Just In
- 35 min ago ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- 1 hr ago ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- 1 hr ago 'ಬಾಹುಬಲಿ' ಎಸ್ಯುವಿ ಪರಾಕ್ರಮ: ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ವಿಶೇಷತೆಗಳೇನು?
- 1 hr ago Honda: ಭಾರತ ನಿರ್ಮಿಸಿದ ಹೋಂಡಾ ಕಾರಿಗೆ ಮುಗಿಬಿದ್ದ ಜಪಾನ್ ಜನ!
Don't Miss!
- News ಮತದಾನಕ್ಕೆ ಕೌಂಟ್ಡೌನ್: ಚಾಮರಾಜನಗರ ಲೋಕಸಭಾ ಕ್ಷೇತ್ರದ ಮತಗಟ್ಟೆಗಳಲ್ಲಿ ಸಿದ್ಧತೆ ಹೇಗಿದೆ?-ಮಾಹಿತಿ
- Movies ಅಟ್ಟ ಏರಿದ ಸ್ಟಾರ್ಸ್, ದಿಕ್ಕು ತಪ್ಪಿಸುವ ನಿರ್ದೇಶಕರು, ನಿರ್ಮಾಪಕರ ಗೋಳು ಕೇಳೋದ್ಯಾರು?
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Lifestyle ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ ಬಿಡುಗಡೆ ಮಾಹಿತಿ ಬಹಿರಂಗ
ಮಹೀಂದ್ರಾ ಕಂಪನಿಯು ತನ್ನ ನ್ಯೂ ಜನರೇಷನ್ ಕಾರು ಮಾದರಿಗಳ ಬಿಡುಗಡೆ ದಿನಾಂಕವನ್ನು ಕಾರಣಾಂತರಗಳಿಂದ ಮಂದೂಡಿಕೆ ಮಾಡಿದ್ದು, ಹೊಸ ಕಾರುಗಳು ಮುಂಬರುವ ಜೂನ್ ಅಥವಾ ಜುಲೈ ಹೊತ್ತಿಗೆ ಮಾರುಕಟ್ಟೆ ಪ್ರವೇಶಿಸಲಿವೆ.
ನ್ಯೂ ಜನರೇಷನ್ ಎಕ್ಸ್ಯುವಿ500 ಕಾರು ಬಿಡುಗಡೆಯ ನಂತರ ಸ್ಕಾರ್ಪಿಯೋ ಹೊಸ ಮಾದರಿಯನ್ನು ಬಿಡುಗಡೆ ಮಾಡಲಿರುವ ಮಹೀಂದ್ರಾ ಕಂಪನಿಯು ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತು ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದ್ದು, ಇದೇ ಏಪ್ರಿಲ್ ಮಧ್ಯಂತರದಲ್ಲಿ ಬಿಡುಗಡೆಯ ನೀರಿಕ್ಷೆಯಲ್ಲಿದ್ದ ಹೊಸ ಕಾರುಗಳ ಬಿಡುಗಡೆಯನ್ನು ಕಾರಣಾಂತರಗಳಿಂದ ಮುಂದೂಡಿಕೆ ಮಾಡಿದೆ.
ಹೊಸ ಕಾರುಗಳು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಆವೃತ್ತಿಗಿಂತಲೂ ಹಲವಾರು ಹೊಸ ಬದಲಾವಣೆಯೊಂದಿಗೆ ಎಸ್ಯುವಿ ಕಾರು ಮಾರಾಟದಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ಹೊಸ ಸ್ಕಾರ್ಪಿಯೋ ಕಾರು ಮಾದರಿಯ ಮಾರಾಜೋ ಹೊಸ ಆವೃತ್ತಿಯಿಂದಲೂ ಕೆಲವು ಪ್ರೀಮಿಯಂ ಫೀಚರ್ಸ್ಗಳನ್ನು ಎರವಲು ಪಡೆದುಕೊಂಡಿದೆ.
ಹೊಸ ಫೀಚರ್ಸ್ಗಳಿಂದಾಗಿ ಸ್ಕಾರ್ಪಿಯೋ ಕಾರು ಮತ್ತಷ್ಟು ಬಲಿಷ್ಠ ವಿನ್ಯಾಸದೊಂದಿಗೆ ವಿಸ್ತರಿತ ವೀಲ್ಹ್ ಬೆಸ್ ಮೂಲಕ ಅರಾಮದಾಯಕ ಕ್ಯಾಬಿನ್ ಸ್ಪೆಸ್ ಹೊಂದಿರುವುದು ರೋಡ್ ಟೆಸ್ಟಿಂಗ್ನಲ್ಲಿ ಬಹಿರಂಗವಾಗಿದೆ.
ಮಹೀಂದ್ರಾ ಕಂಪನಿಯು ಹೊಸ ಕಾರಿನಲ್ಲಿ ಆಕರ್ಷಕವಾದ ಪ್ರೀಮಿಯಂ ಫೀಚರ್ಸ್ ಜೊತೆಗೆ ಹೆಚ್ಚಿನ ಮಟ್ಟದ ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದ್ದು, ಎಕ್ಸ್ಯುವಿ300 ನಂತರ ಮಹೀಂದ್ರಾ ನಿರ್ಮಾಣದ ಬಹುತೇಕ ಕಾರುಗಳು ಕ್ರ್ಯಾಶ್ ಟೆಸ್ಟಿಂಗ್ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಳ್ಳುತ್ತಿವೆ.
ನ್ಯೂ ಜನರೇಷನ್ ಸ್ಕಾರ್ಪಿಯೋ ಕಾರಿನಲ್ಲೂ ಮಲ್ಟಿ ಏರ್ಬ್ಯಾಗ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್ಗಳಲ್ಲಿ ಪ್ರೊಜೆಕ್ಟರ್ ಹೆಡ್ಲ್ಯಾಂಪ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಕ್ರೂಸ್ ಕಂಟ್ರೋಲ್, ಸನ್ರೂಫ್, ಪುಶ್ ಬಟನ್ ಆನ್/ಆಫ್, ಕೀ ಲೆಸ್ ಎಂಟ್ರಿ, ರೂಫ್ ರೈಲ್ಸ್, ಎಲ್ಇಡಿ ಹೆಡ್ಲ್ಯಾಂಪ್, ಎಲ್ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್ ಸೌಲಭ್ಯಗಳಿವೆ.
ಹೊಸ ವಿನ್ಯಾಸದ 17 ಇಂಚಿನ ಅಲಾಯ್ ವೀಲ್ಹ್ಗಳು, ಹೊಸ ವಿನ್ಯಾಸದ ಫ್ರಂಟ್ ಅಂಡ್ ರಿಯರ್ ಬಂಪರ್ ಮತ್ತು ವಿಸ್ತರಿತ ವೀಲ್ಹ್ಬೆಸ್ನಿಂದಾಗಿ ಮೂರನೇ ಸಾಲಿನ ಪ್ರಯಾಣಿಕರಿಗೆ ಹೆಚ್ಚಿನ ಮಟ್ಟದ ಸ್ಥಳಾವಕಾಶ ನೀಡಲಿದೆ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!
ಇದಲ್ಲದೆ ಹೊಸ ಕಾರಿನಲ್ಲಿ ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್ ಮತ್ತು ಒಂದೇ ಸೂರಿನಡಿ ವಿವಿಧ ಮಾಹಿತಿಗಳನ್ನು ಒದಗಿಸಲು ಆ್ಯಪಲ್ ಕಾರ್ಪ್ಲೇ ಮತ್ತುಅಂಡ್ರಾಯಿಡ್ ಆಟೋ ಸರ್ಪೊಟ್ ಮಾಡುವ ಟಚ್ಸ್ಕ್ರಿನ್ ಇನ್ಪೋಟೈನ್ಟೆಂಟ್ ಸಿಸ್ಟಂ ಸಹ ಜೋಡಣೆ ಮಾಡಲಾಗಿದೆ.
ಹೊಸ ತಾಂತ್ರಿಕ ಸೌಲಭ್ಯಗಳಿಂದಾಗಿ ವಾಹನಗಳ ಬೆಲೆಯಲ್ಲಿ ತುಸು ಹೆಚ್ಚಳವಾದರೂ ಗುಣಮಟ್ಟದ ಉತ್ಪನ್ನಗಳನ್ನು ಸಿದ್ದಪಡಿಸುವಲ್ಲಿ ಯಶಸ್ವಿಯಾಗುತ್ತಿರುವ ಮಹೀಂದ್ರಾ ಕಂಪನಿಯು ಹೊಸ ಸ್ಕಾರ್ಪಿಯೋದಲ್ಲಿ ವಿವಿಧ ಎಂಜಿನ್ಗಳನ್ನು ಜೋಡಣೆ ಮಾಡುವ ಸಿದ್ದತೆಯಲ್ಲಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!
ಸ್ಕಾರ್ಪಿಯೋ ಕಾರಿನಲ್ಲಿ ಈ ಬಾರಿ ಹೆಚ್ಚಿನ ಮಟ್ಟದ ಪರ್ಫಾಮೆನ್ಸ್ಗೆ ಪೂರಕವಾದ 2.2-ಲೀಟರ್ ಟರ್ಬೋ ಡೀಸೆಲ್ ಎಂಜಿನ್ ಜೊತೆಗೆ ಹೊಸ ಪೆಟ್ರೋಲ್ ಮಾದರಿಯನ್ನು ಸಹ ಬಿಡುಗಡೆ ಮಾಡುವ ಎಲ್ಲಾ ಸಾಧ್ಯತೆಗಳಿವೆ.
ಮಹೀಂದ್ರಾ ಕಂಪನಿಯು ಹೊಸ ಸ್ಕಾರ್ಪಿಯೋ ಕಾರು ಮಾದರಿಯಲ್ಲಿ ಥಾರ್ ಎಸ್ಯುವಿಯಲ್ಲಿ ನೀಡಲಾಗಿರುವ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಿದೆ.
ಸದ್ಯ ಮಾರುಕಟ್ಟೆಯಲ್ಲಿರುವ ಸ್ಕಾರ್ಪಿಯೋ ಎಸ್ಯುವಿ ಕಾರು ಮಾದರಿಯು ಪ್ರಮುಖ ಐದು ವೆರಿಯೆಂಟ್ಗಳೊಂದಿಗೆ 2.2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಮಾರಾಟಕ್ಕೆ ಲಭ್ಯವಿದ್ದು, ವಿವಿಧ ವೆರಿಯೆಂಟ್ಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16.56 ಲಕ್ಷ ಬೆಲೆ ಹೊಂದಿದೆ.
ಹೊಸ ತಲೆಮಾರಿನ ಆವೃತ್ತಿಯು ಪ್ರಸ್ತುತ ಮಾದರಿಗಿಂತಲೂ ರೂ.1 ಲಕ್ಷದಿಂದ 1.50 ಲಕ್ಷದ ತನಕ ಹೆಚ್ಚುವರಿ ಬೆಲೆ ಪಡೆದುಕೊಳ್ಳಬಹುದಾಗಿದ್ದು, ಡೀಸೆಲ್ ಮಾದರಿಯು ರೂ.12.50 ಲಕ್ಷದಿಂದ ಬೆಲೆ ಆರಂಭವಾಗಲಿದ್ದರೆ ಪೆಟ್ರೋಲ್ ಮಾದರಿಯ ಬೆಲೆಯು ರೂ.11 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುವ ನೀರಿಕ್ಷೆಯಿದೆ.