ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಗಮನಸೆಳೆದ ಮಹೀಂದ್ರಾ ಬೊಲೆರೊ ನಿಯೋ

ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ವಿವಿಧ ಕಾರು ಮಾದರಿಗಳು ಅತ್ಯುತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಇತ್ತೀಚೆಗೆ ಬಿಡುಗಡೆಗೊಂಡ ಮಹೀಂದ್ರಾ ಬೊಲೆರೊ ನಿಯೋ ಕೂಡಾ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಗಮನಸೆಳೆದ ಮಹೀಂದ್ರಾ ಬೊಲೆರೊ ನಿಯೋ

ಕಳೆದ ತಿಂಗಳು ಜುಲೈ ಆರಂಭದಲ್ಲಿ ಬಿಡುಗಡೆಗೊಂಡಿರುವ ಬೊಲೆರೊ ನಿಯೋ ಆವೃತ್ತಿಯು ಮೊದಲ ತಿಂಗಳ ಅವಧಿಯಲ್ಲೇ ಸುಮಾರು 5,500 ಯುನಿಟ್‌ಗಳಿಗೆ ಬೇಡಿಕೆ ಪಡೆದುಕೊಂಡಿದ್ದು, ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಪ್ರಮುಖ ಕಾರು ಮಾದರಿಗಳಿಗೆ ಉತ್ತಮ ಪೈಪೋಟಿ ನೀಡುವ ತವಕದಲ್ಲಿದೆ.

ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಗಮನಸೆಳೆದ ಮಹೀಂದ್ರಾ ಬೊಲೆರೊ ನಿಯೋ

ಮಹೀಂದ್ರಾ ಕಂಪನಿಯು ಟಿಯುವಿ300 ಮಾದರಿಯ ಹೊಸ ಆವೃತ್ತಿಯನ್ನೇ ಬೊಲೆರೊ ನಿಯೋ ಮಾದರಿಯಾಗಿ ಬಿಡುಗಡೆಗೊಳಿಸಿದ್ದು, ಹೊಸ ಕಾರು ವಿವಿಧ ವೆರಿಯೆಂಟ್‌ಗಳೊಂದಿಗೆ ಅತ್ಯುತ್ತಮ ಬೆಲೆಯಲ್ಲಿ ಮಾರಾಟಗೊಳ್ಳುತ್ತಿರುವುದು ಗ್ರಾಹಕರ ಪ್ರಮುಖ ಆಕರ್ಷಣೆಯಾಗುತ್ತಿದೆ.

ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಗಮನಸೆಳೆದ ಮಹೀಂದ್ರಾ ಬೊಲೆರೊ ನಿಯೋ

ಹೊಸ ಬೊಲೆರೊ ನಿಯೋ ಮಾದರಿಯ ವಿತರಣೆಯನ್ನು ಈಗಾಗಲೇ ಆರಂಭಿಸಿರುವ ಮಹೀಂದ್ರಾ ಕಂಪನಿಯು ಮುಂಬರುವ ದಿನಗಳಲ್ಲಿ ಭಾರೀ ಪ್ರಮಾಣದಲ್ಲಿ ಮಾರಾಟ ಮಾಡುವ ನೀರಿಕ್ಷೆಯಿದ್ದು, ಹೊಸ ಕಾರು ಕೂಡಾ ಪ್ರತಿಸ್ಪರ್ಧಿ ಮಾದರಿಗಳಿಂತಲೂ ಉತ್ತಮ ಎಂಜಿನ್ ಆಯ್ಕೆ ಮತ್ತು ಬೆಲೆ ಅಂತರದಲ್ಲಿ ಮಾರುಕಟ್ಟೆ ಪ್ರವೇಶಿಸಿದೆ.

ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಗಮನಸೆಳೆದ ಮಹೀಂದ್ರಾ ಬೊಲೆರೊ ನಿಯೋ

ಹೊಸ ಬೊಲೆರೊ ನಿಯೋ ಕಾರು ಸ್ಕಾರ್ಪಿಯೋ ಮತ್ತು ಥಾರ್ ಮ್ಯಾಡುಲರ್ ಚಾರ್ಸಿ ಸೌಲಭ್ಯದೊಂದಿಗೆ ಹಲವು ಹೊಸ ತಾಂತ್ರಿಕ ಅಂಶಗಳನ್ನು ಒಳಗೊಂಡಿದ್ದು, 7 ಸೀಟರ್ ಸೌಲಭ್ಯದೊಂದಿಗೆ ಎನ್4, ಎನ್8, ಎನ್10 ಮತ್ತು ಎನ್10 ಆಪ್ಷನ್ ಎನ್ನುವ ನಾಲ್ಕು ವೆರಿಯೆಂಟ್‌ನಲ್ಲಿ ಖರೀದಿಗೆ ಲಭ್ಯವಿದೆ.

ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಗಮನಸೆಳೆದ ಮಹೀಂದ್ರಾ ಬೊಲೆರೊ ನಿಯೋ

ಮಹೀಂದ್ರಾ ಕಂಪನಿಯು ಸದ್ಯಕ್ಕೆ ಹೊಸ ಕಾರಿನ ಎನ್4 (ರೂ.8.48 ಲಕ್ಷ), ಎನ್8(ರೂ.9.48 ಲಕ್ಷ) ಮತ್ತು ಎನ್10(ರೂ.9.99 ಲಕ್ಷ) ಬೆಲೆಗಳನ್ನು ಮಾತ್ರ ಘೋಷಿಸಿದ್ದು, ಶೀಘ್ರದಲ್ಲೇ ಎನ್10 ಆಪ್ಷನ್ ಮಾದರಿಯ ಬೆಲೆಯನ್ನು ಘೋಷಣೆ ಮಾಡಲಿದೆ.

ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಗಮನಸೆಳೆದ ಮಹೀಂದ್ರಾ ಬೊಲೆರೊ ನಿಯೋ

ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಎಸ್‌ಯುವಿ ಸರಣಿಯಲ್ಲಿ ಸಾಕಷ್ಟು ಬದಲಾವಣೆ ತಂದಿರುವ ಮಹೀಂದ್ರಾ ಕಂಪನಿಯು ಟಿಯುವಿ300 ಕಂಪ್ಯಾಕ್ಟ್ ಎಸ್‌ಯುವಿ ಮಾರಾಟವನ್ನು ಸ್ಥಗಿತಗೊಳಿಸಿದರೂ ಸಹ ಹೊಸ ಹೆಸರಿನೊಂದಿಗೆ ಟಿವಿಯುವಿ300 ಫೇಸ್‌ಲಿಫ್ಟ್ ಮಾದರಿಯನ್ನು ಮಾರುಕಟ್ಟೆಯಲ್ಲಿ ಉಳಿಸಿಕೊಂಡಿದೆ.

ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಗಮನಸೆಳೆದ ಮಹೀಂದ್ರಾ ಬೊಲೆರೊ ನಿಯೋ

ಬೊಲೆರೊ ನಿಯೋದೊಂದಿಗೆ ಹೊಸ ಕಾರಿನಲ್ಲಿ ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಿದ್ದು, ಹೊಸ ಕಾರಿನಲ್ಲಿ ಮರುವಿನ್ಯಾಸಗೊಳಿಸಲಾದ ಫ್ರಂಟ್ ಬಂಪರ್, ಮಾಡಿಫೈಗೊಳಿಸಿದ ಹೆಡ್‌ಲ್ಯಾಂಪ್‌, ಹಾರಿಜಂಟಲ್ ಆಗಿರುವ ಎಲ್‌ಇಡಿ ಡಿಆರ್‌ಎಲ್ ಲೈಟ್‌ಗಳನ್ನು ಹೊಂದಿದೆ.

ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಗಮನಸೆಳೆದ ಮಹೀಂದ್ರಾ ಬೊಲೆರೊ ನಿಯೋ

ಇದರ ಜೊತೆಗೆ ಹೊಸ ಕಾರಿನಲ್ಲಿ ವಿಶಾಲವಾದ ಏರ್ ಡ್ಯಾಂ, ಸರ್ಕ್ಯೂಲರ್ ಫಾಗ್ ಲೈಟ್, ಮರುವಿನ್ಯಾಸಗೊಳಿಸಲಾದ ಹಿಂಭಾಗದ ಬಂಪರ್, ಹೊಸ ಬೊಲೆರೊ ನಿಯೋ ಬ್ಯಾಡ್ಜಿಂಗ್ ಸೇರಿದಂತೆ ಹಲವು ಹೊಸ ತಾಂತ್ರಿಕ ಸೌಲಭ್ಯಗಳು ಈ ಎಸ್‌ಯುವಿಯಲ್ಲಿ ಕಾಣಬಹುದಾಗಿದ್ದು, ಕಾರಿನ ಹೊರಭಾಗದಲ್ಲಿ ಮಾತ್ರವಲ್ಲದೆ ಒಳಭಾಗದ ವಿನ್ಯಾಸದಲ್ಲೂ ಸಾಕಷ್ಟು ಬದಲಾವಣೆ ಪಡೆದುಕೊಂಡಿದೆ.

ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಗಮನಸೆಳೆದ ಮಹೀಂದ್ರಾ ಬೊಲೆರೊ ನಿಯೋ

ಬೊಲೆರೊ ನಿಯೋ ಎಸ್‌ಯುವಿಯಲ್ಲಿ ಮಹೀಂದ್ರಾ ಕಂಪನಿಯು ಡ್ಯುಯಲ್ ಫ್ರಂಟ್ ಏರ್ ಬ್ಯಾಗ್‌, ಎಬಿಎಸ್ ಜೊತೆ ಇಬಿಡಿ, ಸಿಬಿಸಿ, ರಿಯರ್ ಪಾರ್ಕಿಂಗ್ ಸೆನ್ಸಾರ್, ಕ್ರೂಸ್ ಕಂಟ್ರೋಲ್, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಸೇರಿದಂತೆ ಹಲವಾರು ಫೀಚರ್ಸ್‌ಗಳನ್ನು ನೀಡಿದೆ.

ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಗಮನಸೆಳೆದ ಮಹೀಂದ್ರಾ ಬೊಲೆರೊ ನಿಯೋ

ಬೊಲೆರೊ ನಿಯೋ ಮಾದರಿಯಲ್ಲಿ ಈ ಹಿಂದಿನ ಟಿಯುವಿ300 ಮಾದರಿಯಲ್ಲಿ ಅಳವಡಿಸಲಾಗುತ್ತಿದ್ದ 1.5-ಲೀಟರ್ ತ್ರಿ ಸಿಲಿಂಡರ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 100-ಬಿಎಚ್‌ಪಿ ಮತ್ತು 260 ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಅತ್ಯುತ್ತಮ ಇಂಧನ ದಕ್ಷತೆ ಪಡೆದುಕೊಂಡಿದೆ.

Most Read Articles

Kannada
English summary
Mahindra bolero neo suv bookings crossed 5500 units in india.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X