Thar 5 ಡೋರ್ ವರ್ಷನ್ ಬಿಡುಗಡೆಗೆ ಸಿದ್ದವಾದ Mahindra
ಮಹೀಂದ್ರಾ(Mahindra) ಕಂಪನಿಯು ತನ್ನ ಜನಪ್ರಿಯ ಥಾರ್(Thar) ಆಫ್ ರೋಡ್ ಕಾರು ಮಾದರಿಯಲ್ಲಿ ಹೊಸ ವೆರಿಯೆಂಟ್ ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ಕಾರು ಶೀಘ್ರದಲ್ಲೇ ಐದು ಬಾಗಿಲು ಸೌಲಭ್ಯ ಹೊಂದಿರುವ ಮಾದರಿಯನ್ನು ಪಡೆದುಕೊಳ್ಳಲಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಥಾರ್ ಮಾದರಿಯು ಮೂರು ಡೋರ್‌ಗಳೊಂದಿಗೆ ನಾಲ್ಕು ಆಸನ ಸೌಲಭ್ಯ ಹೊಂದಿದ್ದು, ಮುಂಭಾಗದ ಡೋರ್ ಮೂಲಕವೇ ಹಿಂದಿಯ ಆಸನಗಳಿಗೆ ಪ್ರಯಾಣಿಕರು ಪ್ರವೇಶಿಸಬೇಕಾಗುತ್ತದೆ. ಆದರೆ ಐದು ಡೋರ್ ಮಾದರಿಯಲ್ಲಿ ಹಿಂಬದಿಯ ಆಸನಗಳಿಗೆ ಪ್ರಯಾಣಿಕರು ಸುಲಭವಾಗಿ ಪ್ರವೇಶಿಸಬಬಹಾಗಿದ್ದು, ಹಿಂಬದಿಯ ಸವಾರರು ಪ್ರತಿ ಬಾರಿಯು ಒಳಗೆ ಅಥವಾ ಹೊರಗೆ ಹೋಗುವಾಗ ಮುಂಭಾಗದ ಆಸನದಲ್ಲಿರುವ ಪ್ರಯಾಣಕರಿಗೆ ಕಿರಿಕಿರಿ ಉಂಟಾಗುತ್ತದೆ.

ಹೀಗಾಗಿ ಮಹೀಂದ್ರಾ ಕಂಪನಿಯು ಥಾರ್ ಕಾರಿನ ಆಯ್ದ ಮಾದರಿಗಳಲ್ಲಿ ಐದು ಡೋರ್ ಹೊಂದಿರುವ ಮಾದರಿಯನ್ನು ಬಿಡುಗಡೆ ಮಾಡುವ ಸುಳಿವು ನೀಡಿದ್ದು, ಮೂರು ಡೋರ್ ಹೊಂದಿರುವ ಮಾದರಿಗಿಂತಲೂ ಹೊಸ ಕಾರು ತುಸು ಹೆಚ್ಚುವರಿ ಕ್ಯಾಬಿನ್ ಸ್ಪೇಸ್ ಪಡೆದುಕೊಳ್ಳುತ್ತಿದೆ.

ಒಂದೇ ಪ್ಲ್ಯಾಟ್‌ಫಾರ್ಮ್‌ನಲ್ಲಿ ಎರಡು ಕಾರು ಮಾದರಿಗಳನ್ನು ಸಿದ್ದಪಡಿಸಲಿರುವ ಮಹೀಂದ್ರಾ ಕಂಪನಿಯು ಹೊಸದಾಗಿ ಥಾರ್ ಕಾರಿನಲ್ಲಿ 5 ಡೋರ್ ಮಾದರಿಗಾಗಿ ಸ್ಟ್ಯಾಂಡರ್ಡ್ ಮಾದರಿಯ ಫೀಚರ್ಸ್‌ಗಳನ್ನೇ ಮುಂದುವರೆಸಲಿದ್ದು, ಆಫ್ ರೋಡ್ ಹೆಚ್ಚು ಇಷ್ಟಪಡುವರೆಗೆ ಮೂರು ಡೋರ್ ಮಾದರಿಯನ್ನ ಮತ್ತು ಐದು ಡೋರ್ ಹೊಂದಿರುವ ಮಾದರಿಯು ಲೈಫ್‌ಸ್ಪೈಲ್‌ಗಾಗಿ ಇಷ್ಟಪಡುವರೆಗೆ ಉಪಯುಕ್ತವಾಗಲಿದೆ.

ಜೊತೆಗೆ ಹೊಸ ಮಾದರಿಯಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಕೆಲವು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ಮತ್ತು ಪ್ರೀಮಿಯಂ ಫೀಚರ್ಸ್‌ಗಳನ್ನು ಹೆಚ್ಚುವರಿಯಾಗಿ ನೀಡಬಹುದಾಗಿದ್ದು, ಹೊಸ ಆವೃತ್ತಿಯು 2022ರ ಆರಂಭದಲ್ಲಿ ಮಾರುಕಟ್ಟೆ ಪ್ರವೇಶಿಸಲಿದೆ.

ಇನ್ನು ಹೊಸ ವಿನ್ಯಾಸ, ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ಆಫ್ ರೋಡ್ ಎಸ್‌ಯುವಿ ಕಾರು ಮಾರಾಟದಲ್ಲಿ ಸದ್ದು ಮಾಡುತ್ತಿರುವ ನ್ಯೂ ಜನರೇಷನ್ ಮಹೀಂದ್ರಾ ಥಾರ್ ಕಾರು ಮಾದರಿಯು ಬಿಡುಗಡೆಯಾಗಿ ಯಶಸ್ವಿ ಒಂದು ವರ್ಷ ಪೂರೈಸಿದ್ದು, ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಆಫ್ ರೋಡ್ ಎಸ್‌ಯುವಿ ವಿಭಾಗದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡಿದೆ.

2020ರ ಅಕ್ಟೋಬರ್ 2ರಂದು ಥಾರ್ ಎಸ್‌ಯುವಿ ಕಾರು ಮಾದರಿಯನ್ನು ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆ ಮಾಡಿದ್ದ ಮಹೀಂದ್ರಾ ಕಂಪನಿಯು ಇದುವರೆಗೆ ಬರೋಬ್ಬರಿ 75 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡಿದ್ದು, ದಿನಂಪ್ರತಿ 200ರಿಂದ 250 ಗ್ರಾಹಕರು ಸರಾಸರಿಯಾಗಿ ಹೊಸ ಕಾರು ಖರೀದಿಗೆ ಬುಕ್ಕಿಂಗ್ ದಾಖಲಿಸುತ್ತಿದ್ದಾರೆ.

ಗ್ಲೊಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 4 ಸ್ಟಾರ್ ಸೇಫ್ಚಿ ರೇಟಿಂಗ್ ಪಡೆದುಕೊಳ್ಳುವ ಮೂಲಕ ಸುರಕ್ಷಿತ ಕಾರು ಮಾದರಿಯಾಗಿ ಗುರುತಿಸಿಕೊಂಡ ನಂತರ ಹೊಸ ಥಾರ್ ಕಾರಿಗೆ ಮತ್ತಷ್ಟು ಬೇಡಿಕೆ ಪಡೆದುಕೊಂಡಿರುವ ಮಹೀಂದ್ರಾ ಕಂಪನಿಯು ಕಳೆದ ಕೆಲ ತಿಂಗಳ ಅವಧಿಯಲ್ಲಿ ಹೆಚ್ಚಿನ ಮಟ್ಟದ ಬುಕ್ಕಿಂಗ್ ಪಡೆದುಕೊಂಡಿದೆ.

ಬೇಡಿಕೆ ಹೆಚ್ಚಿರುವ ಹಿನ್ನಲೆಯಲ್ಲಿ ನಾಸಿಕ್ ಕಾರು ಘಟಕದಲ್ಲಿನ ಉತ್ಪಾದನಾ ಪ್ರಮಾಣವನ್ನು ಸಹ ಹೆಚ್ಚಳ ಮಾಡಲಾಗಿದ್ದು, ಬುಕ್ಕಿಂಗ್ ನಂತರ ಹೊಸ ಕಾರು ಪಡೆದುಕೊಳ್ಳಲು ಸದ್ಯ ಕನಿಷ್ಠ 5 ರಿಂದ 8 ತಿಂಗಳು ಕಾಲ ಕಾಯಲೇಬೇಕಾಗುತ್ತದೆ.

ಹೊಸ ಕಾರಿನ ಕಾಯುವಿಕೆ ಅವಧಿಯು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ನಿರ್ಧಾರವಾಗಲಿದ್ದು, ಸಾಫ್ಟ್ ಟಾಪ್ ಮಾದರಿಗಳು ಕಡಿಮೆ ಅವಧಿಯಲ್ಲಿ ವಿತರಣೆಯಾಗಲಿದ್ದರೆ ಡೀಸೆಲ್ ಆಟೋಮ್ಯಾಟಿಕ್ ಹಾರ್ಡ್ ಟಾಪ್ ಮಾದರಿಗಳ ಖರೀದಿಗೆ ಹೆಚ್ಚು ಕಾಯಬೇಕಿದೆ.

ಆಫ್ ರೋಡಿಂಗ್ ವೈಶಿಷ್ಟ್ಯತೆಯೊಂದಿಗೆ ತನ್ನದೆ ಆದ ಜನಪ್ರಿಯೆತೆ ಹೊಂದಿರುವ ಥಾರ್ ಕಾರು ಮಾದರಿಯು ಸಾಮಾನ್ಯ ಕಾರು ಮಾದರಿಗಳಂತೆ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.78 ಲಕ್ಷದಿಂದ ಟಾಪ್ ಮಾದರಿಯು ರೂ. 15.08 ಲಕ್ಷ ಬೆಲೆಯೊಂದಿಗೆ ಅತ್ಯುತ್ತಮ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿದೆ.

ಥಾರ್ ಕಾರು ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿರುವುದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಿದ್ದು, ಲ್ಯಾಡರ್-ಫ್ರೇಮ್ ಚಾರ್ಸಿ ಜೊತೆಗೆ ಹೊಸ ಸಸ್ಪೆಂಷನ್ ಸೌಲಭ್ಯವು ಹೊಸ ಥಾರ್ ಕಾರಿನ ಗುಣಮಟ್ಟ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿದೆ.

ಹೊಸ ಥಾರ್ ಕಾರು ಮಾದರಿಯಲ್ಲಿ ಬಿಎಸ್-6 ಎಂಜಿನ್ ಪ್ರೇರಿತ 2.2-ಲೀಟರ್ ಡೀಸೆಲ್ ಎಂಜಿನ್ ಮತ್ತು ಹೊಸದಾಗಿ ಅಭಿವೃದ್ದಿಗೊಳಿಸಲಾದ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, ಎರಡು ಎಂಜಿನ್ ಮಾದರಿಗಳಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳನ್ನು ನೀಡಲಾಗಿದೆ.

ಹೊಸ ಕಾರಿನ ಒಳಭಾಗದ ಸೌಲಭ್ಯಗಳು ಪ್ರಸ್ತುತ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಮತ್ತು ಮಾರ್ಡನ್ ವಿನ್ಯಾಸಗಳನ್ನು ಹೊಂದಿದ್ದು, ಆಕರ್ಷಕ ಡ್ಯಾಶ್‌ಬೋರ್ಡ್‌ನೊಂದಿಗೆ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಎಲ್ಲಾ ಮಾದರಿಯ ಹವಾಗುಣವನ್ನು ತಡೆಯಬಲ್ಲ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಫಾಮೆಷನ್ ಡಿಸ್‌ಪ್ಲೇ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಸೌಲಭ್ಯ ನೀಡಲಾಗಿದೆ.

ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸೆಫ್ಟಿ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ, ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಹಿಲ್ ಸ್ಟಾರ್ಟ್ ಅಸಿಸ್ಟ್, ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್, ರಿಯರ್ ವ್ಯೂ ಕ್ಯಾಮೆರಾ ಜೋಡಿಸಲಾಗಿದೆ.


Click it and Unblock the Notifications