ಒಂದೇ ದಿನ 70 ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ Mahindra First Choice

ಹೊಸ ವಾಹನಗಳ ಮಾರಾಟದ ಜೊತೆಗೆ ಸೆಕೆಂಡ್ ಹ್ಯಾಂಡ್ ವಾಹನಗಳ ಖರೀದಿ ಮತ್ತು ಮಾರಾಟ ಪ್ರಮಾಣವು ಸಹ ತೀವ್ರಗತಿಯಲ್ಲಿ ಹೆಚ್ಚಿದ್ದು, ಗ್ರಾಹಕರ ಬೇಡಿಕೆ ಅನುಸಾರವಾಗ Mahindra ಕಂಪನಿಯು ತನ್ನ ಬಳಕೆ ಮಾಡಿದ ಕಾರುಗಳ ಮಾರಾಟ ವಿಭಾಗವಾದ Mahindra First Choice ಮಳಿಗೆಗಳ ಸಂಖ್ಯೆಯನ್ನು ದ್ವಿಗುಣಗೊಳಿಸುತ್ತಿದೆ.

ಒಂದೇ ದಿನ 70 ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ Mahindra First Choice

ಕೋವಿಡ್ ಪರಿಣಾಮ ದೇಶಾದ್ಯಂತ ಪ್ರಮುಖ ವಾಣಿಜ್ಯ ಚಟುವಟಿಕೆಗಳು ನೆಲಕಚ್ಚಿದ್ದು, ಆಟೋ ಉದ್ಯಮವು ಕೂಡಾ ಸಂಕಷ್ಟಗಳ ನಡುವೆಯೂ ತುಸು ಚೇತರಿಕೆ ಕಂಡಿದೆ. ಲಾಕ್‌ಡೌನ್ ವಿನಾಯ್ತಿ ನಂತರ ಆಟೋ ಉತ್ಪಾದನಾ ಚಟುವಟಿಕೆಗಳು ಹೆಚ್ಚುತ್ತಿದ್ದು, ಹಳೆಯ ವಾಹನಗಳ ಮರುಮಾರಾಟ ಮತ್ತು ಹೊಸ ವಾಹನಗಳ ಖರೀದಿ ಪ್ರಕ್ರಿಯೆಯನ್ನು ಸಾಕಷ್ಟು ಏರಿಕೆ ಕಂಡುಬರುತ್ತಿದೆ.

ಒಂದೇ ದಿನ 70 ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ Mahindra First Choice

ಆಟೋ ಉದ್ಯಮವು ಸದ್ಯಕ್ಕೆ ಮಂದಗತಿಯಲ್ಲಿ ಸಾಗಿದ್ದರೂ ಹೊಸ ವಾಹನ ಖರೀದಿಯಲ್ಲಿ ಹೆಚ್ಚಳದೊಂದಿಗೆ ಸೆಕೆಂಡ್ ಹ್ಯಾಂಡ್ ವಾಹನಗಳ ಮರುಮಾರಾಟ ಮತ್ತು ಖರೀದಿ ಪ್ರಕ್ರಿಯೆ ಸಾಕಷ್ಟು ಹೆಚ್ಚಳವಾಗಿದೆ.

ಒಂದೇ ದಿನ 70 ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ Mahindra First Choice

ಸೆಕೆಂಡ್ ವಾಹನ ಉದ್ಯಮವು ಕಳೆದ 2 ವರ್ಷಗಳ ಅವಧಿಯಲ್ಲಿ ಸಾಕಷ್ಟು ಏರಿಕೆ ಕಂಡಿದ್ದು, ಹೊಸ ಅವಕಾಶವನ್ನು ಬಳಸಿಕೊಳ್ಳಲು ಮುಂದಾಗಿರುವ ಬಹುತೇಕ ಆಟೋ ಕಂಪನಿಗಳು ಹೊಸ ವಾಹನಗಳ ಮಾರಾಟದ ಜೊತೆಗೆ ಸೆಕೆಂಡ್ ಹ್ಯಾಂಡ್ ಕಾರುಗಳ ಮಾರಾಟದ ಉದ್ಯಮದ ಮೇಲೂ ಭಾರೀ ಹೂಡಿಕೆ ಮಾಡುತ್ತಿವೆ.

ಒಂದೇ ದಿನ 70 ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ Mahindra First Choice

Mahindra ಒಡೆತನದ Mahindra First Choice ಸಹ ದೇಶಾದ್ಯಂತ ಮಲ್ಟಿ ಬ್ರಾಂಡ್ ಸೆಕೆಂಡ್ ಹ್ಯಾಂಡ್ ಕಾರು ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಕಳೆದ ಒಂದು ವರ್ಷದ ಅವಧಿಯಲ್ಲಿ ನೂರಕ್ಕೂ ಅಧಿಕ ಮಳಿಗೆಗಳೊಂದಿಗೆ ಕಾರ್ಯನಿರ್ವಹಿಸುತ್ತಿದೆ.

ಒಂದೇ ದಿನ 70 ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ Mahindra First Choice

ನಿನ್ನೆಯಷ್ಟೇ ಒಂದೇ ದಿನದಲ್ಲಿ ದೇಶದ ವಿವಿಧ ನಗರಗಳಲ್ಲಿ 70 ಹೊಸ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿರುವ Mahindra First Choice ಕಂಪನಿಯು ಮುಂದಿನ ದಿನಗಳಲ್ಲಿ ಮತ್ತಷ್ಟು ಹೊಸ ಮಳಿಗೆಗಳನ್ನು ತೆರೆಯಲು ನಿರ್ಧರಿಸಿದ್ದು, ಅಸಂಘಟಿತವಾಗಿ ಕಾರ್ಯನಿರ್ವಹಿಸುತ್ತಿರುವ ಸೆಕೆಂಡ್ ಹ್ಯಾಂಡ್ ಕಾರು ಮಾರಾಟವನ್ನು ವ್ಯವಸ್ಥಿತವಾಗಿ ಮಾರಾಟಗೊಳಿಸುವ ಗುರಿ ಹೊಂದಿದೆ.

ಒಂದೇ ದಿನ 70 ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ Mahindra First Choice

ಅಸಂಘಟಿತವಾಗಿರುವ ಸ್ಥಳೀಯ ವ್ಯಾಪಾರಿಗಳ ಬಳಿ ಸೆಕೆಂಡ್ ಹ್ಯಾಂಡ್ ವಾಹನ ಖರೀದಿಯು ಕೆಲವು ಸಂದರ್ಭಗಳಲ್ಲಿ ಲಾಭಕ್ಕಿಂತ ಹೆಚ್ಚು ನಷ್ಟ ಅನುಭವಿಸಬೇಕಾದ ಸಂದರ್ಭಗಳು ಎದುರಾಗಬಹುದಾಗಿದ್ದು, ಪ್ರಮಾಣೀಕೃತ ಸೆಕೆಂಡ್ ಹ್ಯಾಂಡ್ ವಾಹನಗಳು ಗ್ರಾಹಕರ ವಿಶ್ವಾಸ ಹೆಚ್ಚಿಸಿವೆ.

ಒಂದೇ ದಿನ 70 ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ Mahindra First Choice

ಜೊತೆಗೆ ಪ್ರಮಾಣೀಕೃತ ಸೆಕೆಂಡ್ ಹ್ಯಾಂಡ್ ವಾಹನಗಳ ಮಾರಾಟ ಮಳಿಗೆಗಳಲ್ಲಿ ಖರೀದಿಸುವ ವಾಹನಗಳಿಗೆ ಹೆಚ್ಚುವರಿಯಾಗಿ ವಾರಂಟಿ ಸಹ ದೊರೆಯಲಿದ್ದು, ಮೋಸದ ವ್ಯವಹಾರಗಳಿಗೆ ಇಲ್ಲಿ ಅವಕಾಶವಿರುವುದಿಲ್ಲ.

ಒಂದೇ ದಿನ 70 ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ Mahindra First Choice

ಈ ನಿಟ್ಟಿನಲ್ಲಿ Mahindra First Choice ಮಾರಾಟ ಮಳಿಗೆಗಳನ್ನು ಹೆಚ್ಚಿಸುತ್ತಿರುವ Mahindra ಕಂಪನಿಯು ಮುಂದಿನ 2 ವರ್ಷಗಳಲ್ಲಿ ಭಾರೀ ಪ್ರಮಾಣದ ವಹಿವಾಟು ನಡೆಸುವ ಯೋಜನೆಯಲ್ಲಿದ್ದು, ಸೆಕೆಂಡ್ ಹ್ಯಾಂಡ್ ವಾಹನಗಳಿಗೆ ಮಹಾನಗರಗಳಿಂತಲೂ ಹೆಚ್ಚು 2ನೇ ಮತ್ತು 3ನೇ ಹಂತದ ನಗರಗಳಲ್ಲಿ ಹೆಚ್ಚಿನ ಮಟ್ಟದ ಬೇಡಿಕೆ ಕಂಡುಬರುತ್ತಿದೆ.

ಒಂದೇ ದಿನ 70 ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ Mahindra First Choice

ಸೆಕೆಂಡ್ ಹ್ಯಾಂಡ್ ವಾಹನಗಳ ವಹಿವಾಟು ಹೆಚ್ಚಳಕ್ಕೆ ಮತ್ತೊಂದು ಪ್ರಮುಖ ಕಾರಣವೆಂದರೆ ಕೇಂದ್ರ ಸರ್ಕಾರವು ಮುಂದಿನ ವರ್ಷದಿಂದ 10 ವರ್ಷದ ಮೇಲ್ಪಟ್ಟ ವಾಣಿಜ್ಯ ವಾಹನಗಳಿಗೆ ಮತ್ತು 15 ವರ್ಷ ಮೇಲ್ಪಟ್ಟ ಖಾಸಗಿ ವಾಹನಗಳಿಗೆ ಕಡ್ಡಾಯ ಫಿಟ್ನೆಸ್ ಪರೀಕ್ಷೆಯನ್ನು ಜಾರಿಗೆ ತರುತ್ತಿರುವುದು ಕೂಡಾ ಹಳೆಯ ವಾಹನಗಳ ಮರು ಮಾರಾಟ ಹೆಚ್ಚಳವಾಗುತ್ತಿದೆ.

ಒಂದೇ ದಿನ 70 ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ Mahindra First Choice

10 ವರ್ಷದ ಮೇಲ್ಪಟ್ಟ ವಾಣಿಜ್ಯ ವಾಹನಗಳಿಗೆ ಮತ್ತು 15 ವರ್ಷ ಮೇಲ್ಪಟ್ಟ ಖಾಸಗಿ ವಾಹನಗಳಿಗೆ ಕಠಿಣ ಮಾನದಂಡಗಳನ್ನು ಒಳಗೊಂಡ ಫಿಟ್ನೆಸ್ ಪರೀಕ್ಷೆ ಜಾರಿಗೆ ತರುತ್ತಿರುವ ಕೇಂದ್ರ ಸಾರಿಗೆ ಇಲಾಖೆಯು ಫಿಟ್ನೆಸ್ ಪರೀಕ್ಷೆಯಲ್ಲಿ ವಿಫಲಗೊಳ್ಳುವ ವಾಹನಗಳನ್ನು ಸ್ಕ್ರ್ಯಾಪೇಜ್ ನೀತಿ ಅಡಿಯಲ್ಲಿ ಗುಜುರಿಗೆ ಸೇರಿಸಲಿದೆ.

ಒಂದೇ ದಿನ 70 ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ Mahindra First Choice

ಕೇಂದ್ರ ಸರ್ಕಾರದ ಹೊಸ ಫಿಟ್ನೆಸ್ ಪರೀಕ್ಷೆಯಲ್ಲಿ ಭಾಗಿಯಾಗಲಿರುವ 10 ವರ್ಷದ ಮೇಲ್ಪಟ್ಟ ವಾಣಿಜ್ಯ ವಾಹನಗಳು ಮತ್ತು 15 ವರ್ಷ ಮೇಲ್ಪಟ್ಟ ಖಾಸಗಿ ವಾಹನಗಳು ಪರೀಕ್ಷೆಯಲ್ಲಿ ತೇರ್ಗಡೆಯಾದಲ್ಲಿ ಮತ್ತೆ 5 ವರ್ಷಗಳ ಕಾಲ ಸಂಚಾರಕ್ಕೆ ಅವಕಾಶ ದೊರಲಿದ್ದು, ಫಿಟ್ನೆಸ್ ಪರೀಕ್ಷೆಯಲ್ಲಿ ವಿಫಲಗೊಂಡಲ್ಲಿ ಗುಜುರಿಗೆ ಹಾಕಬೇಕಾಗುತ್ತದೆ.

ಒಂದೇ ದಿನ 70 ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ Mahindra First Choice

15 ವರ್ಷ ಮೇಲ್ಪಟ್ಟ ವಾಣಿಜ್ಯ ವಾಹನಗಳು ಮತ್ತು 20 ವರ್ಷಗಳ ಮೇಲ್ಪಟ್ಟ ಖಾಸಗಿ ವಾಹನಗಳು ಸ್ಕ್ರ್ಯಾಪೇಜ್ ನೀತಿ ಅಡಿಯಲ್ಲಿ ಗುಜುರಿಗೆ ಸೇರಲು ಸಿದ್ದವಾಗುತ್ತಿದ್ದು, ಇದರಿಂದ ಅವಧಿ ಮುಗಿಯುವ ವೇಳೆಗೆ ಕಾಯದೆ ಹಲವಾರು ವಾಹನ ಮಾಲೀಕರು ತಮ್ಮ ಹಳೆಯ ವಾಹನಗಳನ್ನು ಮರುಮಾಡುತ್ತಿರುವುದು ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

ಒಂದೇ ದಿನ 70 ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ Mahindra First Choice

ನಿಗದಿತ ಅವಧಿ ಮುಗಿದ ನಂತರ ಗುಜುರಿ ಸೇರುವ ಭಯದಿಂದ ಹಲವಾರು ವಾಹನ ಮಾಲೀಕರು ತಮ್ಮ ಬೆಲೆ ಬಾಳುವ ವಾಹನಗಳನ್ನು ಬೆಲೆಯಿರುವಾಗಲೇ ಮರುಮಾರಾಟಕ್ಕೆ ಮುಂದಾಗಿದ್ದು, ಸೆಕೆಂಡ್ ಹ್ಯಾಂಡ್ ವಾಹನ ಮಾರಾಟ ಮಳಿಗೆಗಳಲ್ಲಿ ಸದ್ಯ 8 ರಿಂದ 12 ವರ್ಷಗಳ ಕಾಲ ಬಳಕೆ ಮಾಡಿದ ಕಾರುಗಳ ದೊಡ್ಡ ಸಂಗ್ರಹವೇ ಇದೆ.

ಒಂದೇ ದಿನ 70 ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ Mahindra First Choice

ಇತ್ತ ಬಿಡಿಭಾಗಗಳ ವೆಚ್ಚ ಹೆಚ್ಚುತ್ತಿರುವುದರಿಂದ ಹೊಸ ವಾಹನ ಬೆಲೆ ಏರಿಕೆಯಾಗಿರುವುದು ಕೂಡಾ ಹೊಸ ವಾಹನಗಳ ಖರೀದಿ ಯೋಜನೆಯಲ್ಲಿದ್ದ ಗ್ರಾಹಕರು ಸೆಕೆಂಡ್ ವಾಹನಗಳತ್ತ ಮುಖ ಮಾಡುತ್ತಿದ್ದು, Mahindra ಸೇರಿದಂತೆ ವಿವಿಧ ಕಾರು ಕಂಪನಿಗಳು ತಮ್ಮದೆ ಸಹಭಾಗಿತ್ವದ ಸೆಕೆಂಡ್ ಹ್ಯಾಂಡ್ ಮಾರಾಟ ಮಳಿಗೆಗಳ ಮೂಲಕ ಉತ್ತಮ ಆದಾಯ ಕಂಡುಕೊಳ್ಳುತ್ತಿವೆ.

Most Read Articles

Kannada
English summary
Mahindra First Choice Wheels launches 75 franchise stores
Story first published: Monday, August 30, 2021, 9:15 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X