ಬದಲಿ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಇಎಕ್ಸ್‌ಯುವಿ300 ಎಲೆಕ್ಟ್ರಿಕ್ ಎಸ್‌ಯುವಿ

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಮಹೀಂದ್ರಾ(Mahindra) ಕಂಪನಿಯು ಎಸ್‌ಯುವಿ ಕಾರುಗಳ ಮಾರಾಟದಲ್ಲಿ ತನ್ನದೆ ಆದ ಜನಪ್ರಿಯತೆ ಹೊಂದಿದ್ದು, ಕಂಪನಿಯು ಮುಂಬರುವ ಕೆಲವೇ ವರ್ಷಗಳಲ್ಲಿ ಮತ್ತಷ್ಟು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

 ಬದಲಿ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಇಎಕ್ಸ್‌ಯುವಿ300 ಎಲೆಕ್ಟ್ರಿಕ್ ಎಸ್‌ಯುವಿ

ಮಹೀಂದ್ರಾ ಕಂಪನಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ಎಕ್ಸ್‌ಯುವಿ700, ಎಕ್ಸ್‌ಯುವಿ300, ಬೊಲೆರೊ, ಸ್ಕಾರ್ಪಿಯೋ, ಥಾರ್ ಮಾದರಿಯೊಂದಿಗೆ ಎಸ್‌ಯುವಿ ಮಾರಾಟದಲ್ಲಿ ಮುಂಚೂಣಿ ಹೊಂದಿರುವ ಮಹೀಂದ್ರಾ ಕಂಪನಿಯು ಎಸ್‌ಯುವಿ ವಿಭಾಗದಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿನ ಎಕ್ಸ್‌ಯುವಿ300 ಕಂಪ್ಯಾಕ್ಟ್ ಎಸ್‌ಯುವಿಯನ್ನು ಬದಲಿ ಹೆಸರಿನೊಂದಿಗೆ ಬಿಡುಗಡೆ ಮಾಡಲು ಮುಂದಾಗಿದೆ.

 ಬದಲಿ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಇಎಕ್ಸ್‌ಯುವಿ300 ಎಲೆಕ್ಟ್ರಿಕ್ ಎಸ್‌ಯುವಿ

ಮಹೀಂದ್ರಾ ಕಂಪನಿಯು ನಡೆಸಿದ ಆಡಳಿತ ಮಂಡಳಿಯ ಸಭೆಯಲ್ಲಿ ಹೊಸ ಕಾರುಗಳ ಬಿಡುಗಡೆ ಕುರಿತಂತೆ ಮಹತ್ವದ ಮಾತುಕತೆ ನಡೆದಿದ್ದು, ಮುಂದಿನ ಐದು ವರ್ಷಗಳಲ್ಲಿ ಒಟ್ಟು 13 ಕಾರುಗಳನ್ನು ಬಿಡುಗಡೆ ಮಾಡುವ ನಿರ್ಣಯ ಕೈಗೊಳ್ಳಲಾಗಿದೆ.

 ಬದಲಿ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಇಎಕ್ಸ್‌ಯುವಿ300 ಎಲೆಕ್ಟ್ರಿಕ್ ಎಸ್‌ಯುವಿ

ಇದರಲ್ಲಿ ಎಂಟು ಎಲೆಕ್ಟ್ರಿಕ್ ಕಾರುಗಳು ಮತ್ತು ಐದು ಸಾಮಾನ್ಯ ಕಾರು ಮಾದರಿಗಳ ಬಿಡುಗಡೆಯಾಗಲಿದ್ದು, ಎಲೆಕ್ಟ್ರಿಕ್ ಕಾರುಗಳು 2022ರಿಂದ ಹಂತ-ಹಂತವಾಗಿ ಮಾರುಕಟ್ಟೆ ಪ್ರವೇಶಿಸಲಿವೆ.

 ಬದಲಿ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಇಎಕ್ಸ್‌ಯುವಿ300 ಎಲೆಕ್ಟ್ರಿಕ್ ಎಸ್‌ಯುವಿ

2022ರಿಂದ 2027ರ ತನಕ ಎಂಟು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿರುವ ಮಹೀಂದ್ರಾ ಕಂಪನಿಯು ಆರಂಭಿಕವಾಗಿ ಇಕೆಯುವಿ100 ಮಾರಾಟ ಮಾಡಲಿದ್ದು, ತದನಂತರ ಕಾನ್ಸೆಪ್ಟ್ ಆವೃತ್ತಿಯಾಗಿರುವ ಇಎಕ್ಸ್‌ಯುವಿ300 ಮಾದರಿಯನ್ನು ಕೆಲವು ಬದಲಾವಣೆಗಳೊಂದಿಗೆ ಇಎಕ್ಸ್‌ಯುವಿ400 ಮಾದರಿಯಾಗಿ ಮಾರಾಟಗೊಳಿಸಬಹುದಾಗಿದೆ ಎನ್ನಲಾಗಿದೆ.

 ಬದಲಿ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಇಎಕ್ಸ್‌ಯುವಿ300 ಎಲೆಕ್ಟ್ರಿಕ್ ಎಸ್‌ಯುವಿ

ಹೊಸ ಮಾಹಿತಿಗಳ ಪ್ರಕಾರ ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ300 ಮತ್ತು ಈ ಹಿಂದಿನ ಎಕ್ಸ್‌ಯುವಿ500 ಮಾದರಿಯ ನಡುವಿನ ಸ್ಥಾನ ತುಂಬಲು ಹೊಸದಾಗಿ 4.3-ಮೀಟರ್ ಉದ್ದಳತೆ ಹೊಂದಿರುವ ಕಂಪ್ಯಾಕ್ಟ್ ಎಸ್‌ಯುವಿಯನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಇಎಕ್ಸ್‌ಯುವಿ300 ಮಾದರಿಯನ್ನೇ ಎಕ್ಸ್‌ಯುವಿ400 ಮಾದರಿಯಾಗಿ ಮಾರಾಟಗೊಳಿಸಬಹುದಾಗಿದೆ.

 ಬದಲಿ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಇಎಕ್ಸ್‌ಯುವಿ300 ಎಲೆಕ್ಟ್ರಿಕ್ ಎಸ್‌ಯುವಿ

ಮಹೀಂದ್ರಾ ಕಂಪನಿಯು ಹೊಸ ಕಾರನ್ನು ಸದ್ಯಕ್ಕೆ ಬಿ705 ಎನ್ನುವ ಕೋಡ್‌ನೆಮ್ ಬಳಕೆ ಮಾಡಿ ಟೆಸ್ಟಿಂಗ್ ನಡೆಸುತ್ತಿದ್ದು, ಎಕ್ಸ್‌ಯುವಿ400 ಮಾದರಿಯು ಎಕ್ಸ್‌ಯುವಿ300 ಮಾದರಿಗಿಂತಲೂ ಹೆಚ್ಚಿನ ಮಟ್ಟದ ವ್ಹೀಲ್‌ಬೆಸ್‌ನೊಂದಿದೆ ಉತ್ತಮ ಕ್ಯಾಬಿನ್ ಪಡೆದುಕೊಳ್ಳಲಿದೆ.

 ಬದಲಿ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಇಎಕ್ಸ್‌ಯುವಿ300 ಎಲೆಕ್ಟ್ರಿಕ್ ಎಸ್‌ಯುವಿ

ಹೊಸ ಕಾರು ಮಹೀಂದ್ರಾ ಎಲೆಕ್ಟ್ರಿಕ್ ಸ್ಕೇಲೆಬಲ್ ಮತ್ತು ಮಾಡ್ಯುಲರ್ ಆರ್ಕಿಟೆಕ್ಚರ್(MESMA) ಪ್ಲಾಟ್‌ಫಾರ್ಮ್‌ನಿಂದ ಆಧಾರವಾಗಿದ್ದು, ಹೊಸ ಕಾರು ಇಂಧನ ಆಧರಿತ ಮತ್ತು ಎಲೆಕ್ಟ್ರಿಕ್ ಎರಡು ಮಾದರಿಗಳಲ್ಲೂ ಬಿಡುಗಡೆಯಾಗುವ ನೀರಿಕ್ಷೆಗಳಿವೆ.

 ಬದಲಿ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಇಎಕ್ಸ್‌ಯುವಿ300 ಎಲೆಕ್ಟ್ರಿಕ್ ಎಸ್‌ಯುವಿ

ಆದರೆ ಹೊಸ ಮಾದರಿಯ ಎಂಜಿನ್ ಆಯ್ಕೆ ಕುರಿತಂತೆ ಇನ್ನು ಯಾವುದೇ ಮಾಹಿತಿಯನ್ನು ಹಂಚಿಕೊಳ್ಳದ ಮಹೀಂದ್ರಾ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

 ಬದಲಿ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಇಎಕ್ಸ್‌ಯುವಿ300 ಎಲೆಕ್ಟ್ರಿಕ್ ಎಸ್‌ಯುವಿ

ಮಹೀಂದ್ರಾ ಬಿಡುಗಡೆ ಮಾಡಲಿರುವ ಐದು ಸಾಮಾನ್ಯ ಕಾರುಗಳಲ್ಲಿ ನ್ಯೂ ಜನರೇಷನ್ ಸ್ಕಾರ್ಪಿಯೋ ಮತ್ತು ಬೊಲೆರೊ ಸೇರಿದಂತೆ ಥಾರ್ ಹೊಸ ಆವೃತ್ತಿಯು ಬಿಡುಗಡೆಯಾಗಲಿದ್ದು, ಮತ್ತೆರಡು ಹೊಸ ಕಾರುಗಳ ನಂತರ ಡೀಸೆಲ್ ಕಾರುಗಳ ಅಭಿವೃದ್ದಿಯನ್ನು ಕಡಿತ ಮಾಡಲು ನಿರ್ಧರಿಸಿದೆ.

 ಬದಲಿ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಇಎಕ್ಸ್‌ಯುವಿ300 ಎಲೆಕ್ಟ್ರಿಕ್ ಎಸ್‌ಯುವಿ

ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ತೀವ್ರ ಬೆಳವಣಿಗೆ ಕಂಡುಬರುತ್ತಿರುವ ಹಿನ್ನಲೆಯಲ್ಲಿ ಹಲವಾರು ಉತ್ಪಾದನಾ ಕಂಪನಿಗಳು ವಿವಿಧ ಮಾದರಿಯ ಇವಿ ವಾಹನಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತಿದ್ದು, ಮಹೀಂದ್ರಾ ಕಂಪನಿಯು ಕೂಡಾ ಇವಿ ವಾಹನ ಮಾರಾಟದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

 ಬದಲಿ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಇಎಕ್ಸ್‌ಯುವಿ300 ಎಲೆಕ್ಟ್ರಿಕ್ ಎಸ್‌ಯುವಿ

ಎಲೆಕ್ಟ್ರಿಕ್ ವಾಹನ ಉದ್ಯಮದಲ್ಲಿ ಮೇಲೆ ಈಗಾಗಲೇ ಭಾರೀ ಪ್ರಮಾಣದ ಹೂಡಿಕೆ ಮಾಡಿರುವ ಕಂಪನಿಯು ಇತ್ತೀಚೆಗೆ ಹೆಚ್ಚುವರಿಯಾಗಿ ರೂ.3 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಿದ್ದು, ಹೊಸ ಬಂಡವಾಳದೊಂದಿಗೆ ಕಂಪನಿಯು ಇದುವರೆಗೆ ಸುಮಾರು ರೂ.12 ಸಾವಿರ ಕೋಟಿ ಹೂಡಿಕೆ ಮಾಡಿದಂತಾಗಿದೆ.

 ಬದಲಿ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಇಎಕ್ಸ್‌ಯುವಿ300 ಎಲೆಕ್ಟ್ರಿಕ್ ಎಸ್‌ಯುವಿ

ರೆವಾ ಎಲೆಕ್ಟ್ರಿಕ್ ಕಂಪನಿಯೊಂದಿಗೆ 2010ರಲ್ಲಿ ಮೊದಲ ಹೂಡಿಕೆಯೊಂದಿಗೆ ಎಲೆಕ್ಟ್ರಿಕ್ ವಾಹನ ಉದ್ಯಮಕ್ಕೆ ಕಾಲಿರಿಸಿದ ಮಹೀಂದ್ರಾ ಕಂಪನಿಯು ಇದುವರೆಗೆ ಹಲವಾರು ಎಲೆಕ್ಟ್ರಿಕ್ ವಾಹನ ಮಾದರಿಗಳನ್ನು ಪರಿಚಯಿಸಿದ್ದು, ಇದೀಗ ಕಂಪನಿಯು ಸುಧಾರಿತ ತಂತ್ರಜ್ಞಾನ ಪ್ರೇರಿತ ವಾಹನಗಳ ಅಭಿವೃದ್ದಿಯತ್ತ ಹೆಚ್ಚಿನ ಗಮನಹರಿಸುತ್ತಿದೆ.

 ಬದಲಿ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಇಎಕ್ಸ್‌ಯುವಿ300 ಎಲೆಕ್ಟ್ರಿಕ್ ಎಸ್‌ಯುವಿ

ಪ್ರಯಾಣಿಕ ವಾಹನಗಳ ವಿಭಾಗದಲ್ಲಿ ಮಾತ್ರವಲ್ಲ ವಾಣಿಜ್ಯ ವಾಹನಗಳ ವಿಭಾಗದಲ್ಲೂ ಎಲೆಕ್ಟ್ರಿಕ್ ಮಾದರಿಗಳನ್ನು ಪರಿಚಯಿಸಿರುವ ಮಹೀಂದ್ರಾ ಕಂಪನಿಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಪ್ರಮುಖ ಬದಲಾವಣೆಗಳೊಂದಿಗೆ ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

 ಬದಲಿ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಇಎಕ್ಸ್‌ಯುವಿ300 ಎಲೆಕ್ಟ್ರಿಕ್ ಎಸ್‌ಯುವಿ

ಮಹೀಂದ್ರಾ ಕಂಪನಿಯು ಕೇವಲ ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮಾತ್ರವಲ್ಲದೆ ಸಂಶೋಧನೆ, ವಿಶ್ವಾದ್ಯಂತ ನೂರಾರು ಇವಿ ಸ್ಟಾರ್ಟ ಅಪ್ ಕಂಪನಿಗಳಲ್ಲೂ ಹಣ ಹೂಡಿಕೆ ಮಾಡಿರುವುದು ಭವಿಷ್ಯದ ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮತ್ತು ಮಾರಾಟದಲ್ಲಿ ಮಹತ್ವದ ಪಾತ್ರವಹಿಸಲಿದೆ.

Most Read Articles

Kannada
English summary
Mahindra could be launched exuv300 as xuv400 details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X