ಡ್ಯುಯಲ್ ಟೋನ್ ಬಣ್ಣದ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ 2021ರ ಮಹೀಂದ್ರಾ ಬೊಲೆರೊ

ಮಹೀಂದ್ರಾ ಕಂಪನಿಯು ಕೋವಿಡ್ ಪರಿಣಾಮ ಹೊಸ ತಲೆಮಾರಿನ ಪ್ರಮುಖ ಕಾರುಗಳ ಬಿಡುಗಡೆ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಮುಂದೂಡಿಕೆ ಮಾಡಿದ್ದು, ಸದ್ಯಕ್ಕೆ ಪರಿಸ್ಥಿತಿಗೆ ಅನುಗುಣವಾಗಿ ವಿವಿಧ ಕಾರು ಮಾದರಿಗಳನ್ನು ಸಣ್ಣಪುಟ್ಟ ಬದಲಾವಣೆಗಳೊಂದಿಗೆ 2021ರ ಆವೃತ್ತಿಗಳನ್ನು ಪರಿಚಯಿಸಲು ಸಿದ್ದವಾಗಿದೆ.

ಡ್ಯುಯಲ್ ಟೋನ್ ಬಣ್ಣದ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ 2021ರ ಮಹೀಂದ್ರಾ ಬೊಲೊರೊ

2020ರ ಮಧ್ಯಂತರದಲ್ಲಿ ಬಹುತೇಕ ಕಾರು ಮಾದರಿಗಳನ್ನು ಬಿಎಸ್-6 ಮಾದರಿಯಲ್ಲಿ ಬಿಡುಗಡೆ ಮಾಡಿರುವ ಮಹೀಂದ್ರಾ ಕಂಪನಿಯು ಬಿಎಸ್-6 ಮಾದರಿಗಳನ್ನೇ ಕೆಲವು ಹೊಸ ಬದಲಾವಣೆಗಳೊಂದಿಗೆ ಬಿಡುಗಡೆ ಮಾಡಲು ಸಿದ್ದವಾಗಿದ್ದು, 2021ರಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳ ಪಟ್ಟಿಯಲ್ಲಿ ಬೊಲೆರೊ ಎಸ್‌ಯುವಿ ಮಾದರಿಯು ಕೂಡಾ ಒಂದಾಗಿದೆ.

ಡ್ಯುಯಲ್ ಟೋನ್ ಬಣ್ಣದ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ 2021ರ ಮಹೀಂದ್ರಾ ಬೊಲೊರೊ

ಈ ವರ್ಷದ ಮಧ್ಯಂತರದಲ್ಲಿ ಬೊಲೆರೊ ಕಾರಿನ ನ್ಯೂ ಜನರೇಷನ್ ಮಾದರಿಯನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದ ಮಹೀಂದ್ರಾ ಕಂಪನಿಯು ಕೋವಿಡ್ ಪರಿಣಾಮ ನ್ಯೂ ಜನರೇಷನ್‌ನೊಂದಿಗೆ ಬಿಡುಗಡೆಯಾಗಬೇಕಿದ್ದ ಎಕ್ಸ್‌ಯುವಿ 500, ಸ್ಕಾರ್ಪಿಯೋ ಮತ್ತು ಬೊಲೆರೊ ಕಾರು ಮಾರಾಟವನ್ನು ಮುಂದೂಡಿಕೆ ಮಾಡಿದೆ.

ಡ್ಯುಯಲ್ ಟೋನ್ ಬಣ್ಣದ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ 2021ರ ಮಹೀಂದ್ರಾ ಬೊಲೊರೊ

ನ್ಯೂ ಜನರೇಷನ್ ಮಾದರಿಗಳ ಬಿಡುಗಡೆಯನ್ನು ಬಿಡುಗಡೆಯನ್ನು ಮುಂದೂಡಿಕೆ ಮಾಡಿದರೂ ವಿವಿಧ ಕಾರು ಮಾದರಿಯನ್ನು 2021ರ ಆವೃತ್ತಿಯೊಂದಿಗೆ ಬಿಡುಗಡೆಗೆ ನಿರ್ಧರಿಸಿರುವ ಮಹೀಂದ್ರಾ ಕಂಪನಿಯು ಬೊಲೆರೊ ಕಾರು ಮಾದರಿಯನ್ನು ಕೆಲವು ಹೊಸ ಬದಲಾವಣೆಗಳೊಂದಿಗೆ ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಡ್ಯುಯಲ್ ಟೋನ್ ಬಣ್ಣದ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ 2021ರ ಮಹೀಂದ್ರಾ ಬೊಲೊರೊ

2021ರ ಮಹೀಂದ್ರಾ ಹೊಸ ಕಾರುಗಳಲ್ಲಿ ಕೆಲವೇ ಕೆಲವು ಫೀಚರ್ಸ್ ಹೊರತುಪಡಿಸಿ ಎಂಜಿನ್ ಆಯ್ಕೆಯನ್ನು ಈ ಹಿಂದಿನಂತೆ ಮುಂದುವರಿಸಲಿದ್ದು, ಹೊಸ ಆವೃತ್ತಿಯೊಂದಿಗೆ ಬೊಲೆರೊ ಕಾರು ಮಾದರಿಯು ಮತ್ತಷ್ಟು ಗ್ರಾಹಕರನ್ನು ಸೆಳೆಯಲಿದೆ. ಬೊಲೆರೊ ಕಾರು ಮಾದರಿಯಲ್ಲಿ ಮೊದಲ ಬಾರಿಗೆ ಕಂಪನಿಯು ಡ್ಯುಯಲ್ ಟೋನ್ ಬಣ್ಣದ ಆಯ್ಕೆ ನೀಡುತ್ತಿದ್ದು, ಹೊಸ ಆಯ್ಕೆ ಹೊರತುಪಡಿಸಿ ಪ್ರಸ್ತುತ ಮಾರುಕಟ್ಟೆಯಲ್ಲಿರುವಂತೆಯೇ ಬಹುತೇಕ ತಾಂತ್ರಿಕ ಅಂಶಗಳನ್ನು ಹೊಂದಿರಲಿದೆ.

ಡ್ಯುಯಲ್ ಟೋನ್ ಬಣ್ಣದ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ 2021ರ ಮಹೀಂದ್ರಾ ಬೊಲೊರೊ

ಹೊಸ ಕಾರಿನ ಮುಂಭಾಗಕ್ಕೆ ಬಲಿಷ್ಠವಾದ ನೋಟ ನೀಡಲು ರೆಡ್ ಜೊತೆಯಲ್ಲಿ ಗ್ರೇ ಬಣ್ಣದ ಆಯ್ಕೆ ನೀಡಿದ್ದು, ಹೊಸ ಬಣ್ಣದ ಆಯ್ಕೆ ಹೊಂದಿರುವ ಹೊಸ ಕಾರು ಬಿಡುಗಡೆಗಾಗಿ ಈಗಾಗಲೇ ಡೀಲರ್ಸ್ ಯಾರ್ಡ್ ತಲುಪಿದೆ.

ಡ್ಯುಯಲ್ ಟೋನ್ ಬಣ್ಣದ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ 2021ರ ಮಹೀಂದ್ರಾ ಬೊಲೊರೊ

ಇನ್ನು ಬೊಲೆರೊ ಕಾರಿನ ಹೊಸ ತಲೆಮಾರಿನ ಆವೃತ್ತಿಯು ಹೊಸ ಎಂಜಿನ್ ಆಯ್ಕೆಯೊಂದಿಗೆ ವಿನ್ಯಾಸದಲ್ಲೂ ಸಾಕಷ್ಟು ಬದಲಾವಣೆಗಳನ್ನು ಪಡೆದುಕೊಳ್ಳುತ್ತಿದ್ದು, ಸದ್ಯಕ್ಕೆ 2021ರ ಆವೃತ್ತಿಯೊಂದಿಗೆ ಮಾತ್ರ ಬಿಡುಗಡೆಯಾಗಲಿಯಾಗಲಿರುವ ಬೊಲೆರೊ ಕಾರು 2022ರ ವೇಳೆ ನ್ಯೂ ಜನರೇಷನ್ ಮಾದರಿಯನ್ನು ಪಡೆದುಕೊಳ್ಳುವ ಸಾಧ್ಯತೆಗಳಿವೆ.

MOST READ: ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!

ಡ್ಯುಯಲ್ ಟೋನ್ ಬಣ್ಣದ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ 2021ರ ಮಹೀಂದ್ರಾ ಬೊಲೊರೊ

ಸದ್ಯ ಮಾರುಕಟ್ಟೆಯಲ್ಲಿರುವ ಬೊಲೆರೊ ಎಸ್‌ಯುವಿ ಕಾರು ಮಾದರಿಯು ಪ್ರಮುಖ ಮೂರು ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದು, 1.5-ಲೀಟರ್ ಮ್ಯಾನುವಲ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಮಾರಾಟಗೊಳ್ಳುತ್ತಿದೆ.

ಡ್ಯುಯಲ್ ಟೋನ್ ಬಣ್ಣದ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ 2021ರ ಮಹೀಂದ್ರಾ ಬೊಲೊರೊ

ದೆಹಲಿ ಎಕ್ಸ್‌ಶೋರೂಂ ಪ್ರಕಾರ ಬೊಲೆರೊ ಕಾರು ಮಾದರಿಯ ಆರಂಭಿಕವಾಗಿ ರೂ.8.17 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.9.14 ಲಕ್ಷ ಬೆಲೆಯೊಂದಿಗೆ ಮಾರಾಟಗೊಳ್ಳುತ್ತಿದ್ದು, ಶೀಘ್ರದಲ್ಲೇ ಹೊಸ ತಲೆಮಾರಿನ ಆವೃತ್ತಿಯು ಬಿಡುಗಡೆಗಾಗಿ ಸಿದ್ದವಾಗುತ್ತಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಡ್ಯುಯಲ್ ಟೋನ್ ಬಣ್ಣದ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ 2021ರ ಮಹೀಂದ್ರಾ ಬೊಲೊರೊ

ನ್ಯೂ ಜನರೇಷನ್ ಕಾರು ಮಾದರಿಯು ಪ್ರಸ್ತುತ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್‌ಗಳ ಜೊತೆಗೆ ವಿವಿಧ ಎಂಜಿನ್ ಆಯ್ಕೆಗಳನ್ನು ಪಡೆದುಕೊಳ್ಳಲಿದ್ದು, ಡೀಸೆಲ್ ಜೊತೆಗೆ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿರುವ ನ್ಯೂ ಜನರೇಷನ್ ಬೊಲೆರೊ ಕಾರು ಮಾದರಿಯು ಪ್ರಸ್ತುತ ಮಾದರಿಗಿಂತ ರೂ.1 ಲಕ್ಷದಿಂದ 1.50 ಲಕ್ಷದ ತನಕ ಹೆಚ್ಚುವರಿ ಬೆಲೆ ಪಡೆದುಕೊಳ್ಳಬಹುದಾಗಿದೆ.

Most Read Articles

Kannada
English summary
2021 Mahindra Bolero Facelift Spotted At Dealership. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X