ್ಟ್ರಿಕ್ ಕಾರುಗಳ ವಿಭಾಗದಲ್ಲಿ ಇಎಕ್ಸ್‌ಯುವಿ300 ಕಾರು ಕೂಡಾ ಹೊಸ ಸಂಚಲನ ಮೂಡಿಸಲಿದೆ.

Article Published On: Tuesday, April 13, 2021, 8:45 [IST]
English summary
Mahindra Announces Additional Investment Of Rs 3,000 Crore In Its EV Business. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+