ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಅಟಾಮ್

ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ತೀವ್ರ ಬೆಳವಣಿಗೆ ಕಂಡುಬರುತ್ತಿರುವ ಹಿನ್ನಲೆಯಲ್ಲಿ ಹಲವಾರು ಹೊಸ ವಾಹನ ಉತ್ಪಾದನಾ ಕಂಪನಿಗಳು ವಿವಿಧ ಮಾದರಿಯ ಇವಿ ವಾಹನಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತಿದ್ದು, ಮಹೀಂದ್ರಾ ಕಂಪನಿಯು ಕೂಡಾ ತನ್ನ ಪ್ರಮುಖ ಇವಿ ಮಾದರಿಗಳೊಂದಿಗೆ ಎಲೆಕ್ಟ್ರಿಕ್ ವಾಹನ ಮಾರಾಟದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಅಟಾಮ್

ಮಹೀಂದ್ರಾ ಹೊಸ ಎಲೆಕ್ಟ್ರಿಕ್ ವಾಹನಗಳ ಪಟ್ಟಿಯಲ್ಲಿ ಇಕೆಯುವಿ100, ಇಎಕ್ಸ್‌ಯುವಿ300 ಮತ್ತು ಅಟಾಮ್ ಕ್ವಾರ್ಡ್ರಿಸೈಕಲ್ ವಾಹನವು ಪ್ರಮುಖವಾಗಿದ್ದು, ಅಟಾಮ್ ಕ್ವಾರ್ಡ್ರಿಸೈಕಲ್ ಮಾದರಿಯ ಬಿಡುಗಡೆಗೆ ಮಹೀಂದ್ರಾ ಕಂಪನಿಯು ಇದೀಗ ಅಂತಿಮ ಹಂತದ ಸಿದ್ದತೆ ನಡೆಸುತ್ತಿದೆ. ಕರೋನಾ ವೈರಸ್ ಪರಿಣಾಮ ಹೊಸ ಎಲೆಕ್ಟ್ರಿಕ್ ವಾಹನಗಳ ಬಿಡುಗಡೆಯನ್ನು ತಾತ್ಕಾಲಿಕವಾಗಿ ಮುಂಡೂಡಿಕೆ ಮಾಡಿದ್ದ ಮಹೀಂದ್ರಾ ಕಂಪನಿಯು ಇದೀಗ ಹೊಸ ವಾಹನಗಳ ರೋಡ್ ಟೆಸ್ಟಿಂಗ್ ಪ್ರಕ್ರಿಯೆ ಮರುಚಾಲನೆ ನೀಡಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಅಟಾಮ್

ಅಟಾಮ್ ಕ್ವಾರ್ಡ್ರಿಸೈಕಲ್ ಮಾದರಿಯು ಉತ್ಪಾದನಾ ಮಾದರಿಯೊಂದಿಗೆ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಯಲ್ಲಿ ಭಾಗಿಯಾಗಿರುವುದು ಕಂಡುಬಂದಿದ್ದು, ನಮ್ಮ ಬೆಂಗಳೂರಿನ ಹೊರಭಾಗದಲ್ಲಿ ಹೊಸ ಇವಿ ವಾಹನವು ರೋಡ್ ಟೆಸ್ಟಿಂಗ್ ನಡೆಸುತ್ತಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಅಟಾಮ್

2022-23ರ ಅವಧಿಯಲ್ಲಿ ಒಟ್ಟು ಮೂರು ಹೊಸ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡಲು ಸಿದ್ದವಾಗಿರುವ ಮಹೀಂದ್ರಾ ಕಂಪನಿಯು ಮೊದಲಿಗೆ 2022ರಲ್ಲಿ ಇಕೆಯುವಿ100 ಮತ್ತು ಅಟಾಮ್ ಕ್ವಾರ್ಡ್ರಿಸೈಕಲ್ ಬಿಡುಗಡೆ ಮಾಡಲಿದ್ದು, 2023ರ ಮಧ್ಯಂತರದಲ್ಲಿ ಇಎಕ್ಸ್‌ಯುವಿ300 ಬಿಡುಗಡೆ ಮಾಡಲಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಅಟಾಮ್

ಮಹೀಂದ್ರಾ ಕಂಪನಿಯು ಸದ್ಯ ಹೊಸ ನಿಯಮಗಳಿಗೆ ಅನುಗುಣವಾಗಿ ತನ್ನ ಭವಿಷ್ಯದ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಅಭಿವೃದ್ಧಿಪಡಿಸುತ್ತಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ಸುರಕ್ಷತೆ ನೀಡುವ ಉದ್ದೇಶದಿಂದ ಈ ಹಿಂದಿನ ಇ2ಓ ಪ್ಲಸ್ ಕಾರಿನ ಉತ್ಪಾದನೆ ಸ್ಥಗಿತಗೊಳಿಸಿರುವ ಕಂಪನಿಯು ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನ ಉತ್ಪನ್ನಗಳ ಮೇಲೆ ಹೆಚ್ಚಿನ ಗಮನಹರಿಸುತ್ತಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಅಟಾಮ್

ಗ್ರಾಹಕರ ಬೇಡಿಕೆಯೆಂತೆ ವಿಶೇಷ ಫೀಚರ್ಸ್ ಮತ್ತು ಅತ್ಯುತ್ತಮ ಬ್ಯಾಟರಿ ಆಯ್ಕೆ ಹೊಂದಲಿರುವ ಹೊಸ ಎಲೆಕ್ಟ್ರಿಕ್ ಪ್ರಯಾಣಿಕರ ಕಾರುಗಳು ಮತ್ತು ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳ ಬಿಡುಗಡೆಯ ಮೇಲೂ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಅಟಾಮ್

ಇದರಲ್ಲಿ 2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಂಡಿದ್ದ ಅಟಾಮ್ ಕ್ವಾರ್ಡ್ರಿಸೈಕಲ್ ಎಲೆಕ್ಟ್ರಿಕ್ ವಾಹನವು ಒಂದಾಗಿದ್ದು, ಈ ವಾಹನವು 15kW ಸಾಮರ್ಥ್ಯದ ಲೀಥಿಯಂ ಅಲಾಯ್ ಬ್ಯಾಟರಿ ಪ್ಯಾಕ್‌ ಹೊಂದಿರಲಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಅಟಾಮ್

ಈ ಮೂಲಕ ಹೊಸ ಎಲೆಕ್ಟ್ರಿಕ್ ವಾಹನವು ಪ್ರತಿ ಚಾರ್ಜ್‌ಗೆ 120ಕಿ.ಮೀ ನಿಂದ 150ಕಿ.ಮೀ ಮೈಲೇಜ್ ಹಿಂದಿರುಗಿಸುವ ಸಾಧ್ಯತೆಗಳಿದ್ದು, ಹೊಸ ಎಲೆಕ್ಟ್ರಿಕ್ ವಾಹನವನ್ನು ಬೆಂಗಳೂರಿನಲ್ಲಿರುವ ಮಹೀಂದ್ರಾ ರೆವಾ ಎಲೆಕ್ಟ್ರಿಕ್ ವಾಹನ ಘಟಕದಲ್ಲಿ ಅಭಿವೃದ್ದಿಗೊಳಿಸಲಾಗುತ್ತಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಅಟಾಮ್

ಹಾಗೆಯೇ ಹೊಸ ವಾಹನದಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಕಾರಿನ ಹೊರಭಾಗದಲ್ಲಿ ಮಾತ್ರವಲ್ಲದೇ ಒಳಭಾಗದಲ್ಲೂ ಆಕರ್ಷಕ ಆಸನ ಸೌಲಭ್ಯದೊಂದಿಗೆ ದೊಡ್ಡದಾದ ಕ್ಯಾಬಿನ್ ಸೇರಿದಂತೆ ವಿವಿಧ ತಾಂತ್ರಿಕ ಅಂಶಗಳನ್ನು ಹೊಂದಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಅಟಾಮ್

ಅನಾವರಣ ಹೊರತುಪಡಿಸಿ ಅಟಾಮ್ ಬಗ್ಗೆ ಯಾವುದೇ ತಾಂತ್ರಿಕ ಮಾಹಿತಿ ಬಿಟ್ಟುಕೊಟ್ಟಿಲ್ಲವಾದರೂ ಈ ಹೊಸ ಎಲೆಕ್ಟ್ರಿಕ್ ವಾಹನವು ಬಜಾಜ್ ಬಿಡಗಡೆ ಮಾಡಲಿರುವ ಎಲೆಕ್ಟ್ರಿಕ್ ಕ್ಯೂಟ್ ಕ್ವಾರ್ಡ್ರಿಸೈಕಲ್‌ಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಅಟಾಮ್

ಹೊಸ ಕಾರುಗಳ ಬಿಡುಗಡೆಗಾಗಿ ಬೃಹತ್ ಯೋಜನೆ ರೂಪಿಸಿರುವ ಮಹೀಂದ್ರಾ ಕಂಪನಿಯು ಮುಂದಿನ ಐದು ವರ್ಷಗಳಲ್ಲಿ ಒಟ್ಟು 13 ಕಾರುಗಳನ್ನು ಬಿಡುಗಡೆ ಮಾಡುವ ನಿರ್ಣಯ ಕೈಗೊಂಡಿದ್ದು, ಹೊಸ ಕಾರುಗಳಲ್ಲಿ ಒಟ್ಟು ಎಂಟು ಎಲೆಕ್ಟ್ರಿಕ್ ಕಾರುಗಳು ಮತ್ತು ಐದು ಸಾಮಾನ್ಯ ಕಾರು ಮಾದರಿಗಳ ಬಿಡುಗಡೆಯಾಗಲಿವೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಅಟಾಮ್

ಹೊಸ ಎಲೆಕ್ಟ್ರಿಕ್ ಕಾರುಗಳು 2022ರಿಂದ ಹಂತ-ಹಂತವಾಗಿ ಮಾರುಕಟ್ಟೆ ಪ್ರವೇಶಿಸಲಿದ್ದು, 2022ರಿಂದ 2027ರ ತನಕ ಎಂಟು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿರುವ ಮಹೀಂದ್ರಾ ಕಂಪನಿಯು ಆರಂಭಿಕವಾಗಿ ಇಕೆಯುವಿ100 ನಂತರ ಅಟಾಮ್ ಕ್ವಾರ್ಡ್ರಿಸೈಕಲ್ ಬಿಡುಗಡೆ ಮಾಡಲಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಅಟಾಮ್

ಎಲೆಕ್ಟ್ರಿಕ್ ಕಾರು ಮಾದರಿಗಳಾಗಿ ಹೊಸದಾಗಿ ಡೀಸೆಲ್ ಕಾರುಗಳ ಅಭಿವೃದ್ದಿಯನ್ನು ಹಂತ-ಹಂತವಾಗಿ ಕಡಿತಗೊಳಿಸುತ್ತಿದ್ದು, ಎಲೆಕ್ಟ್ರಿಕ್ ಕಾರು ಮಾದರಿಗಳ ಮೇಲೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಅಟಾಮ್

ಎಲೆಕ್ಟ್ರಿಕ್ ವಾಹನ ಉದ್ಯಮದಲ್ಲಿ ಮೇಲೆ ಈಗಾಗಲೇ ಭಾರೀ ಪ್ರಮಾಣದ ಹೂಡಿಕೆ ಮಾಡಿರುವ ಮಹೀಂದ್ರಾ ಕಂಪನಿಯು ಇತ್ತೀಚೆಗೆ ಹೆಚ್ಚುವರಿಯಾಗಿ ರೂ.3 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಿದ್ದು, ಹೊಸ ಬಂಡವಾಳದೊಂದಿಗೆ ಕಂಪನಿಯು ಇದುವರೆಗೆ ಸುಮಾರು ರೂ.12 ಸಾವಿರ ಕೋಟಿ ಹೂಡಿಕೆ ಮಾಡಿದಂತಾಗಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಅಟಾಮ್

ರೆವಾ ಎಲೆಕ್ಟ್ರಿಕ್ ಕಂಪನಿಯೊಂದಿಗೆ 2010ರಲ್ಲಿ ಮೊದಲ ಹೂಡಿಕೆಯೊಂದಿಗೆ ಎಲೆಕ್ಟ್ರಿಕ್ ವಾಹನ ಉದ್ಯಮಕ್ಕೆ ಕಾಲಿರಿಸಿದ ಮಹೀಂದ್ರಾ ಕಂಪನಿಯು ಇದುವರೆಗೆ ಹಲವಾರು ಎಲೆಕ್ಟ್ರಿಕ್ ವಾಹನ ಮಾದರಿಗಳನ್ನು ಪರಿಚಯಿಸಿದ್ದು, ಇದೀಗ ಕಂಪನಿಯು ಸುಧಾರಿತ ತಂತ್ರಜ್ಞಾನ ಪ್ರೇರಿತ ವಾಹನಗಳ ಅಭಿವೃದ್ದಿಯತ್ತ ಹೆಚ್ಚಿನ ಗಮನಹರಿಸುತ್ತಿದೆ.

Most Read Articles

Kannada
English summary
mahindra atom quadricycle spied testing in bengaluru
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X