ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Mahindra Bolero

ಕಳೆದ ತಿಂಗಳ ಮಾರಾಟದಲ್ಲಿ ಸ್ವದೇಶಿ ತಯಾರಕ ಕಂಪನಿಯಾದ ಮಹೀಂದ್ರಾ ಶೇ.2.2 ರಷ್ಟು ಬೆಳವಣಿಗೆಯನ್ನು ದಾಖಲಿಸಿದ್ದಾರೆ ಮತ್ತು ದೇಶದಲ್ಲಿ ಒಟ್ಟು 20,034 ಕಾರುಗಳನ್ನು ಮಾರಾಟ ಮಾಡಿದ್ದಾರೆ. ಇದು ಮಾರುತಿ ಸುಜುಕಿ, ಹ್ಯುಂಡೈ ಮತ್ತು ಟಾಟಾ ಮೋಟಾರ್ಸ್‌ನ ಹಿಂದೆ ಮಹೀಂದ್ರಾ ಮಾರಾಟ ಪಟ್ಟಿಯಲ್ಲಿ 4 ನೇ ಸ್ಥಾನವನ್ನು ಉಳಿಸಿಕೊಳ್ಳಲು ಸಹಾಯ ಮಾಡಿತು.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Mahindra Bolero

ಕಳೆದ ತಿಂಗಳ ಮಾರಾಟದಲ್ಲಿ ಮಹೀಂದ್ರಾ ಕಂಪನಿಗೆ ಬೊಲೆರೊ ಉತ್ತಮ ಕೊಡುಗೆಯನ್ನು ನೀಡಿದೆ. ಮಹೀಂದ್ರಾ ಕಳೆದ ತಿಂಗಳು ಬೊಲೆರೊ ಮತ್ತು ಬೊಲೆರೊ ನಿಯೋದ ಮಾದರಿ6,375 ಯುನಿಟ್‌ಗಳನ್ನು ಮಾರಾಟ ಮಾಡಲು ಯಶಸ್ವಿಯಾಗಿದೆ. ಇದರರ್ಥ ಇದು ಮತ್ತೊಮ್ಮೆ ಮಾರುಕಟ್ಟೆಯಲ್ಲಿ ತಯಾರಕರಿಗೆ ಹೆಚ್ಚು ಮಾರಾಟವಾದ ಕಾರು. ಇದರಲ್ಲಿ ಸಾಮಾನ್ಯ ಬೊಲೆರೊ ಭಾರತೀಯ ಮಾರುಕಟ್ಟೆಯಲ್ಲಿ ಬಹುದೀರ್ಘಕಾಲದಿಂದ ಮಾರಾಟವಾಗುತ್ತಿರುವ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Mahindra Bolero

ಮಹೀಂದ್ರಾ ಬೊಲೆರೊ ಕೈಗೆಟುಕುವ ಬೆಲೆ ಮತ್ತು ಒರಟಾದ ಯುಟಿಲಿಟಿ ವಾಹನವಾಗಿದೆ. ಮಹೀಂದ್ರಾ ಕಂಪನಿಯು ಜನಪ್ರಿಯ ಬೊಲೆರೊ ಎಸ್‍ಯುವಿಯನ್ನು ಮೊದಲ ಬಾರಿಗೆ 2000ದಲ್ಲಿ ಬಿಡುಗಡೆಗೊಳಿಸಿದ್ದರು. ಇಂದಿಗೂ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Mahindra Bolero

ಮಹೀಂದ್ರಾ ಬೊಲೆರೊ ಬಿ4, ಬಿ6 ಮತ್ತು ಬಿ6(ಒ) ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿದೆ. ಈ ಬೊಲೆರೊ ವಿನ್ಯಾಸದ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಹೊಸ ಬಂಪರ್, ಗ್ರಿಲ್ ಮತ್ತು ಮರುವಿನ್ಯಾಸಗೊಳಿಸಲಾದ ಹೆಡ್ ಲ್ಯಾಂಪ್ ಗಳನ್ನು ಅಳವಡಿಸಲಾಗಿದೆ. ಈ ಹೊಸ ಬೊಲೆರೊ ಆಕರ್ಷಕ ಲುಕ್ ಅನ್ನು ಹೊಂದಿದೆ.ಬೊಲೆರೊ ಎಸ್‍‍ಯುವಿನಲ್ಲಿ ಹೊಸ ಕ್ರ್ಯಾಶ್ ಟೆಸ್ಟ್ ಸುರಕ್ಷತಾ ನಿಯಮಕ್ಕೆ ಅನುಗುಣವಾಗಿ ಅದರ ಮಂಭಾಗವನ್ನು ನವೀಕರಿಸಲಾಗಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Mahindra Bolero

ಮುಂಭಾಗದ ಪ್ರಯಾಣಿಕರ ಸುರಕ್ಷತೆಗೆ ಈ ಹೊಸ ನವೀಕರಣವು ಸಹಕಾರಿಯಾಗಲಿದೆ.ಇದರೊಂದಿಗೆ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಫಾಗ್ ಲ್ಯಾಂಪ್, ಮತ್ತು ಪ್ರಯಾಣಿಕರ ಬದಿಯ ಏರ್‌ಬ್ಯಾಗ್ ಅನ್ನು ಈ ಬೊಲೆರೊ ಎಸ್‍‍ಯುವಿಯ ಟಾಪ್-ಎಂಡ್ ಮಾದರಿಯಲ್ಲಿ ಪ್ರತ್ಯೇಕವಾಗಿ ನೀಡಲಾಗುತ್ತದೆ. ಇದರಲ್ಲಿ ಎಸಿ ವೆಂಟ್ಸ್ ಗಳನ್ನು ನೀಡಲಾಗಿಲ್ಲ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Mahindra Bolero

ಈ ಬೊಲೆರೊ ಎಸ್‌ಯುವಿಯಲ್ಲಿ 1.5 ಎಲ್ 3-ಸಿಲಿಂಡರ್ ಎಮ್ಹಾಕ್ 75 ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 75 ಬಿ‍‍ಹೆಚ್‍‍ಪಿ ಪವರ್ ಮತ್ತು 195 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 5 ಸ್ಪೀಡ್ ಮಾನ್ಯುವಲ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Mahindra Bolero

ಮಹೀಂದ್ರಾ ಬೊಲೆರೊವನ್ನು ಮೊದಲ ಬಾರಿಗೆ ಭಾರತದಲ್ಲಿ 2000 ರಲ್ಲಿ ಪರಿಚಯಿಸಲಾಯಿತು, ಮತ್ತು ವರ್ಷಗಳಲ್ಲಿ ಕೆಲವು ಫೇಸ್‌ಲಿಫ್ಟ್‌ಗಳ ಹೊರತಾಗಿ, ವಾಹನವು ಒಂದೇ ಆಗಿರುತ್ತದೆ. ಅದರ ಇಬೊಲೆರೊ ಸಬ್ -4 ಮೀಟರ್ ವಾಹನವಾಗಿದೆ; ಇದರ ಉದ್ದ 3,995 ಮಿಮೀ, ಅಗಲ 1,745 ಎಂಎಂ, ಎತ್ತರ 1,880 ಎಂಎಂ, 2,680 ಎಂಎಂ ಉದ್ದದ ವೀಲ್‌ಬೇಸ್ ಹೊಂದಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Mahindra Bolero

ಮಹೀಂದ್ರಾ ಬೊಲೆರೊ ಬಾಕ್ಸೀ ವಿನ್ಯಾಸವನ್ನು ಹೊಂದಿದೆ. ಹೊಸ ಬೊಲೆರೊ ಎಸ್‍‍ಯುವಿಯಲ್ಲಿ ಸುರಕ್ಷತಾ ಕ್ರಮಗಳನ್ನು ಹೆಚ್ಚಿಸಿದೆ. ಮಹೀಂದ್ರಾ ಬೊಲೆರೊ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡೀಕೆಯೊಂದಿಗೆ ಮಾರಾಟವಾಗುತ್ತಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Mahindra Bolero

ಇನ್ನು ಮಹೀಂದ್ರಾ ಕಂಪನಿಯು ಟಿಯುವಿ300 ಮಾದರಿಯ ಹೊಸ ಆವೃತ್ತಿಯನ್ನೇ ಬೊಲೆರೊ ನಿಯೋ ಮಾದರಿಯ ಬಗ್ಗೆ ಹೇಳುವುದಾದರೆ, ಈ ಹೊಸ ಎಸ್‍ಯುವಿ ಕೂಡಾ ಪ್ರತಿಸ್ಪರ್ಧಿ ಮಾದರಿಗಳಿಂತಲೂ ಉತ್ತಮ ಎಂಜಿನ್ ಆಯ್ಕೆ ಮತ್ತು ಬೆಲೆ ಅಂತರವನ್ನು ಹೊಂದಿದೆ, ಹೊಸ ಬೊಲೆರೊ ನಿಯೋ ಕಾರು ಸ್ಕಾರ್ಪಿಯೋ ಮತ್ತು ಥಾರ್ ಮ್ಯಾಡುಲರ್ ಚಾರ್ಸಿ ಸೌಲಭ್ಯದೊಂದಿಗೆ ಹಲವು ಹೊಸ ತಾಂತ್ರಿಕ ಅಂಶಗಳನ್ನು ಒಳಗೊಂಡಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Mahindra Bolero

ಈ ಹೊಸ ಎಸ್‍ಯುವಿಯು 7 ಸೀಟರ್ ಸೌಲಭ್ಯದೊಂದಿಗೆ ಎನ್4, ಎನ್8, ಎನ್10 ಮತ್ತು ಎನ್10 ಆಪ್ಷನ್ ಎನ್ನುವ ನಾಲ್ಕು ವೆರಿಯೆಂಟ್‌ನಲ್ಲಿ ಖರೀದಿಗೆ ಲಭ್ಯವಿದೆ. ಬೊಲೆರೊ ನಿಯೋದಲ್ಲಿ ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಿದ್ದು, ಹೊಸ ಕಾರಿನಲ್ಲಿ ಮರುವಿನ್ಯಾಸಗೊಳಿಸಲಾದ ಫ್ರಂಟ್ ಬಂಪರ್, ಮಾಡಿಫೈಗೊಳಿಸಿದ ಹೆಡ್‌ಲ್ಯಾಂಪ್‌, ಹಾರಿಜಂಟಲ್ ಆಗಿರುವ ಎಲ್‌ಇಡಿ ಡಿಆರ್‌ಎಲ್ ಲೈಟ್‌ಗಳನ್ನು ಹೊಂದಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Mahindra Bolero

ಇದರ ಜೊತೆಗೆ ಹೊಸ ಕಾರಿನಲ್ಲಿ ವಿಶಾಲವಾದ ಏರ್ ಡ್ಯಾಂ, ಸರ್ಕ್ಯೂಲರ್ ಫಾಗ್ ಲೈಟ್, ಮರುವಿನ್ಯಾಸಗೊಳಿಸಲಾದ ಹಿಂಭಾಗದ ಬಂಪರ್, ಹೊಸ ಬೊಲೆರೊ ನಿಯೋ ಬ್ಯಾಡ್ಜಿಂಗ್ ಸೇರಿದಂತೆ ಹಲವು ಹೊಸ ತಾಂತ್ರಿಕ ಸೌಲಭ್ಯಗಳು ಈ ಎಸ್‌ಯುವಿಯಲ್ಲಿ ಕಾಣಬಹುದಾಗಿದ್ದು, ಕಾರಿನ ಹೊರಭಾಗದಲ್ಲಿ ಮಾತ್ರವಲ್ಲದೆ ಒಳಭಾಗದ ವಿನ್ಯಾಸದಲ್ಲೂ ಸಾಕಷ್ಟು ಬದಲಾವಣೆ ಪಡೆದುಕೊಂಡಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Mahindra Bolero

ಬೊಲೆರೊ ನಿಯೋ ಎಸ್‌ಯುವಿಯಲ್ಲಿ ಮಹೀಂದ್ರಾ ಕಂಪನಿಯು ಡ್ಯುಯಲ್ ಫ್ರಂಟ್ ಏರ್ ಬ್ಯಾಗ್‌, ಎಬಿಎಸ್ ಜೊತೆ ಇಬಿಡಿ, ಸಿಬಿಸಿ, ರಿಯರ್ ಪಾರ್ಕಿಂಗ್ ಸೆನ್ಸಾರ್, ಕ್ರೂಸ್ ಕಂಟ್ರೋಲ್, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಸೇರಿದಂತೆ ಹಲವಾರು ಫೀಚರ್ಸ್‌ಗಳನ್ನು ನೀಡಿದೆ.ಬೊಲೆರೊ ನಿಯೋ ಮಾದರಿಯಲ್ಲಿ ಈ ಹಿಂದಿನ ಟಿಯುವಿ300 ಮಾದರಿಯಲ್ಲಿ ಅಳವಡಿಸಲಾಗುತ್ತಿದ್ದ 1.5-ಲೀಟರ್ ತ್ರಿ ಸಿಲಿಂಡರ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 100-ಬಿಎಚ್‌ಪಿ ಮತ್ತು 260 ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಅತ್ಯುತ್ತಮ ಇಂಧನ ದಕ್ಷತೆ ಪಡೆದುಕೊಂಡಿದೆ.

Article Published On: Saturday, November 27, 2021, 10:25 [IST]
English summary
Mahindra bolero october 2021 sales report check details here
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+