ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರದರ್ಶನಗೊಂಡ ಮಹೀಂದ್ರಾ ಎಕ್ಸ್‌ಯುವಿ700

ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ ಎಸ್‌ಯುವಿ ಮಾದರಿಗಳ ಸರಣಿಯಲ್ಲಿ ಹಲವು ಹೊಸ ಬದಲಾವಣೆಗಳನ್ನು ಪರಿಚಯಿಸುತ್ತಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿ ಎಕ್ಸ್‌ಯುವಿ500 ಮಾದರಿಯು ನ್ಯೂ ಜನರೇಷನ್ ಮಾದರಿಯೊಂದಿಗೆ ಎಕ್ಸ್‌ಯುವಿ700 ಹೆಸರಿನಲ್ಲಿ ಬಿಡುಗಡೆಗೆ ಸಜ್ಜುಗೊಳ್ಳುತ್ತಿದೆ.

ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರದರ್ಶನಗೊಂಡ ಮಹೀಂದ್ರಾ ಎಕ್ಸ್‌ಯುವಿ700

ಹೊಸ ತಲೆಮಾರಿನ ಎಕ್ಸ್‌ಯುವಿ500 ಕಾರು ಮಾದರಿಯನ್ನು ಎಕ್ಸ್‌ಯುವಿ700 ಮಾದರಿಯಾಗಿ ಮಾರಾಟ ಮಾಡುವ ನಿರ್ಧಾರ ಪ್ರಕಟಿಸಿರುವ ಮಹೀಂದ್ರಾ ಕಂಪನಿಯು ಹೊಸ ಕಾರಿನ ಮಾಹಿತಿಯನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರದರ್ಶನಗೊಳಿಸಿದೆ. ಹೊಸ ಎಕ್ಸ್‌ಯುವಿ700 ಬಿಡುಗಡೆ ನಂತರ ಕೆಲವು ದಿನಗಳ ಕಾಲ ಸ್ಥಗಿತಗೊಳ್ಳಲಿರುವ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಕ್ಸ್‌ಯುವಿ500 ಮಾದರಿಯು ಎಕ್ಸ್‌ಯುವಿ700 ಬಿಡುಗಡೆಯ ನಂತರವಷ್ಟೇ ಕೆಲವು ಬದಲಾವಣೆಗಳೊಂದಿಗೆ ಮರು ಮಾರಾಟಗೊಳ್ಳಲಿದೆ.

ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರದರ್ಶನಗೊಂಡ ಮಹೀಂದ್ರಾ ಎಕ್ಸ್‌ಯುವಿ700

ಪ್ರತಿಸ್ಪರ್ಧಿ ಕಾರು ಮಾದರಿಗಳಿಗಾಗಿ ಎಕ್ಸ್‌ಯುವಿ500 ಮಾದರಿಯಲ್ಲಿ ಕೆಲವು ಮಹತ್ವದ ಬದಲಾವಣೆ ತರಲು ನಿರ್ಧರಿಸಿರುವ ಮಹೀಂದ್ರಾ ಕಂಪನಿಯು ಸದ್ಯ ಬಿಡುಗಡೆಯಾಗಬೇಕಿರುವ ಎಕ್ಸ್‌ಯುವಿ500 ನ್ಯೂ ಜನರೇಷನ್ ಮಾದರಿಯನ್ನೇ ಹೊಸ ಬದಲಾವಣೆಗಳೊಂದಿಗೆ ಎಕ್ಸ್‌ಯುವಿ700 ಮಾದರಿಯಾಗಿ ಬಿಡುಗಡೆ ಮಾಡುತ್ತಿದೆ.

ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರದರ್ಶನಗೊಂಡ ಮಹೀಂದ್ರಾ ಎಕ್ಸ್‌ಯುವಿ700

ಎಕ್ಸ್‌ಯುವಿ500 ಮಾದರಿಯನ್ನು ಎಕ್ಸ್‌ಯುವಿ700 ಮಾದರಿಗಿಂತಲೂ ಕೆಳ ಸ್ಥಾನದಲ್ಲಿ ಮಾರಾಟಗೊಳಿಸಲು ನಿರ್ಧರಿಸಿರುವ ಮಹೀಂದ್ರಾ ಕಂಪನಿಯು ಎಕ್ಸ್‌700 ಮಾದರಿಯನ್ನು 7 ಸೀಟರ್ ಮಾದರಿಯೊಂದಿಗೆ ಮತ್ತು ಎಕ್ಸ್‌ಯುವಿ500 ಮಾದರಿಯನ್ನು 5 ಸೀಟರ್ ಮಾದರಿಯಾಗಿ ಮಾರಾಟಗೊಳಿಸಲಿದೆ.

ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರದರ್ಶನಗೊಂಡ ಮಹೀಂದ್ರಾ ಎಕ್ಸ್‌ಯುವಿ700

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಕ್ಸ್‌ಯುವಿ500 ಮಾದರಿಯು 7 ಸೀಟರ್ ಸೌಲಭ್ಯವನ್ನು ಹೊಂದಿದ್ದರು ಕೂಡಾ ಹಿಂಬದಿ ಆಸನಗಳು ವಯಸ್ಕ ಪ್ರಯಾಣಿಕರ ಪ್ರಯಾಣಕ್ಕೆ ಅನುಕೂಲಕರವಾಗಿಲ್ಲ. ಹೀಗಾಗಿ ಎಕ್ಸ್‌ಯುವಿ700 ಮಾದರಿಯನ್ನು ವಿಸ್ತರಿತ ವೀಲ್ಹ್‌ಬೆಸ್ ಮೂಲಕ ಮೂರನೇ ಸಾಲಿನ ಆಸನವನ್ನು ಹೆಚ್ಚಿಸಿ ಅಭಿವೃದ್ದಿಗೊಳಿಸಲಾಗಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರದರ್ಶನಗೊಂಡ ಮಹೀಂದ್ರಾ ಎಕ್ಸ್‌ಯುವಿ700

ಎಕ್ಸ್‌ಯುವಿ700 ಬಿಡುಗಡೆಯ ನಂತರ ಎಕ್ಸ್‌ಯುವಿ500 ಮಾದರಿಯನ್ನು ಕೆಲ ದಿನಗಳ ಕಾಲ ಸ್ಥಗಿತಗೊಳಿಸಲಿರುವ ಮಹೀಂದ್ರಾ ಕಂಪನಿಯು ಸದ್ಯ ಲಭ್ಯವಿರುವಂತಹ 7 ಸೀಟರ್ ಸೌಲಭ್ಯವನ್ನು ತೆಗೆದುಹಾಕಿ ಆರಾಮದಾಯಕ ಕ್ಯಾಬಿನ್ ರೂಂ ಹೊಂದಿರುವ 5 ಸೀಟರ್ ಮಾದರಿಯನ್ನಾಗಿ ಮರುಬಿಡುಗಡೆ ಮಾಡಲಿದೆ.

ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರದರ್ಶನಗೊಂಡ ಮಹೀಂದ್ರಾ ಎಕ್ಸ್‌ಯುವಿ700

ಈ ಮೂಲಕ 5 ಸೀಟರ್ ಬಯಸುವ ಗ್ರಾಹಕರಿಗೆ ಎಕ್ಸ್‌ಯುವಿ500 ಮತ್ತು 7 ಸೀಟರ್ ಬಯಸುವ ಗ್ರಾಹಕರಿಗೆ ಎಕ್ಸ್‌ಯುವಿ700 ಮಾರಾಟ ಮಾಡಲಿದ್ದು, ಇತ್ತೀಚೆಗೆ ಟಾಟಾ ಸಫಾರಿ, ಎಂಜಿ ಹೆಕ್ಟರ್ ಪ್ಲಸ್ ಕಾರು ಮಾದರಿಗಳು ಮಾರುಕಟ್ಟೆ ಪ್ರವೇಶಿಸಿರುವ ಹಿನ್ನಲೆಯಲ್ಲಿ ಕಂಪನಿಯು ಎಕ್ಸ್‌ಯುವಿ ಸರಣಿಯಲ್ಲಿ ಈ ಬದಲಾವಣೆ ತಂದಿದೆ.

ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರದರ್ಶನಗೊಂಡ ಮಹೀಂದ್ರಾ ಎಕ್ಸ್‌ಯುವಿ700

ಇನ್ನು ಮಹೀಂದ್ರಾ ಕಂಪನಿಯು ಎಸ್‌ಯುವಿ ಕಾರುಗಳ ಮಾರಾಟದಲ್ಲಿ ತನ್ನದೆ ಆದ ಜನಪ್ರಿಯತೆ ಹೊಂದಿದ್ದು, ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರದರ್ಶನಗೊಂಡ ಮಹೀಂದ್ರಾ ಎಕ್ಸ್‌ಯುವಿ700

ಪ್ರಸ್ತುತ ಮಾರುಕಟ್ಟೆಯಲ್ಲಿ ಎಕ್ಸ್‌ಯುವಿ500, ಎಕ್ಸ್‌ಯುವಿ300, ಬೊಲೆರೊ, ಸ್ಕಾರ್ಪಿಯೋ ಮಾದರಿಯೊಂದಿಗೆ ಎಸ್‌ಯುವಿ ಮಾರಾಟದಲ್ಲಿ ಮುಂಚೂಣಿ ಹೊಂದಿರುವ ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ ಸರಣಿಯಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದ್ದು, ಹೊಸ ಕಾರುಗಳ ಬಿಡುಗಡೆಗಾಗಿ ಈಗಾಗಲೇ ಕೇಂದ್ರ ಸಾರಿಗೆ ಇಲಾಖೆಯಲ್ಲಿ ನೋಂದಣಿಯನ್ನು ಕೂಡಾ ಮಾಡಲಾಗಿದೆ.

Most Read Articles

Kannada
English summary
Mahindra Listed XUV700 On Official Website. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X