ಹೊಸ ಸ್ಕಾರ್ಪಿಯೋ ಮತ್ತು ಥಾರ್ ಜೊತೆ ರೋಡ್ ಟೆಸ್ಟಿಂಗ್ ನಡೆಸಿದ ಎಕ್ಸ್‌ಯುವಿ700

ಮಹೀಂದ್ರಾ ಕಂಪನಿಯು ಹೊಸ ಕಾರುಗಳ ಮಾರಾಟದಲ್ಲಿ ಹಲವಾರು ಹೊಸ ಬದಲಾವಣೆಗಳನ್ನು ಪರಿಚಯಿಸುತ್ತಿದ್ದು, ಕಂಪನಿಯು ಶೀಘ್ರದಲ್ಲೇ ತನ್ನ ಬಹುನೀರಿಕ್ಷಿತ ಥಾರ್ ಬೆಸ್ ವೆರಿಯೆಂಟ್, ನ್ಯೂ ಜನರೇಷನ್ ಸ್ಕಾರ್ಪಿಯೋ ಮತ್ತು ಎಕ್ಸ್‌ಯುವಿ700 ಮಾದರಿಯನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಹೊಸ ಸ್ಕಾರ್ಪಿಯೋ ಮತ್ತು ಥಾರ್ ಜೊತೆ ರೋಡ್ ಟೆಸ್ಟಿಂಗ್ ನಡೆಸಿದ ಎಕ್ಸ್‌ಯುವಿ700

ಹೊಸ ಕಾರುಗಳ ಬಿಡುಗಡೆಯ ಸಿದ್ದತೆಯಲ್ಲಿದ್ದ ಮಹೀಂದ್ರಾ ಕಂಪನಿಯು ಕೋವಿಡ್ ಪರಿಣಾಮ ಹೊಸ ಕಾರುಗಳ ಬಿಡುಗಡೆ ಪ್ರಕ್ರಿಯೆಯನ್ನು ಸದ್ಯಕ್ಕೆ ಮುಂದೂಡಿಕೆ ಮಾಡಿದ್ದು, ಎಂಜಿನ್ ಕಾರ್ಯಕ್ಷಮತೆ ಕುರಿತಾಗಿ ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಮುಂದುವರಿಸಿದೆ. ರೋಡ್ ಟೆಸ್ಟಿಂಗ್ ಸಂದರ್ಭದಲ್ಲಿ ಹೊಸ ತಲೆಮಾರಿನ ಸ್ಕಾರ್ಪಿಯೋ ಮತ್ತು ಥಾರ್ ಹೊಸ ಆರಂಭಿಕ ಆವೃತ್ತಿ ಜೊತೆ ಹೊಚ್ಚ ಹೊಸ ಎಕ್ಸ್‌ಯುವಿ700 ಕಾರುಗಳು ಒಟ್ಟಾಗಿ ರೋಡ್ ಟೆಸ್ಟಿಂಗ್ ನಡೆಸುತ್ತಿರುವುದು ಕಂಡುಬಂದಿದ್ದು, ಇದರಲ್ಲಿ ಎಕ್ಸ್‌ಯುವಿ700 ಮಾತ್ರ ಈ ವರ್ಷಾಂತ್ಯದೊಳಗೆ ಬಿಡುಗಡೆಯಾಗಲಿದೆ.

ಹೊಸ ಸ್ಕಾರ್ಪಿಯೋ ಮತ್ತು ಥಾರ್ ಜೊತೆ ರೋಡ್ ಟೆಸ್ಟಿಂಗ್ ನಡೆಸಿದ ಎಕ್ಸ್‌ಯುವಿ700

ಕೋವಿಡ್ ತಗ್ಗಿದ ನಂತರ ಮಾರುಕಟ್ಟೆ ಪ್ರವೇಶಿಸಲು ಸಜ್ಜುಗೊಂಡಿದ್ದ ಹಲವು ಹೊಸ ವಾಹನ ಮಾದರಿಗಳ ಬಿಡುಗಡೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು, ಸದ್ಯ ಮಾರುಕಟ್ಟೆಯಲ್ಲಿರುವ ವಾಹನ ಮಾದರಿಗಳ ಮಾರಾಟ ಮೇಲೆ ಮಾತ್ರ ಗಮನಹರಿಸಲು ನಿರ್ಧರಿಸಿವೆ.

ಹೊಸ ಸ್ಕಾರ್ಪಿಯೋ ಮತ್ತು ಥಾರ್ ಜೊತೆ ರೋಡ್ ಟೆಸ್ಟಿಂಗ್ ನಡೆಸಿದ ಎಕ್ಸ್‌ಯುವಿ700

ಹಲವು ರಾಜ್ಯಗಳಲ್ಲಿ ಲಾಕ್‌ಡೌನ್ ವಿಸ್ತರಣೆ ಮಾಡುತ್ತಿರುವುದು ಆರ್ಥಿಕ ಚಟುವಟಿಕೆಗಳಿಗೆ ಭಾರೀ ಹೊಡೆತ ಬೀಳುತ್ತಿದ್ದು, ಇದೇ ಕಾರಣಕ್ಕೆ ಮಹೀಂದ್ರಾ ಕಂಪನಿಯು ಸಹ ತನ್ನ ಹೊಸ ತಲೆಮಾರಿನ ಸ್ಕಾರ್ಪಿಯೋ ಮತ್ತು ಥಾರ್ ಹೊಸ ಮಾದರಿಯ ಬಿಡುಗಡೆಯನ್ನು ಸದ್ಯ ಮುಂದೂಡಿಕೆ ಮಾಡಿದೆ.

ಹೊಸ ಸ್ಕಾರ್ಪಿಯೋ ಮತ್ತು ಥಾರ್ ಜೊತೆ ರೋಡ್ ಟೆಸ್ಟಿಂಗ್ ನಡೆಸಿದ ಎಕ್ಸ್‌ಯುವಿ700

ಪೂರ್ವ ನಿಗದಿಯಂತೆ ಈ ವರ್ಷ ಜೂನ್ ಅಥವಾ ಜುಲೈನಲ್ಲಿ ಬಿಡುಗಡೆಯಾಗಬೇಕಿದ್ದ ನ್ಯೂ ಜನರೇಷನ್ ಸ್ಕಾರ್ಪಿಯೋ ಮಾದರಿಯನ್ನು ಮಹೀಂದ್ರಾ ಕಂಪನಿಯು ಮುಂಬರುವ 2022ರ ಆರಂಭದಲ್ಲಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದ್ದು, ಥಾರ್ ಹೊಸ ಆವೃತ್ತಿಯನ್ನು ಸಹ ಸ್ಕಾರ್ಪಿಯೋ ಬಿಡುಗಡೆಯ ನಂತರವೇ ಮಾರುಕಟ್ಟೆಗೆ ಪರಿಚಯಿಸುವ ಸಾಧ್ಯತೆಗಳಿವೆ.

ಹೊಸ ಸ್ಕಾರ್ಪಿಯೋ ಮತ್ತು ಥಾರ್ ಜೊತೆ ರೋಡ್ ಟೆಸ್ಟಿಂಗ್ ನಡೆಸಿದ ಎಕ್ಸ್‌ಯುವಿ700

ಆದರೆ ಮಹೀಂದ್ರಾ ಕಂಪನಿಯು ತನ್ನ ಹೊಸ ಎಕ್ಸ್‌ಯುವಿ700 ಎಸ್‌ಯುವಿ ಕಾರು ಮಾದರಿಯನ್ನು ಅಗಸ್ಟ್ ಅಥವಾ ಸೆಪ್ಟೆಂಬರ್ ಹೊತ್ತಿಗೆ ಬಿಡುಗಡೆ ಮಾಡುವ ಅಂತಿಮ ಹಂತದ ಸಿದ್ದತೆಯಲ್ಲಿದ್ದು, ಹೊಸ ಕಾರು ವಿವಿಧ ಎಂಜಿನ್ ಆಯ್ಕೆಯೊಂದಿಗೆ ಒಟ್ಟು 11 ವೆರಿಯೆಂಟ್‌ಗಳನ್ನು ಪಡೆದುಕೊಳ್ಳಲಿದೆ.

ಹೊಸ ಸ್ಕಾರ್ಪಿಯೋ ಮತ್ತು ಥಾರ್ ಜೊತೆ ರೋಡ್ ಟೆಸ್ಟಿಂಗ್ ನಡೆಸಿದ ಎಕ್ಸ್‌ಯುವಿ700

ಪ್ರಸ್ತುತ ಮಾರುಕಟ್ಟೆಯಲ್ಲಿನ ಎಕ್ಸ್‌ಯುವಿ500 ಕಾರಿನ ಹೊಸ ತಲೆಮಾರಿನ ಆವೃತ್ತಿಯನ್ನೇ ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ700 ಮಾದರಿಯಾಗಿ ಮಾರಾಟ ಮಾಡಲು ನಿರ್ಧರಿಸಿರುವ ಮಹೀಂದ್ರಾ ಕಂಪನಿಯು ಹೊಸ ಕಾರಿನ ಮಾಹಿತಿಯನ್ನು ಈಗಾಗಲೇ ಅಧಿಕೃತ ವೆಬ್‌ಸೈಟ್‌ನಲ್ಲೂ ಪ್ರದರ್ಶನಗೊಳಿಸಿದೆ.

ಹೊಸ ಸ್ಕಾರ್ಪಿಯೋ ಮತ್ತು ಥಾರ್ ಜೊತೆ ರೋಡ್ ಟೆಸ್ಟಿಂಗ್ ನಡೆಸಿದ ಎಕ್ಸ್‌ಯುವಿ700

ಹೊಸ ಎಕ್ಸ್‌ಯುವಿ700 ಬಿಡುಗಡೆ ನಂತರ ಕೆಲವು ದಿನಗಳ ಕಾಲ ಸ್ಥಗಿತಗೊಳ್ಳಲಿರುವ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಕ್ಸ್‌ಯುವಿ500 ಮಾದರಿಯು ಎಕ್ಸ್‌ಯುವಿ700 ಬಿಡುಗಡೆಯ ನಂತರವಷ್ಟೇ ಕೆಲವು ಬದಲಾವಣೆಗಳೊಂದಿಗೆ ಮರು ಮಾರಾಟಗೊಳ್ಳಲಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹೊಸ ಸ್ಕಾರ್ಪಿಯೋ ಮತ್ತು ಥಾರ್ ಜೊತೆ ರೋಡ್ ಟೆಸ್ಟಿಂಗ್ ನಡೆಸಿದ ಎಕ್ಸ್‌ಯುವಿ700

ಪ್ರತಿಸ್ಪರ್ಧಿ ಕಾರು ಮಾದರಿಗಳಿಗಾಗಿ ಎಕ್ಸ್‌ಯುವಿ500 ಮಾದರಿಯಲ್ಲಿ ಕೆಲವು ಮಹತ್ವದ ಬದಲಾವಣೆ ತರಲು ನಿರ್ಧರಿಸಿರುವ ಮಹೀಂದ್ರಾ ಕಂಪನಿಯು ಬಿಡುಗಡೆಯಾಗಬೇಕಿರುವ ಎಕ್ಸ್‌ಯುವಿ500 ಮಾದರಿಯ ನ್ಯೂ ಜನರೇಷನ್ ಮಾದರಿಯನ್ನೇ ಹೊಸ ಬದಲಾವಣೆಗಳೊಂದಿಗೆ ಎಕ್ಸ್‌ಯುವಿ700 ಮಾದರಿಯಾಗಿ ಬಿಡುಗಡೆ ಮಾಡಲು ರೋಡ್ ಟೆಸ್ಟಿಂಗ್ ಪೂರ್ಣಗೊಳಿಸುತ್ತಿದೆ.

ಹೊಸ ಸ್ಕಾರ್ಪಿಯೋ ಮತ್ತು ಥಾರ್ ಜೊತೆ ರೋಡ್ ಟೆಸ್ಟಿಂಗ್ ನಡೆಸಿದ ಎಕ್ಸ್‌ಯುವಿ700

ಎಕ್ಸ್‌ಯುವಿ500 ಮಾದರಿಯನ್ನು ಎಕ್ಸ್‌ಯುವಿ700 ಮಾದರಿಗಿಂತಲೂ ಕೆಳ ಸ್ಥಾನದಲ್ಲಿ ಮಾರಾಟಗೊಳಿಸಲು ನಿರ್ಧರಿಸಿರುವ ಮಹೀಂದ್ರಾ ಕಂಪನಿಯು ಎಕ್ಸ್‌700 ಮಾದರಿಯನ್ನು 7 ಸೀಟರ್ ಮಾದರಿಯೊಂದಿಗೆ ಮತ್ತು ಎಕ್ಸ್‌ಯುವಿ500 ಮಾದರಿಯನ್ನು ಹೊಸ ಬದಲಾವಣೆಯೊಂದಿಗೆ 5 ಸೀಟರ್ ಮಾದರಿಯಾಗಿ ಮಾರಾಟಗೊಳಿಸಲಿದೆ.

MOST READ: ಕೋವಿಡ್ ಭೀತಿ: ಕಾರು ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಎಂಜಿ ಮೋಟಾರ್

ಹೊಸ ಸ್ಕಾರ್ಪಿಯೋ ಮತ್ತು ಥಾರ್ ಜೊತೆ ರೋಡ್ ಟೆಸ್ಟಿಂಗ್ ನಡೆಸಿದ ಎಕ್ಸ್‌ಯುವಿ700

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಕ್ಸ್‌ಯುವಿ500 ಮಾದರಿಯು 7 ಸೀಟರ್ ಸೌಲಭ್ಯವನ್ನು ಹೊಂದಿದ್ದರು ಕೂಡಾ ಹಿಂಬದಿಯ ಆಸನಗಳು ವಯಸ್ಕ ಪ್ರಯಾಣಿಕರ ಪ್ರಯಾಣಕ್ಕೆ ಅನುಕೂಲಕರವಾಗಿಲ್ಲ. ಹೀಗಾಗಿ ಎಕ್ಸ್‌ಯುವಿ700 ಮಾದರಿಯನ್ನು ವಿಸ್ತರಿತ ವೀಲ್ಹ್‌ಬೆಸ್ ಮೂಲಕ ಮೂರನೇ ಸಾಲಿನ ಆಸನವನ್ನು ಹೆಚ್ಚಿಸಿ ಅಭಿವೃದ್ದಿಗೊಳಿಸಲಾಗಿದೆ.

Most Read Articles

Kannada
English summary
New Mahindra Scorpio, XUV700 & Thar Spied Testing Together. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X