ಭಾರತದಲ್ಲಿ ಬಿಡುಗಡೆಯಾಗಲಿರುವ ಮಹೀಂದ್ರಾ ಹೊಸ ಕಾರು ಮಾದರಿಯ ಮಾಹಿತಿ ಬಹಿರಂಗ

ಮಹೀಂದ್ರಾ(Mahindra) ಕಂಪನಿಯು ಎಸ್‌ಯುವಿ ಕಾರುಗಳ ಮಾರಾಟದಲ್ಲಿ ತನ್ನದೆ ಆದ ಜನಪ್ರಿಯತೆ ಹೊಂದಿದ್ದು, ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಮುಂಬರುವ ಕೆಲವೇ ವರ್ಷಗಳಲ್ಲಿ ಮತ್ತಷ್ಟು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಮಹೀಂದ್ರಾ ಹೊಸ ಕಾರು ಮಾದರಿಯ ಮಾಹಿತಿ ಬಹಿರಂಗ

ಪ್ರಸ್ತುತ ಮಾರುಕಟ್ಟೆಯಲ್ಲಿ ಎಕ್ಸ್‌ಯುವಿ700, ಎಕ್ಸ್‌ಯುವಿ300, ಬೊಲೆರೊ, ಸ್ಕಾರ್ಪಿಯೋ ಮಾದರಿಯೊಂದಿಗೆ ಎಸ್‌ಯುವಿ ಮಾರಾಟದಲ್ಲಿ ಮುಂಚೂಣಿ ಹೊಂದಿರುವ ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ ಸರಣಿಯಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದ್ದು, ಹೊಸ ಕಾರುಗಳ ಬಿಡುಗಡೆಗಾಗಿ ಈಗಾಗಲೇ ಕೇಂದ್ರ ಸಾರಿಗೆ ಇಲಾಖೆಯಲ್ಲಿ ನೋಂದಣಿಯನ್ನು ಕೂಡಾ ಮಾಡಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಮಹೀಂದ್ರಾ ಹೊಸ ಕಾರು ಮಾದರಿಯ ಮಾಹಿತಿ ಬಹಿರಂಗ

ಹೊಸ ಯೋಜನೆ ಅಡಿ ಮೊದಲ ಕಾರು ಮಾದರಿಯಾಗಿ ಎಕ್ಸ್‌ಯುವಿ700 ಬಿಡುಗಡೆ ಮಾಡಿರುವ ಮಹೀಂದ್ರಾ ಕಂಪನಿಯು ಇದೀಗ ಎಕ್ಸ್‌ಯುವಿ ಸರಣಿಯಲ್ಲಿ ಒಟ್ಟು ಐದು ಹೊಸ ಕಾರುಗಳನ್ನು ಮತ್ತು ವಿವಿಧ ಕಾರು ಸರಣಿಯಲ್ಲಿ ನಾಲ್ಕು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುತ್ತಿರುವ ಮಾಹಿತಿ ಲಭ್ಯವಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಮಹೀಂದ್ರಾ ಹೊಸ ಕಾರು ಮಾದರಿಯ ಮಾಹಿತಿ ಬಹಿರಂಗ

ಬಿಡುಗಡೆಯಾಗಲಿರುವ ಹೊಸ ಕಾರುಗಳಲ್ಲಿ ಸಾಮಾನ್ಯ ಮಾದರಿಗಳಲ್ಲದೆ ಶೇ.75 ರಷ್ಟು ಎಲೆಕ್ಟ್ರಿಕ್ ಮತ್ತು ಹೈಬ್ರಡ್ ಕಾರು ಮಾದರಿಗಳನ್ನು ಸಹ ಅಭಿವೃದ್ದಿಪಡಿಸುತ್ತಿದ್ದು, ಇಎಕ್ಸ್‌ಯುವಿ300, ಇಕೆಯುವಿ100 ನಂತರ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಕಾರುಗಳು ರಸ್ತೆಗಿಳಿಯಲಿವೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಮಹೀಂದ್ರಾ ಹೊಸ ಕಾರು ಮಾದರಿಯ ಮಾಹಿತಿ ಬಹಿರಂಗ

ಕೇಂದ್ರ ಸಾರಿಗೆ ಇಲಾಖೆಯಲ್ಲಿ ದಾಖಲಿಸಲಾಗಿರುವ ಹಕ್ಕು ಸ್ವಾಮ್ಯ ಪ್ರತಿಯಲ್ಲಿ ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ ಸರಣಿಯೊಂದರಲ್ಲೇ ಎಕ್ಸ್‌‌ಯುವಿ700 ಮಾದರಿ ನಂತರ ಎಕ್ಸ್‌ಯುವಿ900 ಮಾದರಿಯನ್ನು ಬಿಡುಗಡೆ ಮಾಡುವ ಸುಳಿವು ನೀಡಿದ್ದು, ಒಟ್ಟು ಐದು ಎಕ್ಸ್‌ಯುವಿ ಸರಣಿ ಕಾರುಗಳನ್ನು ಬಿಡುಗಡೆ ಮಾಡುತ್ತಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಮಹೀಂದ್ರಾ ಹೊಸ ಕಾರು ಮಾದರಿಯ ಮಾಹಿತಿ ಬಹಿರಂಗ

ಎಕ್ಸ್‌ಯುವಿ ಸರಣಿಯಲ್ಲಿ ಈಗಾಗಲೇ ಎಕ್ಸ್‌ಯುವಿ300 ಮಾದರಿಯ ಮೂಲಕ ಗ್ರಾಹಕರ ಗಮನಸೆಳೆದಿರುವ ಮಹೀಂದ್ರಾ ಕಂಪನಿಯು ಹೊಸ ಎಕ್ಸ್‌ಯುವಿ700 ಕಾರುಗಳ ಮಾರಾಟದಲ್ಲೂ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಮುಂದಿನ ಕಾರು ಮಾದರಿಯಾಗಿ ಎಕ್ಸ್‌ಯುವಿ700 ಕೂಪೆ ಮಾದರಿಯನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಮಹೀಂದ್ರಾ ಹೊಸ ಕಾರು ಮಾದರಿಯ ಮಾಹಿತಿ ಬಹಿರಂಗ

ಎಕ್ಸ್‌ಯುವಿ900 ಕೂಪೆ ಎಸ್‌ಯುವಿ ಮಾದರಿಯು ಎಕ್ಸ್‌ಯುವಿ700 ಮಾದರಿಯಲ್ಲಿರುವ 2.2-ಲೀಟರ್ ಟರ್ಬೊ ಡೀಸೆಲ್ ಮಾದರಿಯನ್ನು ಪಡೆದುಕೊಳ್ಳಲಿದ್ದು, ಹೊಸ ವಿನ್ಯಾಸ ಹೊರತುಪಡಿಸಿ ಕಾರಿನ ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಅನ್ನು ಕೂಡಾ ಎಕ್ಸ್‌ಯುವಿ700 ಮಾದರಿಯೊಂದಿಗೆ ಹಂಚಿಕೊಳ್ಳಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಮಹೀಂದ್ರಾ ಹೊಸ ಕಾರು ಮಾದರಿಯ ಮಾಹಿತಿ ಬಹಿರಂಗ

ಸದ್ಯ ಹೊಸ ಕಾರು ಮಾದರಿಯನ್ನು W620 ಹೆಸರಿನೊಂದಿಗೆ ಟೆಸ್ಟಿಂಗ್ ಪ್ರಕ್ರಿಯೆಗಳಿಗೆ ಚಾಲನೆ ನೀಡಿರುವ ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ900 ನಂತರ ಹೊಸ ಡೀಸೆಲ್ ಕಾರುಗಳ ಉತ್ಪಾದನೆಯನ್ನು ಸ್ಥಗಿತಗೊಳಿಸುವ ಸಾಧ್ಯತೆಗಳಿದ್ದು, ಪೂರ್ಣ ಪ್ರಮಾಣದಲ್ಲಿ ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ಕಾರುಗಳನ್ನು ಮಾತ್ರ ಅಭಿವೃದ್ದಿಗೊಳಿಸುವ ಸಾಧ್ಯತೆಗಳಿವೆ.

ಮಹೀಂದ್ರಾ ಹೊಸ ಕಾರು ಮಾದರಿಯ ಮಾಹಿತಿ ಬಹಿರಂಗ

ಬಿಡುಗಡೆಯಾಗಿರುವ ಹೊಸ ಎಕ್ಸ್‌ಯುವಿ ಕಾರಿನಲ್ಲಿ ಕಂಪನಿಯು ಸದ್ಯ 2.0-ಲೀಟರ್ ಪೆಟ್ರೋಲ್ ಮಾದರಿಯು 198-ಬಿಎಚ್‌ಪಿ, 300-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 2.2-ಲೀಟರ್ ಡೀಸೆಲ್ ಮಾದರಿಯು 183-ಬಿಎಚ್‌ಪಿ ಮತ್ತು 420-ಎನ್ಎಂ ಟಾರ್ಕ್(6-ಸ್ಪೀಡ್ ಎಂಟಿ),450-ಎನ್ಎಂ ಟಾರ್ಕ್(6-ಸ್ಪೀಡ್ ಎಟಿ) ಉತ್ಪಾದನಾ ವೈಶಿಷ್ಟ್ಯತೆ ಹೊಂದಿದೆ.

ಮಹೀಂದ್ರಾ ಹೊಸ ಕಾರು ಮಾದರಿಯ ಮಾಹಿತಿ ಬಹಿರಂಗ

ಹೊಸ ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಗ್ರಾಹಕರ ಬೇಡಿಕೆಯೆಂತೆ 5 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಮಾರಾಟಗೊಳ್ಳಲಿದ್ದು, ಬರೋಬ್ಬರಿ 21 ವೆರಿಯೆಂಟ್ ಹೊಂದಿದೆ.

ಮಹೀಂದ್ರಾ ಹೊಸ ಕಾರು ಮಾದರಿಯ ಮಾಹಿತಿ ಬಹಿರಂಗ

ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಹೊಸ ಎಕ್ಸ್‌ಯುವಿ700 ಮಾದರಿಯು ಡೀಸೆಲ್ ಮಾದರಿಯಲ್ಲಿ ಮಾತ್ರ ಬಿಡುಗಡೆಯಾಗಬಹುದಾಗಿದ್ದು, 5 ಆಸನ ಸೌಲಭ್ಯದೊಂದಿಗೆ ಅತ್ಯುತ್ತಮ ಸ್ಥಳವಾಕಾಶ ಹೊಂದಿರಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಮಹೀಂದ್ರಾ ಹೊಸ ಕಾರು ಮಾದರಿಯ ಮಾಹಿತಿ ಬಹಿರಂಗ

ಕೇಂದ್ರ ಸಾರಿಗೆ ಇಲಾಖೆಯಲ್ಲಿ ದಾಖಲಿಸಲಾಗಿರುವ ಹಕ್ಕು ಸ್ವಾಮ್ಯ ಪ್ರತಿಯಲ್ಲಿ ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ100, ಎಕ್ಸ್‌‌ಯುವಿ400, ಎಕ್ಸ್‌ಯುವಿ900 ಕೂಪೆ ಸೇರಿ ಒಟ್ಟು ಐದು ಎಕ್ಸ್‌ಯುವಿ ಸರಣಿ ಕಾರುಗಳನ್ನು ಬಿಡುಗಡೆ ಮಾಡುವ ಸುಳಿವು ನೀಡಿದ್ದು, ಹೈ ಎಂಡ್ ಮಾದರಿಯಾದ ಎಕ್ಸ್‌ಯುವಿ900 ಮಾದರಿಯು ಫಾರ್ಚೂನರ್ ಮಾದರಿಗೆ ಪೈಪೋಟಿ ನೀಡಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಮಹೀಂದ್ರಾ ಹೊಸ ಕಾರು ಮಾದರಿಯ ಮಾಹಿತಿ ಬಹಿರಂಗ

ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ತೀವ್ರ ಬೆಳವಣಿಗೆ ಕಂಡುಬರುತ್ತಿರುವ ಹಿನ್ನಲೆಯಲ್ಲಿ ಹಲವಾರು ಉತ್ಪಾದನಾ ಕಂಪನಿಗಳು ವಿವಿಧ ಮಾದರಿಯ ಇವಿ ವಾಹನಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತಿದ್ದು, ಮಹೀಂದ್ರಾ ಕಂಪನಿಯು ಕೂಡಾ ಇವಿ ವಾಹನ ಮಾರಾಟದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಮಹೀಂದ್ರಾ ಹೊಸ ಕಾರು ಮಾದರಿಯ ಮಾಹಿತಿ ಬಹಿರಂಗ

ಎಲೆಕ್ಟ್ರಿಕ್ ವಾಹನ ಉದ್ಯಮದಲ್ಲಿ ಮೇಲೆ ಈಗಾಗಲೇ ಭಾರೀ ಪ್ರಮಾಣದ ಹೂಡಿಕೆ ಮಾಡಿರುವ ಮಹೀಂದ್ರಾ ಕಂಪನಿಯು ಇತ್ತೀಚೆಗೆ ಹೆಚ್ಚುವರಿಯಾಗಿ ರೂ.3 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ಒಪ್ಪಿಗೆ ಸೂಚಿಸಿದ್ದು, ಹೊಸ ಬಂಡವಾಳದೊಂದಿಗೆ ಕಂಪನಿಯು ಇದುವರೆಗೆ ಸುಮಾರು ರೂ.12 ಸಾವಿರ ಕೋಟಿ ಹೂಡಿಕೆ ಮಾಡಿದಂತಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಮಹೀಂದ್ರಾ ಹೊಸ ಕಾರು ಮಾದರಿಯ ಮಾಹಿತಿ ಬಹಿರಂಗ

ರೆವಾ ಎಲೆಕ್ಟ್ರಿಕ್ ಕಂಪನಿಯೊಂದಿಗೆ 2010ರಲ್ಲಿ ಮೊದಲ ಹೂಡಿಕೆಯೊಂದಿಗೆ ಎಲೆಕ್ಟ್ರಿಕ್ ವಾಹನ ಉದ್ಯಮಕ್ಕೆ ಕಾಲಿರಿಸಿದ ಮಹೀಂದ್ರಾ ಕಂಪನಿಯು ಇದುವರೆಗೆ ಹಲವಾರು ಎಲೆಕ್ಟ್ರಿಕ್ ವಾಹನ ಮಾದರಿಗಳನ್ನು ಪರಿಚಯಿಸಿದ್ದು, ಇದೀಗ ಕಂಪನಿಯು ಸುಧಾರಿತ ತಂತ್ರಜ್ಞಾನ ಪ್ರೇರಿತ ವಾಹನಗಳ ಅಭಿವೃದ್ದಿಯತ್ತ ಹೆಚ್ಚಿನ ಗಮನಹರಿಸುತ್ತಿದೆ.

Most Read Articles

Kannada
English summary
Mahindra new xuv900 coupe suv engine details revealed
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X