ಮಹೀಂದ್ರಾ ನಿರ್ಮಾಣದ ಪ್ರಮುಖ ಕಾರುಗಳ ಬೆಲೆಯಲ್ಲಿ ಭಾರೀ ಹೆಚ್ಚಳ

ಮಹೀಂದ್ರಾ ಕಂಪನಿಯು ತನ್ನ ಪ್ರಮುಖ ಪ್ರಯಾಣಿಕ ಕಾರುಗಳ ಬೆಲೆಯನ್ನು ಹೆಚ್ಚಳ ಮಾಡಿದ್ದು, ಕಾರುಗಳ ಹೊಸ ದರವು ಇಂದಿನಿಂದಲೇ ಅನ್ವಯವಾಗುವಂತೆ ಪರಿಸ್ಕೃತ ದರಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಮಹೀಂದ್ರಾ ನಿರ್ಮಾಣದ ಪ್ರಮುಖ ಕಾರುಗಳ ಬೆಲೆಯಲ್ಲಿ ಭಾರೀ ಹೆಚ್ಚಳ

ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿರುವ ಮಹೀಂದ್ರಾ ಕಂಪನಿಯು ಉತ್ಪಾದನಾ ವೆಚ್ಚ ಹೆಚ್ಚಿರುವ ಹಿನ್ನಲೆಯಲ್ಲಿ ಬೆಲೆ ಹೆಚ್ಚಳ ಮಾಡಿರುವುದಾಗಿ ಹೇಳಿಕೊಂಡಿದ್ದು, ಕಾರುಗಳ ಬೆಲೆಗೆ ಅನುಗುಣವಾಗಿ ಶೇ.1 ರಿಂದ ಶೇ.1.50 ರಷ್ಟು ದರ ಹೆಚ್ಚಳ ಮಾಡಲಾಗಿದೆ. ಹೊಸ ದರಪಟ್ಟಿಯಲ್ಲಿ ಮಹೀಂದ್ರಾ ವಿವಿಧ ಕಾರುಗಳು ಕನಿಷ್ಠ ರೂ. 1 ಸಾವಿರದಿಂದ ಗರಿಷ್ಠ ರೂ. 49 ಸಾವಿರ ತನಕ ದುಬಾರಿಯಾಗಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ದರ ಹೆಚ್ಚಿಸಲಾಗಿದೆ.

ಮಹೀಂದ್ರಾ ನಿರ್ಮಾಣದ ಪ್ರಮುಖ ಕಾರುಗಳ ಬೆಲೆಯಲ್ಲಿ ಭಾರೀ ಹೆಚ್ಚಳ

2021ರ ಜನವರಿಯಲ್ಲಿ ವಿವಿಧ ವಾಹನ ಮಾದರಿಗಳ ಬೆಲೆ ಹೆಚ್ಚಳ ಮಾಡಿದ್ದ ಬಹುತೇಕ ಆಟೋ ಕಂಪನಿಗಳು ಇದೀಗ ಮತ್ತೆ ಬೆಲೆ ಹೆಚ್ಚಳ ಮಾಡುತ್ತಿದ್ದು, ಮಹೀಂದ್ರಾ ಕಂಪನಿಯು ಕೂಡಾ ತನ್ನ ಪ್ರಮುಖ ಕಾರುಗಳ ಬೆಲೆಯನ್ನು ಹೆಚ್ಚಳ ಮಾಡಿದೆ.

ಮಹೀಂದ್ರಾ ನಿರ್ಮಾಣದ ಪ್ರಮುಖ ಕಾರುಗಳ ಬೆಲೆಯಲ್ಲಿ ಭಾರೀ ಹೆಚ್ಚಳ

ಹೊಸ ದರ ಇಂದಿನಿಂದಲೇ ಅನ್ವಯವಾಗುವಂತೆ ಹೊಸ ದರ ನಿಗದಿಪಡಿಸಿರುವ ಮಹೀಂದ್ರಾ ಕಂಪನಿಯು ಬಹುತೇಕ ಕಾರು ಮಾದರಿಗಳ ಬೆಲೆ ಹೆಚ್ಚಳ ಮಾಡಿದ್ದು, ಕಳೆದ ಜನವರಿ ತಿಂಗಳನಲ್ಲೂ ಬೆಲೆ ಹೆಚ್ಚಳ ಪಡೆದುಕೊಂಡಿದ್ದವು.

ಮಹೀಂದ್ರಾ ನಿರ್ಮಾಣದ ಪ್ರಮುಖ ಕಾರುಗಳ ಬೆಲೆಯಲ್ಲಿ ಭಾರೀ ಹೆಚ್ಚಳ

ಗ್ರಾಹಕರ ಬೇಡಿಕೆಯೆಂತೆ ವಿವಿಧ ಸೆಗ್ಮೆಂಟ್‌ನಲ್ಲಿ ಸದ್ಯ ಕೆಯುವಿ100 ನೆಕ್ಸ್ಟ್, ಎಕ್ಸ್‌ಯುವಿ300, ಬೊಲೆರೊ, ಮರಾಜೋ, ಸ್ಕಾರ್ಪಿಯೋ ಮತ್ತು ಎಕ್ಸ್‌ಯುವಿ500 ಕಾರುಗಳನ್ನು ಮಾರಾಟ ಮಾಡುತ್ತಿರುವ ಮಹೀಂದ್ರಾ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದ್ದು, ಮಹೀಂದ್ರಾ ಕಾರುಗಳಲ್ಲಿ ಸದ್ಯ ನ್ಯೂ ಜನರೇಷನ್ ಥಾರ್, ಎಕ್ಸ್‌ಯುವಿ300, ಬಲೆರೊ ಮತ್ತು ಸ್ಕಾರ್ಪಿಯೋ ಕಾರುಗಳು ಉತ್ತಮ ಬೇಡಿಕೆ ಪಡೆದುಕೊಂಡಿವೆ.

ಮಹೀಂದ್ರಾ ನಿರ್ಮಾಣದ ಪ್ರಮುಖ ಕಾರುಗಳ ಬೆಲೆಯಲ್ಲಿ ಭಾರೀ ಹೆಚ್ಚಳ

ಹೊಸ ದರ ಪಟ್ಟಿಯಲ್ಲಿ ಆರಂಭಿಕ ಕಾರು ಮಾದರಿಯಾದ ಕೆಯುವಿ100 ನೆಕ್ಸ್ಟ್ ಕಾರು ಮಾದರಿಯು ಬೆಲೆ ಹೆಚ್ಚಳದ ನಂತರ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.05 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 7.72 ಲಕ್ಷ ಬೆಲೆ ಹೊಂದಿದೆ.

ಮಹೀಂದ್ರಾ ನಿರ್ಮಾಣದ ಪ್ರಮುಖ ಕಾರುಗಳ ಬೆಲೆಯಲ್ಲಿ ಭಾರೀ ಹೆಚ್ಚಳ

ಹೊಸ ದರ ಪಟ್ಟಿಯಲ್ಲಿ ಬೆಲೆ ಹೆಚ್ಚಳದ ನಂತರ ಎಕ್ಸ್‌ಯುವಿ300 ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.96 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.94 ಲಕ್ಷ ಬೆಲೆ ಹೊಂದಿದ್ದಲ್ಲಿ ಬೊಲೆರೊ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.40 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.15 ಲಕ್ಷ ಬೆಲೆ ಪಡೆದುಕೊಂಡಿದೆ.

ಮಹೀಂದ್ರಾ ನಿರ್ಮಾಣದ ಪ್ರಮುಖ ಕಾರುಗಳ ಬೆಲೆಯಲ್ಲಿ ಭಾರೀ ಹೆಚ್ಚಳ

ಮರಾಜೋ ಎಂಪಿವಿ ಕಾರು ಮಾದರಿಯು ಹೊಸ ದರಪಟ್ಟಿಯಲ್ಲಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.04 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14.12 ಲಕ್ಷ ಬೆಲೆ ಹೊಂದಿದ್ದರೆ ಸ್ಕಾರ್ಪಿಯೋ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.32 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.02 ಲಕ್ಷ ಬೆಲೆ ಹೊಂದಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಮಹೀಂದ್ರಾ ನಿರ್ಮಾಣದ ಪ್ರಮುಖ ಕಾರುಗಳ ಬೆಲೆಯಲ್ಲಿ ಭಾರೀ ಹೆಚ್ಚಳ

ಎಕ್ಸ್‌ಯುವಿ500 ಎಸ್‌ಯುವಿ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 15.53 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 20.04 ಲಕ್ಷ ಬೆಲೆ ಹೊಂದಿದ್ದು, ವಿವಿಧ ವೆರಿಯೆಂಟ್ ಮತ್ತು ಎಂಜಿನ್ ಆಯ್ಕೆಗೆ ಅನುಗುಣವಾಗಿ ಬೆಲೆ ಹೆಚ್ಚಳ ಮಾಡಲಾಗಿದೆ.

ಮಹೀಂದ್ರಾ ನಿರ್ಮಾಣದ ಪ್ರಮುಖ ಕಾರುಗಳ ಬೆಲೆಯಲ್ಲಿ ಭಾರೀ ಹೆಚ್ಚಳ

ಇನ್ನುಳಿದ ಥಾರ್ ಹೊಸ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.12 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.14.17 ಲಕ್ಷ ಬೆಲೆ ಹೊಂದಿದ್ದರೆ, ಅಲ್ಟುರಾಸ್ ಜಿ4 ಎಸ್‌ಯುವಿ ಕಾರು ಎಕ್ಸ್‌ಶೋರೂಂ ಪ್ರಕಾರ ರೂ. 28.74 ಲಕ್ಷದಿಂದ ರೂ.31.74 ಲಕ್ಷ ಬೆಲೆ ಹೊಂದಿದೆ.

MOST READ: ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!

ಮಹೀಂದ್ರಾ ನಿರ್ಮಾಣದ ಪ್ರಮುಖ ಕಾರುಗಳ ಬೆಲೆಯಲ್ಲಿ ಭಾರೀ ಹೆಚ್ಚಳ

ಮಹೀಂದ್ರಾ ಕಂಪನಿಯು ಹೊಸ ದರಪಟ್ಟಿಯಲ್ಲಿ ಕೇವಲ ಎರಡು ಪೆಟ್ರೋಲ್ ವೆರಿಯೆಂಟ್ ಹೊರತುಪಡಿಸಿ ಇನ್ನುಳಿದ ಪೆಟ್ರೋಲ್ ವೆರಿಯೆಂಟ್ ಬೆಲೆಯನ್ನು ಈ ಹಿಂದಿನಂತೆಯೇ ಮುಂದುವರಿಸಿದ್ದು, ಡೀಸೆಲ್ ಎಂಜಿನ್‌ ವೆರಿಯೆಂಟ್‌ಗಳ ಬೆಲೆಯಲ್ಲಿ ಸಾಕಷ್ಟು ಹೆಚ್ಚಳ ಮಾಡಿದೆ.

https://kannada.drivespark.com/four-wheelers/2021/skoda-revealed-new-enyaq-sportline-iv-electric-crossover-with-battery-pack-024064.html

Article Published On: Friday, May 7, 2021, 20:13 [IST]
English summary
Mahindra Increases The Price Across All Its Variants. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+