ಮಹೀಂದ್ರಾ ಕಾರುಗಳ ಖರೀದಿ ಮೇಲೆ ಮೇ ಅವಧಿಗಾಗಿ ಆಕರ್ಷಕ ಡಿಸ್ಕೌಂಟ್ ಘೋಷಣೆ

ಕೋವಿಡ್‌ನಿಂದಾಗಿ ಇಳಿಕೆಯಾಗಿರುವ ಹೊಸ ವಾಹನಗಳ ಮಾರಾಟವನ್ನು ಸುಧಾರಿಸಲು ಪ್ರಮುಖ ಕಾರು ಕಂಪನಿಗಳು ತಮ್ಮ ಹೊಸ ವಾಹನಗಳ ಖರೀದಿ ಮೇಲೆ ಹಲವಾರು ಘೋಷಿಸುತ್ತಿದ್ದು, ಮಹೀಂದ್ರಾ ಕಾರುಗಳ ಮೇಲೂ ವಿಶೇಷ ರಿಯಾಯ್ತಿ ಘೋಷಣೆ ಮಾಡಿದೆ.

ಮಹೀಂದ್ರಾ ಕಾರುಗಳ ಮೇ ಅವಧಿಗಾಗಿ ಭರ್ಜರಿ ಡಿಸ್ಕೌಂಟ್ ಘೋಷಣೆ

ಮಹೀಂದ್ರಾ ಕಂಪನಿಯು ಕೋವಿಡ್ ಪರಿಣಾಮ ಇಳಿಕೆಯಾಗುತ್ತಿರುವ ಕಾರು ಮಾರಾಟವನ್ನು ಸುಧಾರಿಸಲು ವಿವಿಧ ಕೊಡುಗೆಗಳೊಂದಿಗೆ ನಗದು ರಿಯಾಯಿತಿಗಳನ್ನು ಘೋಷಣೆ ಮಾಡಿದ್ದು, ಹೊಸ ಆಫರ್‌ಗಳಲ್ಲಿ ಕ್ಯಾಶ್ ಬ್ಲ್ಯಾಕ್ ಆಫರ್, ಎಕ್ಸ್‌ಚೆಂಜ್ ಬೋನಸ್, ಕಾರ್ಪೊರೇಟ್ ಡಿಸ್ಕೌಂಟ್ ನೀಡಲಾಗುತ್ತಿದೆ. ಹೊಸ ಆಫರ್‌ಗಳು ಈ ತಿಂಗಳಾಂತ್ಯದ ತನಕ ಅನ್ವಯವಾಗಲಿದ್ದು, ಆಯ್ದ ಡೀಲರ್ಸ್‌ಗಳಲ್ಲಿ ಇನ್ನು ಹೆಚ್ಚಿನ ಮಟ್ಟದ ಆಫರ್ ಪಡೆದುಕೊಳ್ಳಬಹುದು.

ಮಹೀಂದ್ರಾ ಕಾರುಗಳ ಮೇ ಅವಧಿಗಾಗಿ ಭರ್ಜರಿ ಡಿಸ್ಕೌಂಟ್ ಘೋಷಣೆ

ಕೆಯುವಿ100 ನೆಕ್ಸ್ಟ್

ಮಹೀಂದ್ರಾ ಕಂಪನಿಯು ಕೆಯುವಿ100 ನೆಕ್ಸ್ಟ್ ಕಾರು ಖರೀದಿಯ ಮೇಲೆ ಗರಿಷ್ಠ ರೂ. 38,055 ಕ್ಯಾಶ್‌ಬ್ಯಾಕ್ ಆಫರ್ ನೀಡುತ್ತಿದ್ದು, ಇನ್ನುಳಿದಂತೆ ರೂ.20 ಸಾವಿರ ಎಕ್ಸ್‌ಚೆಂಜ್ ಆಫರ್ ಮತ್ತು ರೂ.3 ಸಾವಿರ ಕಾರ್ಪೊರೇಟ್ ಡಿಸ್ಕೌಂಟ್ ನೀಡುತ್ತಿದೆ.

ಮಹೀಂದ್ರಾ ಕಾರುಗಳ ಮೇ ಅವಧಿಗಾಗಿ ಭರ್ಜರಿ ಡಿಸ್ಕೌಂಟ್ ಘೋಷಣೆ

ಬೊಲೆರೊ ಎಸ್‌ಯುವಿ

ಮಹೀಂದ್ರಾ ಜನಪ್ರಿಯ ಬೊಲೆರೊ ಕಾರು ಖರೀದಿ ಮೇಲೆ ಒಟ್ಟು ರೂ. 1,500 ಕ್ಯಾಶ್ ಡಿಸ್ಕೌಂಟ್ ಜೊತೆಗೆ ಉಚಿತವಾಗಿ ನಾಲ್ಕನೇ ವರ್ಷದ ವಾರಂಟಿ ಲಭ್ಯವಿದ್ದು, ಇನ್ನುಳಿದಂತೆ ರೂ.10 ಸಾವಿರ ಎಕ್ಸ್‌ಚೆಂಜ್ ಆಫರ್, ರೂ. 3 ಸಾವಿರ ಕಾರ್ಪೊರೆಟ್ ಡಿಸ್ಕೌಂಟ್ ಸಹ ಲಭ್ಯವಿರಲಿವೆ.

ಮಹೀಂದ್ರಾ ಕಾರುಗಳ ಮೇ ಅವಧಿಗಾಗಿ ಭರ್ಜರಿ ಡಿಸ್ಕೌಂಟ್ ಘೋಷಣೆ

ಮರಾಜೋ ಎಂಪಿವಿ

ಮರಾಜೋ ಎಂಪಿವಿ ಕಾರು ಖರೀದಿಯ ಮೇಲೆ ಮಹೀಂದ್ರಾ ಕಂಪನಿಯು ರೂ. 20 ಸಾವಿರ ತನಕ ಕ್ಯಾಶ್ ಡಿಸ್ಕೌಂಟ್ ಘೋಷಣೆ ಮಾಡಿದ್ದು, ರೂ. 15 ಸಾವಿರ ಎಕ್ಸ್‌ಚೆಂಜ್ ಆಫರ್ ಮತ್ತು ರೂ. 5,200 ಕಾರ್ಪೊರೇಟ್ ಡಿಸ್ಕೌಂಟ್ ನೀಡಲಾಗುತ್ತಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಮಹೀಂದ್ರಾ ಕಾರುಗಳ ಮೇ ಅವಧಿಗಾಗಿ ಭರ್ಜರಿ ಡಿಸ್ಕೌಂಟ್ ಘೋಷಣೆ

ಎಕ್ಸ್‌ಯುವಿ300

ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಾದ ಎಕ್ಸ್‌ಯುವಿ300 ಕಾರು ಖರೀದಿಯ ಮೇಲೆ ಉಚಿತ ಆಕ್ಸೆಸರಿಸ್ ಒಳಗೊಂಡ ರೂ.10 ಸಾವಿರ ಕ್ಯಾಶ್ ಡಿಸ್ಕೌಂಟ್ ಲಭ್ಯವಿದ್ದು, ಹೊಸ ಆಫರ್‌ನಲ್ಲಿ ರೂ. 25 ಸಾವಿರ ಎಕ್ಸ್‌ಚೆಂಜ್ ಬೋನಸ್ ಮತ್ತು ರೂ. 4 ಸಾವಿರ ಕಾರ್ಪೊರೇಟ್ ಡಿಸ್ಕೌಂಟ್ ಒಳಗೊಂಡಿದೆ.

ಮಹೀಂದ್ರಾ ಕಾರುಗಳ ಮೇ ಅವಧಿಗಾಗಿ ಭರ್ಜರಿ ಡಿಸ್ಕೌಂಟ್ ಘೋಷಣೆ

ಎಕ್ಸ್‌ಯುವಿ500 ಎಸ್‌ಯುವಿ

ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ500 ಕಾರು ಖರೀದಿಯ ಮೇಲೆ ರೂ.15 ಸಾವಿರ ಮೌಲ್ಯದ ಆಕ್ಸೆಸರಿಸ್ ಒಳಗೊಂಡು ರೂ. 51 ಸಾವಿರ ಕ್ಯಾಶ್ ಡಿಸ್ಕೌಂಟ್ ನೀಡುತ್ತಿದ್ದು, ರೂ. 25 ಸಾವಿರ ಎಕ್ಸ್‌ಚೆಂಜ್ ಆಫರ್, ರೂ. 6,500 ಕಾರ್ಪೊರೇಟ್ ಡಿಸ್ಕೌಂಟ್ ನೀಡಲಾಗುತ್ತಿದೆ.

MOST READ: ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!

ಮಹೀಂದ್ರಾ ಕಾರುಗಳ ಮೇ ಅವಧಿಗಾಗಿ ಭರ್ಜರಿ ಡಿಸ್ಕೌಂಟ್ ಘೋಷಣೆ

ಸ್ಕಾರ್ಪಿಯೋ ಎಸ್‌ಯುವಿ

ಮಹೀಂದ್ರಾ ಕಂಪನಿಯು ಸ್ಕಾರ್ಪಿಯೋ ಕಾರು ಖರೀದಿಯ ಮೇಲೆ ರೂ.10 ಸಾವಿರ ಮೌಲ್ಯದ ಆಕ್ಸೆಸರಿಸ್ ಪ್ಯಾಕೇಜ್‌ನೊಂದಿಗೆ ರೂ. 15 ಸಾವಿರ ಎಕ್ಸ್‌ಚೆಂಜ್ ಬೋನಸ್ ಮತ್ತು ರೂ. 4 ಸಾವಿರ ಕಾರ್ಪೊರೇಟ್ ಡಿಸ್ಕೌಂಟ್ ನೀಡಲಾಗುತ್ತಿದೆ.

ಮಹೀಂದ್ರಾ ಕಾರುಗಳ ಮೇ ಅವಧಿಗಾಗಿ ಭರ್ಜರಿ ಡಿಸ್ಕೌಂಟ್ ಘೋಷಣೆ

ಅಲ್ಟುರಾಸ್ ಜಿ4 ಎಸ್‌ಯುವಿ

ಮಹೀಂದ್ರಾ ಕಂಪನಿ ತನ್ನ ಹೈ ಎಂಡ್ ಎಸ್‌ಯುವಿ ಕಾರು ಮಾದರಿಯಾದ ಅಲ್ಟುರಾಸ್ ಜಿ4 ಕಾರು ಖರೀದಿ ಮೇಲೆ ರೂ.20 ಸಾವಿರ ಮೌಲ್ಯದ ಆಕ್ಸೆಸರಿಸ್ ಒಳಗೊಂಡು ರೂ. 2.20 ಲಕ್ಷ ಭರ್ಜರಿ ಆಫರ್ ಘೋಷಣೆ ಮಾಡಿದ್ದು, 50 ಸಾವಿರ ಎಕ್ಸ್‌ಚೆಂಜ್ ಬೋನಸ್ ಮತ್ತು ರೂ. 11,500 ಕಾರ್ಪೊರೇಟ್ ಡಿಸ್ಕೌಂಟ್ ನೀಡಲಾಗುತ್ತಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಮಹೀಂದ್ರಾ ಕಾರುಗಳ ಮೇ ಅವಧಿಗಾಗಿ ಭರ್ಜರಿ ಡಿಸ್ಕೌಂಟ್ ಘೋಷಣೆ

ಮಹೀಂದ್ರಾ ಕಂಪನಿಯ ಹೊಸ ಆಫರ್‌ಗಳು ಈ ತಿಂಗಳಾಂತ್ಯದ ತನಕ ಲಭ್ಯವಿರಲಿದ್ದು, ಕಂಪನಿಯು ತನ್ನ ನ್ಯೂ ಜನರೇಷನ್ ಥಾರ್ ಕಾರು ಖರೀದಿಯ ಮೇಲೆ ಯಾವುದೇ ರೀತಿಯ ಕೊಡುಗೆಗಳನ್ನು ಘೋಷಣೆ ಮಾಡಿಲ್ಲ.

Article Published On: Tuesday, May 11, 2021, 8:46 [IST]
English summary
Discounts On Mahindra Cars May 2021. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+