ಲಾಕ್‌ಡೌನ್ ಹಿನ್ನಲೆಯಲ್ಲಿ ಕಾರುಗಳ ವಾರಂಟಿ ಅವಧಿ ವಿಸ್ತರಿಸಿದ ಮಹೀಂದ್ರಾ

ಮಹೀಂದ್ರಾ ಕಂಪನಿಯು ಕೋವಿಡ್ ಪರಿಣಾಮ ತನ್ನ ಗ್ರಾಹಕರಿಗೆ ಹೆಚ್ಚುವರಿ ವಾರಂಟಿ ಆಫರ್ ಘೋಷಿಸಿದ್ದು, ಕೋವಿಡ್ ಪರಿಣಾಮ ಏಪ್ರಿಲ್ ಮತ್ತು ಮೇ ಅವಧಿಯಲ್ಲಿ ಕೊನೆಗೊಳ್ಳುವ ವಾರಂಟಿ ಅವಧಿಯನ್ನು ಮುಂದಿನ ಜುಲೈ ಅಂತ್ಯದ ತನಕ ವಿಸ್ತರಿಸಿದೆ.

ಲಾಕ್‌ಡೌನ್ ಹಿನ್ನಲೆಯಲ್ಲಿ ಕಾರುಗಳ ವಾರಂಟಿ ಅವಧಿ ವಿಸ್ತರಿಸಿದ ಮಹೀಂದ್ರಾ

ಕೋವಿಡ್ 2ನೇ ಅಲೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಹೊಸ ವಾಹನ ಮಾರಾಟಕ್ಕೆ ಕೆಲವು ಕಡೆಗಳಲ್ಲಿ ಷರತ್ತು ಬದ್ದ ಅವಕಾಶಗಳಿದ್ದರೂ ಗ್ರಾಹಕರ ಸೇವೆಗಳು ಆಟೋ ಉತ್ಪಾದನಾ ಕಂಪನಿಗಳಿಗೆ ಸವಾಲಾಗಿ ಪರಿಣಮಿಸಿದ್ದು, ಇದರಿಂದ ಲಾಕ್‌ಡೌನ್ ಅವಧಿಯಲ್ಲಿ ನಿಗದಿತ ಅವಧಿಯ ಸೇವೆಗಳನ್ನು ಪಡೆದುಕೊಳ್ಳಬೇಕಿದ್ದ ವಾಹನಗಳ ವಾರಂಟಿ ಅವಧಿಯು ಮಹೀಂದ್ರಾ ಕಂಪನಿಯು ಮುಂದಿನ ಜುಲೈ ತನಕ ವಿಸ್ತರಣೆ ಮಾಡಿದೆ.

ಲಾಕ್‌ಡೌನ್ ಹಿನ್ನಲೆಯಲ್ಲಿ ಕಾರುಗಳ ವಾರಂಟಿ ಅವಧಿ ವಿಸ್ತರಿಸಿದ ಮಹೀಂದ್ರಾ

ಲಾಕ್‌ಡೌನ್ ಸಂದರ್ಭದಲ್ಲಿ ಸ್ಟ್ಯಾಂಡರ್ಡ್ ವಾರಂಟಿ ಸೇವೆಗಳು ಹೊಸ ಸವಾಲಾಗುತ್ತಿದ್ದು, ಗ್ರಾಹಕರು ಮನೆಯಿಂದ ವಾಹನಗಳನ್ನು ಹೊರತೆಗೆಯುವಂತಿಲ್ಲ. ಇದರಿಂದ ಪರಿಸ್ಥಿತಿ ಅನುಗುಣವಾಗಿ ಬಹುತೇಕ ಆಟೋ ಉತ್ಪಾದನಾ ಕಂಪನಿಗಳು ವಾರಂಟಿ ಅವಧಿಯನ್ನು ಹೆಚ್ಚಿಸಿವೆ.

ಲಾಕ್‌ಡೌನ್ ಹಿನ್ನಲೆಯಲ್ಲಿ ಕಾರುಗಳ ವಾರಂಟಿ ಅವಧಿ ವಿಸ್ತರಿಸಿದ ಮಹೀಂದ್ರಾ

ಮಹೀಂದ್ರಾ ಕಂಪನಿಯು ತನ್ನ ಪ್ರಮುಖ ಕಾರುಗಳ ಸ್ಟ್ಯಾಂಡರ್ಡ್ ವಾರಂಟಿ, ಪಾವತಿ ಮಾಡಲಾದ ವಾರಂಟಿ, ಆಫರ್‌ಗಳ ಅಡಿ ನೀಡಲಾಗಿರುವ ವಾರಂಟಿಗಳನ್ನು ಜುಲೈ 31ರ ತನಕ ವಿಸ್ತರಿಸಲಾಗಿದ್ದು, ವಾರಂಟಿ ಅವಧಿಯ ಕುರಿತಾಗಿ ಗ್ರಾಹಕರ ಗೊಂದಲಗಳಿಗೆ ಮಹೀಂದ್ರಾ ಕಂಪನಿಯು ಸ್ಪಷ್ಟನೆ ನೀಡಿದೆ.

ಲಾಕ್‌ಡೌನ್ ಹಿನ್ನಲೆಯಲ್ಲಿ ಕಾರುಗಳ ವಾರಂಟಿ ಅವಧಿ ವಿಸ್ತರಿಸಿದ ಮಹೀಂದ್ರಾ

ವಿಸ್ತರಿತ ವಾರಂಟಿ ಅವಧಿಯಿಂದಾಗಿ ಗ್ರಾಹಕರು ಮುಂದಿನ ದಿನಗಳಲ್ಲಿ ಪರಿಸ್ಥಿತಿ ತುಸು ಸುಧಾರಣೆಗೊಂಡ ನಂತರ ಸ್ಟ್ಯಾಂಡರ್ಡ್ ಕಾರ್ ಸರ್ವಿಸ್‌ಗಳನ್ನು ಪಡೆದುಕೊಳ್ಳಬಹುದಾಗಿದ್ದು, ಸುರಕ್ಷತೆಯ ದೃಷ್ಠಿಯಿಂದ ವಾಹನಗಳ ಖರೀದಿ ಮತ್ತು ಗ್ರಾಹಕರ ಸೇವೆಗಳಿಗಾಗಿ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ಬಳಕೆ ಮಾಡುತ್ತಿದೆ.

ಲಾಕ್‌ಡೌನ್ ಹಿನ್ನಲೆಯಲ್ಲಿ ಕಾರುಗಳ ವಾರಂಟಿ ಅವಧಿ ವಿಸ್ತರಿಸಿದ ಮಹೀಂದ್ರಾ

ಇನ್ನು ದೇಶಾದ್ಯಂತ ಕೋವಿಡ್ 2ನೇ ಅಲೆ ಹೆಚ್ಚಿರುವುದರಿಂದ ವಿವಿಧ ರಾಜ್ಯಗಳಲ್ಲಿ ಹಲವು ಕಠಿಣ ಕ್ರಮಗಳೊಂದಿಗೆ ಲಾಕ್ಡೌನ್ ಮುಂದುವರಿಸಲು ನಿರ್ಧರಿಸಿದ್ದು, ಹೊಸ ಸುರಕ್ಷಾ ಕ್ರಮಗಳ ಪರಿಣಾಮ ಆಟೋ ಉದ್ಯಮ ಹಿಂದೆಂಗಿಂತಲೂ ಹೆಚ್ಚು ನಷ್ಟ ಎದುರಾಗುವ ಭೀತಿಯಲ್ಲಿದೆ.

ಲಾಕ್‌ಡೌನ್ ಹಿನ್ನಲೆಯಲ್ಲಿ ಕಾರುಗಳ ವಾರಂಟಿ ಅವಧಿ ವಿಸ್ತರಿಸಿದ ಮಹೀಂದ್ರಾ

ಕಳೆದ ವರ್ಷದ ಲಾಕ್‌ಡೌನ್‌ ಹೊಡೆತಕ್ಕೆ ಸಿಲುಕಿ ಸುಧಾರಣೆಯ ಹಾದಿಯಲ್ಲಿದ್ದ ಆಟೋ ಉದ್ಯಮವು ಇದೀಗ ಮತ್ತೆ ಸಂಕಷ್ಟ ಎದುರಿಸುತ್ತಿದ್ದು, ದೇಶಾದ್ಯಂತ ಹಲವು ಆಟೋ ಕಂಪನಿಗಳು ಈಗಾಗಲೇ ಕನಿಷ್ಠ ಪ್ರಮಾಣದ ಉದ್ಯೋಗಿಗಳೊಂದಿಗೆ ಕಾರ್ಯನಿರ್ವಹಿಸುತ್ತಿದ್ದರೆ ಇನ್ನು ಕೆಲವು ವಾಹನ ಕಂಪನಿಗಳು ಉದ್ಯೋಗಿಗಳ ಆರೋಗ್ಯದ ದೃಷ್ಠಿಯಿಂದ ಹೊಸ ವಾಹನಗಳ ಉತ್ಪಾದನೆಯನ್ನೇ ತಾತ್ಕಾಲಿಕವಾಗಿ ಬಂದ್ ಮಾಡಿವೆ.

MOST READ: ಲಾಕ್‌ಡೌನ್ ಉಲ್ಲಂಘನೆ ಮಾಡಿರುವ ವಾಹನ ಮಾಲೀಕರಿಗೆ ಜೈಲು ಶಿಕ್ಷೆ ಫಿಕ್ಸ್

ಲಾಕ್‌ಡೌನ್ ಹಿನ್ನಲೆಯಲ್ಲಿ ಕಾರುಗಳ ವಾರಂಟಿ ಅವಧಿ ವಿಸ್ತರಿಸಿದ ಮಹೀಂದ್ರಾ

ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲೇ ವಾಹನ ಉತ್ಪಾದನೆಯು ತಗ್ಗಿರುವುರುವುದು ಭಾರೀ ನಷ್ಟ ಎದುರಿಸುವ ಭೀತಿ ಎದುರಾಗಿದ್ದು, ಹೊಸ ಸುರಕ್ಷಾ ಕ್ರಮಗಳೊಂದಿಗೆ ಕೆಲವೇ ಕೆಲವು ಕಂಪನಿಗಳು ಮಾತ್ರ ವಾಹನ ಉತ್ಪಾದನೆ ಕೈಗೊಳ್ಳುತ್ತಿವೆ.

ಲಾಕ್‌ಡೌನ್ ಹಿನ್ನಲೆಯಲ್ಲಿ ಕಾರುಗಳ ವಾರಂಟಿ ಅವಧಿ ವಿಸ್ತರಿಸಿದ ಮಹೀಂದ್ರಾ

ಇದರ ನಡುವೆ ಹೊಸ ವಾಹನಗಳ ಖರೀದಿಗೆ ಬುಕ್ಕಿಂಗ್ ಸಲ್ಲಿಕೆ ತೀವ್ರ ಕಂಡಿರುವುದಲ್ಲದೆ ಈಗಾಗಲೇ ಬುಕ್ಕಿಂಗ್ ಸಲ್ಲಿಕೆ ಮಾಡಿದ್ದ ಲಕ್ಷಾಂತರ ಹೊಸ ವಾಹನ ಖರೀದಿದಾರರು ಈಗಾಗಲೇ ಮಾಡಲಾಗಿರುವ ಬುಕ್ಕಿಂಗ್ ಹಿಂಪಡೆಯುತ್ತಿದ್ದಾರೆ.

MOST READ: ಕೋವಿಡ್ ಭೀತಿ: ಕಾರು ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಎಂಜಿ ಮೋಟಾರ್

ಲಾಕ್‌ಡೌನ್ ಹಿನ್ನಲೆಯಲ್ಲಿ ಕಾರುಗಳ ವಾರಂಟಿ ಅವಧಿ ವಿಸ್ತರಿಸಿದ ಮಹೀಂದ್ರಾ

ಸದ್ಯದ ಪರಿಸ್ಥಿತಿಯಲ್ಲಿ ಹೊಸ ವಾಹನ ಖರೀದಿಯು ಆರ್ಥಿಕ ಸಂಕಷ್ಟ ಇನ್ನಷ್ಟು ಹೆಚ್ಚಳವಾಗುವ ಭೀತಿಯಿಂದ ಗ್ರಾಹಕರು ಹೊಸ ವಾಹನ ಖರೀದಿ ಪ್ರಕ್ರಿಯೆಯಿಂದ ಹಿಂದೆ ಸರಿಯುತ್ತಿದ್ದು, ಈ ಪರಿಸ್ಥಿತಿ ಸುಧಾರಣೆಯಾಗಲು ಇನ್ನು ಕೆಲ ವರ್ಷಗಳೇ ಬೇಕಾಗಬಹುದು ಎನ್ನಲಾಗುತ್ತಿದೆ.

{document1

Article Published On: Monday, May 24, 2021, 9:00 [IST]
English summary
Mahindra extends warranty and free service period on its entire range. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+