Just In
Don't Miss!
- News
ನೊಂದ ಮಹಿಳೆಯಿಂದ ಪೊಲೀಸ್ ಸ್ಟೇಷನ್ ನಿಂದಲೇ ಫೇಸ್ ಬುಕ್ ಲೈವ್ !
- Movies
ಉಪೇಂದ್ರ ನಟನೆಯ ಕಬ್ಜ ಚಿತ್ರಕ್ಕೆ ಎಂಟ್ರಿ ಕೊಟ್ಟ 'ಕುರುಕ್ಷೇತ್ರ'ದ ಭೀಮ
- Sports
ಆರು ನಗರಗಳಲ್ಲಿ ಐಪಿಎಲ್ ನಡೆಸಲು ಬಿಸಿಸಿಐ ಸಿದ್ಧತೆ: ಅಹ್ಮದಾಬಾದ್ನಲ್ಲಿ ಫೈನಲ್: ವರದಿ
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಇವಿ ಪಾಲಿಸಿ ಅಡಿಯಲ್ಲಿ ಮಹೀಂದ್ರಾ ಇ-ವೆರಿಟೊ ಖರೀದಿಸುವ ಗ್ರಾಹಕರಿಗೆ ಭರ್ಜರಿ ರಿಯಾಯ್ತಿ
ದೆಹಲಿ ಸರ್ಕಾರವು ಎಲೆಕ್ಟ್ರಿಕ್ ವಾಹನ ನೀತಿ ಮೂಲಕ ಮಾಲಿನ್ಯ ಸಮಸ್ಯೆಗೆ ಪ್ರಮುಖ ಕಾರಣವಾಗಿರುವ ಇಂಧನ ಚಾಲಿತ ವಾಹನಗಳನ್ನು ತಗ್ಗಿಸಲು ಮಹತ್ವದ ಬದಲಾವಣೆಯತ್ತ ಹೆಜ್ಜೆಯಿರಿಸಿದ್ದು, ಫೇಮ್ 2 ಯೋಜನೆಗಿಂತಲೂ ಹೆಚ್ಚಿನ ಪ್ರೋತ್ಸಾಹದೊಂದಿಗೆ ಇವಿ ವಾಹನ ಖರೀದಿದಾರರಿಗೆ ಹೆಚ್ಚಿನ ಮಟ್ಟದ ಸಬ್ಸಡಿ ಯೋಜನೆ ಜಾರಿಗೊಳಿಸಿದೆ.

ದೇಶಾದ್ಯಂತ ಹೆಚ್ಚುತ್ತಿರುವ ವಾಹನ ಮಾಲಿನ್ಯಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಕೇಂದ್ರ ಮತ್ತು ವಿವಿಧ ರಾಜ್ಯ ಸರ್ಕಾರಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನ ನೀತಿ ಅಳವಡಿಸಿಕೊಂಡಿದ್ದು, ದೆಹಲಿ ಸರ್ಕಾರವು ಸಹ ಹೊಸ ಇವಿ ನೀತಿ ಅಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವ ಗ್ರಾಹಕರಿಗೆ ಗರಿಷ್ಠ ಸಬ್ಸಡಿ ನೀಡುತ್ತಿದೆ. ಎಲೆಕ್ಟ್ರಿಕ್ ವಾಹನಗಳನ್ನು ಪ್ರೋತ್ಸಾಹಿಸಲು ಈಗಾಗಲೇ ಕೇಂದ್ರ ಸರ್ಕಾರವು ಫೇಮ್ 2 ಯೋಜನೆಯನ್ನು ಜಾರಿಗೆ ತಂದಿದ್ದರೂ ಕೂಡಾ ದೆಹಲಿ ಸರ್ಕಾರವು ಪ್ರತ್ಯೇಕ ಇವಿ ಪಾಲಿಸಿ ಮೂಲಕ ಎಲೆಕ್ಟ್ರಿಕ್ ವಾಹನಗಳ ಖರೀದಿ ಮೇಲೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದೆ.

ದೆಹಲಿ ಸರ್ಕಾರವು ಹೊಸ ಇವಿ ಪಾಲಿಸಿ ಅಡಿ ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೆ ಕೇಂದ್ರ ಸರ್ಕಾರದ ಜಿಎಸ್‌ಟಿ ವಿನಾಯ್ತಿ ಜೊತೆಗೆ ನೋಂದಣಿ ಶುಲ್ಕಯಿಂದ ವಿನಾಯ್ತಿ, ರಸ್ತೆ ತೆರಿಗೆಯಿಂದ ವಿನಾಯ್ತಿ ಸೇರಿದಂತೆ ಹಲವಾರು ಆಫರ್‌ಗಳನ್ನು ನೀಡುತ್ತಿದೆ.

ಎಲೆಕ್ಟ್ರಿಕ್ ವಾಹನ ನೀತಿಯಿಂದಾಗಿ ದೆಹಲಿಯಲ್ಲಿ ಹೊಸ ಎಲೆಕ್ಟ್ರಿಕ್ ವಾಹನಗಳ ಬೆಲೆಯು ಇತರೆ ರಾಜ್ಯಗಳಿಂತಲೂ ಸಾಕಷ್ಟು ಬೆಲೆಯೊಂದಿಗೆ ಖರೀದಿಗೆ ಲಭ್ಯವಾಗುತ್ತಿದ್ದು, ಮಹೀಂದ್ರಾ ಕಂಪನಿಯ ಇ-ವೆರಿಟೊ ಕಾರು ಮಾದರಿಯ ಮೇಲೆ 2.88 ಲಕ್ಷ ಸಬ್ಸಡಿ ನೀಡುತ್ತಿದೆ.

ದೆಹಲಿಯಲ್ಲಿ ಹೊಸ ಎಲೆಕ್ಟ್ರಿಕ್ ವಾಹನ ಖರೀದಿಸುವ ಉತ್ಪಾದನಾ ಕಂಪನಿಗಳ ಬೆಲೆ ಹೊರತುಪಡಿಸಿ ಗ್ರಾಹಕರು ನೋಂದಣಿ ಶುಲ್ಕವನ್ನಾಗಲಿ, ರಸ್ತೆ ತೆರಿಗೆಯನ್ನು ಸಹ ಪಾವತಿ ಮಾಡಬೇಕಿಲ್ಲ. ಇದರಿಂದ ಎಲೆಕ್ಟ್ರಿಕ್ ವಾಹನಗಳನ್ನು ಪ್ರೊತ್ಸಾಹಿಸಲು ಮತ್ತು ಇಂಧನ ಆಧರಿತ ವಾಹನಗಳಿಗೆ ಬ್ರೇಕ್ ಹಾಕಲು ಇದೊಂದು ಪ್ರಮುಖ ನಿರ್ಧಾರವಾಗಿದೆ ಎನ್ನಬಹುದು.

ಇನ್ನು ದೇಶಾದ್ಯಂತ ತೈಲ ಬೆಲೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚದಲ್ಲಿ ಭಾರೀ ಏರಿಕೆಯಾಗಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ.

ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಆಸಕ್ತಿ ಇದ್ದರೂ ಕೂಡಾ ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೆ ಇವಿ ವಾಹನಗಳ ಬ್ಯಾಟರಿ ರೇಂಜ್ ಸಾಮಾರ್ಥ್ಯವು ಖರೀದಿಗೆ ಹಿಂದೇಟು ಹಾಕುವಂತೆ ಮಾಡಿದ್ದು, ಈ ಸಮಸ್ಯೆ ನಿವಾರಣೆಗಾಗಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಕಂಪನಿಯು ಸನ್ ಮೊಬಿಲಿಟಿ ಜೊತೆಗೂಡಿ ಎಲೆಕ್ಟ್ರಿಕ್ ವಾಹನಗಳಿಗೆ ತ್ವರಿತವಾಗಿ ಚಾರ್ಜಿಂಗ್ ಒದಗಿಸಲು ಬ್ಯಾಟರಿ ವಿನಿಮಯ ಕೇಂದ್ರಗಳನ್ನು ನಿರ್ಮಾಣ ಮಾಡುತ್ತಿವೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಬ್ಯಾಟರಿ ವಿನಿಯಮ ಕೇಂದ್ರಗಳಿಂದ ಎಲೆಕ್ಟ್ರಿಕ್ ವಾಹನಗಳಿಗೆ ತ್ವರಿತವಾಗಿ ಬ್ಯಾಟರಿ ಸೌಲಭ್ಯಗಳನ್ನು ಒದಗಿಸಬಹುದಾಗಿದ್ದು, ಬ್ಯಾಟರಿ ರೇಂಜ್ ಆಧಾರದ ಮೇಲೆ ಇಂತಿಷ್ಟು ಪ್ರಮಾಣದ ದರ ಪಾವತಿಸಿಬೇಕಾಗುತ್ತದೆ.

ಬ್ಯಾಟರಿ ವಿನಿಮಯದ ವೇಳೆ ಗ್ರಾಹಕರು ತಮ್ಮ ಬಳಿಯಿರುವ ಚಾರ್ಜ್ ಖಾಲಿಯಾದ ಬ್ಯಾಟರಿಯನ್ನು ವಿನಿಮಯ ಕೇಂದ್ರಗಳಿಗೆ ಹಿಂದಿರುಗಿಸುವ ಮೂಲಕ ಚಾರ್ಜ್ ಮಾಡಲಾದ ಬ್ಯಾಟರಿ ಪಡೆದುಕೊಳ್ಳುವ ವ್ಯವಸ್ಥೆ ಇದಾಗಿದ್ದು, ಹೊಸ ಸೌಲಭ್ಯವು ಚಾರ್ಜಿಂಗ್ ಸಮಯವನ್ನು ಉಳಿಸುವ ಮೂಲಕ ಬ್ಯಾಟರಿ ಖಾಲಿಯಾದ ತಕ್ಷಣವೇ ಮತ್ತೊಂದು ಬ್ಯಾಟರಿ ಪಡೆದುಕೊಳ್ಳಲು ಸಹಕಾರಿಯಾಗುತ್ತದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಸದ್ಯ ಬೆಂಗಳೂರು, ಮುಂಬೈ, ದೆಹಲಿ ಮತ್ತು ಅಹಮದಾಬಾದ್ ನಗರಗಳಲ್ಲಿನ ಆಯ್ದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪೆಟ್ರೋಲ್ ಬಂಕ್ ಆವರಣಗಳಲ್ಲೇ ಹೊಸ ಬ್ಯಾಟರಿ ವಿನಿಯಮ ಕೇಂದ್ರಗಳಿಗೆ ಚಾಲನೆ ನೀಡಲಾಗಿದ್ದು, ಪ್ರಾಯೋಗಿಕವಾಗಿ ವಿವಿಧ ನಗರಗಳಲ್ಲಿ ತಲಾ ಒಂದೊಂದು ಬ್ಯಾಟರಿ ವಿನಿಯಮ ತೆರೆದಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಕಂಪನಿಯು ಶೀಘ್ರದಲ್ಲೇ ಬೆಂಗಳೂರು ಒಂದಲ್ಲೇ ನೂರು ಕೇಂದ್ರಗಳಿಗೆ ಚಾಲನೆ ನೀಡಲಿದೆ.