ಉತ್ಪಾದನೆ ಹೆಚ್ಚಳದ ನಂತರವೂ ತಗ್ಗದ ಹೊಸ ಥಾರ್ ಕಾರಿನ ಕಾಯುವಿಕೆ ಅವಧಿ

ಲೈಫ್‌ಸ್ಟೈಲ್ ಎಸ್‌ಯುವಿ ಕಾರು ಮಾರಾಟದಲ್ಲಿ ಸದ್ಯ ಮುಂಚೂಣಿಯಲ್ಲಿರುವ ನ್ಯೂ ಜನರೇಷನ್ ಮಹೀಂದ್ರಾ ಥಾರ್ ಕಾರು ಮಾದರಿಯು ಬಿಡುಗಡೆಯಾದ ಕಳೆದ ಐದು ತಿಂಗಳ ಅವಧಿಯಲ್ಲಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಂಡಿದ್ದು, ಗ್ರಾಹಕರ ಕಾಯುವಿಕೆ ಅವಧಿಯಲ್ಲಿ ಮತ್ತೆ ಹೆಚ್ಚಳವಾಗಿದೆ.

ಉತ್ಪಾದನೆ ಹೆಚ್ಚಳದ ನಂತರವೂ ತಗ್ಗದ ಹೊಸ ಥಾರ್ ಕಾರಿನ ಕಾಯುವಿಕೆ ಅವಧಿ

ಹೊಸ ಥಾರ್ ಮಾದರಿಯು ಇದುವೆರೆಗೆ ಸುಮಾರು 40 ಸಾವಿರಕ್ಕೂ ಗ್ರಾಹಕರಿಂದ ಬುಕ್ಕಿಂಗ್ ಪಡೆದುಕೊಂಡಿದ್ದು, ಪ್ರತಿ ತಿಂಗಳು ಗರಿಷ್ಠ 3 ಸಾವಿರ ಯುನಿಟ್ ಥಾರ್ ಉತ್ಪಾದನಾ ಸಾಮರ್ಥ್ಯ ಹೊಂದಿರುವ ಮಹೀಂದ್ರಾ ಕಂಪನಿಯು ಹೊಸ ಕಾರು ಮಾದರಿಯನ್ನು ಗ್ರಾಹಕರ ಬೇಡಿಕೆಯೆಂತೆ ನಿಗದಿತ ಅವಧಿಯಲ್ಲಿ ವಿತರಣೆ ಮಾಡುತ್ತಿದೆ. ಆದರೂ ಕೂಡಾ ಬಿಡಿಭಾಗಗಳ ಪೂರೈಕೆಯಲ್ಲಿನ ವಿಳಂಬದಿಂದಾಗಿ ಉತ್ಪಾದನಾ ಪ್ರಮಾಣದಲ್ಲಿ ಏರಿಳಿತ ಕಂಡುಬರುತ್ತಿದ್ದು, ಉತ್ಪಾದನಾ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವುದಿಂದ ಗ್ರಾಹಕರ ಕಾಯುವಿಕೆ ಅವಧಿಯು ಹೆಚ್ಚಳವಾಗುತ್ತಿದೆ.

ಉತ್ಪಾದನೆ ಹೆಚ್ಚಳದ ನಂತರವೂ ತಗ್ಗದ ಹೊಸ ಥಾರ್ ಕಾರಿನ ಕಾಯುವಿಕೆ ಅವಧಿ

ಹೊಸ ಕಾರಿನ ವಿತರಣೆಯನ್ನು ಆರಂಭಿಸಿದ ನಂತರ ಕಳೆದ ತಿಂಗಳು ಉತ್ಪಾದನೆ ಹೆಚ್ಚಳ ಮಾಡಿದ್ದ ಮಹೀಂದ್ರಾ ಕಂಪನಿಯು ಗ್ರಾಹಕರ ಕಾಯುವಿಕೆ ಅವಧಿಯಲ್ಲಿ 5 ತಿಂಗಳಿನಿಂದ ಗರಿಷ್ಠ 7 ತಿಂಗಳುಗಳಿಗೆ ಇಳಿಕೆ ಮಾಡಿತ್ತು. ಆದರೆ ಇದೀಗ ಉತ್ಪಾದನಾ ಪ್ರಮಾಣದಲ್ಲಿ ಏರಿಳಿತದಿಂದಾಗಿ ಕಾಯುವಿಕೆ ಅವಧಿಯು ಗರಿಷ್ಠ 10 ತಿಂಗಳಿಗೆ ತಲುಪಿದೆ.

ಉತ್ಪಾದನೆ ಹೆಚ್ಚಳದ ನಂತರವೂ ತಗ್ಗದ ಹೊಸ ಥಾರ್ ಕಾರಿನ ಕಾಯುವಿಕೆ ಅವಧಿ

ಹೊಸ ತಲೆಮಾರಿನ ಆಫ್ ರೋಡಿಂಗ್ ವೈಶಿಷ್ಟ್ಯತೆಯೊಂದಿಗೆ ತನ್ನದೆ ಆದ ಜನಪ್ರಿಯೆತೆ ಹೊಂದುತ್ತಿರುವ ಥಾರ್ ಕಾರು ಮಾದರಿಯು ಸಾಮಾನ್ಯ ಕಾರು ಮಾದರಿಗಳಂತೆ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ನ್ಯೂ ಜನರೇಷನ್ ಥಾರ್ ಕಾರು ಮಾದರಿಯು ಎಎಕ್ಸ್ ಮತ್ತು ಎಲ್ಎಕ್ಸ್ ಎನ್ನುವ ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಿದೆ.

ಉತ್ಪಾದನೆ ಹೆಚ್ಚಳದ ನಂತರವೂ ತಗ್ಗದ ಹೊಸ ಥಾರ್ ಕಾರಿನ ಕಾಯುವಿಕೆ ಅವಧಿ

ಗ್ರಾಹಕರ ಬೇಡಿಕೆಯೆಂತೆ ಥಾರ್ ಆರಂಭಿಕ ಆವೃತ್ತಿಗಳಾದ ಎಎಕ್ಸ್ ಪೆಟ್ರೋಲ್ ಸ್ಟ್ಯಾಂಡರ್ಡ್ ಸಿಕ್ಸ್ ಸೀಟರ್, ಎಎಕ್ಸ್ ಸಿಕ್ಸ್ ಸೀಟರ್ ಸಾಫ್ಟ್ ಟಾಪ್ ಮತ್ತು ಎಎಕ್ಸ್ ಸಿಕ್ಸ್ ಸೀಟರ್ ಡೀಸೆಲ್ ಸಾಫ್ಟ್ ಟಾಪ್ ಮಾದರಿಗಳನ್ನು ಸ್ಥಗಿತಗೊಳಿಸಿರುವ ಕಂಪನಿಯು ಹೈ ಎಂಡ್ ಮಾದರಿಗಳ ಮಾರಾಟದ ಮೇಲೆ ಹೆಚ್ಚು ಗಮನಹರಿಸಿದೆ. ಹೊಸ ಥಾರ್ ಖರೀದಿದಾರರಲ್ಲಿ ಮೊದಲ ಬಾರಿಗೆ ಡೀಸೆಲ್ ಆಟೋಮ್ಯಾಟಿಕ್ ಆವೃತ್ತಿಗಳಿಗೆ ಹೆಚ್ಚಿನ ಬೇಡಿಕೆ ಸಲ್ಲಿಸುತ್ತಿದ್ದು, ಬುಕ್ಕಿಂಗ್ ಮಾಡಲಾದ ಗ್ರಾಹಕರಲ್ಲಿ ಶೇ.45 ರಷ್ಟು ಗ್ರಾಹಕರು ಆಟೋಮ್ಯಾಟಿಕ್ ಕಾರು ಮಾದರಿಗಳ ಖರೀದಿಗೆ ಆದ್ಯತೆ ನೀಡುತ್ತಿದ್ದಾರೆ.

ಉತ್ಪಾದನೆ ಹೆಚ್ಚಳದ ನಂತರವೂ ತಗ್ಗದ ಹೊಸ ಥಾರ್ ಕಾರಿನ ಕಾಯುವಿಕೆ ಅವಧಿ

ನಗರ ಪ್ರದೇಶಗಳಲ್ಲಿ ಸಂಚಾರಕ್ಕೆ ಅನುಕೂಲಕವಾಗುವುದಲ್ಲದೆ ಉತ್ತಮ ಇಂಧನ ದಕ್ಷತೆಗಾಗಿ ಡೀಸೆಲ್ ಆಟೋಮ್ಯಾಟಿಕ್ ಮಾದರಿಗಳಿಗೆ ಹೆಚ್ಚಿನ ಬೇಡಿಕೆಯಿದ್ದು, ಆಫ್ ರೋಡ್ ಕ್ರೇಜ್ ಕೂಡಾ ಥಾರ್ ಕಾರು ಮಾರಾಟ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

ಉತ್ಪಾದನೆ ಹೆಚ್ಚಳದ ನಂತರವೂ ತಗ್ಗದ ಹೊಸ ಥಾರ್ ಕಾರಿನ ಕಾಯುವಿಕೆ ಅವಧಿ

ವೆರಿಯೆಂಟ್ ಬದಲಾವಣೆ ನಂತರ ಥಾರ್ ಕಾರು ಆರಂಭಿಕ ಆವೃತ್ತಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.10 ಲಕ್ಷದಿಂದ ಟಾಪ್ ಮಾದರಿಯು ರೂ. 14.15 ಲಕ್ಷ ಬೆಲೆ ಪಡೆದುಕೊಂಡಿದ್ದು, ಅತ್ಯುತ್ತಮ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿದೆ.

ಉತ್ಪಾದನೆ ಹೆಚ್ಚಳದ ನಂತರವೂ ತಗ್ಗದ ಹೊಸ ಥಾರ್ ಕಾರಿನ ಕಾಯುವಿಕೆ ಅವಧಿ

ಥಾರ್ ಕಾರು ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿರುವುದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಿದ್ದು, ಲ್ಯಾಡರ್-ಫ್ರೇಮ್ ಚಾರ್ಸಿ ಜೊತೆಗೆ ಹೊಸ ಸಸ್ಪೆಂಷನ್‌ ಸೌಲಭ್ಯವು ಹೊಸ ಥಾರ್ ಕಾರಿನ ಗುಣಮಟ್ಟ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿದೆ.

MOST READ: ಗ್ರಾಹಕರ ದೂರು ಹಿನ್ನೆಲೆ...ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಸಬ್ಸಿಡಿ ರದ್ದು

ಉತ್ಪಾದನೆ ಹೆಚ್ಚಳದ ನಂತರವೂ ತಗ್ಗದ ಹೊಸ ಥಾರ್ ಕಾರಿನ ಕಾಯುವಿಕೆ ಅವಧಿ

ಹೊಸ ಥಾರ್ ಕಾರು ಮಾದರಿಯಲ್ಲಿ ಬಿಎಸ್-6 ಎಂಜಿನ್ ಪ್ರೇರಿತ 2.2-ಲೀಟರ್ ಡೀಸೆಲ್ ಎಂಜಿನ್ ಮತ್ತು ಹೊಸದಾಗಿ ಅಭಿವೃದ್ದಿಗೊಳಿಸಲಾದ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, ಎರಡು ಎಂಜಿನ್ ಮಾದರಿಗಳಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳನ್ನು ನೀಡಲಾಗಿದೆ.

ಉತ್ಪಾದನೆ ಹೆಚ್ಚಳದ ನಂತರವೂ ತಗ್ಗದ ಹೊಸ ಥಾರ್ ಕಾರಿನ ಕಾಯುವಿಕೆ ಅವಧಿ

ಹೊಸ ಕಾರಿನ ಒಳಭಾಗದ ಸೌಲಭ್ಯಗಳು ಪ್ರಸ್ತುತ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಮತ್ತು ಮಾರ್ಡನ್ ವಿನ್ಯಾಸಗಳನ್ನು ಹೊಂದಿದ್ದು, ಆಕರ್ಷಕ ಡ್ಯಾಶ್‌ಬೋರ್ಡ್‌ನೊಂದಿಗೆ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಎಲ್ಲಾ ಮಾದರಿಯ ಹವಾಗುಣವನ್ನು ತಡೆಯಬಲ್ಲ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಫಾಮೆಷನ್ ಡಿಸ್‌ಪ್ಲೇ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಸೌಲಭ್ಯ ನೀಡಲಾಗಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಉತ್ಪಾದನೆ ಹೆಚ್ಚಳದ ನಂತರವೂ ತಗ್ಗದ ಹೊಸ ಥಾರ್ ಕಾರಿನ ಕಾಯುವಿಕೆ ಅವಧಿ

ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸೆಫ್ಟಿ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ, ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಹಿಲ್ ಸ್ಟಾರ್ಟ್ ಅಸಿಸ್ಟ್, ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್, ರಿಯರ್ ವ್ಯೂ ಕ್ಯಾಮೆರಾ ಜೋಡಿಸಲಾಗಿದೆ.

Article Published On: Thursday, March 4, 2021, 20:58 [IST]
English summary
New-Gen Mahindra Thar Waiting Period Up To 10 Months. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+