ಗುಜರಾತ್ ಸರ್ಕಾರದ ಹೊಸ ಇವಿ ನೀತಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಮಹೀಂದ್ರಾ

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಸರ್ಕಾರದ ಜೊತೆಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿರುವ ಇವಿ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹವು ಹೊಸ ಬದಲಾವಣೆಗೆ ಕಾರಣವಾಗಿದೆ.

ಹೊಸ ಇವಿ ನೀತಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಮಹೀಂದ್ರಾ

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಫೇಮ್ 2 ಸಬ್ಸಡಿ ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳಿಗೆ ಮತ್ತು ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಫೇಮ್ 2 ಯೋಜನೆಯ ಸಬ್ಸಡಿ ಜೊತೆಗೆ ವಿವಿಧ ರಾಜ್ಯದ ಸರ್ಕಾರಗಳು ಸಹ ಕೆಲವು ವಿನಾಯ್ತಿಗಳನ್ನು ನೀಡುತ್ತಿವೆ.

ಗುಜರಾತ್ ಸರ್ಕಾರದ ಹೊಸ ಇವಿ ನೀತಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಮಹೀಂದ್ರಾ

ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಗುಜರಾತ್ ಸರ್ಕಾರದ ಹೊಸ ಇವಿ ನೀತಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಮಹೀಂದ್ರಾ

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ದೆಹಲಿ ನಂತರ ಗುಜರಾತ್ ಸರ್ಕಾರವು ಸಹ ರಾಜ್ಯ ಮಟ್ಟದಲ್ಲಿ ಹೊಸ ಇವಿ ನೀತಿ ಅಳವಡಿಸಿಕೊಂಡಿದ್ದು, ಮುಂದಿನ ನಾಲ್ಕು ವರ್ಷಗಳ ಅವಧಿಯಲ್ಲಿ ಇವಿ ವಾಹನಗಳನ್ನು ಖರೀದಿಸುವ ಗ್ರಾಹಕರಿಗಾಗಿ ರೂ. 870 ಕೋಟಿ ಸಬ್ಸಡಿ ನೀಡಲು ನಿರ್ಧರಿಸಿದೆ.

ಗುಜರಾತ್ ಸರ್ಕಾರದ ಹೊಸ ಇವಿ ನೀತಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಮಹೀಂದ್ರಾ

ಹೊಸ ನೀತಿಯಡಿ ಇವಿ ಚಾರ್ಜಿಂಗ್ ಮೂಲಸೌಕರ್ಯ ಹೆಚ್ಚಳಕ್ಕೆ ಸಹಕಾರಿಯಾಗುವುದಲ್ಲದೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ರೂ.20,000ವರೆಗೆ ಸಬ್ಸಿಡಿ ಮತ್ತು ಎಲೆಕ್ಟ್ರಿಕ್ ಕಾರುಗಳಿಗೆ ರೂ.1.50 ಲಕ್ಷಗಳವರೆಗೆ ಸಬ್ಸಡಿ ಲಭ್ಯವಾಗಲಿದ್ದು, ಗ್ರಾಹಕರಿಗೆ ಗುಜರಾತ್ ಸರ್ಕಾರವು ನೀಡುತ್ತಿರುವುದು ಸಬ್ಸಡಿ ಜೊತೆಗೆ ಕೇಂದ್ರ ಸರ್ಕಾರದ ಸಬ್ಸಡಿ ಸಹ ಅನ್ವಯವಾಗಲಿದೆ.

ಗುಜರಾತ್ ಸರ್ಕಾರದ ಹೊಸ ಇವಿ ನೀತಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಮಹೀಂದ್ರಾ

ಎಲೆಕ್ಟ್ರಿಕ್ ವಾಹನ ತೀವ್ರ ಬೆಳವಣಿಗಾಗಿ ಗುಜರಾತ್ ಸರ್ಕಾರದ ನಿರ್ಧಾರಕ್ಕೆ ಬಹುತೇಕ ಆಟೋ ಕಂಪನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದು, ಮಹೀಂದ್ರಾ ಎಲೆಕ್ಟ್ರಿಕ್ ವಿಭಾಗದ ಮುಖ್ಯಸ್ಥ ಮಹೇಶ್ ಬಾಬು ಅವರು ಮಹತ್ವದ ಬದಲಾವಣೆಗಾಗಿ ಗುಜರಾತ್ ಸರ್ಕಾರದ ನಿರ್ಧಾರಕ್ಕೆ ಧನ್ಯವಾದ ತಿಳಿಸಿದ್ದಾರೆ.

ಗುಜರಾತ್ ಸರ್ಕಾರದ ಹೊಸ ಇವಿ ನೀತಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಮಹೀಂದ್ರಾ

ಗುಜರಾತ್ ಸರ್ಕಾರದ ನಿರ್ಧಾರದಿಂದ ಎಲೆಕ್ಟ್ರಿಕ್ ವಾಹನ ಉದ್ಯಮಕ್ಕೆ ಮತ್ತಷ್ಟು ಬಲಬಂದಿರುವುದಾಗಿ ಹೇಳಿಕೊಂಡಿರುವ ಮಹೇಶ್ ಬಾಬು ಅವರು ತಮ್ಮ ಹೊಸ ಇವಿ ವಾಹನ ಉತ್ಪನ್ನಗಳ ಶ್ರೇಣಿ ಹೆಚ್ಚಿಸಲು ಇವಿ ನೀತಿಗಳು ಬಲತುಂಬಿದೆ ಎಂದಿದ್ದಾರೆ.

ಗುಜರಾತ್ ಸರ್ಕಾರದ ಹೊಸ ಇವಿ ನೀತಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಮಹೀಂದ್ರಾ

ಇನ್ನು ಪ್ರಸ್ತುತ ಮಾರುಕಟ್ಟೆಯಲ್ಲಿನ ಎಲೆಕ್ಟ್ರಿಕ್ ವಾಹನ ಮಾರಾಟದಲ್ಲಿ ಈಗಾಗಲೇ ಸಾಕಷ್ಟು ಮುಂಚೂಣಿ ಸಾಧಿಸಿರುವ ಮಹೀಂದ್ರಾ ಆ್ಯಂಡ್ ಮಹೀಂದ್ರಾ ಕಂಪನಿಯ ಮಹೀಂದ್ರಾ ಎಲೆಕ್ಟ್ರಿಕ್ ವಿಭಾಗವು ಮತ್ತಷ್ಟು ಹೊಸ ಇವಿ ವಾಹನ ಉತ್ಪನ್ನ ಬಿಡುಗಡೆ ಸಿದ್ದವಾಗುತ್ತಿದ್ದು, ವಾಣಿಜ್ಯ ವಾಹನಗಳ ಮಾದರಿಗಳಂತೆ ಪ್ರಯಾಣಿಕರ ಎಲೆಕ್ಟ್ರಿಕ್ ವಾಹನ ಮಾದರಿಯ ಮಾರಾಟದಲ್ಲೂ ಮುಂಚೂಣಿ ಸಾಧಿಸುವ ತವಕದಲ್ಲಿದೆ.

ಗುಜರಾತ್ ಸರ್ಕಾರದ ಹೊಸ ಇವಿ ನೀತಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಮಹೀಂದ್ರಾ

ಎಲೆಕ್ಟ್ರಿಕ್ ವಾಹನ ಉದ್ಯಮದಲ್ಲಿ ಮೇಲೆ ಈಗಾಗಲೇ ಭಾರೀ ಪ್ರಮಾಣದ ಹೂಡಿಕೆ ಮಾಡಿರುವ ಕಂಪನಿಯು ಇತ್ತೀಚೆಗೆ ಹೆಚ್ಚುವರಿಯಾಗಿ ರೂ.3 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ಒಪ್ಪಿಗೆ ಸೂಚಿಸಿದ್ದು, ಹೊಸ ಬಂಡವಾಳದೊಂದಿಗೆ ಕಂಪನಿಯು ಇದುವರೆಗೆ ಸುಮಾರು ರೂ.12 ಸಾವಿರ ಕೋಟಿ ಹೂಡಿಕೆ ಮಾಡಿದಂತಾಗಿದೆ.

ಗುಜರಾತ್ ಸರ್ಕಾರದ ಹೊಸ ಇವಿ ನೀತಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಮಹೀಂದ್ರಾ

ರೆವಾ ಎಲೆಕ್ಟ್ರಿಕ್ ಕಂಪನಿಯೊಂದಿಗೆ 2010ರಲ್ಲಿ ಮೊದಲ ಹೂಡಿಕೆಯೊಂದಿಗೆ ಎಲೆಕ್ಟ್ರಿಕ್ ವಾಹನ ಉದ್ಯಮಕ್ಕೆ ಕಾಲಿರಿಸಿದ ಮಹೀಂದ್ರಾ ಕಂಪನಿಯು ಇದುವರೆಗೆ ಹಲವಾರು ಎಲೆಕ್ಟ್ರಿಕ್ ವಾಹನ ಮಾದರಿಗಳನ್ನು ಪರಿಚಯಿಸಿದ್ದು, ಇದೀಗ ಕಂಪನಿಯು ಸುಧಾರಿತ ತಂತ್ರಜ್ಞಾನ ಪ್ರೇರಿತ ವಾಹನಗಳ ಅಭಿವೃದ್ದಿಯತ್ತ ಹೆಚ್ಚಿನ ಗಮನಹರಿಸುತ್ತಿದೆ.

ಗುಜರಾತ್ ಸರ್ಕಾರದ ಹೊಸ ಇವಿ ನೀತಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಮಹೀಂದ್ರಾ

ಇಕೆಯುವಿ100 ನಂತರ ಕಂಪನಿಯು ಇಎಕ್ಸ್‌ಯುವಿ300 ಕಂಪ್ಯಾಕ್ಟ್ ಎಸ್‌ಯುವಿ ಮತ್ತು ಅಟಾಮ್ ಕ್ವಾರ್ಡ್ರಿಸೈಕಲ್ ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಮಧ್ಯಮ ಗಾತ್ರದ ಎಲೆಕ್ಟ್ರಿಕ್ ಕಾರುಗಳ ವಿಭಾಗದಲ್ಲಿ ಇಎಕ್ಸ್‌ಯುವಿ300 ಕಾರು ಮಾದರಿಯೊಂದಿಗೆ 2025ರ ವೇಳೆಗೆ 5 ಲಕ್ಷ ಯುನಿಟ್ ಇವಿ ವಾಹನಗಳನ್ನು ಮಾರಾಟ ಮಾಡುವ ಗುರಿಹೊಂದಿದೆ.

Most Read Articles

Kannada
English summary
Mahindra Electric Supports EV Policy Introduced By Gujarat Govt.
Story first published: Thursday, June 24, 2021, 0:00 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X