Just In
- 2 hrs ago
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- 3 hrs ago
ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
- 3 hrs ago
ಸಿಎನ್ಜಿ ವರ್ಷನ್ನಲ್ಲೂ ಬಿಡುಗಡೆಯಾಗಲಿದೆ ಸ್ಕೋಡಾ ರ್ಯಾಪಿಡ್ ಸೆಡಾನ್
- 4 hrs ago
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
Don't Miss!
- News
ಪೆಟ್ರೋಲ್, ಡೀಸೆಲ್ ದರ ಏರಿಕೆ: ಕೇಂದ್ರಕ್ಕೆ ಬಿಸಿ ಮುಟ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ
- Movies
ಬಿಗ್ಬಾಸ್: ಪ್ರಶಾಂತ್ ಸಂಬರ್ಗಿ ಮೇಲೆ ಉರಿದು ಬಿದ್ದ ಮನೆ ಸದಸ್ಯರು
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ವರ್ಷದ ಸಂಭ್ರಮದಲ್ಲಿ ಮಹೀಂದ್ರಾ ಕಾರುಗಳ ಮೇಲೆ ಭರ್ಜರಿ ಆಫರ್
ಹೊಸ ವರ್ಷದ ಸಂಭ್ರಮದಲ್ಲಿ ಕಾರು ಖರೀದಿದಾರರನ್ನು ಸೆಳೆಯಲು ಮಹೀಂದ್ರಾ ಕಂಪನಿಯು ತನ್ನ ವಿವಿಧ ಕಾರು ಮಾದರಿಗಳ ಮೇಲೆ ಹಲವಾರು ಆಫರ್ಗಳನ್ನು ಘೋಷಣೆ ಮಾಡಿದ್ದು, ಕಾರು ಮಾದರಿಗಳಿಗೆ ಅನುಗುಣವಾಗಿ ರೂ. 2.20 ಲಕ್ಷದ ತನಕ ಗರಿಷ್ಠ ಆಫರ್ ನೀಡುತ್ತಿದೆ.

ಕರೋನಾ ವೈರಸ್ ಪರಿಣಾಮ ಕಾರು ಮಾರಾಟದಲ್ಲಿ ಹಿನ್ನಡೆ ಅನುಭವಿಸಿದ್ದ ಮಹೀಂದ್ರಾ ಕಂಪನಿಯು ಮುಂಬರುವ ದಿನಗಳಲ್ಲಿ ಹೊಸ ಕಾರುಗಳ ಮಾರಾಟದಲ್ಲಿ ಚೇತರಿಸಿಕೊಳ್ಳುವ ವಿಶ್ವಾಸದಲ್ಲಿದ್ದು, ಹೊಸ ವರ್ಷದ ಸಂಭ್ರಮದಲ್ಲಿ ಕಾರು ಖರೀದಿ ಯೋಜನೆಯಲ್ಲಿರುವ ಗ್ರಾಹಕರನ್ನು ಸೆಳೆಯಲು ವಿವಿಧ ಕಾರು ಮಾದರಿಗಳ ಮೇಲೆ ಭರ್ಜರಿ ಆಫರ್ ಘೋಷಣೆ ಮಾಡಿದೆ. ಹಾಗಾದ್ರೆ ಯಾವ ಕಾರಿನ ಮೇಲೆ ಎಷ್ಟು ಆಫರ್ ಲಭ್ಯವಿದೆ ಎಂಬುವುದನ್ನು ಇಲ್ಲಿ ತಿಳಿಯೋಣ.

ಕೆಯುವಿ100 ನೆಕ್ಸ್ಟ್
ಮಹೀಂದ್ರಾ ಎಂಟ್ರಿ ಲೆವಲ್ ಮೈಕ್ರೋ ಎಸ್ಯುವಿ ಕಾರು ಮಾದರಿಯಾದ ಕೆಯುವಿ100 ನೆಕ್ಸ್ಟ್ ಕಾರು ಮಾದರಿಯ ಮೇಲೆ ರೂ.38 ಸಾವಿರದಷ್ಟು ಆಫರ್ ನೀಡುತ್ತಿದ್ದು, ಹೊಸ ಆಫರ್ಗಳಲ್ಲಿ ಕ್ಯಾಶ್ ಡಿಸ್ಕೌಂಟ್, ಎಕ್ಸ್ಚೆಂಜ್ ಬೋನಸ್ ಮತ್ತು ಕಾರ್ಪೊರೇಟ್ ಡಿಸ್ಕೌಂಟ್ ಒಳಗೊಂಡಿದೆ.

ಎಕ್ಸ್ಯುವಿ300
ಕಂಪ್ಯಾಕ್ಟ್ ಎಸ್ಯುವಿ ಮಾದರಿಯಾದ ಎಕ್ಸ್ಯುವಿ300 ಕಾರು ಖರೀದಿಯ ಮೇಲೆ ಒಟ್ಟು ರೂ. 29,500 ಡಿಸ್ಕೌಂಟ್ ಲಭ್ಯವಿದ್ದು, ಹೊಸ ಆಫರ್ನಲ್ಲಿ ಎಕ್ಸ್ಚೆಂಜ್ ಬೋನಸ್ ಮತ್ತು ಕಾರ್ಪೊರೇಟ್ ಡಿಸ್ಕೌಂಟ್ ಒಳಗೊಂಡಿದೆ.

ಬೊಲೆರೊ
ಮಹೀಂದ್ರಾ ಜನಪ್ರಿಯ ಬೊಲೆರೊ ಕಾರು ಖರೀದಿ ಮೇಲೆ ಒಟ್ಟು ರೂ.17,500 ಡಿಸ್ಕೌಂಟ್ ಲಭ್ಯವಿದ್ದು, ಹೊಸ ಆಫರ್ಗಳಲ್ಲಿ ಎಕ್ಸ್ಚೆಂಜ್ ಆಫರ್, ಕಾರ್ಪೊರೆಟ್ ಬೊನಸ್ ಮತ್ತು ಕ್ಯಾಶ್ ಡಿಸ್ಕೌಂಟ್ ಸಹ ಲಭ್ಯವಿರಲಿವೆ. ಜೊತೆಗೆ ಆಯ್ದ ಮಾದರಿಗಳ ಮೇಲೆ ವಿಸ್ತರಿತ ವಾರಂಟಿ ಸೌಲಭ್ಯವು ಸಹ ಲಭ್ಯವಾಗಲಿದ್ದು, ನ್ಯೂ ಜನರೇಷನ್ ಮಾದರಿಗಳ ಬಿಡುಗಡೆಗಾಗಿ ಹೊಸ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ನೀಡಲಾಗುತ್ತಿದೆ.

ಸ್ಕಾರ್ಪಿಯೋ
ಮಹೀಂದ್ರಾ ಕಂಪನಿಯು ಸ್ಕಾರ್ಪಿಯೋ ಕಾರು ಖರೀದಿಯ ಮೇಲೆ ರೂ.60 ಸಾವಿರ ತನಕ ಡಿಸ್ಕೌಂಟ್ ಘೋಷಣೆ ಮಾಡಿದ್ದು, ಹೊಸ ಆಫರ್ಗಳು ಎಕ್ಸ್ಚೆಂಜ್ ಬೋನಸ್, ಕ್ಯಾಶ್ ಡಿಸ್ಕೌಂಟ್ ಮತ್ತು ಎಸ್5 ವೆರಿಯೆಂಟ್ ಮೇಲೆ ಹೆಚ್ಚುವರಿಯಾಗಿ ರೂ.10 ಸಾವಿರ ಕ್ಯಾಶ್ ಡಿಸ್ಕೌಂಟ್ ಲಭ್ಯವಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಎಕ್ಸ್ಯುವಿ500
ಮಹೀಂದ್ರಾ ಕಂಪನಿಯು ಎಕ್ಸ್ಯುವಿ500 ಕಾರು ಖರೀದಿಯ ಮೇಲೆ ರೂ.48,800 ಡಿಸ್ಕೌಂಟ್ ನೀಡುತ್ತಿದ್ದು, ವಿವಿಧ ವೆರಿಯೆಂಟ್ಗಳಿಗೆ ಅನುಗುಣವಾಗಿ ಡಿಸ್ಕೌಂಟ್ ಲಭ್ಯವಿದೆ. ಹೊಸ ಆಫರ್ಗಳಲ್ಲಿ ಎಕ್ಸ್ಚೆಂಜ್ ಆಫರ್, ಕಾರ್ಪೊರೇಟ್ ಡಿಸ್ಕೌಂಟ್ ಮತ್ತು ಕ್ಯಾಶ್ ಬ್ಯಾಕ್ ಆಫರ್ ನೀಡಲಾಗುತ್ತಿದೆ.

ಅಲ್ಟುರಾಸ್ ಜಿ4
ಮಹೀಂದ್ರಾ ಕಂಪನಿ ತನ್ನ ಹೈ ಎಂಡ್ ಎಸ್ಯುವಿ ಕಾರು ಮಾದರಿಯಾದ ಅಲ್ಟುರಾಸ್ ಜಿ4 ಕಾರು ಖರೀದಿ ಮೇಲೆ ಭರ್ಜರಿ ಆಫರ್ ಘೋಷಣೆ ಮಾಡಿದ್ದು, ಹೊಸ ಕಾರು ಖರೀದಿಸುವ ಗ್ರಾಹಕರಿಗೆ ರೂ. 2.20 ಲಕ್ಷದಷ್ಟು ಆಫರ್ ನೀಡುತ್ತಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಹೊಸ ಆಫರ್ನಲ್ಲಿ ಕ್ಯಾಶ್ ಡಿಸ್ಕೌಂಟ್, ಎಕ್ಸ್ಚೆಂಜ್ ಆಫರ್, ಕಾರ್ಪೊರೇಟ್ ಡಿಸ್ಕೌಂಟ್ ಲಭ್ಯವಿದ್ದು, ಹೊಸ ಆಫರ್ಗಳು ಈ ತಿಂಗಳಾಂತ್ಯಕ್ಕೆ ಮುಕ್ತಾಯಗೊಳ್ಳಲಿವೆ.