ಪ್ಯಾರಾ ಒಲಿಂಪಿಕ್ಸ್ ಹೀರೋ ಸುಮಿತ್‌ಗೆ ಎಕ್ಸ್‌ಯುವಿ700 ಗೋಲ್ಡ್ ಎಡಿಷನ್ ಉಡುಗೊರೆ
ಒಲಿಂಪಿಕ್ಸ್ ವಿಜೇತರಿಗಾಗಿ ವಿಶೇಷ ಉಡುಗೊರೆಗಳನ್ನು ಘೋಷಣೆ ಮಾಡಿದ್ದ ಮಹೀಂದ್ರಾ ಕಂಪನಿಯು ಇದೀಗ ಹೊಸ ಎಕ್ಸ್‌ಯುವಿ700 ಸ್ಪೆಷಲ್ ಎಡಿಷನ್ ವಿತರಣೆ ಆರಂಭಿಸಿದ್ದು, ಕಂಪನಿಯು ಇತ್ತೀಚೆಗೆ ಪ್ಯಾರಾ ಒಲಿಂಪಿಕ್ಸ್ ಹೀರೋ ಸುಮಿತ್ ಅಂಟಿಲ್ ಕೂಡಾ ಆನಂದ್ ಮಹೀಂದ್ರಾ ಅವರಿಂದ ದುಬಾರಿ ಉಡುಗೊರೆ ಪಡೆದುಕೊಂಡಿದ್ದಾರೆ.

ಸಾಮಾಜಿಕ ಮತ್ತು ಕ್ರಿಡಾ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಈಗಾಗಲೇ ಹಲವಾರು ಉಡುಗೊರೆ ನೀಡಿರುವ ಮಹೀಂದ್ರಾ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಕಳೆದ ಒಲಿಂಪಿಕ್ಸ್‌ನಲ್ಲಿ ಪ್ರಶಸ್ತಿ ಗೆದ್ದ ಹಲವು ಕ್ರಿಡಾಪಟುಗಳಿಗೆ ವಿಶೇಷ ಉಡುಗೊರೆ ನೀಡುವುದಾಗಿ ಘೋಷಣೆ ಮಾಡಿದ್ದರು. ಕೊಟ್ಟ ಮಾತಿನಂತೆ ಇತ್ತೀಚೆಗೆ ಬಿಡುಗಡೆಯಾದ ಹೊಸ ಎಕ್ಸ್‌ಯುವಿ700 ಎಸ್‌ಯುವಿಯಲ್ಲಿ ಕ್ರಿಡಾ ಸಾಧಕರಿಗಾಗಿಯೇ ಗೋಲ್ಡ್ ಎಡಿಷನ್ ಅಭಿವೃದ್ದಿಗೊಳಿಸಿ ವಿತರಣೆ ಮಾಡಿದೆ.

ಪ್ಯಾರಾ ಒಲಿಂಪಿಕ್ಸ್‌ನ ಜಾವಲಿನ್ ಥ್ರೋದಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದ ಸುಮಿತ್ ಅಂಟಿಲ್ ಅವರಿಗೆ ಹೊಸ ಎಕ್ಸ್‌ಯುವಿ700 ಕಾರಿನ ಗೋಲ್ಡ್ ಎಡಿಷನ್ ವಿತರಣೆ ಮಾಡಿದ್ದು, ಹರಿಯಾಣದ ಕರ್ನಲ್‌ನಲ್ಲಿರುವ ಪಿಪಿ ಆಟೋಮೋಟಿವ್ ಶೋರೂಂನಲ್ಲಿ ಹೊಸ ಕಾರನ್ನು ಸುಮಿತ್ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯ್ತು.

ಸ್ಟ್ಯಾಂಡರ್ಡ್ ಮಾದರಿಗಿಂತಲೂ ವಿಭಿನ್ನವಾದ ಗೋಲ್ಡ್ ಬ್ಯಾಡ್ಜ್‌ಗಳನ್ನು ಹೊಂದಿರುವ ಸ್ಪೆಷಲ್ ಎಡಿಷನ್ ಆಕರ್ಷಕ ವಿನ್ಯಾಸ ಹೊಂದಿದ್ದು, ವಿಶೇಷ ಆವೃತ್ತಿಯ ತಾಂತ್ರಿಕ ಅಂಶಗಳು ಸಾಮಾನ್ಯ ಮಾದರಿಯಲ್ಲಿರುವಂತೆ ಮುಂದುವರಿಸಲಾಗಿದೆ.

ಹೊಸ ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯು ಭಾರತದಲ್ಲಿ ಬಿಡುಗಡೆಯ ನಂತರ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ಇದುವರೆಗೆ ಸುಮಾರು 65 ಸಾವಿರಕ್ಕೂ ಹೆಚ್ಚು ಯುನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಂಡಿದೆ.

ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.99 ಲಕ್ಷಕ್ಕೆ ಮತ್ತು ಹೆಚ್ಚಿನ ಮಟ್ಟದ ಫೀಚರ್ಸ್ ಹೊಂದಿರುವ ಟಾಪ್ ಎಂಡ್ ಮಾದರಿಯನ್ನು ರೂ. 22.89 ಲಕ್ಷ ಬೆಲೆ ಹೊಂದಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳನ್ನು ಹೊಂದಿರುವ ಹೊಸ ಕಾರು ಎಂಎಕ್ಸ್, ಎಎಕ್ಸ್3, ಎಎಕ್ಸ್5, ಎಎಕ್ಸ್7 ಮತ್ತು ಎಎಕ್ಸ್7 ಲಗ್ಷುರಿ ಎನ್ನುವ ವಿವಿಧ ವೆರಿಯೆಂಟ್‌ಗಳನ್ನು ಹೊಂದಿದೆ.

ಹೊಸ ಕಾರಿನಲ್ಲಿ 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯ ಹೊಂದಿದ್ದರೆ 5 ಸೀಟರ್ ಮಾದರಿಯು 2+3 ಆಸನ ಸೌಲಭ್ಯ ಹೊಂದಿದ್ದು, ಹೊಸ ಕಾರಿನಲ್ಲಿ ಕಂಪನಿಯು 2.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ನೀಡಿದೆ.

2.0-ಲೀಟರ್ ಪೆಟ್ರೋಲ್ ಮಾದರಿಯು 198-ಬಿಎಚ್‌ಪಿ, 300-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 2.2-ಲೀಟರ್ ಡೀಸೆಲ್ ಮಾದರಿಯು 183-ಬಿಎಚ್‌ಪಿ ಮತ್ತು 420-ಎನ್ಎಂ ಟಾರ್ಕ್(6-ಸ್ಪೀಡ್ ಎಂಟಿ),450-ಎನ್ಎಂ ಟಾರ್ಕ್(6-ಸ್ಪೀಡ್ ಎಟಿ) ಉತ್ಪಾದನಾ ವೈಶಿಷ್ಟ್ಯತೆ ಹೊಂದಿದೆ.

ಹೊಸ ಕಾರಿನಲ್ಲಿ ಫ್ರಂಟ್ ಫಾಸಿಯಾದೊಂದಿಗೆ ಸಂಯೋಜನೆಗೊಂಡಿರುವ ಎಲ್ಇಡಿ ಹೆಡ್‌ಲ್ಯಾಂಪ್ಸ್, ಸಿ ಆಕಾರದಲ್ಲಿರುವ ಎಲ್ಇಡಿ ಡಿಆರ್‌ಎಲ್ಎಸ್, ಸಿಲ್ವರ್ ಕೋಟಿಂಗ್ ಹೊಂದಿರುವ ಫ್ಲಕ್ಸ್ ಸ್ಕೀಡ್ ಪ್ಲೇಟ್, 18-ಇಂಚಿನ ಡ್ಯುಯಲ್ ಟೋನ್ ಮಲ್ಟಿ ಸ್ಪೋಕ್ ಅಲಾಯ್ ವ್ಹೀಲ್ ಪಡೆದುಕೊಂಡಿದೆ.

ಎಕ್ಸ್‌ಯುವಿ700 ಮಾದರಿಯ ಸೈಡ್ ಪ್ರೋಫೈಲ್ ಮತ್ತು ಹಿಂಬದಿಯ ವಿನ್ಯಾಸವು ಕೂಡಾ ಸಾಕಷ್ಟು ಹೊಸತನದಿಂದ ಕೂಡಿದ್ದು, ಹಿಂಬದಿಯ ಫೆಂಡರ್‌ನೊಂದಿಗೆ ಹರಡಿಕೊಂಡಿರುವ ವಿಭಜಿತ ಟೈಲ್‌ಲ್ಯಾಂಪ್, ವಿನೂತನ ವಿನ್ಯಾಸದ ಬಂಪರ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ರೂಫ್ ರೈಲ್ಸ್, ಶಾರ್ಕ್ ಫಿನ್ ಆಂಟೆನಾ, ರೂಫ್ ಸ್ಪಾಯ್ಲರ್ ಪಡೆದುಕೊಂಡಿದೆ.

ಹಾಗೆಯೇ ಹೊಸ ಕಾರಿನಲ್ಲಿ 10.25 ಇಂಚಿನ ಡಿಜಿಟಲ್ ಮತ್ತು ಇನ್ಪೋಟೈನ್‌ಮೆಂಟ್ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ಆಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ, ಅಮೆಜಾನ್ ಅಲೆಕ್ಸಾ, 60 ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಿಸಬಹುದಾದ ಕಾರ್ ಕನೆಕ್ಟ್ ಟೆಕ್ನಾಲಜಿ, ವಾಯ್ಸ್ ಅಸಿಸ್ಟೆನ್ಸ್, ಆ್ಯಂಬಿಯೆಂಟ್ ಲೈಟಿಂಗ್ಸ್, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, 2 ಮತ್ತು 3ನೇ ಸಾಲಿನಲ್ಲೂ ಎಸಿ ವೆಂಟ್ಸ್, ಪನೋರಮಿಕ್ ಸನ್‌ರೂಫ್ ಮತ್ತು ಏರ್ ಪ್ಯೂರಿಫ್ಲೈರ್ ಸೌಲಭ್ಯಗಳಿವೆ.

ಅಡ್ವಾನ್ಸ್ ಡ್ರೈವರ್ ಅಸಿಸ್ಟೆಡ್ ಸಿಸ್ಟಂ ಸೌಲಭ್ಯವು ಹೊಸ ಕಾರಿನ ಪ್ರಮುಖ ಸುರಕ್ಷಾ ಸೌಲಭ್ಯವಾಗಿದ್ದು, ಇದರ ಜೊತೆಗೆ 7-ಏರ್‌ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ, ಎಲೆಕ್ಟ್ರಾನಿಕ್ ಲಾಕಿಂಗ್, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋ ಹೆಡ್‌ಲ್ಯಾಂಪ್ ಬೂಸ್ಟರ್, ವ್ಯಯಕ್ತಿಕರಣಗೊಳಿಸಿದ ಸೇಫ್ಟಿ ಅಲರ್ಟ್, ಡ್ರೈವರ್ ಡ್ರಾಸಿನೆಸ್ ಅಲರ್ಟ್, ಲೆನ್ ಕಿಪ್ ಅಸಿಸ್ಟ್ ಸೌಲಭ್ಯ ಹೊಂದಿದೆ.
ಹೊಸ ಕಾರಿನಲ್ಲಿ ವಿವಿಧ ಫೀಚರ್ಸ್‌ಗಳೊಂದಿಗೆ ಎಕ್ಸ್ ಸೀರಿಸ್ ಮಾದರಿಗಳು ಕಂಪನಿಯ 64 ಫೀಚರ್ಸ್ ಒಳಗೊಂಡ ಆ್ಯಂಡಿನೊಎಕ್ಸ್ ಕಾರ್ ಕನೆಕ್ಟ್ ಟೆಕ್ನಾಲಜಿ ಹೊಂದಿರಲಿದ್ದು, ಸ್ಮಾರ್ಟ್‌ಫೋನ್ ಮೂಲಕವೇ ಕಾರಿನ ಬಹುತೇಕ ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಣ ಮಾಡಬಹುದಾಗಿದೆ. ಜೊತೆಗೆ ಹೊಸ ಕಾರ್ ಕೆನೆಕ್ಟ್ ಸೌಲಭ್ಯದಲ್ಲಿ ವ್ಯಯಕ್ತಿಕರಣಗೊಳಿಸಿದ ಸುರಕ್ಷಾ ಸೌಲಭ್ಯಗಳು ಸಹ ಲಭ್ಯವಿದ್ದು, ವಾರ್ಷಿಕವಾಗಿ ಇಂತಿಷ್ಟು ಶುಲ್ಕ ಪಾವತಿ ಚಂದಾದಾರಿಕೆ ಪಡೆದುಕೊಳ್ಳಕೊಳ್ಳಬೇಕಾಗುತ್ತದೆ.


Click it and Unblock the Notifications