ಉತ್ಪಾದನಾ ಮಾದರಿಯೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಇಕೆಯುವಿ100
ಹೊಸ ಎಮಿಷನ್ ಜಾರಿ ನಂತರ ವಾಹನ ಉತ್ಪಾದನೆಯಲ್ಲಿ ಸಾಕಷ್ಟು ಹೊಸ ಬದಲಾವಣೆಗಳನ್ನು ಪರಿಚಯಿಸಿರುವ ಮಹೀಂದ್ರಾ ಕಂಪನಿಯು ಹೊಸ ಮಾದರಿಯ ಕಾರು ಮಾರಾಟದೊಂದಿಗೆ ಪ್ರತಿಸ್ಪರ್ಧಿ ಕಾರು ಕಂಪನಿಗಳಿಂತಲೂ ಹೆಚ್ಚು ಮುನ್ನಡೆ ಕಾಯ್ದುಕೊಂಡಿದೆ.

ಕಾರು ಮಾರಾಟದಲ್ಲಿ ಸದ್ಯ ಟಾಟಾ ಮೋಟಾರ್ಸ್ ಜೊತೆ ತೀವ್ರ ಪೈಪೋಟಿ ನಡೆಸುತ್ತಿರುವ ಮಹೀಂದ್ರಾ ಕಂಪನಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರು ಮಾದರಿಗಳನ್ನು ಪರಿಚಯಿಸಲು ಸಿದ್ದವಾಗಿದ್ದು, ಬಿಡುಗಡೆಯಾಗಲಿರುವ ಹೊಸ ಕಾರು ಮಾದರಿಗಳಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿನ ಕೆಲವು ಕಾರು ಮಾದರಿಗಳ ನ್ಯೂ ಜನರೇಷನ್ ಆವೃತ್ತಿಗಳು ಸಹ ಒಳಗೊಂಡಿವೆ. ಜೊತೆಗೆ ಹೊಸ ಕಾರುಗಳಲ್ಲಿ ಎಲೆಕ್ಟ್ರಿಕ್ ಮಾದರಿಗಳು ಸಹ ಬಿಡುಗಡೆಯಾಗಲಿದ್ದು, ಇಕೆಯುವಿ100 ಕೂಡಾ ಪ್ರಮುಖವಾಗಿದೆ.

ಇಕೆಯುವಿ100 ಎಲೆಕ್ಟ್ರಿಕ್ ಕಾರು ಮಾದರಿಯನ್ನು ಈಗಾಗಲೇ 2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಬಿಡುಗಡೆ ಮಾಡಲಾಗಿದ್ದರೂ ಕರೋನಾ ವೈರಸ್ ಪರಿಣಾಮ ಹೊಸ ಕಾರಿನ ಅಧಿಕೃತ ವಿತರಣೆಯನ್ನು ಮುಂದೂಡಿರುವ ಮಹೀಂದ್ರಾ ಕಂಪನಿಯು ಉತ್ಪಾದನಾ ಮಾದರಿಯೊಂದಿಗೆ ರೋಡ್ ಟೆಸ್ಟಿಂಗ್ ಮುಂದುವರಿಸಿದೆ.

ಉತ್ಪಾದನಾ ಮಾದರಿಯೊಂದಿಗೆ ಹೊಸ ಕಾರಿನ ಕೆಲವು ಪ್ರಮುಖ ಬದಲಾವಣೆಗಳನ್ನು ಪರಿಚಯಿಸಲು ನಿರ್ಧರಿಸಿರುವ ಮಹೀಂದ್ರಾ ಕಂಪನಿಯು ಇದೇ ವರ್ಷ ಎಪ್ರಿಲ್ ಅಥವಾ ಮೇ ವೇಳೆಗೆ ಹೊಸ ಕಾರಿನ ವಿತರಣೆಯನ್ನು ಆರಂಭಿಸುವ ಸಾಧ್ಯತೆಗಳಿವೆ.

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ.

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಈಗಾಗಲೇ ಫೇಮ್ 2 ಸಬ್ಸಡಿ ಯೋಜನೆಯನ್ನು ಜಾರಿಗೆ ತಂದಿದ್ದು, ಹೊಸ ಯೋಜನೆಯಡಿ ಎಲೆಕ್ಟ್ರಿಕ್ ವಾಹನ ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದೆ.

ಹಾಗೆಯೇ ಫೇಮ್ 2 ಯೋಜನೆಯೊಂದಿಗೆ ವಿವಿಧ ರಾಜ್ಯ ಸರ್ಕಾರಗಳು ಸಹ ತಮ್ಮದೇ ಆದ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿದ್ದು, ಫೇಮ್ 2 ಯೋಜನೆಯ ಸಬ್ಸಡಿ ಜೊತೆಗೆ ವಿವಿಧ ರಾಜ್ಯದ ಸರ್ಕಾರಗಳು ಸಹ ಕೆಲವು ವಿನಾಯ್ತಿಗಳನ್ನು ನೀಡುತ್ತಿವೆ.
MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಈ ಹಿನ್ನಲೆಯಲ್ಲಿ ಬಜೆಟ್ ಬೆಲೆಯಲ್ಲಿರುವ ಎಲೆಕ್ಟ್ರಿಕ್ ಮಾದರಿಯಾಗಿ ಗುರುತಿಸಿಕೊಳ್ಳಲಿರುವ ಇಕೆಯುವಿ100 ಮೈಕ್ರೊ ಎಸ್‌ಯುವಿ ಮಾದರಿಯನ್ನು ಉತ್ಪಾದನಾ ಮಾದರಿಯೊಂದಿಗೆ ಅಂತಿಮ ಹಂತದ ಪರೀಕ್ಷೆಗಳನ್ನು ಪೂರ್ಣಗೊಳಿಸಲಾಗುತ್ತಿದ್ದು, ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ರೂ.8.25 ಲಕ್ಷ ಬೆಲೆ ಹೊಂದಿದೆ.

2020ರ ಫೆಬ್ರವರಿಯಲ್ಲಿ ನಡೆದಿದ್ದ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಂಡಿದ್ದ ಇಕೆಯುವಿಯಲ್ಲಿ 15.9kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದ್ದ ಮಹೀಂದ್ರಾ ಕಂಪನಿಯು ಪ್ರತಿಚಾರ್ಜ್‌ಗೆ ಗರಿಷ್ಠ 120 ಕಿ.ಮೀ ಮೈಲೇಜ್ ಸಾಮರ್ಥ್ಯ ಹೊಂದಿರಲಿದೆ ಎಂದಿತ್ತು.
MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಆದರೆ ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ವಿಸ್ತರಿತ ಬ್ಯಾಟರಿ ಜೋಡಣೆ ಮಾಡುವ ಸಾಧ್ಯತೆಗಳಿದ್ದು, ಸದ್ಯ ನಿಗದಿಪಡಿಸಲಾದ ಬೆಲೆಗಿಂತಲೂ ತುಸು ಹೆಚ್ಚಳದೊಂದಿಗೆ ಹೆಚ್ಚಿನ ಮಟ್ಟದ ಮೈಲೇಜ್ ರೇಂಜ್ ಪಡೆದುಕೊಳ್ಳಲಿದೆ.


Click it and Unblock the Notifications